ಶಿಕ್ಷಣ
Ambika-ಬಪ್ಪಳಿಗೆಯ ಅಂಬಿಕಾ ಪ.ಪೂ. ಕಾಲೇಜಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ; ಭಗವದ್ಗೀತೆಯ ಸಂದೇಶಗಳು ಇಂದಿನ ಸಮಾಜಕ್ಕೆ ಪ್ರಸ್ತುತ : ಸಾವಿತ್ರಿ ಶಾಸ್ತ್ರೀ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಕೃತ ಉಪನ್ಯಾಸಕಿ ಸಾವಿತ್ರಿ ಶಾಸ್ತ್ರೀ ಅವರು, ಶ್ರೀಕೃಷ್ಣನ ಜೀವನ ಹಾಗೂ ಭಗವದ್ಗೀತೆಯ ಸಂದೇಶಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಹೇಳಿದರು.
ಶ್ರೀಕೃಷ್ಣನು ಧರ್ಮ, ಸತ್ಯ, ಕರ್ತವ್ಯ, ಪ್ರೀತಿ, ಸ್ನೇಹ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿದ್ದಾನೆ. ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಧೈರ್ಯದಿಂದ ಎದುರಿಸಿ, ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದೇ ಶ್ರೀಕೃಷ್ಣನ ಸಂದೇಶದ ಸಾರವಾಗಿದೆ. ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಅರಿತುಕೊಂಡು, ಹಿರಿಯರಿಂದ ದೊರೆಯುವ ಉತ್ತಮ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಭಗವದ್ಗೀತೆ ಸೇರಿದಂತೆ ಅನೇಕ ಅಮೂಲ್ಯ ಗ್ರಂಥಗಳು ಭಾರತೀಯ ಜೀವನದರ್ಶನವನ್ನು ವಿಶ್ವಕ್ಕೆ ಪರಿಚಯಿಸಿವೆ. ಇವುಗಳನ್ನು ಅರಿತಾಗ ವಿದ್ಯಾರ್ಥಿಗಳಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ಹೆಮ್ಮೆ ಮೂಡುವುದರ ಜೊತೆಗೆ, ನೈತಿಕ ಮೌಲ್ಯಗಳು ಬೆಳೆಯುವಲ್ಲಿ ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್. ನಟ್ಟೋಜ ಅವರು ಮಹಾಭಾರತದ ಯುದ್ಧಭೂಮಿಯಲ್ಲಿ ಅರ್ಜುನನಿಗೆ ಶ್ರೀಕೃಷ್ಣನು ನೀಡಿದ ಉಪದೇಶವೇ ಭಗವದ್ಗೀತೆ. ಇದು ಕೇವಲ ಧಾರ್ಮಿಕ ಗ್ರಂಥವಾಗಿರದೆ, ಮಾನವನಿಗೆ ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ತಿಳಿಸುವ ಶಾಶ್ವತ ಜೀವನದರ್ಶನವಾಗಿದೆ ಎಂದು ಹೇಳಿದರು.
ಕುರುಕ್ಷೇತ್ರದ ಯುದ್ಧಭೂಮಿಯಲ್ಲಿ ತನ್ನ ಬಂಧು-ಬಳಗವನ್ನು ಎದುರಿಸಿ ಹೋರಾಡಬೇಕಾದ ಪರಿಸ್ಥಿತಿಯಲ್ಲಿ ಅರ್ಜುನನು ಧರ್ಮಸಂಕಟಕ್ಕೆ ಒಳಗಾದಾಗ, ಶ್ರೀಕೃಷ್ಣನು ಅವನಿಗೆ ಕರ್ತವ್ಯ, ಧರ್ಮ, ಆತ್ಮಜ್ಞಾನ, ಕರ್ಮ, ಭಕ್ತಿ, ಜ್ಞಾನ ಮತ್ತು ಸಮತ್ವದ ಕುರಿತು ಉಪದೇಶ ನೀಡಿದನು. ಮನುಷ್ಯನು ತನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು; ಕಾರ್ಯದ ಫಲದ ಬಗ್ಗೆ ಅತಿಯಾದ ಆಸಕ್ತಿ ಅಥವಾ ಚಿಂತೆಯನ್ನು ಹೊಂದಬಾರದು ಎಂಬ ಗೀತೆಯ ಸಂದೇಶ ಇಂದಿನ ಜೀವನದಲ್ಲಿಯೂ ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದ್ದ ಭಜನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿ, ಭಕ್ತಿಗೀತೆಗಳನ್ನು ಹಾಡಿ ಶ್ರೀಕೃಷ್ಣನನ್ನು ಸ್ಮರಿಸಿದರು. ಭಜನೆಯ ನಿನಾದದಿಂದ ಕಾರ್ಯಕ್ರಮದ ವಾತಾವರಣ ಭಕ್ತಿಮಯವಾಗಿ ಮಾರ್ಪಟ್ಟಿತು. ಅಷ್ಟಮಿ ಸಂಭ್ರಮದ ಅಂಗವಾಗಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿಶೇಷವಾಗಿ ಮಡಕೆ ಹೊಡೆಯುವ ಆಟ ಎಲ್ಲರ ಗಮನ ಸೆಳೆಯಿತು.
ವೇದಿಕೆಯಲ್ಲಿ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ. ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಧಾತ್ರಿ ಮತ್ತು ಸಿಂಚನಾ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದರು. ವಿದ್ಯಾರ್ಥಿ ಭೂಷಿತ್ ಅವರು ಸ್ವಾಗತ ಭಾಷಣದ ಮೂಲಕ ಅತಿಥಿಗಳು ಹಾಗೂ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ವಿದ್ಯಾರ್ಥಿ ನಿದರ್ಶನ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಶ್ರೀರಾಮ್ ಎಸ್.ಜೆ. ಅವರು ವಂದನಾರ್ಪಣೆ ಸಲ್ಲಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಕಬಕ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆಯಿತು.
ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕಿಶನ್ ಕೆ ವೈ, ತ್ರಿಶಿಕ್ ಕೆ. ಗೌಡ , ಯಶ್ವಿತ್ ಗೌಡ, ಪವನ್ ಕುಮಾರ್, ಮೋಕ್ಷಿತ್ ಕೆ.ಜೆ, ಅನ್ವಿತ್ ಎಸ್ .ಪಿ, ನಿದೀಶ್ ಶೆಟ್ಟಿ, ಮನ್ವಂತ್ ದ್ವಿತೀಯ ಪಿಯುಸಿ ಪ್ರಣಮ್ ಪಿ ಶೆಟ್ಟಿ ,ಚಿಂತನ್ ಕೆ, ಕೆ ಆರ್ ದಿಶಾಂತ್ ಹಾಗೂ ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿನ್ಯಾ ರೈ, ಸೃಷ್ಟಿ ಎಸ್. ಆರ್. ರೈ, ವೀಕ್ಷಾ ಬಿ. ಆರ್, ಧರಣಿ ಕೆ. ಟಿ, ಶ್ರಾವ್ಯ, ಕೆ. ಸುಶಾನಿ, ಸಿ. ಎಸ್. ಚಿನ್ಮಯ್ ಗೌಡ, ಪಾವನಿ ಕೆ. ವಸಿಷ್ಠ, ಸಾನ್ವಿ ಎಸ್, ತನ್ವಿ ದ್ವಿತೀಯ ಪಿಯುಸಿ ಧನ್ವಿ ಎ. ಆರ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Puttur-ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ.ಗೆ ಯೋಗಾಸನದಲ್ಲಿ ಚಿನ್ನ; ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸ್ಪರ್ಧೆಗೆ ಆಯ್ಕೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪುತ್ತೂರು, ಅ. 4: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ ವಿದ್ಯಾರ್ಥಿ ನಿಖಿಲ್ ಬಿ.ಕೆ. ಅವರು ಮಂಗಳೂರಿನ ಎಸ್‌ಡಿಎಂನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ್ ಕಾಲೇಜು ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಯೋಗಾಸನ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಿಖಿಲ್ ಬಿ.ಕೆ. ಅವರ ಸಾಧನೆಯ ಹಿನ್ನೆಲೆಯಲ್ಲಿ ಮುಂದಿನ ಹಂತವಾದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಯೋಗಾಸನ ಸ್ಪರ್ಧೆಗೆ ಅವರು ಆಯ್ಕೆಯಾಗಿದ್ದಾರೆ.
ಅವರಿಗೆ ತರಬೇತುದಾರ ನವೀನ್ ಕುಮಾರ್ ಬಿ. ಕೆಯೂರ್ ತರಬೇತಿ ನೀಡಿದ್ದರು.
ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಅವರು ನಿಖಿಲ್ ಬಿ.ಕೆ. ಹಾಗೂ ತರಬೇತುದಾರರನ್ನು ಅಭಿನಂದಿಸಿ, ಮುಂದಿನ ಹಂತದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.
ಸ್ಥಳೀಯ
Manila-ಮಾಣಿಲದಲ್ಲಿ ಸ್ವಯಂಪ್ರೇರಿತ ಶ್ರಮದಾನ
ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಮಾಣಿಲ : ಮಾಣಿಲ ಗ್ರಾಮದ ಮುರುವ ಕೊಮ್ಮುಂಜೆ ರಸ್ತೆಯಲ್ಲಿ ಮುರುವ ಬಸ್ ನಿಲ್ದಾಣದಿಂದ ಅಂಗನವಾಡಿ ಬಳಿವರೆಗೆ ”ಸ್ವಚ್ಛತೆಯೇ ಸೇವೆ-2026” ಅಭಿಯಾನದಡಿ ಗುರುವಾರದಂದು ಸ್ವಯಂಪ್ರೇರಿತ ಶ್ರಮದಾನ ಕಾರ್ಯಕ್ರಮ ನಡೆಯಿತು.
ಶ್ರಮದಾನದಲ್ಲಿ ಗ್ರಾಮಸ್ಥರಾದ ಚಂದ್ರಶೇಖರ ರಾವ್ ಕೊಮ್ಮುಂಜೆ, ರಾಜಾರಾಮ ನಾಯಕ್ ಮುರುವ, ಬಾಬು ಮೂಲ್ಯ ಮುರುವ, ಭರತ್ ಕುಮಾರ್ ಬೈಕುಂಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೃಷ್ಣ ಕುಮಾರ ಕಮ್ಮಜೆ, ಗ್ರಾ.ಪಂ ಕಾರ್ಯದರ್ಶಿ ರಾಮ ನಾಯ್ಕ ಎಮ್, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಜಗದೀಶ್ ನಾಯಕ್, ಭವಾನಿ.ಪಿ, ಮಮತಾ ಎಸ್, ಅವಿನಾಶ್ ಯಂ, ನೇತ್ರಾವತಿ ಒಕ್ಕೂಟದ ಪೂರ್ಣಿಮ ಬಿ, ಕೃಷಿ ಸಖಿ ಪಾರ್ವತಿ, ಪಶು ಸಖಿ ಬಾಲಮಣಿ, ದಿಶಾ ಕೊಂದಲಕೋಡಿ ಭಾಗವಹಿಸಿದರು.
-
ನಿಧನ ವಾರ್ತೆ11 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್17 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ17 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ16 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ17 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ15 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ17 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ11 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















