Connect with us

ಸ್ಥಳೀಯ

Uppinangady-ಉಪ್ಪಿನಂಗಡಿ ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ; ಭ್ರಷ್ಟಾಚಾರ, ಲಂಚದ ಆರೋಪಗಳ ಸುರಿಮಳೆ

Published

on

Ad Widget

Ad Widget

Ad Widget

Ad Widget

ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿತು.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ವ್ಯಾಪಕ ಅವ್ಯವಹಾರ ಮತ್ತು ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಕಚೇರಿಗೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ತಂಡ ಪಂಚಾಯತ್ ಕಚೇರಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿತು.

Ad Widget

Ad Widget alt="Ad Widget"/>

Ad Widget

ಲೋಕಾಯುಕ್ತ ದಾಳಿಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾ.ಪಂ. ವ್ಯಾಪ್ತಿಯ ವರ್ತಕರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಪಂಚಾಯತ್ ಕಚೇರಿಗೆ ಆಗಮಿಸಿ, ವಿವಿಧ ಅವ್ಯವಹಾರಗಳು ಮತ್ತು ಲಂಚದ ಆರೋಪಗಳನ್ನು ಲೋಕಾಯುಕ್ತ ಅಧಿಕಾರಿಗಳ ಮುಂದೆ ಬಿಚ್ಚಿಟ್ಟರು.

Ad Widget

Ad Widget <> Ad Widget

ಪಂಜಳದ ಶಾಲಿವಾಹನ ಫ್ಯುಯೆಲ್ಸ್ ಮಾಲಕ ಚಂದ್ರಶೇಖರ ತಾಳಜೆ ಅವರು, ತಮ್ಮ ಪೆಟ್ರೋಲ್ ಬಂಕ್ ಪರವಾನಿಗೆ ನವೀಕರಣಕ್ಕೆ ಸಲ್ಲಿಸಿದ ಅರ್ಜಿಯನ್ನು ಗ್ರಾ.ಪಂ. ಸ್ವೀಕರಿಸುತ್ತಿಲ್ಲ ಎಂದು ಆರೋಪಿಸಿದರು. ಕಟ್ಟಡ ತೆರಿಗೆಯನ್ನೂ ಸ್ವೀಕರಿಸದೇ ಹಲವು ತಿಂಗಳಿಂದ ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು. ಕೇಳಿದಷ್ಟು ಲಂಚ ನೀಡಿದರೆ ಮಾತ್ರ ಕೆಲಸಗಳು ನಡೆಯುತ್ತವೆ ಎಂಬ ಆರೋಪವನ್ನೂ ಅವರು ಮಾಡಿದರು.

ಉಲ್ಲಾಸ್ ಬಾರ್‌ನ ಕರುಣಾಕರ ಸುವರ್ಣ, ನಿರಾಲ ಬಾರ್‌ನ ನವೀನ್ ರೈ ಹಾಗೂ ಕಾರ್ತಿಕ್ ಬಾರ್‌ನ ಆದಿತ್ಯ ಭಟ್ ಅವರುಗಳೂ ತಮ್ಮ ವ್ಯವಹಾರಗಳ ಪರವಾನಿಗೆ ನವೀಕರಣ ಮಾಡಿಕೊಡದೆ ಅರ್ಜಿಗಳನ್ನೇ ಸ್ವೀಕರಿಸುತ್ತಿಲ್ಲ ಎಂದು ದೂರಿದರು.

Ad Widget

Ad Widget

ಸ್ಥಳೀಯ ನಿವಾಸಿ ರಹಿಮಾನ್ ಪೊರುಂಕಾಜೆ ಅವರು, ಗ್ರಾ.ಪಂ. ಕಟ್ಟಡಗಳ ಹಂಚಿಕೆ, ತ್ಯಾಜ್ಯ ನಿರ್ವಹಣಾ ಘಟಕದಲ್ಲಿನ ಅವ್ಯವಸ್ಥೆ ಹಾಗೂ ರಾತ್ರಿ ವೇಳೆಯಲ್ಲಿ ಪಂಚಾಯತ್ ಕಚೇರಿಯಲ್ಲಿ ನಡೆಯುವ ಸಭೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಮಾಡಿದರು.

ಸಾರ್ವಜನಿಕರಿಂದ ಬಂದ ದೂರುಗಳನ್ನು ಆಲಿಸಿದ ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ಅವರು, ಪಂಚಾಯತ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. “ಯಾವುದೇ ಅರ್ಜಿಯನ್ನು ಸ್ವೀಕರಿಸಿ, ಅದರ ಸ್ವೀಕೃತಿ ನೀಡುವುದು ಸಿಬ್ಬಂದಿಯ ಕರ್ತವ್ಯ. ಅಧಿಕಾರಿಗಳ ಸೂಚನೆ ಇದ್ದರೂ ಸಾರ್ವಜನಿಕರ ಅರ್ಜಿಗಳನ್ನು ತಿರಸ್ಕರಿಸಬಾರದು” ಎಂದು ಎಚ್ಚರಿಕೆ ನೀಡಿದರು. ಅಲ್ಲದೆ, ದೂರುದಾರರು ತಂದಿದ್ದ ಅರ್ಜಿಗಳನ್ನು ತಕ್ಷಣ ಆನ್‌ಲೈನ್‌ನಲ್ಲಿ ದಾಖಲಿಸಿ ಸ್ವೀಕೃತಿ ನೀಡುವಂತೆ ಸೂಚಿಸಿದರು.

ಗ್ರಾಮ ಪಂಚಾಯತ್‌ನಲ್ಲಿ ಪಿಡಿಒ ಅವರ ಅನುಮತಿ ಇಲ್ಲದೆ ಯಾವುದೇ ಕೆಲಸಗಳು ನಡೆಯುವುದಿಲ್ಲ ಹಾಗೂ ಲಂಚದ ಆರೋಪಗಳಲ್ಲಿ ಕೆಲವು ಮಾಜಿ ಸದಸ್ಯರು, ಉದ್ಯಮಿಗಳು ಮತ್ತು ಸಿಬ್ಬಂದಿಯ ಪಾತ್ರವಿರುವ ಸಾಧ್ಯತೆಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಾರ್ವಜನಿಕರು ಲೋಕಾಯುಕ್ತ ಅಧಿಕಾರಿಗಳಿಗೆ ಮನವಿ ಮಾಡಿದರು.

ದಾಳಿಯ ಸಂದರ್ಭದಲ್ಲಿ ಪ್ರಭಾರ ಪಿಡಿಒ ವಿಡ್ ಲಾರೆನ್ಸ್ ರೊಡ್ರಿಗಸ್ ಕಚೇರಿಯಲ್ಲಿ ಗೈರಾಗಿದ್ದರು ಎನ್ನಲಾಗಿದೆ.

ಈ ವೇಳೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ಗಾನ ಕುಮಾರಿ ಅವರು, “ಸಾರ್ವಜನಿಕರಿಂದ ಬಂದ ಎಲ್ಲ ದೂರುಗಳನ್ನು ಸಮಗ್ರವಾಗಿ ತನಿಖೆ ನಡೆಸಲಾಗುವುದು. ಇನ್ನೂ ದೂರು ಸಲ್ಲಿಸಬೇಕಾದವರು ಸಂಜೆ 4 ಗಂಟೆಯೊಳಗೆ ಗ್ರಾ.ಪಂ. ಸಭಾಂಗಣಕ್ಕೆ ಬಂದು ದೂರು ನೀಡಬಹುದು” ಎಂದು ತಿಳಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!