ಅಂತರ ರಾಜ್ಯ
Sonia Gandhi-ಇಟಲಿಯ ಬಾಲ್ಯದಿಂದ ಭಾರತದ ಕುತೂಹಲಕಾರಿ ರಾಜಕೀಯ ಜರ್ನಿಯ ಬರೋಬ್ಬರಿ 544 ಪುಟಗಳ ಸೋನಿಯಾ ಗಾಂಧಿ ಆತ್ಮಕಥೆ ಬಿಡುಗಡೆಗೆ ಕ್ಷಣಗಣನೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪ್ರಕಟಣೆಯ ಹೊಣೆಯನ್ನು ಈಗ ‘ಹಾರ್ಪರ್ ಕಾಲಿನ್ಸ್ ಇಂಡಿಯಾ’ ವಹಿಸಿಕೊಂಡಿದೆ.
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ (Belonging: A Journey of Love) ಪ್ರಕಟಣೆಯ ಹೊಣೆಯನ್ನು ಈಗ ‘ಹಾರ್ಪರ್ ಕಾಲಿನ್ಸ್ ಇಂಡಿಯಾ’ ವಹಿಸಿಕೊಂಡಿದೆ. ಈ ಹಿಂದೆ ಇದರ ಹಕ್ಕನ್ನು ಹೊಂದಿದ್ದ ‘ಪೆಂಗ್ವಿನ್ ಇಂಡಿಯಾ’ ಸಂಸ್ಥೆಯು ಪುಸ್ತಕದ ಕೆಲವು ಭಾಗಗಳನ್ನು ತೆಗೆದುಹಾಕುವಂತೆ ಕೇಳಿದ್ದರಿಂದ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರು ಪ್ರಕಾಶಕರನ್ನು ಬದಲಿಸಿದ್ದಾರೆ.
ವಿವಾದದ ಹಿನ್ನೆಲೆ:
ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಚೀನಾ ಗಡಿ ಅತಿಕ್ರಮಣಕ್ಕೆ ಸಂಬಂಧಿಸಿದ ಕೆಲವು ಸೂಕ್ಷ್ಮ ವಿಚಾರಗಳನ್ನು ಪುಸ್ತಕದಿಂದ ತೆಗೆದುಹಾಕುವಂತೆ ಪೆಂಗ್ವಿನ್ ಇಂಡಿಯಾ ಸೂಚಿಸಿತ್ತು ಎನ್ನಲಾಗಿದೆ. ಆದರೆ, ಈ ಬದಲಾವಣೆಗಳಿಗೆ ಸೋನಿಯಾ ಗಾಂಧಿ ಸಮ್ಮತಿಸಿರಲಿಲ್ಲ. ವಿದೇಶಗಳಲ್ಲಿ ಯಥಾವತ್ತಾಗಿ ಪ್ರಕಟಿಸಿ, ಭಾರತದಲ್ಲಿ ಮಾತ್ರ ವಿವಾದಾತ್ಮಕ ಭಾಗಗಳನ್ನು ಕತ್ತರಿಸುವ ಪ್ರಕಾಶಕರ ದ್ವಂದ್ವ ನಿಲುವನ್ನು ಅವರು ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಪೆಂಗ್ವಿನ್ ಸಂಸ್ಥೆ ಪ್ರಕಟಣೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿತ್ತು.
ಪುಸ್ತಕದ ಹೂರಣ ಮತ್ತು ಬಿಡುಗಡೆ:
ಹಾರ್ಪರ್ ಕಾಲಿನ್ಸ್ ಸಂಸ್ಥೆಯ ಮಾಹಿತಿ ಪ್ರಕಾರ, ಈ ಪುಸ್ತಕವು 2026ರ ನವೆಂಬರ್ 10ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ. ಒಟ್ಟು 544 ಪುಟಗಳ ಈ ಕೃತಿಯು ನಮ್ಮ ಕಾಲಘಟ್ಟದ ಅತ್ಯಂತ ಪ್ರಭಾವಶಾಲಿ ರಾಜಕೀಯ ಆತ್ಮಕಥನಗಳಲ್ಲಿ ಒಂದಾಗುವ ನಿರೀಕ್ಷೆಯಿದೆ.
ಪ್ರೇಮ ಮತ್ತು ಬಾಲ್ಯ: 1965ರಲ್ಲಿ ಕೇಂಬ್ರಿಡ್ಜ್‌ನಲ್ಲಿ ಯುವಕ ರಾಜೀವ್ ಗಾಂಧಿಯವರೊಂದಿಗೆ ಚಿಗುರಿದ ಪ್ರೇಮ, ಇಟಲಿಯಲ್ಲಿ ಕಳೆದ ಬಾಲ್ಯ ಮತ್ತು ಭಾರತಕ್ಕೆ ಬಂದ ನಂತರದ ಅನುಭವಗಳನ್ನು ಸೋನಿಯಾ ಇದರಲ್ಲಿ ಹಂಚಿಕೊಂಡಿದ್ದಾರೆ.
ರಾಜಕೀಯ ಸಂಘರ್ಷ: ಗಾಂಧಿ ಕುಟುಂಬ ಎದುರಿಸಿದ ದುರಂತಗಳು, ಅನಿವಾರ್ಯವಾಗಿ ರಾಜಕೀಯ ಪ್ರವೇಶಿಸಬೇಕಾದ ಸಂದರ್ಭ ಮತ್ತು ಕಳೆದ 60 ವರ್ಷಗಳಲ್ಲಿ ಭಾರತ ಕಂಡ ಸಾಮಾಜಿಕ-ಆರ್ಥಿಕ ಬದಲಾವಣೆಗಳ ಒಳನೋಟವನ್ನು ಈ ಪುಸ್ತಕ ನೀಡಲಿದೆ.
ಪೆಂಗ್ವಿನ್ ವಿರುದ್ಧದ ಆರೋಪಗಳು:
ವಿವಾದಗಳಿಗೆ ಹೆದರಿ ಪೆಂಗ್ವಿನ್ ಸಂಸ್ಥೆ ಪುಸ್ತಕ ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’, ವೆಂಡಿ ಡೊನಿಗರ್ ಅವರ ‘ದಿ ಹಿಂದೂಸ್’ ಸೇರಿದಂತೆ ಹಲವು ಪುಸ್ತಕಗಳ ವಿಚಾರದಲ್ಲಿಯೂ ಇದೇ ರೀತಿ ನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಸದ್ಯ ಹಾರ್ಪರ್ ಕಾಲಿನ್ಸ್ ಮೂಲಕ ಸೋನಿಯಾ ಅವರ ಈ ವೈಯಕ್ತಿಕ ಹಾಗೂ ರಾಜಕೀಯ ಪ್ರಯಾಣದ ಕಥನವು ಯಾವುದೇ ಕತ್ತರಿ ಪ್ರಯೋಗವಿಲ್ಲದೆ ಓದುಗರ ಕೈ ಸೇರಲು ಸಜ್ಜಾಗಿದೆ.
ಅಂತರ ರಾಜ್ಯ
ECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಮರುಸೇರ್ಪಡೆ ಮಾಡಲು, ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಸಮಗ್ರ ಪರಿಶೀಲನಾ ಅಭಿಯಾನಕ್ಕೆ ಆದೇಶಿಸಿದೆ.
ಹೊಸದಿಲ್ಲಿ: ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ನಾಗರಿಕರನ್ನು ಮರುಸೇರ್ಪಡೆ ಮಾಡಲು, ಭಾರತೀಯ ಚುನಾವಣಾ ಆಯೋಗವು (ECI) ದೇಶಾದ್ಯಂತ ಸಮಗ್ರ ಪರಿಶೀಲನಾ ಅಭಿಯಾನಕ್ಕೆ ಆದೇಶಿಸಿದೆ.
ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರಡು ಪಟ್ಟಿಯಿಂದ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಕೈಬಿಟ್ಟಿರುವುದು ಭಾರಿ ರಾಜಕೀಯ ವಿವಾದ ಮತ್ತು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ, ಈ ತಿದ್ದುಪಡಿ ಕ್ರಮ ಕೈಗೊಳ್ಳಲಾಗಿದೆ.
ನಿನ್ನೆ (ಅ.1-ಗುರುವಾರ) ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ, ಚುನಾವಣಾ ಆಯೋಗವು ಈ ಸ್ಪಷ್ಟ ನಿರ್ದೇಶನ ನೀಡಿದೆ. ಮತದಾರರ ನೋಂದಣಿಯು ನಿರಂತರ ಪ್ರಕ್ರಿಯೆಯಾಗಿದ್ದು, ಎಸ್‌ಐಆರ್ ಅವಧಿಯಲ್ಲಿ ನೋಂದಣಿಯಾಗದ ಕಾರಣಕ್ಕೆ ಯಾವುದೇ ಅರ್ಹ ನಾಗರಿಕನಿಗೆ ಹಕ್ಕು ನಿರಾಕರಿಸಬಾರದು ಎಂದು ಆಯೋಗವು ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮತದಾರರ ನೋಂದಣಿ ಅಧಿಕಾರಿಗಳಿಗೆ (ERO) ಸೂಚಿಸಿದೆ. ಎಸ್‌ಐಆರ್ ಅಕ್ರಮ ವಿರೋಧಿಸಿ ಸಿಎಂ ಡಿಕೆ ಶಿವಕುಮಾರ್ ಪ್ರತಿಭಟನೆ ನಡೆಸಿದ್ದನ್ನು ನಾವು ಇಲ್ಲಿ ಸ್ಮರಿಸಬಹುದು.
ಮನೆ-ಮನೆ ಪರಿಶೀಲನೆ ಮತ್ತು ಮರುನೋಂದಣಿ ಪ್ರಕ್ರಿಯೆ:
ಈ ವಿಶೇಷ ಅಭಿಯಾನದಡಿ ಬೂತ್ ಮಟ್ಟದ ಅಧಿಕಾರಿಗಳು (BLO) ಹಾಲಿ ಮತದಾರರ ಪಟ್ಟಿಯನ್ನು ಎಸ್‌ಐಆರ್ ಪೂರ್ವ ಪಟ್ಟಿಯೊಂದಿಗೆ ಹೋಲಿಸಿ, ಹೆಸರು ಕಾಣೆಯಾಗಿರುವ ಮತದಾರರ ಬೂತ್‌ವಾರು ಪಟ್ಟಿಯನ್ನು ಸಿದ್ಧಪಡಿಸಲಿದ್ದಾರೆ. ಬಿಎಲ್‌ಒಗಳು ಮನೆ-ಮನೆಗೆ ತೆರಳಿ ಮತದಾರರ ಪ್ರಸ್ತುತ ಸ್ಥಿತಿಗತಿಯನ್ನು ಪರಿಶೀಲಿಸಲಿದ್ದಾರೆ. ಪ್ರತಿ ಅಧಿಕಾರಿಗೆ ವಾರಕ್ಕೆ ಕನಿಷ್ಠ 20 ರಿಂದ 25 ಮತದಾರರ ಮನೆಗಳಿಗೆ ಭೇಟಿ ನೀಡಿ, ಸುಮಾರು ಒಂದು ತಿಂಗಳೊಳಗೆ ಈ ಕಾರ್ಯ ಪೂರ್ಣಗೊಳಿಸುವ ಗುರಿ ನಿಗದಿಪಡಿಸಲಾಗಿದೆ.
ಅರ್ಹತೆ ಹೊಂದಿರುವ ಮತದಾರರಿಂದ ನಮೂನೆ-6ಪಡೆದು, ಮರುನೋಂದಣಿಗೆ ಅಧಿಕಾರಿಗಳು ನೆರವಾಗಲಿದ್ದಾರೆ. ಪರಿಶೀಲನೆ ವೇಳೆ ಮೊದಲ ಬಾರಿಗೆ ಮತ ಚಲಾಯಿಸಲಿರುವವರು, ಯುವ ಮತದಾರರು ಹಾಗೂ ಅಂಚಿನಲ್ಲಿರುವ ಅರ್ಹ ವ್ಯಕ್ತಿಗಳನ್ನು ಗುರುತಿಸಿ ನೋಂದಣಿ ಮಾಡಿಕೊಳ್ಳಲಾಗುತ್ತದೆ.
ಅಂಚಿನ ಸಮುದಾಯಗಳಿಗೆ ಆದ್ಯತೆ:
ಈ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಲು ಬಿಎಲ್‌ಒಗಳು ಸಿದ್ಧಪಡಿಸಿದ ಪಟ್ಟಿಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. ಸ್ವೀಕೃತವಾದ ಅರ್ಜಿಗಳನ್ನು ಜನಪ್ರತಿನಿಧಿ ಕಾಯ್ದೆ-1950 ಹಾಗೂ ಮತದಾರರ ನೋಂದಣಿ ನಿಯಮಗಳು-1960ರ ಅಡಿಯಲ್ಲಿ ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಇದರ ಜೊತೆಗೆ, ರಾತ್ರಿ ಆಶ್ರಯ ಕೇಂದ್ರಗಳು, ಕಾರ್ಮಿಕರ ವಸತಿ ಪ್ರದೇಶಗಳು ಹಾಗೂ ನಿರಾಶ್ರಿತ ಸಮುದಾಯಗಳನ್ನು ಗುರಿಯಾಗಿಸಿಕೊಂಡು ವಿಶೇಷ ನೋಂದಣಿ ಶಿಬಿರಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಹಾಗೂ ‘ಸ್ವೀಪ್’ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವೂ ನಿರಂತರವಾಗಿ ಸಾಗಲಿದೆ.
ವಿವಾದ ಮತ್ತು ರಾಜಕೀಯ ಸಂಘರ್ಷ:
ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಅರ್ಹ ನಾಗರಿಕರನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದವು. ಅಂಕಿ-ಅಂಶಗಳ ಪ್ರಕಾರ, ಎಸ್‌ಐಆರ್ ಬಳಿಕ ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಒಟ್ಟಾರೆ ಶೇ.10.2ರಷ್ಟು ಕಡಿತ ಕಂಡುಬಂದಿದ್ದು, ಇದರಲ್ಲಿ ಸುಮಾರು 60 ಲಕ್ಷಕ್ಕೂ ಅಧಿಕ ಮೃತ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ.
ಚುನಾವಣಾ ಆಯೋಗದ ಆಂತರಿಕ ನಿರ್ಧಾರಗಳ ಕುರಿತು ಭಿನ್ನಾಭಿಪ್ರಾಯ ಎಂಬ ವರದಿಗಳು ಹರಿದಾಡಿದ್ದರೂ, ಎಸ್‌ಐಆರ್‌ಗೆ ಸಂಬಂಧಿಸಿದ ಎಲ್ಲಾ ನಿರ್ಧಾರಗಳನ್ನು ಸರ್ವಾನುಮತದಿಂದ ತೆಗೆದುಕೊಳ್ಳಲಾಗಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ. ಪ್ರಸ್ತುತ ಆರಂಭವಾಗಿರುವ ಈ ವಿಶೇಷ ಅಭಿಯಾನವು ಪಟ್ಟಿಯಿಂದ ಹೊರಬಿದ್ದ ಅರ್ಹ ಮತದಾರರಿಗೆ ತಮ್ಮ ಸಾಂವಿಧಾನಿಕ ಹಕ್ಕನ್ನು ಮರಳಿ ಪಡೆಯಲು ಮಹತ್ವದ ಅವಕಾಶ ಕಲ್ಪಿಸಿದೆ.
ಅಂತರ ರಾಜ್ಯ
Jantar Mantar-ಜಂತರ್ ಮಂತರ್ ಪ್ರತಿಭಟನೆ: 500ಕ್ಕೂ ಹೆಚ್ಚು ಪ್ರತಿಭಟನಾಕಾರರು ವಶ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂದಾದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಹಾಗೂ ವಿವಿಧ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಸೇರಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಯಲ್ಲಿ ಭಾಗವಹಿಸಲು ಜಂತರ್ ಮಂತರ್‌ನತ್ತ ತೆರಳುತ್ತಿದ್ದ ಎಎಪಿ ನಾಯಕರಾದ ಅತಿಶಿ, ಸೌರಭ್ ಭಾರದ್ವಾಜ್, ಸಂಜೀವ್ ಝಾ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಮಾತನಾಡಿದ ಸೌರಭ್ ಭಾರದ್ವಾಜ್, ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ತಮ್ಮನ್ನು ಪೊಲೀಸರು ತಡೆದಿರುವುದು ಅಪ್ರಜಾಸತ್ತಾತ್ಮಕ ಕ್ರಮ ಎಂದು ಆರೋಪಿಸಿದರು.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳು ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ಎಎಪಿ, ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA), ಸ್ಟೂಡೆಂಟ್ಸ್ ಫೆಡರೇಷನ್ ಆಫ್ ಇಂಡಿಯಾ (SFI) ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಜಂಟಿಯಾಗಿ ಪ್ರತಿಭಟನೆಗೆ ಕರೆ ನೀಡಿದ್ದವು.
ಅಶೋಕ ರಸ್ತೆಯ ಮೂಲಕ ಜಂತರ್ ಮಂತರ್‌ಗೆ ತೆರಳಲು ಯತ್ನಿಸಿದ ಎಸ್‌ಎಫ್‌ಐನ ಸುಮಾರು 700ಕ್ಕೂ ಹೆಚ್ಚು ಸದಸ್ಯರನ್ನು ಪೊಲೀಸರು ಮಾರ್ಗಮಧ್ಯೆಯೇ ತಡೆದಿದ್ದಾರೆ. ಎಸ್‌ಎಫ್‌ಐ ಪ್ರಧಾನ ಕಾರ್ಯದರ್ಶಿ ಐಶೆ ಘೋಷ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಫಿರೋಜ್ ಶಾ ರಸ್ತೆಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆಗೆ ಯಾವುದೇ ಪೂರ್ವಾನುಮತಿ ಪಡೆಯಲಾಗಿರಲಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಭದ್ರತಾ ದೃಷ್ಟಿಯಿಂದ ಪ್ರತಿಭಟನಾ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿತ್ತು.
ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿ ಮೆಟ್ರೋ ರೈಲ್ ಕಾರ್ಪೊರೇಷನ್ (DMRC) ದೆಹಲಿ ವ್ಯಾಪ್ತಿಯ 11 ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಂದಿನ ಆದೇಶದವರೆಗೆ ಮುಚ್ಚಿದೆ.
ಅಂತರ ರಾಜ್ಯ
Jantar Mantar-ಪ್ರತಿಭಟನೆಯ ಹಿನ್ನೆಲೆ ಜಂತರ್ ಮಂತರ್‌ನಲ್ಲಿ ಇಂಟರ್‌ನೆಟ್ ಸ್ಥಗಿತ: ‘ಸರ್ವಾಧಿಕಾರಿ ನಿಜಕ್ಕೂ ಭಯಭೀತಗೊಂಡಿದ್ದಾರೆ’-ದೀಪ್ಕೆ
ದೆಹಲಿ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ‘ಸರ್ವಾಧಿಕಾರಿ ನಿಜಕ್ಕೂ ಭಯಭೀತಗೊಂಡಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆ.
ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ನಡೆಯಲಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.ಇದರ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ‘ಸರ್ವಾಧಿಕಾರಿ ನಿಜಕ್ಕೂ ಭಯಭೀತಗೊಂಡಿದ್ದಾರೆ’ ಎಂದು ತಿರುಗೇಟು ನೀಡಿದ್ದಾರೆ.
ದೆಹಲಿಯ 12 ಮೆಟ್ರೊ ನಿಲ್ದಾಣಗಳಲ್ಲಿ ಪ್ರವೇಶ ನಿರ್ಬಂಧ:
ಆಮ್ ಆದ್ಮಿ ಪಕ್ಷ (ಎಎಪಿ) ಹಾಗೂ ವಿದ್ಯಾರ್ಥಿ ಸಂಘಟನೆಗಳು ಜಂತರ್ ಮಂತರ್‌ನಲ್ಲಿ ಶುಕ್ರವಾರ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ರಾಜೀವ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್ ಸೇರಿದಂತೆ ದೆಹಲಿಯ ಪ್ರಮುಖ 12 ಮೆಟ್ರೊ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್‌ಸಿ) ತಾತ್ಕಾಲಿಕವಾಗಿ ಮುಚ್ಚಿದೆ.
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಮುಂದಿನ ಆದೇಶದವರೆಗೆ ಜನಪಥ್, ಪಟೇಲ್ ಚೌಕ್, ಸೆಂಟ್ರಲ್ ಸೆಕ್ರೆಟರಿಯೇಟ್, ರಾಜೀವ್ ಚೌಕ್, ಬಾರಾಖಂಬಾ, ಸೇವಾ ತೀರ್ಥ, ಮಂಡಿ ಹೌಸ್, ಲೋಕ ಕಲ್ಯಾಣ ಮಾರ್ಗ, ಐಎನ್‌ಎ, ಚಾವಿ ಬಜಾರ್, ರಾಮಕೃಷ್ಣ ಆಶ್ರಮ ಮಾರ್ಗ ಹಾಗೂ ನವದೆಹಲಿ ಮೆಟ್ರೊ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರವೇಶ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ ಎಂದು ಡಿಎಂಆರ್‌ಸಿ ‘ಎಕ್ಸ್’ನಲ್ಲಿ ತಿಳಿಸಿದೆ.
ಎಎಪಿ ಜತೆಗೆ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ), ಎನ್‌ಎಸ್‌ಯುಐ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಮತ್ತೊಂದೆಡೆ ಪ್ರತಿಭಟನೆಗೆ ಅನುಮತಿ ನೀಡಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.


















