ಸ್ಥಳೀಯ
CM-“ನಾನು ನಾಡಿನ ದೊರೆಯಲ್ಲ, ಜನರ ಸೇವಕ”; ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಇಲಾಖೆ’ಗೆ ಚಾಲನೆ ನೀಡಿದ ಸಿಎಂ
“ರಾಜಪ್ರಭುತ್ವದ ಕಾಲ ಮುಗಿದು ಈಗ ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ನಾಡಿನ ದೊರೆ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಹೆಚ್ಚಿನ ಸಂತೋಷವಾಗುತ್ತದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೂಡ್ಲಿಗಿ: “ರಾಜಪ್ರಭುತ್ವದ ಕಾಲ ಮುಗಿದು ಈಗ ಪ್ರಜಾಪ್ರಭುತ್ವ ಬಂದಿದೆ. ನನ್ನನ್ನು ನಾಡಿನ ದೊರೆ ಎಂದು ಕರೆಯುವ ಬದಲು ‘ಪ್ರಜಾಸೇವಕ’ ಎಂದು ಕರೆದರೆ ನನಗೆ ಹೆಚ್ಚಿನ ಸಂತೋಷವಾಗುತ್ತದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಶನಿವಾರ ನೂತನ ‘ಪ್ರಜಾಸೇವಾ ಇಲಾಖೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರುವ ಘೋಷಣೆಗಳನ್ನು ಮಾಡಿದರು.
ಮನೆ ಬಾಗಿಲಿಗೆ ಆಡಳಿತ:
ಜನರು ತಮ್ಮ ಕೆಲಸಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಈ ಯೋಜನೆ ರೂಪಿಸಲಾಗಿದೆ. “ಜನಸೇವೆಯೇ ಜನಾರ್ದನ ಸೇವೆ ಎಂದು ನಂಬಿರುವ ನಮ್ಮ ಸರ್ಕಾರ, ಆಡಳಿತವನ್ನು ನೇರವಾಗಿ ಜನರ ಮನೆಬಾಗಿಲಿಗೆ ತಲುಪಿಸಲಿದೆ. ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಜನರ ಮಧ್ಯೆಯೇ ಇದ್ದು ಕುಂದುಕೊರತೆಗಳನ್ನು ಆಲಿಸಲಿದ್ದಾರೆ,” ಎಂದು ಅವರು ವಿವರಿಸಿದರು.
ವಿಧಾನಸೌಧ, ಡಿಸಿ ಕಚೇರಿ ಅಥವಾ ತಾಲ್ಲೂಕು ಕಚೇರಿಗಳಲ್ಲಿ ಕುಳಿತು ಜನರಿಂದ ದೂರವಿದ್ದು ಆಡಳಿತ ನಡೆಸುವುದು ಸರಿಯಲ್ಲ. ಪ್ರತಿಯೊಬ್ಬ ನಾಗರಿಕನಿಗೂ ಸಚಿವರು, ಶಾಸಕರು ಅಥವಾ ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ನೇರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಪ್ರಜಾಸೇವಾ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಇದು ಕೇವಲ ಒಂದು ಸರ್ಕಾರಿ ಇಲಾಖೆಯಾಗದೆ, ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರುವ ಜನಪರ ವ್ಯವಸ್ಥೆಯಾಗಿ ಹೊರಹೊಮ್ಮಲಿದೆ ಎಂದು ಅವರು ಭರವಸೆ ನೀಡಿದರು.
ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿಯೂ ಈ ಪ್ರಜಾಸೇವಾ ವ್ಯವಸ್ಥೆ ಅನುಷ್ಠಾನಗೊಳ್ಳಲಿದೆ. ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರದಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಮಧ್ಯದಲ್ಲಿದ್ದು ಕೆಲಸ ಮಾಡಬೇಕು ಎಂದು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವರು ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಹಾಗೂ ಶಾಸಕರು ಪಂಚಾಯಿತಿ ಮಟ್ಟದಲ್ಲಿ ಈ ಕಾರ್ಯಕ್ರಮವನ್ನು ಮುನ್ನಡೆಸಲಿದ್ದಾರೆ.
ಶಾಸಕರು ಉಪಸ್ಥಿತರಿಲ್ಲದಿದ್ದರೆ ಅಧಿಕಾರಿಗಳೇ ಖುದ್ದಾಗಿ ಪಂಚಾಯಿತಿ ಕೇಂದ್ರಗಳಿಗೆ ತೆರಳಿ, ಸಣ್ಣ ಸಭೆಗಳನ್ನು ನಡೆಸಿ, ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಬೇಕು” ಎಂದು ಸಿಎಂ ನಿರ್ದೇಶನ ನೀಡಿದರು.
ಇದೇ ವೇಳೆ, ತಾವು ಕೂಡ್ಲಿಗಿಯಲ್ಲಿರುವ ಗಾಂಧೀಜಿಯವರ ಚಿತಾಭಸ್ಮ ಇಟ್ಟಿರುವ ಪವಿತ್ರ ಸ್ಥಳಕ್ಕೆ ಭೇಟಿ ನೀಡಿ ನಮನ ಸಲ್ಲಿಸಿರುವುದಾಗಿ ತಿಳಿಸಿದ ಅವರು, ಶುಕ್ರವಾರ ಬಸವಣ್ಣನವರ ಐಕ್ಯಸ್ಥಳಕ್ಕೆ ಭೇಟಿ ನೀಡಿದ್ದನ್ನು ಹಾಗೂ ಬರಪೀಡಿತ ಪ್ರದೇಶಗಳ ವೀಕ್ಷಣೆ ನಡೆಸಿದ್ದನ್ನು ಸ್ಮರಿಸಿದರು.
“ಹೆಲಿಕಾಪ್ಟರ್ ಪ್ರವಾಸದ ಕುರಿತು ಬರುವ ಟೀಕೆಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ. ಟೀಕೆಗಳು ಸಾಯುತ್ತವೆ, ಆದರೆ ನಾವು ಮಾಡಿದ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದು ಅವರು ಪ್ರತಿಪಾದಿಸಿದರು.
ಜನರ ಹತ್ತಿರಕ್ಕೆ ಆಡಳಿತವನ್ನು ಒಯ್ಯುವುದೇ ಸರ್ಕಾರದ ಮೂಲ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಪುನರುಚ್ಚರಿಸಿದರು.
ಜನರ ಮುಖದಲ್ಲಿ ನಗು ಕಾಣುವುದೇ ಸರ್ಕಾರದ ಯಶಸ್ಸು
ಸಾರ್ವಜನಿಕರ ಅರ್ಜಿಗಳಿಗೆ ಕೇವಲ ಸ್ವೀಕೃತಿ ನೀಡುವುದು ಮುಖ್ಯವಲ್ಲ; ಅವರಿಗೆ ಸೂಕ್ತ ಪರಿಹಾರ ತಲುಪಿದಾಗ ಮಾತ್ರ ಯೋಜನೆಯ ನೈಜ ಯಶಸ್ಸು ಸಾಧ್ಯ’ ಎಂದರು.
ವಿಜಯನಗರದ ಪವಿತ್ರ ಭೂಮಿಯಲ್ಲಿ ಈ ಜನಪರ ಯೋಜನೆಗೆ ಚಾಲನೆ ನೀಡಲಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದೆ. ತಿಂಗಳಿಗೆ ಎರಡು ದಿನ ಅಧಿಕಾರಿಗಳು ಸ್ಥಳಕ್ಕೇ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಪಿಂಚಣಿ, ಭೂಮಿ ವ್ಯಾಜ್ಯ, ಸರ್ಕಾರದ ಸೌಲಭ್ಯಗಳು, ಖಾತೆ ಬದಲಾವಣೆ, ಗ್ಯಾರಂಟಿ ಯೋಜನೆಗಳು ಹಾಗೂ ಮನೆ-ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ಒದಗಿಸಲಾಗುವುದು.
ಬಡವರು ಹಾಗೂ ಶೋಷಿತರಿಗೆ ತಹಶೀಲ್ದಾರ್, ಎಸಿ ಅಥವಾ ಡಿಸಿ ಮಟ್ಟದ ವ್ಯಾಜ್ಯಗಳಲ್ಲಿ ಹೋರಾಡಲು ಉಚಿತವಾಗಿ ವಕೀಲರ ಸೇವೆ ಒದಗಿಸಿ ಕಾನೂನು ನೆರವು ನೀಡಲಾಗುವುದು. ಅರ್ಜಿ ತಿರಸ್ಕೃತಗೊಂಡರೆ ಅದಕ್ಕೆ ಕಾರಣವನ್ನು ಸ್ಪಷ್ಟಪಡಿಸಲಾಗುವುದು. ಅರ್ಜಿದಾರರಿಗೆ ಸಂಪೂರ್ಣ ಪರಿಹಾರ ಸಿಗುವವರೆಗೂ ಸರ್ಕಾರ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಸಮಾಜದ ಪ್ರತಿಯೊಂದು ವರ್ಗಕ್ಕೂ ಅಂಬೇಡ್ಕರ್ ಅವರ ಚಿಂತನೆಯಂತೆ ಸಮಾನ ಗೌರವ ಸಿಗಬೇಕು ಎಂಬುದು ಸರ್ಕಾರದ ಆಶಯ. ಸರ್ಕಾರ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ವಿರೋಧ ಪಕ್ಷಗಳಿಗೆ ಅದನ್ನು ಕಾರ್ಯರೂಪಕ್ಕೆ ತಂದು ತೋರಿಸಿದ್ದೇವೆ. ಪ್ರಜಾಸೇವಾ ಯೋಜನೆಯೂ ಇಡೀ ದೇಶಕ್ಕೆ ಮಾದರಿಯಾಗಲಿದೆ ಎಂದರು.
ಶಿಕ್ಷಕರಿಗೆ ‘Tr’ ಗೌರವ
ದೇಶದ ಅಭಿವೃದ್ಧಿಗೆ ಸೈನಿಕ, ಕಾರ್ಮಿಕ ಹಾಗೂ ಕೃಷಿಕರಷ್ಟೇ ಶಿಕ್ಷಕರ ಕೊಡುಗೆಯೂ ಪ್ರಮುಖವಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಶಿಕ್ಷಕರ ಹೆಸರಿನ ಮುಂದೆ ‘Tr’ (Teacher) ಎಂದು ಸೇರಿಸಿ ಗೌರವಿಸುವ ಸಂಪ್ರದಾಯವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶಿಕ್ಷಕರ ದಿನಾಚರಣೆಯ ಮಹತ್ವವನ್ನು ಸ್ಮರಿಸಿದ ಅವರು, “ರಾಜ್ಯದಲ್ಲಿ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಶಿಕ್ಷಕರಿದ್ದಾರೆ. ಜನ್ಮ ನೀಡಿದ ತಾಯಿ ಮತ್ತು ಅಕ್ಷರ ಕಲಿಸಿದ ಶಿಕ್ಷಕರಿಬ್ಬರೂ ನಮಗೆ ದೇವರು ಇದ್ದಂತೆ. ವೈದ್ಯರು, ಎಂಜಿನಿಯರ್‌ಗಳಿಗೆ ಸಿಗುವಂತೆ ಶಿಕ್ಷಕರಿಗೂ ಗೌರವ ನೀಡಲು, ಅವರ ಹೆಸರಿನ ಮುಂದೆ ‘ಟೀಚರ್’ ಎಂಬ ಬಿರುದು ಬಳಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ:
ಸಮಾಜವನ್ನು ಬದಲಾಯಿಸುವ ಶಕ್ತಿ ಶಿಕ್ಷಣ ಕ್ಷೇತ್ರಕ್ಕಿದೆ. ಸರ್ಕಾರಿ ಹಾಗೂ ಗ್ರಾಮೀಣ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಬಡ ಮಕ್ಕಳಿಗೆ ಪ್ರೋತ್ಸಾಹ ನೀಡಲು ಶೇ 15ರಷ್ಟು ಗ್ರಾಮೀಣ ಮೀಸಲಾತಿಯೊಂದಿಗೆ, ಹೆಚ್ಚುವರಿಯಾಗಿ ಶೇ 7.5ರಷ್ಟು ಆಂತರಿಕ ಮೀಸಲಾತಿ ನೀಡಲು ಸರ್ಕಾರ ಹೊಸ ರೂಪ ನೀಡುತ್ತಿದೆ ಎಂದರು.
ಮನೆ ಬಾಗಿಲಿಗೆ ಇ-ಖಾತೆ ದಾಖಲೆ:
ಪ್ರತಿಯೊಬ್ಬರ ಆಸ್ತಿಗೆ ಸೂಕ್ತ ಭದ್ರತೆ ಕಲ್ಪಿಸುವುದು ಸರ್ಕಾರದ ಕರ್ತವ್ಯ. ‘ಭೂಮಿ ಗ್ಯಾರಂಟಿ’ ಯೋಜನೆಯಡಿ ತಾಲ್ಲೂಕಿನಲ್ಲಿ ಈಗಾಗಲೇ 25,276 ಜನರಿಗೆ ಹಕ್ಕುಪತ್ರ ನೀಡಲಾಗಿದೆ. ಆಸ್ತಿಗಳ ಅಳತೆ ಮಾಡಿ, ಮಾಲೀಕರ ಭಾವಚಿತ್ರದೊಂದಿಗೆ ಇ-ಖಾತೆ ದಾಖಲೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಾಗಿಲಿಗೆ ಬಂದಿದೆ ನಿಮ್ಮ ಸರ್ಕಾರ, ಸೇವೆಗಿರಲಿ ನಿಮ್ಮ ಸಹಕಾರ ಎಂಬ ಧೈಯವಾಕ್ಯದೊಂದಿಗೆ ಈ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಬಡವರು ಮತ್ತು ಶಕ್ತಿ ಇಲ್ಲದವರಿಗೆ ನೆರವಾಗಲು ಉಚಿತ ಸರ್ಕಾರಿ ವಕೀಲರ ಸೌಲಭ್ಯ ಸೇರಿದಂತೆ ಕಾನೂನು ನೆರವು ನೀಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ ಎಂದು ಸಿಎಂ ಹೇಳಿದರು.
ಇದೇ ವೇಳೆ ಹಳ್ಳಿಗಳಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ನಾಯಕತ್ವದ ಪ್ರತಿಭೆಗಳನ್ನು ಹೊರತರುವ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವಕ ಸಂಘ’ಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದರು. ಪ್ರತಿ ಪಂಚಾಯಿತಿಯಲ್ಲೂ ಗ್ಯಾರಂಟಿ ಯೋಜನೆಗಳ ಸಮಿತಿಗಳನ್ನು ರಚಿಸಿ, ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಬರಪೀಡಿತ ತಾಲೂಕುಗಳ ಘೋಷಣೆ
ರಾಜ್ಯದ ಬರಪೀಡಿತ ತಾಲ್ಲೂಕುಗಳ ಘೋಷಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ನಿಯಮಗಳ ಚೌಕಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಬರ ಪರಿಸ್ಥಿತಿಯ ಕುರಿತು ಎರಡನೇ ಹಂತದ ವರದಿ ಲಭ್ಯವಾಗಲಿದ್ದು, ಇನ್ನು 50ಕ್ಕೂ ಹೆಚ್ಚು ತಾಲ್ಲೂಕುಗಳ ಸಮೀಕ್ಷೆ ಪ್ರಗತಿಯಲ್ಲಿದೆ. ನಿಯಮಗಳ ಪ್ರಕಾರ 21 ದಿನಗಳ ಮಳೆಯ ಪ್ರಮಾಣ ಹಾಗೂ ನಿಗದಿತ ಮಾನದಂಡಗಳನ್ನು ಪರಿಶೀಲಿಸಿ, ಈ ತಿಂಗಳ ಅಂತ್ಯದ ವೇಳೆಗೆ ಅಭಾವ ಎದುರಿಸುತ್ತಿರುವ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್8 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ13 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು16 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized15 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್16 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ14 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್15 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















