ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದಗಳೊಂದಿಗೆ ಮಾಹಿತಿ, […]" /> ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದಗಳೊಂದಿಗೆ ಮಾಹಿತಿ, […]"> Ujire-ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ: ಜಪಾನ್ ವಿದ್ಯಾರ್ಥಿಗಳಿಂದ ಉಜಿರೆಯಲ್ಲಿ ಅಧ್ಯಯನ - Nikhara News | Kannada News Website
Connect with us

ಸ್ಥಳೀಯ

Ujire-ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ: ಜಪಾನ್ ವಿದ್ಯಾರ್ಥಿಗಳಿಂದ ಉಜಿರೆಯಲ್ಲಿ ಅಧ್ಯಯನ

Published

on

Ad Widget

Ad Widget

Ad Widget

Ad Widget

ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್‌ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.

Ad Widget

Ad Widget

Ad Widget

Ad Widget

ಉಜಿರೆ: ಅಂತಾರಾಷ್ಟ್ರೀಯ ಶೈಕ್ಷಣಿಕ-ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮದಡಿಯಲ್ಲಿ ಜಪಾನ್‌ನ 6 ವಿದ್ಯಾರ್ಥಿಗಳು ಈಗಾಗಲೆ ಉಜಿರೆಯ ಎಸ್.ಡಿ.ಎಂ. ಕಾಲೇಜಿಗೆ ಆಗಮಿಸಿ ವಿವಿಧ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.

Ad Widget

Ad Widget alt="Ad Widget"/>

Ad Widget

ಪ್ರಥಮವಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಂಡ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದಗಳೊಂದಿಗೆ ಮಾಹಿತಿ, ಮಾರ್ಗದರ್ಶನ ಪಡೆದರು.
ದೇವಸ್ಥಾನ, ಮಂಜೂಷಾ ಮ್ಯೂಸಿಯಂ, ವಿಂಟೇಜ್ ಕಾರ್‌ಗಳ ಸಂಗ್ರಹಾಲಯ, ಅನ್ನಪೂರ್ಣ, ಬಾಹುಬಲಿಬೆಟ್ಟ, ಬಸದಿಯನ್ನು ಕುತೂಹಲದಿಂದ ವೀಕ್ಷಿಸಿದರು.

Ad Widget

Ad Widget <> Ad Widget

ಇಬ್ಬರು ವಿದ್ಯಾರ್ಥಿಗಳಾದ ಗೊಟೊ ರೈಯೋಹೆ ಮತ್ತು ಇಕೆಡಾ ಅಕಾರಿ ಇನ್ನು ಒಂದು ತಿಂಗಳು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ವಿಭಾಗದಲ್ಲಿ ಒಂದು ತಿಂಗಳು ವಿಶೇಷ ಅಧ್ಯಯನ ನಡೆಸಲಿದ್ದಾರೆ.

ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಪ್ರೊ. ಎಸ್. ಸತೀಶ್ಚಂದ್ರ, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಮತ್ತು ಸಿ.ಇ.ಒ. ಪೂರನ್‌ವರ್ಮ, ಮನೋರಮಾ ಭಟ್ ಜಪಾನ್ ವಿದ್ಯಾರ್ಥಿಗಳಿಗೆ ಪೂರಕ ಮಾಹಿತಿ, ಮಾರ್ಗದರ್ಶನ ನೀಡಿದರು.

Ad Widget

Ad Widget

ಎಸ್.ಡಿ.ಎಂ. ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಮಾಲಿನಿ ಅಂಚನ್ ಮತ್ತು ವಿದ್ಯಾರ್ಥಿಗಳಾದ ಕು. ಸಂಜನಾ ಮತ್ತು ಕು. ಸಿಂಚನಾ ಜಪಾನ್‌ನಲ್ಲಿ 11 ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಲ್ಲಿನ ಯಕ್ಷಗಾನ, ಜಾನಪದ ಕಲೆಗಳು ಹಾಗೂ ಜೀವನಶೈಲಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಟ್ಟಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!