ಬೆಂಗಳೂರು
Bigg Boss-ಬಿಗ್ ಬಾಸ್ ಕನ್ನಡ 13ಕ್ಕೆ ಗ್ರ್ಯಾಂಡ್ ಓಪನಿಂಗ್: ದೊಡ್ಡಮನೆ ಸೇರಿದ 16 ಮಂದಿ ಕಿಲಾಡಿಗಳ ಕಂಪ್ಲೀಟ್ ಲಿಸ್ಟ್ ಇಲ್ಲಿದೆ..!
ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿಯ ಬಿಗ್ ಬಾಸ್ ಹಲವು ವಿಶೇಷತೆಗಳಿಂದ ಕೂಡಿದ್ದು, ಅಗ್ನಿ ಪರೀಕ್ಷೆಯ ಮೂಲಕ ಆಯ್ಕೆಯಾದ ಸಾಮಾನ್ಯ ಸ್ಪರ್ಧಿಗಳು ಹಾಗೂ ಖ್ಯಾತ ಸೆಲೆಬ್ರಿಟಿಗಳ ನಡುವೆ ಸಮಬಲದ ಪೈಪೋಟಿ ನಡೆಯಲಿದೆ.
ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ದ 13ನೇ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿಯ ಬಿಗ್ ಬಾಸ್ ಹಲವು ವಿಶೇಷತೆಗಳಿಂದ ಕೂಡಿದ್ದು, ಅಗ್ನಿ ಪರೀಕ್ಷೆಯ ಮೂಲಕ ಆಯ್ಕೆಯಾದ ಸಾಮಾನ್ಯ ಸ್ಪರ್ಧಿಗಳು ಹಾಗೂ ಖ್ಯಾತ ಸೆಲೆಬ್ರಿಟಿಗಳ ನಡುವೆ ಸಮಬಲದ ಪೈಪೋಟಿ ನಡೆಯಲಿದೆ.
ಈ ಬಾರಿ ಬಿಗ್ ಬಾಸ್ ಮನೆ ಪ್ರವೇಶಿಸಿದ 16 ಸ್ಪರ್ಧಿಗಳ ಪರಿಚಯ ಇಲ್ಲಿದೆ:
ಜಗದೀಶ್ (ಜಗ್ಗ ಮಮ್ಮಿ): ‘ಲವ್ ಮಾಕ್ಟೇಲ್ 3’ ಚಿತ್ರದ ಪಾತ್ರದ ಮೂಲಕ ಜನಪ್ರಿಯರಾಗಿರುವ ಮಂಡ್ಯದ ಪಾಂಡವಪುರ ಮೂಲದ ಪ್ರತಿಭೆ.
ಸೌಂದರ್ಯ: ಮಂಗಳೂರು ಮೂಲದ ಮಾಡೆಲಿಂಗ್ ಲೋಕದ ಗ್ಲಾಮರಸ್ ಬೆಡಗಿ.
ಅವಿನಾಶ್ ಶತಮರ್ಷನ: ರಂಗಭೂಮಿಯಿಂದ ಬೆಳೆದು ಬಂದಿರುವ ನಟ ಹಾಗೂ ನಿರ್ದೇಶಕ.
ಪ್ರಥಮಾ ಪ್ರಸಾದ್: ಹಿರಿಯ ನಟಿ ವಿನಯಾ ಪ್ರಸಾದ್ ಅವರ ಪುತ್ರಿ, ಕಿರುತೆರೆಯಲ್ಲಿ ಈಗಾಗಲೇ ಗುರುತಿಸಿಕೊಂಡಿದ್ದಾರೆ.
ಸಂಗೀತಾ ಭಟ್: ‘ದಯವಿಟ್ಟು ಗಮನಿಸಿ’ ಚಿತ್ರದ ಖ್ಯಾತಿಯ ನಟಿ, ಮೀಟೂ ಅಭಿಯಾನದ ಮೂಲಕವೂ ಸುದ್ದಿಯಾದವರು.
ಗಗನ್ ಚಿನ್ನಪ್ಪ: ‘ಸೀತಾ ರಾಮ’ ಮತ್ತು ‘ಮಂಗಳ ಗೌರಿ ಮದುವೆ’ ಧಾರಾವಾಹಿಗಳ ಮೂಲಕ ಮನೆಮಾತಾಗಿರುವ ನಟ.
ಓಂ ಪ್ರಕಾಶ್ ರಾವ್: ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ. ಹಾಸ್ಯ ನಟ ಎನ್.ಎಸ್. ರಾವ್ ಅವರ ಪುತ್ರ.
ಕಾವ್ಯಾ ಗೌಡ: ‘ಭಾಗ್ಯ ಲಕ್ಷ್ಮಿ’ ಧಾರಾವಾಹಿಯ ಜನಪ್ರಿಯ ಖಳನಾಯಕಿ.
ಯಶಸ್ ಕೃಷ್ಣ: ‘ಪವಿತ್ರ ಬಂಧನ’ ಧಾರಾವಾಹಿಯ ಮೂಲಕ ಪರಿಚಿತರಾಗಿರುವ ನಟ.
ಧನುಷ್ ಮಂಜುನಾಥ್: ‘ಅಗ್ನಿಪರೀಕ್ಷೆ’ ಟಾಸ್ಕ್ ಮೂಲಕ ಅರ್ಹತೆ ಪಡೆದು ಬಂದಿರುವ ಸಾಮಾನ್ಯ ಸ್ಪರ್ಧಿ.
ಕವಿ ಮಂಜುನಾಥ್: ಪ್ರಾಸಬದ್ಧ ಮಾತುಗಳಿಂದಲೇ ಎಲ್ಲರ ಗಮನ ಸೆಳೆದಿರುವ ಸ್ಪರ್ಧಿ.
ಕಿರಣ್ ಶಾಸ್ತ್ರಿ (ಕಾಯಿ ಶಾಸ್ತ್ರಿ): ನಿಂಬೆಹಣ್ಣು ಹಿಡಿದು ಟಾಸ್ಕ್ ಮಾಡುವ ಮೂಲಕ ಅಗ್ನಿಪರೀಕ್ಷೆಯಲ್ಲಿ ಗೆದ್ದು ಬಂದವರು.
ಆಸಿಯಾ ಫಿರ್ದೋಸ್: ‘ಶ್ರಾವಣಿ ಸುಬ್ರಹ್ಮಣ್ಯ’ ಧಾರಾವಾಹಿಯ ಮೂಲಕ ವೀಕ್ಷಕರಿಗೆ ಹತ್ತಿರವಾಗಿರುವ ನಟಿ.
ವೈಷ್ಣವಿ ಕೌಂಡಿನ್ಯ: ‘ಮಿಥುನ ರಾಶಿ’ ಮತ್ತು ‘ಪ್ರೇಮ ಕಾವ್ಯ’ ಸೀರಿಯಲ್‌ಗಳ ಮೂಲಕ ಚಿರಪರಿಚಿತರಾಗಿರುವ ನಟಿ.
ಲಿಖಿತ್ ಗೊಂದಿ: ದೈಹಿಕ ಕ್ಷಮತೆ ಮತ್ತು ಟಾಸ್ಕ್‌ಗಳ ಮೂಲಕ ಭರವಸೆ ಮೂಡಿಸಿರುವ ಫಿಟ್ನೆಸ್ ಪ್ರಿಯ.
ತಾಂಡವ್ ರಾಮ್: ‘ಜೋಡಿಹಕ್ಕಿ’ ಖ್ಯಾತಿಯ ನಟ ಹಾಗೂ ವೃತ್ತಿಪರ ಕುಸ್ತಿಪಟು.
ಒಟ್ಟಾರೆಯಾಗಿ ಈ ಬಾರಿ ದೊಡ್ಡಮನೆಯಲ್ಲಿ ಸೆಲೆಬ್ರಿಟಿಗಳ ಅನುಭವ ಮತ್ತು ಸಾಮಾನ್ಯ ಸ್ಪರ್ಧಿಗಳ ಉತ್ಸಾಹದ ನಡುವೆ ಭರ್ಜರಿ ಮನರಂಜನೆ ಸಿಗುವುದು ಖಚಿತವಾಗಿದೆ. ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲಿ ಸಾಗಲಿರುವ ಈ ಪಯಣ ಮುಂದಿನ ನೂರು ದಿನಗಳ ಕಾಲ ವೀಕ್ಷಕರನ್ನು ರಂಜಿಸಲಿದೆ.
ಬಿಗ್ ನ್ಯೂಸ್
Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.
ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.
ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.
ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.
ಶಿಕ್ಷಣ
Special classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು: ಮಳೆಯಿಂದಾಗಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಹೊಂದಾಣಿಕೆ ಮಾಡುವ ಉದ್ದೇಶದಿಂದ ದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಅ.3ರಿಂದ ಅ.7ರವರೆಗೆ ಕೆಲವು ನಿಬಂಧನೆಗಳೊಂದಿಗೆ ವಿಶೇಷ ತರಗತಿಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ.
ವಿಶೇಷ ತರಗತಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸಲು ಪೋಷಕರಿಂದ ಕಡ್ಡಾಯವಾಗಿ ಲಿಖಿತ ಒಪ್ಪಿಗೆ ಪತ್ರ ಪಡೆಯಬೇಕು ಎಂದು ಇಲಾಖೆ ಸೂಚಿಸಿದೆ.
ಅಲ್ಲದೆ, ವಿಶೇಷ ತರಗತಿಗಳನ್ನು ನಡೆಸುವ ಕುರಿತು ಮುಖ್ಯ ಶಿಕ್ಷಕರು ಹಾಗೂ ಸಹಶಿಕ್ಷಕರು ನಡವಳಿ ದಾಖಲಿಸಬೇಕು. ತರಗತಿಗಳನ್ನು ನಡೆಸುತ್ತಿರುವ ಮಾಹಿತಿಯನ್ನು ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ನೀಡುವಂತೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆ ಸೂಚಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.
ಬಿಗ್ ನ್ಯೂಸ್
KRS-ಕೆಆರ್‌ಎಸ್‌ಗೆ ಎತ್ತಿನಹೊಳೆ ನೀರು..! ನೀರಿನ ಮಟ್ಟ ಹೆಚ್ಚಿಸಲು ಹೊಸ ಮಾರ್ಗ
ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಸಕಲೇಶಪುರ: ಮಳೆ ಕೊರತೆ ಹಾಗೂ ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ ಕಾಯ್ದುಕೊಳ್ಳುವ ಅಗತ್ಯದ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಯ ನೀರನ್ನು ಹೇಮಾವತಿ ನದಿಗೆ ಹರಿಸಿ, ಅಲ್ಲಿಂದ ಗೊರೂರು ಅಣೆಕಟ್ಟಿನ ಮೂಲಕ ಕನ್ನಂಬಾಡಿ (ಕೆಆರ್‌ಎಸ್) ಅಣೆಕಟ್ಟಿಗೆ ಹರಿಸಲಾಗುತ್ತಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ನಾಗರ ಗ್ರಾಮದ ವಿತರಣಾ ಘಟಕದಿಂದ ಕಳೆದ ಒಂದು ವಾರದಿಂದ ಎತ್ತಿನಹೊಳೆ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ. ಅಲ್ಲಿಂದ ಗೊರೂರು ಜಲಾಶಯದ ಮೂಲಕ ಕಾವೇರಿ ನದಿಗೆ ಸೇರಿ ಕೆಆರ್‌ಎಸ್ ಅಣೆಕಟ್ಟಿನತ್ತ ನೀರು ಸಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸಕ್ತ ವರ್ಷ ಮಳೆ ಪ್ರಮಾಣ ಕಡಿಮೆಯಾಗಿದ್ದು, ಕಾವೇರಿ ನೀರಾವರಿ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದಂತೆ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಎತ್ತಿನಹೊಳೆ ನೀರನ್ನು ಪರ್ಯಾಯವಾಗಿ ಬಳಸಲಾಗುತ್ತಿದೆ ಎನ್ನಲಾಗಿದೆ.
ಎತ್ತಿನಹೊಳೆ ಯೋಜನೆಯಡಿ ಮೇ 15ರಿಂದ ಅಕ್ಟೋಬರ್ ಅಂತ್ಯದವರೆಗೆ ಎಂಟು ಚೆಕ್‌ಡ್ಯಾಮ್‌ಗಳಿಂದ ನೀರನ್ನು ಮೇಲೆತ್ತಿ ಬೇಲೂರು-ಅರಸೀಕೆರೆ ಮಾರ್ಗವಾಗಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಬರಪೀಡಿತ ಏಳು ಜಿಲ್ಲೆಗಳಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಆದರೆ ಅರಸೀಕೆರೆ ಹಾಗೂ ತುಮಕೂರು ಭಾಗಗಳಲ್ಲಿ ಯೋಜನೆಯ ಕಾಮಗಾರಿಗಳು ಇನ್ನೂ ಸಂಪೂರ್ಣಗೊಂಡಿಲ್ಲ.
ಯೋಜನಾ ಪ್ರದೇಶದ 32ನೇ ಕಿ.ಮೀ. ವ್ಯಾಪ್ತಿಯ ಬೆಟ್ಟದಲೂರು ಸಮೀಪ ಕಾಗೇಹಳ್ಳಕ್ಕೆ ನೀರು ಹರಿಸಿ, ಮಾರಿಕಣಿವೆ ಮೂಲಕ ಎತ್ತಿನಹೊಳೆ ನೀರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ತಲುಪಿಸುವ ವ್ಯವಸ್ಥೆ ಇದೆ. ಈ ಮಾರ್ಗದಲ್ಲಿರುವ ಬಹುತೇಕ ಕೆರೆಕಟ್ಟೆಗಳು ಈಗಾಗಲೇ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
2024ರಲ್ಲಿ ಎತ್ತಿನಹೊಳೆ ಯೋಜನೆ ಉದ್ಘಾಟನೆಯಾಗಿದ್ದು, ಆ ವರ್ಷ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ. 2025ರಲ್ಲಿ ಸುಮಾರು 4.5 ಟಿಎಂಸಿ ನೀರನ್ನು ಮೇಲೆತ್ತಲಾಗಿತ್ತು. ಪ್ರಸಕ್ತ ವರ್ಷದ ಸೆಪ್ಟೆಂಬರ್ ಅಂತ್ಯದವರೆಗೆ 1.57 ಟಿಎಂಸಿ ನೀರನ್ನು ಮಾತ್ರ ಮೇಲೆತ್ತಲಾಗಿದೆ ಎಂದು ತಿಳಿದುಬಂದಿದೆ.
ಇದರಲ್ಲಿ ಸುಮಾರು 57 ಕ್ಯುಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಲಾಗಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎತ್ತಿನಹೊಳೆ ಯೋಜನೆಯಡಿ ಮೇಲೆತ್ತಿದ ಸಂಪೂರ್ಣ ನೀರನ್ನು ಕಾಗೇಹಳ್ಳಕ್ಕೆ ಹರಿಸಿದರೆ ರೈತರ ಜಮೀನುಗಳು ಜಲಾವೃತವಾಗುವ ಸಾಧ್ಯತೆ ಇರುವುದರಿಂದ, ಸದ್ಯ ಅಲ್ಪ ಪ್ರಮಾಣದ ನೀರನ್ನು ಹೇಮಾವತಿ ನದಿಗೆ ಹರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
ನಿಧನ ವಾರ್ತೆ21 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್16 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು13 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ23 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
Uncategorized21 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ19 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಮಂಗಳೂರು16 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್15 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ


















