Connect with us

ಶಿಕ್ಷಣ

Narendra-ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2026-27ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಪೋಷಕರಿಗಾಗಿ ಆಯೋಜಿಸಿದ ರೋಲ್ ಆಫ್ ಪೇರೆಂಟ್ಸ್ ಇನ್ ಬಿಲ್ಡಿಂಗ್ ಹೆಲ್ದಿ ಫ್ಯೂಚರ್ ಎಂಬ ವಿಚಾರದ ಬಗೆಗಿನ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಲೇಡೀಸ್ ವಿಂಗ್ ಪುತ್ತೂರು ಇದರ ಅಧ್ಯಕ್ಷರಾದ ಆದ ಡಾ. ಸುಲೇಖ ವರದರಾಜ್ ಮಾತನಾಡಿದರು.

Ad Widget

Ad Widget

Ad Widget

Ad Widget

“ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು. ತಪ್ಪಾದಾಗ ತಿದ್ದುವ , ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ, ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು. ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸಂಸ್ಥೆಯು ವಿವಿಧ ಕರ‍್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸ್ಪಂದನೆ ಅತೀ ಅಗತ್ಯ ”ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಲೇಡೀಸ್ ವಿಂಗ್ ಪುತ್ತೂರು ಇದರ ಅಧ್ಯಕ್ಷರಾದ ಆದ ಡಾ. ಸುಲೇಖ ವರದರಾಜ್ ರವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ 2026-27 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಪೋಷಕರಿಗಾಗಿ ಆಯೋಜಿಸಿದ ರೋಲ್ ಆಫ್ ಪೇರೆಂಟ್ಸ್ ಇನ್ ಬಿಲ್ಡಿಂಗ್ ಹೆಲ್ದಿ ಫ್ಯೂಚರ್ ಎಂಬ ವಿಚಾರದ ಬಗೆಗಿನ ವಿಶೇಷ ಉಪನ್ಯಾಸ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ವಿದ್ಯಾರ್ಥಿ ಜೀವನದಲ್ಲಿ ಯಶಸ್ವಿಯಾಗಲು ದೈಹಿಕ ಮತ್ತು ಮಾನಸಿಕ ಆರೋಗ್ಯ ಅತ್ಯಗತ್ಯ. ಹದಿಹರೆಯದಲ್ಲಿ ಹುಡುಗ ಹುಡುಗಿಯರು ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಒಳಗಾಗುತ್ತಾರೆ. ಈ ಸಮಯದಲ್ಲಿ ವೈಜ್ಞಾನಿಕವಾಗಿ ದೇಹದಲ್ಲಿ ಕೆಲವೊಂದು ಸಹಜ ಬದಲಾವಣೆಗಳಾಗುತ್ತವೆ. ಹರೆಯದಲ್ಲಿ ಜವಾಬ್ದಾರಿ ಅರಿತು ನಡೆದರೆ ಉತ್ತಮ ಬದುಕು ಕಟ್ಟಿಕೊಳ್ಳಬಹುದು.ಎಂದು ಹೇಳಿದರು.

ಪಾಲಕರು ತಮ್ಮ ಮಕ್ಕಳೊಂದಿಗೆ ಮಾತನಾಡಬೇಕು ಏಕೆಂದರೆ ಹದಿಹರೆಯದವರು ಮತ್ತು ಹದಿಹರೆಯದವರಿಗೆ ಕುಟುಂಬದ ಬೆಂಬಲವು ಮುಖ್ಯವಾದ ಏಕೈಕ ವಿಷಯವಾಗಿದೆ. ಪೋಷಕರು ಅವರ ಮಾತನ್ನು ಯಾವುದೇ ನಿರ್ಣಯವಿಲ್ಲದೆ ಆಲಿಸಿದರೆ ಮತ್ತು ಅವರಿಗೆ ಸ್ವೀಕಾರ, ಪ್ರೀತಿ, ಗೌರವ ಮತ್ತು ಗುಣಮಟ್ಟದ ಸಮಯದ ಭಾವನಾತ್ಮಕ ಸಂಪನ್ಮೂಲಗಳನ್ನು ಒದಗಿಸಿದರೆ, ಮಕ್ಕಳು ಈ ಸಮಸ್ಯೆಗಳನ್ನು ಉತ್ತಮವಾಗಿ ನಿಭಾಯಿಸಬಹುದು. ಎಂದು ಹೇಳಿದರು.

Ad Widget

Ad Widget

ಹದಿಹರೆಯದ ಸಮಯದಲ್ಲಿ ಎಲ್ಲರಲ್ಲೂ ವಿಭಿನ್ನ ಭಾವನೆಗಳು ಮೂಡುತ್ತವೆ. ಬಹಳಷ್ಟು ವಿಚಾರಗಳಲ್ಲಿ ನಿರ್ಧಾರ ಕೈಗೊಳ್ಳುವಾಗ ಗೊಂದಲಗಳು ಏರ್ಪಡುತ್ತವೆ. ಇಂತಹ ಸಮಯದಲ್ಲಿ ಪೋಷಕರೊಂದಿಗೆ, ಶಿಕ್ಷಕರೊಂದಿಗೆ ಅಥವಾ ಕುಟುಂಬದ ವೈದ್ಯರೊಂದಿಗೆ ಮುಕ್ತವಾಗಿ ಚರ್ಚಿಸಬೇಕು. ತಮ್ಮ ಜತೆ ಯಾರೇ ಅನುಚಿತವಾಗಿ ವರ್ತಿಸಿದರೂ ಧೈರ್ಯದಿಂದ ಪ್ರತಿಭಟಿಸುವ ಸಾಮರ್ಥ್ಯವನ್ನು ಹೆಣ್ಣುಮಕ್ಕಳು ಬೆಳೆಸಿಕೊಳ್ಳಬೇಕು. ಯುವಕರು ದುಶ್ಚಟಗಳಿಂದ ದೂರವಿರಬೇಕು. ನಿಯಮಿತ ವ್ಯಾಯಾಮಗಳಲ್ಲಿ ತೊಡಗಿಸಿಕೊಳ್ಳಲು ಪ್ರಯತ್ನಿಸಬೇಕು, ಅವರ ಸಮಸ್ಯೆ ಪರಿಹರಿಸುವ ಕೌಶಲ್ಯ ಮತ್ತು ಪರಸ್ಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಬೇಕು, ಮತ್ತು ಭಾವನೆಗಳನ್ನು ಹೇಗೆ ನಿರ್ವಹಿಸಬೇಕು ಇತ್ಯಾದಿಗಳನ್ನು ಕಲಿಯಬೇಕು. ಎಂದು ಹೇಳಿದರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದ ಶ್ರೀಮತಿ ಅಶ್ವಿನಿ ಕೃಷ್ಣ ಮುಳಿಯ ಇವರು ಹೊಸದಾಗಿ ಚುನಾಯಿತರಾದ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸುತ್ತಾ “ಕಳೆದ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಈಗಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿರಬೇಕು.ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿಪೋಷಕರು ತಮ್ಮ ಬೆಂಬಲವನ್ನು , ಸಲಹೆಗಳನ್ನು ಮತ್ತು ಸಹಕಾರವನ್ನೂ ನೀಡುತ್ತಿರಬೇಕು”ಎಂದು ಹೇಳಿದರು.

ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಂಪತ್ ಕುಮಾರ್ ರವರು ಮಾತನಾಡುತ್ತಾ ,“ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣ ಶಿಕ್ಷಕರು ಮತ್ತು ಪೋಷಕರು.ಮಕ್ಕಳಲ್ಲಿ ಸತ್ಭಾವನೆಯನ್ನು ತುಂಬಿ ಒಬ್ಬ ಸತ್ಪçಜೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದು. ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾದ ಪೋಷಕರ ಪ್ರೋತ್ಸಾಹ ಇನ್ನು ಮುಂದೆಯೂ ಇರಲಿ.”ಎಂದು ಹೇಳಿದರು.ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು.

ಪ್ರಸಕ್ತ ಸಾಲಿನ ರಕ್ಷಕ-ಶಿಕ್ಷಕ ಸಂಘದನೂತನ ಅಧ್ಯಕ್ಷರಾದ ಗುಣಪಾಲ ಇವರು ವಿದ್ಯಾರ್ಥಿಗಳ ಅಭಿವೃದ್ಧಿಯ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಎಲ್ಲಾ ಪೋಷಕರ ಪರವಾಗಿ ಮಾತನಾಡಿ ವ್ಯಕ್ತಪಡಿಸಿದರು.ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗಾಗಿ ತಮ್ಮೆಲ್ಲರ ಸಹಕಾರ ಇರುವುದಾಗಿ ಭರವಸೆ ನೀಡಿದರು.

2026-27 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ರಚನೆ ಪೋಷಕರ ಮತ್ತು ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು.ಅಧ್ಯಕ್ಷರಾಗಿ ಗುಣಪಾಲ , ಉಪಾಧ್ಯಕ್ಷರಾಗಿ ಚಂದಪ್ಪಾ ಎಸ್., ಶ್ರೀಮತಿ ಸಿಂಧೂರ ಎನ್.,ಕರ‍್ಯದರ್ಶಿಗಳಾಗಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಮತ್ತು ಚಂದ್ರಶೇಖರ್ ಆಚರ‍್ಯ, ಜೊತೆ ಕರ‍್ಯದರ್ಶಿಗಳಾಗಿ ದೇವರಾಜ್ ಗೌಡ ಮತ್ತು ಶ್ರೀಮತಿ ಭಾರತಿ ಬಿ.ಎನ್. ಹಾಗೆಯೇ ಮಕ್ಕಳ ರಕ್ಷಣಾ ಅಧಿಕಾರಿಯಾಗಿ ಶ್ರೀಮತಿ ಅಂಜಲಿ ಮತ್ತು ಸದಸ್ಯರಾಗಿ ಶ್ರೀಮತಿ ನಂದಿತಾ ನಾಯಕ್, ಶ್ರೀಮತಿ ಜಯಮಾಲ, ಶ್ರೀಮತಿ ಪಲ್ಲವಿ, ಜಗದೀಶ ಕೆ.ಎಚ್., ಶ್ರೀಮತಿ ಕುಮುದಾ ಎ., ಶ್ರೀಮತಿ ರೇಖಾ ಪ್ರಭು, ಶ್ರೀಮತಿ ಶಕುಂತಲಾ ಜಿ., ಶ್ರೀಮತಿ ಪ್ರೀತಿ, ಶ್ರೀಮತಿ ಬೇಬಿ ರೇಖ ಆಯ್ಕೆಗೊಂಡರು.

ವೇದಿಕೆಯಲ್ಲಿ ಕಾಲೇಜಿನ ನೂತನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಗುಣಪಾಲ, ಉಪಾಧ್ಯಕ್ಷರಾದ ಚಂದಪ್ಪಾ ಎಸ್., ಶ್ರೀಮತಿ ಸಿಂಧೂರ ಎನ್, ಕಾರ‍್ಯದರ್ಶಿಗಳಾದ ಚಂದ್ರಶೇಖರ್ ಆಚರ‍್ಯ, ಜೊತೆ ಕಾರ‍್ಯದರ್ಶಿಗಳಾದ ದೇವರಾಜ್ ಗೌಡ ಮತ್ತು ಶ್ರೀಮತಿ ಭಾರತಿ ಬಿ.ಎನ್. ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್,ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ “ಪೋಷಕರು ಸಂಸ್ಥೆಯ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘದೊಂದಿಗೆ ಕೈಜೋಡಿಸಬೇಕು” ಎಂದು ಹೇಳಿದರು.ಸಂಸ್ಥೆಯ ಚಟುವಟಿಕೆಗಳ ಕುರಿತಾದ ಮಾಹಿತಿಯನ್ನು ಪೋಷಕರ ಮುಂದೆ ಇರಿಸಿದರು. ಕಾರ‍್ಯಕ್ರಮದಲ್ಲಿ ಉಪನ್ಯಾಸಕಿಯಾದ ಕು. ಚೈತ್ರಾ ಸ್ವಾಗತಿಸಿ, ಶ್ರೀಮತಿ ಶಶಿಕಲಾ ವಂದಿಸಿದರು ಮತ್ತು ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಶಿಕ್ಷಣ

Vivekananda-ಸೂಕ್ಷ್ಮಾಣು ನಿರೋಧಕತೆ ವಿರುದ್ಧ ಜಾಗೃತಿ ಮೂಡಿಸಿದ ವಿವೇಕಾನಂದ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳು; ಜಾಗೃತಿ ಜಾಥಾ ಹಾಗೂ ಬೀದಿ ನಾಟಕದ ಮೂಲಕ ಪ್ರತಿಜೀವಕಗಳ ಜವಾಬ್ದಾರಿಯುತ ಬಳಕೆಯ ಸಂದೇಶ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ. 18: ಪ್ರತಿಜೀವಕಗಳ (Antibiotics) ಅನಗತ್ಯ ಹಾಗೂ ಅತಿಯಾದ ಬಳಕೆಯಿಂದ ಸೂಕ್ಷ್ಮಾಣುಗಳು ಔಷಧಿಗಳಿಗೆ ಪ್ರತಿರೋಧ ಬೆಳೆಸಿಕೊಳ್ಳುವ ಅಪಾಯವಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ಆಯೋಜಿಸಲಾಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಪುಷ್ಪ ನೀಡಿ ಸ್ವಾಗತಿಸಲಾಯಿತು. ಬಳಿಕ ಜಾಗೃತ ಕಾರ್ಯಕ್ರಮದ ಬ್ಯಾನರ್ ಅನಾವರಣಗೊಳಿಸಲಾಯಿತು. ವಿದ್ಯಾರ್ಥಿಗಳಿಂದ  ಸೂಕ್ಷ್ಮಾಣು ನಿರೋಧಕತೆಯ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ.  ದೀಪಕ್ ರೈ ಅವರು ಜಾಗೃತಿ ಕರಪತ್ರವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ  ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಜಾಗೃತಿ ಜಾಥಾವು ಪುತ್ತೂರಿನ ಮುಖ್ಯ ರಸ್ತೆಯ ಮೂಲಕ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಸಾಗಿತು. ಜಾಥಾದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಜಾಗೃತಿ ಸಂದೇಶಗಳು ಹಾಗೂ ಕರಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಪ್ರತಿಜೀವಕಗಳ ಸರಿಯಾದ ಬಳಕೆ, ವೈದ್ಯರ ಸಲಹೆಯಿಲ್ಲದೆ ಪ್ರತಿಜೀವಕಗಳನ್ನು ಸೇವಿಸದಿರುವುದು ಮತ್ತು ಔಷಧಿಗಳ ಪೂರ್ಣ ಅವಧಿಯ ಸೇವನೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಕಾರ್ಯಕ್ರಮದ ಕೊನೆಯ ಭಾಗದ ಬೀದಿ ನಾಟಕವನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀ ಪಂಜಿಗುಡ್ಡೆ ಈಶ್ವರ ಭಟ್ ಉಪಸ್ಥಿತರಿದ್ದು ಶುಭ ಹಾರೈಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಉದ್ಘಾಟನಾ ಹಾಗೂ ಮುಖ್ಯ ಅತಿಥಿಯಾಗಿ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಅತಿಥಿಗಳಾಗಿ ಪುತ್ತೂರು ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ವಾಸುದೇವ ಭಟ್, ಕೆಎಸ್‌ಆರ್‌ಟಿಸಿ ಪುತ್ತೂರು ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ  ಪ್ರಕಾಶ್ ಎಂ. ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿವಿಜಯನಾರಾಯಣ ಕೆ. ಎಂ. ಉಪಸ್ಥಿತರಿದ್ದರು.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಗೋವಿಂದ ಪ್ರಕಾಶ್ ಸಾಯ, ಸದಸ್ಯರಾದ ರಾಮದಾಸ ಶೆಣೈ, ಡಾ. ಸಿ ಎಸ್ ಶಾಸ್ತ್ರೀ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಗುರುರಾಜ ಎಂ. ಪಿ., ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನಲ್ಲಿ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ

Published

on

Ad Widget

Ad Widget

Ad Widget

Ad Widget

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ‍್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಏಕೀಕರಣ ಎಂದರೆ ಇಂದಿನ ಕರ್ನಾಟಕ ರಾಜ್ಯ ಆಕಾರ ಪಡೆದು ಅನೇಕ ಭೌಗೋಳಿಕ ರಾಜಕೀಯ ಹಾಗೂ ಭಾಷಾ ಸವಾಲುಗಳನ್ನು ಜಯಿಸಿದ ಪ್ರಕ್ರಿಯೆ.ಭಾರತದ ಸ್ವಾತಂತ್ರ‍್ಯದ ಹೋರಾಟದ ಸಮಯದಲ್ಲಿಯೇ ಕನ್ನಡ ಭಾಷಾಭಿಮಾನಿಗಳು ವಿವಿಧ ಪ್ರಾಂತ್ಯಗಳಾಗಿ ಹಂಚಿ ಹೋಗಿದ್ದರು. ಹಲವು ಪ್ರಾಂತ್ಯಗಳಲ್ಲಿದ್ದ ಕನ್ನಡಿಗರ ಹಕ್ಕುಗಳು, ಭಾಷಾ ಮತ್ತು ಸಾಂಸ್ಕೃತಿಕ ಹಿತ ಚಿಂತನೆಗಳ ಪೋಷಣೆಗಾಗಿ ಏಕೀಕರಣವು ಅಗತ್ಯವಾಯಿತು.ಈ ಭಿನ್ನ ಪ್ರಾಂತ್ಯಗಳಲ್ಲಿ ಹಂಚಿ ಹೋಗಿದ್ದ ಕನ್ನಡಿಗರನ್ನು ಒಗ್ಗೂಡಿಸುವ ಹೋರಾಟವೇ ಕರ್ನಾಟಕ ಏಕೀಕರಣ. ಕನ್ನಡ ರಾಜ್ಯದ ಕನಸು ಸಾಕಾರಗೊಳ್ಳಲು ಹಲವು ಅಡೆತಡೆಗಳ ನಡುವೆಯೂ ಹೋರಾಟಗಾರರ ಶ್ರಮ, ಒತ್ತಡ ಮತ್ತು ನಿರಂತರ ಉತ್ಸಾಹದಿಂದ ಅದು ಕೊನೆಗೂ ಸಫಲವಾಯಿತು.ಇದು ನಮ್ಮ ಸಂಸ್ಕೃತಿ, ಭಾಷಾ ಗೌರವ , ಆರ್ಥಿಕ ಮತ್ತು ಸಾಮಾಜಿಕ ಹಿತದ ಸಂಕೇತ. ಈ ಐಕ್ಯತೆ , ಭ್ರಾತೃತ್ವ ಮತ್ತು ಪ್ರಾದೇಶಿಕ ಅಭಿಮಾನವನ್ನು ಮುಂದುವರೆಸಿ ಕನ್ನಡ ನಾಡಿನ ಸಮೃದ್ಧಿಗಾಗಿ ನಾವು ನಿರಂತರ ಪ್ರಯತ್ನಿಸಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಜಿ.ಎಸ್. ಕಲಾವತಿ ಮಧುಸೂದನ್ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ‍್ಯಕ್ರಮದಲ್ಲಿ ಅವರು ಮಾತನಾಡಿದರು.

Ad Widget

Ad Widget <> Ad Widget

ಕರ್ನಾಟಕದ ಏಕೀಕರಣ ವಿಚಾರಗೋಷ್ಠಿಯು ಕನ್ನಡ ಮಾತನಾಡುವ ಪ್ರದೇಶಗಳ ಐತಿಹಾಸಿಕ ಒಗ್ಗೂಡುವಿಕೆ, ಸಾಂಸ್ಕೃತಿಕ ಅಸ್ಮಿತೆ ಮತ್ತು ಆಧುನಿಕ ಕರ್ನಾಟಕದ ಅಭಿವೃದ್ಧಿಯನ್ನು ಚರ್ಚಿಸುವ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ವೇದಿಕೆಯಾಗಿದೆ. ಎಂದು ಹೇಳಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ ಹಾಸನ ಇದರ ಸಂಘಟನಾ ಕಾರ‍್ಯದರ್ಶಿಯಾದ ಎನ್. ಗಿರಿಜಾಂಬ ಉಪಸ್ಥಿತರಿದ್ದರು.

Ad Widget

Ad Widget

ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಧುಶ್ರೀ, ಭವ್ಯಶ್ರೀ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಇವರು ಈ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ, ಈ ವಿಚಾರದ ಕುರಿತಾಗಿ ತಮ್ಮ ವಿಶ್ಲೇಷಣೆಯನ್ನು ನೀಡಿದರು.ಕರ‍್ಯಕ್ರಮದಲ್ಲಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಕಾರ್ತಿಕ್ ಕುಮಾರ್ ಎನ್. ಇವರು ಸ್ವಾಗತಿಸಿದರು. ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಸ್ತುತಿ ವಂದಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!