ಬಿಗ್ ನ್ಯೂಸ್
High Court-6 ಮಂದಿಯ ಸಜೀವ ದಹನ ಪ್ರಕರಣ: ಹಂತಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್..!
ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಜೀವಂತ ದಹಿಸಿದ ಪ್ರಕರಣದ ಆರೋಪಿ ಅಬ್ದುಲ್ ಷರೀಫ್ ಅಲಿಯಾಸ್ ಅಮೀರ್ ಜಾನ್ಗೆ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮೂಲಕ ಕೆಳಹಂತದ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಜೀವಂತ ದಹಿಸಿದ ಪ್ರಕರಣದ ಆರೋಪಿ ಅಬ್ದುಲ್ ಷರೀಫ್ ಅಲಿಯಾಸ್ ಅಮೀರ್ ಜಾನ್ಗೆ ಹೈಕೋರ್ಟ್ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಈ ಮೂಲಕ ಕೆಳಹಂತದ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ವಿಚಾರಣಾ ನ್ಯಾಯಾಲಯದ ತೀರ್ಪು ರದ್ದು:
2018ರ ಏಪ್ರಿಲ್ 28ರಂದು ಮೈಸೂರಿನ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯ ನೆಪವೊಡ್ಡಿ ಆರೋಪಿಯನ್ನು ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಹಾಗೂ ನ್ಯಾಯಮೂರ್ತಿ ಬಿ.ಪ್ರಮೋದ್ ಅವರಿದ್ದ ವಿಭಾಗೀಯ ನ್ಯಾಯಪೀಠವು, ವಿಚಾರಣಾ ನ್ಯಾಯಾಲಯದ ತೀರ್ಪನ್ನು “ನ್ಯಾಯದಾನದ ವೈಫಲ್ಯ” ಎಂದು ಕರೆದು ರದ್ದುಗೊಳಿಸಿದೆ.
ಪ್ರಾಸಿಕ್ಯೂಷನ್ ವಾದವೇನು?
ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರು ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಿದ್ದರು. “ಇದು ಅನಿಲ ಸಿಲಿಂಡರ್ ಸ್ಫೋಟದಿಂದ ನಡೆದ ಘಟನೆಯಲ್ಲ. ಆರೋಪಿಯು ಪೆಟ್ರೋಲ್ ಸುರಿದು ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ್ದಾನೆ ಎಂಬುದು ಎಫ್ಎಸ್ಎಲ್ (FSL) ವರದಿ ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯದಿಂದ ದೃಢಪಟ್ಟಿದೆ. ಆದರೆ ಕೆಳಹಂತದ ನ್ಯಾಯಾಲಯ ಈ ಪ್ರಮುಖ ಅಂಶಗಳನ್ನು ಪರಿಗಣಿಸುವಲ್ಲಿ ವಿಫಲವಾಗಿದೆ” ಎಂದು ಅವರು ವಾದಿಸಿದ್ದರು. ಈ ವಾದವನ್ನು ಎತ್ತಿಹಿಡಿದ ಹೈಕೋರ್ಟ್, ಅಪರಾಧಿಗೆ ಐಪಿಸಿ ಸೆಕ್ಷನ್ 302 (ಕೊಲೆ), 307 (ಕೊಲೆ ಯತ್ನ) ಮತ್ತು 436 ರ ಅಡಿಯಲ್ಲಿ ಶಿಕ್ಷೆ ವಿಧಿಸಿದೆ.
ಘಟನೆಯ ಹಿನ್ನೆಲೆ:
2013ರ ಏಪ್ರಿಲ್ 12ರಂದು ಮೈಸೂರಿನ ಅಜೀಜ್ ನಗರದಲ್ಲಿ ಈ ಭೀಕರ ದುರಂತ ಸಂಭವಿಸಿತ್ತು. ಹಣಕಾಸಿನ ವಿಚಾರವಾಗಿ ನಾಟಿ ವೈದ್ಯ ಮಹಮ್ಮದ್ ಅಮೀರ್ ಜಾನ್ ಕುಟುಂಬದೊಂದಿಗೆ ಅಬ್ದುಲ್ ಷರೀಫ್ ವೈಷಮ್ಯ ಹೊಂದಿದ್ದ. ಇದೇ ದ್ವೇಷದಲ್ಲಿ ಮಧ್ಯರಾತ್ರಿ ಅವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಬಿಗ್ ನ್ಯೂಸ್
Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ
ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.
ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.
ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.
ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.
ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.
ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.
ಸಮಗ್ರ ತೋಟಗಾರಿಕಾ ಸೇವೆ:
ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















