Connect with us

ಬಿಗ್ ನ್ಯೂಸ್

High Court-ಭಕ್ತರ ಹಣ ದುರುಪಯೋಗ ದೇವರಿಗೆ ಎಸಗುವ ವಂಚನೆ-ಹೈಕೋರ್ಟ್; ಡಿಜಿಟಲ್ ಪಾವತಿಗೆ ಒತ್ತು

Published

on

Ad Widget

Ad Widget

Ad Widget

Ad Widget

ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ, ಕ್ಯೂಆರ್‌ ಕೋಡ್, ಡೆಬಿಟ್-ಕ್ರೆಡಿಟ್ ಕಾರ್ಡ್ ಮತ್ತು ನೆಟ್ ಬ್ಯಾಂಕಿಂಗ್ ಮೂಲಕ ಡಿಜಿಟಲ್ ಪಾವತಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಸೆ. 8: ದೇವಾಲಯಗಳಿಗೆ ಬರುವ ಭಕ್ತರ ಹಣವನ್ನು ದುರುಪಯೋಗಪಡಿಸಿಕೊಳ್ಳುವುದು ದೇವರಿಗೆ ಎಸಗುವ ವಂಚನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮುಜರಾಯಿ ದೇವಾಲಯಗಳ ಆದಾಯ ಸೋರಿಕೆ ಹಾಗೂ ಆರ್ಥಿಕ ಅಕ್ರಮಗಳಿಗೆ ಕಡಿವಾಣ ಹಾಕಲು ನಗದು ವಹಿವಾಟು ಕಡಿಮೆ ಮಾಡಿ, ಯುಪಿಐ, ಕ್ಯೂಆರ್‌ ಕೋಡ್, ಡೆಬಿಟ್-ಕ್ರೆಡಿಟ್ ಕಾರ್ಡ್ ಮತ್ತು ನೆಟ್ ಬ್ಯಾಂಕಿಂಗ್ ಮೂಲಕ ಡಿಜಿಟಲ್ ಪಾವತಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.

Ad Widget

Ad Widget alt="Ad Widget"/>

Ad Widget

ಹುಂಡಿ ಎಣಿಕೆ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದರ ಜೊತೆಗೆ, ಹುಂಡಿ ಎಣಿಕೆಯಲ್ಲಿ ಭಾಗವಹಿಸುವ ಸಿಬ್ಬಂದಿ ಬಾಡಿ ಕ್ಯಾಮೆರಾ ಧರಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

Ad Widget

Ad Widget <> Ad Widget

ಬ್ರಹ್ಮಾವರ ತಾಲೂಕಿನ ಮಂದಾರ್ತಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ನಕಲಿ ರಸೀದಿಗಳನ್ನು ನೀಡಿ ವಂಚನೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ರಾಜೇಶ್ ನಾಯಕ್ ಅವರನ್ನು ಸೇವೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ನಿರ್ದೇಶನಗಳನ್ನು ನೀಡಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಪ್ರಕರಣದಲ್ಲಿನ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ, ರಾಜೇಶ್ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ನಂಬಿಕೆಯ ಹುದ್ದೆಯಲ್ಲಿದ್ದು ಭ್ರಷ್ಟಾಚಾರ ಎಸಗಿರುವ ಹಿನ್ನೆಲೆಯಲ್ಲಿ ಸೇವೆಯಿಂದ ವಜಾಗೊಳಿಸಿರುವುದು ಸೂಕ್ತ ಕ್ರಮವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

Ad Widget

Ad Widget

ದೇವಾಲಯಗಳ ಆರ್ಥಿಕ ವ್ಯವಸ್ಥೆಯಲ್ಲಿ ಡಿಜಿಟಲ್‌ ವ್ಯವಸ್ಥೆ
ದೇವಾಲಯಗಳಲ್ಲಿ ನಡೆಯುವ ಆರ್ಥಿಕ ಅಕ್ರಮಗಳನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಇ-ಆಡಳಿತ ಇಲಾಖೆ ಹಾಗೂ ಧಾರ್ಮಿಕ ದತ್ತಿ ಇಲಾಖೆಗೆ ಹಲವು ಆಡಳಿತಾತ್ಮಕ ಮಾರ್ಗಸೂಚಿಗಳನ್ನು ನೀಡಿದೆ.

ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ಪೂಜೆ, ಸೇವಾ ಟಿಕೆಟ್, ಕಾಣಿಕೆ, ಹುಂಡಿ, ವಸತಿ ಸೇರಿದಂತೆ ವಿವಿಧ ಮೂಲಗಳಿಂದ ಬರುವ ಆದಾಯ ಹಾಗೂ ವೆಚ್ಚಗಳನ್ನು ನೈಜ ಸಮಯದಲ್ಲಿ ದಾಖಲಿಸಿ ಪರಿಶೀಲಿಸಲು ಕೇಂದ್ರೀಕೃತ ತಂತ್ರಾಂಶ ರೂಪಿಸಬೇಕು ಎಂದು ಸೂಚಿಸಲಾಗಿದೆ.

ಪ್ರತಿಯೊಂದು ರಸೀದಿಗೂ ಯಂತ್ರಚಾಲಿತ ವಿಶಿಷ್ಟ ಸರಣಿ ಸಂಖ್ಯೆ ನೀಡಬೇಕು. ರಸೀದಿ ನೈಜವೇ ಅಥವಾ ನಕಲಿಯೇ ಎಂಬುದನ್ನು ಭಕ್ತರು ತಮ್ಮ ಮೊಬೈಲ್ ಮೂಲಕ ತಕ್ಷಣ ಪರಿಶೀಲಿಸಲು ಕ್ಯೂಆರ್‌ ಕೋಡ್ ವ್ಯವಸ್ಥೆ ಕಲ್ಪಿಸಬೇಕು ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಒಂದೇ ಸರಣಿ ಸಂಖ್ಯೆಯ ರಸೀದಿಯನ್ನು ಎರಡನೇ ಬಾರಿ ಮುದ್ರಿಸಲು ವ್ಯವಸ್ಥೆಯಲ್ಲಿ ಅವಕಾಶ ಇರಬಾರದು. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಹಿರಿಯ ಅಧಿಕಾರಿಯ ಅನುಮೋದನೆಯೊಂದಿಗೆ ಮರುಮುದ್ರಣಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದೆ.

ಚಿನ್ನಾಭರಣಕ್ಕೂ ಡಿಜಿಟಲ್ ದಾಸ್ತಾನು
ದೇವಾಲಯಗಳಲ್ಲಿರುವ ಚಿನ್ನಾಭರಣ, ಬೆಳ್ಳಿ ಹಾಗೂ ಇತರ ಅಮೂಲ್ಯ ವಸ್ತುಗಳ ತೂಕ, ಸಂಪೂರ್ಣ ವಿವರ ಮತ್ತು ಉತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ಒಳಗೊಂಡ ಡಿಜಿಟಲ್ ದಾಸ್ತಾನು ವ್ಯವಸ್ಥೆ ಜಾರಿಗೆ ತರಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಈ ಮಾರ್ಗಸೂಚಿಗಳು ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಿಗೂ ಅನ್ವಯಿಸಲಿದ್ದು, ಸಾರ್ವಜನಿಕ ಆಸ್ತಿ ಹಾಗೂ ಭಕ್ತರು ನೀಡುವ ಕಾಣಿಕೆಗಳನ್ನು ರಕ್ಷಿಸಲು ಇಂತಹ ಕ್ರಮಗಳು ಅಗತ್ಯ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಹೈಕೋರ್ಟ್‌ನ ಪ್ರಮುಖ ಸೂಚನೆಗಳು
ಯುಪಿಐ, ಕ್ಯೂಆರ್‌ ಕೋಡ್, ಡೆಬಿಟ್-ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಡಿಜಿಟಲ್ ಪಾವತಿಗೆ ಉತ್ತೇಜನ.
ನಗದು ವಹಿವಾಟು ಮತ್ತು ನಗದು ನಿರ್ವಹಣೆಯನ್ನು ಕನಿಷ್ಠಗೊಳಿಸುವುದು.
ಹುಂಡಿ ಎಣಿಕೆ ಕೊಠಡಿಗಳಲ್ಲಿ ಕಡ್ಡಾಯ ಸಿಸಿ ಕ್ಯಾಮೆರಾ ಅಳವಡಿಕೆ.
ಹುಂಡಿ ಎಣಿಕೆಯಲ್ಲಿ ಭಾಗವಹಿಸುವ ಸಿಬ್ಬಂದಿಗೆ ಬಾಡಿ ಕ್ಯಾಮೆರಾ ಕಡ್ಡಾಯ.
ದೇವಾಲಯದ ಆದಾಯ ಮತ್ತು ವೆಚ್ಚಗಳ ನೈಜ ಸಮಯದ ದಾಖಲಾತಿಗೆ ಕೇಂದ್ರೀಕೃತ ತಂತ್ರಾಂಶ.
ಪ್ರತಿಯೊಂದು ರಸೀದಿಗೂ ವಿಶಿಷ್ಟ ಸರಣಿ ಸಂಖ್ಯೆ ಮತ್ತು ಕ್ಯೂಆರ್‌ ಕೋಡ್.
ನಕಲಿ ಅಥವಾ ಮರುಮುದ್ರಿತ ರಸೀದಿಗಳಿಗೆ ಕಡಿವಾಣ.
ಚಿನ್ನಾಭರಣ ಹಾಗೂ ಅಮೂಲ್ಯ ವಸ್ತುಗಳಿಗೆ ಡಿಜಿಟಲ್ ದಾಸ್ತಾನು ವ್ಯವಸ್ಥೆ.

Ad Widget
Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!