ಶಿಕ್ಷಣ
Ambika-ಕರಾಟೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು ನಗರದ ನೆಲ್ಲಿಕಟ್ಟೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು : ನಗರದ ನೆಲ್ಲಿಕಟ್ಟೆ ಮತ್ತು ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬಹುಮಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾಭಾರತಿ ವತಿಯಿಂದ ಬೆಂಗಳೂರು ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಚಂದನಾ ಆರ್, ವಹಿನ್ ರೈ, ಅಜೇಯ ಕೃಷ್ಣ ಹಾಗೂ ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಿಂದ ಭಾಗವಹಿಸಿದ ರಶ್ಮಿ ಆರ್ ಚಿನ್ನದ ಪದಕ ಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನೆಲ್ಲಿಕಟ್ಟೆಯ ಅಂಕಿತ್ ಕೆ ಆರ್ ಹಾಗೂ ಬಪ್ಪಳಿಗೆಯ ಆಶಿತ ಬೆಳ್ಳಿಯ ಪದಕ ಗಳಿಸಿಕೊಂಡಿದ್ದಾರೆ.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು21 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ21 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ24 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ20 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ


















