ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಸುಮಂತ್ ಕುಮಾರ್ ಜೈನ್ ಬಿ, ಅತಿಥಿಗಳು ಮತ್ತು ತೀರ್ಪುಗಾರರಾಗಿ ಯಕ್ಷಗಾನ ಕಲಾವಿದ […]" /> ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಸುಮಂತ್ ಕುಮಾರ್ ಜೈನ್ ಬಿ, ಅತಿಥಿಗಳು ಮತ್ತು ತೀರ್ಪುಗಾರರಾಗಿ ಯಕ್ಷಗಾನ ಕಲಾವಿದ […]"> Guruvayanakere-ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆಗಳಲ್ಲಿ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ - Nikhara News | Kannada News Website
Connect with us

ಸ್ಥಳೀಯ

Guruvayanakere-ಗುರುವಾಯನಕೆರೆ: ಎಕ್ಸೆಲ್ ಸಮೂಹ ಸಂಸ್ಥೆಗಳಲ್ಲಿ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ

Published

on

Ad Widget

Ad Widget

Ad Widget

Ad Widget

ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ ಸಂಸ್ಥೆಯ ಕುವೆಂಪು ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಸೆ. 6 : ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೋಕುಲದ ಗೋಪಾಲ ಬೃಂದಾವನದ ರಾಧೆ ಸ್ಪರ್ಧೆ ಸಂಸ್ಥೆಯ ಕುವೆಂಪು ಸಭಾಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

Ad Widget

Ad Widget alt="Ad Widget"/>

Ad Widget

ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರು ಸುಮಂತ್ ಕುಮಾರ್ ಜೈನ್ ಬಿ, ಅತಿಥಿಗಳು ಮತ್ತು ತೀರ್ಪುಗಾರರಾಗಿ ಯಕ್ಷಗಾನ ಕಲಾವಿದ ಮೋಹನ್ ಕಲ್ಲೂರಾಯ, ರಂಗಭೂಮಿ ಕಲಾವಿದ ಯಶ್ವಂತ್ ಬೆಳ್ತಂಗಡಿ, ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾಂಶುಪಾಲೆ ಸುಮಿತ್ರ ಗೌಡ ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

Ad Widget

Ad Widget <> Ad Widget

ಉದ್ಘಾಟಿಸಿ ಮಾತನಾಡಿದ ಸುಮಂತ್ ಕುಮಾರ್ ಜೈನ್ ಬಿ ಯವರು ಈ ಕಾರ್ಯಕ್ರಮವನ್ನು ಸ್ಪರ್ಧೆಯ ರೀತಿಯಲ್ಲಿ ಮಾತ್ರ ಪರಿಗಣಿಸದೆ ಮಕ್ಕಳಿಗೆ ಕೃಷ್ಣನ ತತ್ವಗಳನ್ನು ಕೃಷ್ಣನ ಲೀಲೆಯನ್ನು ತಿಳಿಸುವ ಉದ್ದೇಶದಿಂದ ಮಾಡಲಾಗಿದೆ. ಮುಂದಿನ ವರ್ಷ ಇನ್ನೂ ಅಧಿಕ ನಗದು ಬಹುಮಾನವನ್ನು ಮಾಡಿ ಅತ್ಯಂತ ವಿಜೃಂಭಣೆಯಿಂದ ಮಾಡಲಾಗುವುದು ಎಂದರು.

ತೀರ್ಪುಗಾರರಾಗಿ ಆಗಮಿಸಿದ ಮೋಹನ್ ಕಲ್ಲೂರಾಯ ಅವರು ಮಾತನಾಡಿ ಈ ಪರಿಸರದಲ್ಲಿ ಇಂತಹ ದೊಡ್ಡ ವೇದಿಕೆ ಮಕ್ಕಳಿಗೆ ಎಕ್ಸೆಲ್ ಸಂಸ್ಥೆ ನೀಡುತ್ತಿರುವುದು ನಮ್ಮೆಲ್ಲರ ಭಾಗ್ಯ ಎಂದರು. ಯಶ್ವಂತ್ ಬೆಳ್ತಂಗಡಿ ಮಾತನಾಡಿ ಕೃಷ್ಣನ ಜೀವನವೇ ಮೌಲ್ಯ ಭರಿತವಾದದ್ದು ಇಂತಹ ಸ್ಪರ್ಧೆಗಳು ಆ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಲು ಬಹಳ ಉಪಕಾರಿಯಾಗುತ್ತದೆ ಎಂದರು.

Ad Widget

Ad Widget

ಚೊಚ್ಚಲ ಬಾರಿಗೆ ನಡೆದ ಈ ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯ. ಸ್ಪರ್ಧೆಯನ್ನು ಮೂರು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 35,000 ಕ್ಕೂ ಹೆಚ್ಚು ನಗದು ಬಹುಮಾನವನ್ನು ವಿಜೇತರಿಗೆ ಪ್ರೀತಿಪೂರ್ವಕವಾಗಿ ನೀಡಲಾಯಿತು.

ಜೂನಿಯರ್ ವಿಭಾಗದಲ್ಲಿ ಆರ್‌ ವಿ .ಪಿ ಸಾಲಿಯಾನ್ ಪ್ರಥಮ, ವಿನಮ್ರ. ವಿ ದ್ವಿತೀಯ, ತ್ರಿಷಿಕ ಎಚ್ ಪೂಜಾರಿ ತೃತೀಯ, ಸೀನಿಯರ್ ‘ಎ’ ವಿಭಾಗದಲ್ಲಿ ಜಾನ್ವಿ ಎಚ್ ಕುಲಾಲ್. ಪ್ರಥಮ, ಚಿನ್ಮಯ್ ಎಸ್ ಕೆ. ದ್ವಿತೀಯ, ನವಷ್ಯ ಎಸ್ . ಜಿ ತೃತೀಯ, ಸೀನಿಯರ್ ‘ಬಿ’ ವಿಭಾಗ ದಲ್ಲಿಸ್ಮಯ ಎಸ್ ಕೋಟ್ಯಾನ್ ಪ್ರಥಮ, ಪ್ರಣಮ್ಯ ದ್ವಿತೀಯ, ಕ್ಷತ್ರಿಯ ಪೂರ್ವ ತೃತೀಯ ಸ್ಥಾನ ಪಡೆದು ಪ್ರಶಸ್ತಿಯನ್ನು ಪಡೆದಿರುತ್ತಾರೆ.

ಈ ಕಾರ್ಯಕ್ರಮದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ನ ಪ್ರಾಂಶುಪಾಲೆ ಸುಮಿತ್ರಾ ಗೌಡ ಹಾಗೂ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!