ಬಿಗ್ ನ್ಯೂಸ್
Bangalore-ನಾಪತ್ತೆಯಾಗಿದ್ದ ವಿದ್ಯಾರ್ಥಿನಿ 8 ತಿಂಗಳ ಬಳಿಕ ಗರ್ಭಿಣಿಯಾಗಿ ಪತ್ತೆ; ಸಿಮ್ ಖರೀದಿಸುವಾಗ ಸಿಕ್ಕಿತು ಸುಳಿವು
ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು ಹಾಗೂ ಸದ್ಯ ಮೂರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮತ್ತೊಬ್ಬ ವಿದ್ಯಾರ್ಥಿನಿ ತೇಜಸ್ವಿನಿಗಾಗಿ ಶೋಧ ಮುಂದುವರಿದಿದೆ.
ಬೆಂಗಳೂರು: ಕಾಲೇಜಿಗೆ ತೆರಳುವುದಾಗಿ ಹೇಳಿ ಮನೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿನಿಯರ ಪ್ರಕರಣಕ್ಕೆ ಎಂಟು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಇಬ್ಬರ ಪೈಕಿ 19 ವರ್ಷದ ತನಿಷ್ಕಾ ಎಂಬ ವಿದ್ಯಾರ್ಥಿನಿಯನ್ನು ಸಿಐಡಿ ಪೊಲೀಸರು ಪತ್ತೆಹಚ್ಚಿದ್ದು, ಆಕೆ ಮದುವೆಯಾಗಿರುವುದು ಹಾಗೂ ಸದ್ಯ ಮೂರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಮತ್ತೊಬ್ಬ ವಿದ್ಯಾರ್ಥಿನಿ ತೇಜಸ್ವಿನಿಗಾಗಿ ಶೋಧ ಮುಂದುವರಿದಿದೆ.
ಜನವರಿ 31ರಂದು ವಿದ್ಯಾರಣ್ಯಪುರದ ಎಂ.ಎಸ್.ಪಾಳ್ಯದ ನಿವಾಸದಿಂದ ಯಲಹಂಕದಲ್ಲಿರುವ ಕಾಲೇಜಿಗೆ ತೆರಳುವುದಾಗಿ ಹೇಳಿ ತನಿಷ್ಕಾ ಹಾಗೂ ಆಕೆಯ ಸ್ನೇಹಿತೆ ತೇಜಸ್ವಿನಿ ನಾಪತ್ತೆಯಾಗಿದ್ದರು. ಈ ಕುರಿತು ವಿದ್ಯಾರ್ಥಿನಿಯರ ಪೋಷಕರು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ವಿವಿಧೆಡೆ ಶೋಧ ನಡೆಸಿದರೂ ಆರಂಭದಲ್ಲಿ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ.
ಬಳಿಕ ತನಿಷ್ಕಾ ಕುಟುಂಬಸ್ಥರು ಹೈಕೋರ್ಟ್ ಮೆಟ್ಟಿಲೇರಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ಹೈಕೋರ್ಟ್ ತನಿಖೆಯನ್ನು ಸಿಐಡಿಗೆ ವಹಿಸಿತ್ತು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಪತ್ತೆಯಾಗಿತ್ತು ಸುಳಿವು
ಆರಂಭಿಕ ತನಿಖೆಯಲ್ಲಿ ಇಬ್ಬರೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅಲ್ಲಿ ಇಬ್ಬರು ವಿದ್ಯಾರ್ಥಿನಿಯರು ಮಗುವಿನೊಂದಿಗೆ ಆಟವಾಡುತ್ತಿದ್ದ ವೇಳೆ ಮಗುವಿನ ತಾಯಿ ಅವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಸುಳಿವಿನ ಆಧಾರದಲ್ಲಿ ತನಿಖೆ ಮುಂದುವರಿಸಿದರೂ ಬಳಿಕ ಇಬ್ಬರ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ.
ತನಿಖೆಯ ವೇಳೆ ಬೆಟ್ಟದ ಆವರಣದಲ್ಲಿ ಕನಕಪುರ ಮೂಲದ ಯುವಕನೊಬ್ಬನ ಪರಿಚಯವಾಗಿರುವುದು ಬೆಳಕಿಗೆ ಬಂದಿದೆ. ಕುಟುಂಬದ ಒತ್ತಡದಿಂದ ಬೇಸತ್ತಿದ್ದ ತನಿಷ್ಕಾ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಳು ಎನ್ನಲಾಗಿದ್ದು, ತೇಜಸ್ವಿನಿ ಹಾಗೂ ಯುವಕ ಆಕೆಗೆ ಬುದ್ಧಿವಾದ ಹೇಳಿದ್ದರು ಎಂದು ತಿಳಿದುಬಂದಿದೆ.
‘ನಾವು ಅನಾಥರು’ ಎಂದು ಸುಳ್ಳು ಹೇಳಿದ್ದ ವಿದ್ಯಾರ್ಥಿನಿ
ಮನೆಯಲ್ಲಿನ ಕೌಟುಂಬಿಕ ಒತ್ತಡಕ್ಕೆ ಹೆದರಿದ್ದ ತನಿಷ್ಕಾ, ತಾನು ಮತ್ತು ತೇಜಸ್ವಿನಿ ಅಕ್ಕ-ತಂಗಿಯರಾಗಿದ್ದು, ತಂದೆ-ತಾಯಿ ಇಲ್ಲದ ಅನಾಥರು ಎಂದು ಯುವಕನಿಗೆ ಹೇಳಿದ್ದಳು ಎನ್ನಲಾಗಿದೆ. ಆಕೆಯ ಮಾತನ್ನು ನಂಬಿದ ಯುವಕ ಇಬ್ಬರನ್ನೂ ತನ್ನೊಂದಿಗೆ ಕರೆದೊಯ್ದಿದ್ದ.
ಬಳಿಕ ಕನಕಪುರ ಮೂಲದ ಈ ಯುವಕ ತನಿಷ್ಕಾಳನ್ನು ಮದುವೆಯಾಗಿದ್ದಾನೆ. ತೇಜಸ್ವಿನಿಯನ್ನು ತನ್ನ ತಂಗಿ ಎಂದು ಪರಿಚಯಿಸಿ ಮನೆಯಲ್ಲೇ ಇರಿಸಿಕೊಂಡಿದ್ದ ಎನ್ನಲಾಗಿದೆ.
ಹೊಸ ಸಿಮ್ ಖರೀದಿಸುವಾಗ ಸಿಕ್ಕ ಸುಳಿವು
ತನಿಷ್ಕಾ ಇತ್ತೀಚೆಗೆ ಹೊಸ ಸಿಮ್ ಕಾರ್ಡ್ ಖರೀದಿಸುವ ಸಂದರ್ಭದಲ್ಲಿ ತನ್ನ ಮೂಲ ಆಧಾರ್ ಕಾರ್ಡ್ ಬಳಸಿದ್ದಳು. ಆಕೆಯ ಆಧಾರ್ ಸಂಖ್ಯೆಯ ಮೇಲೆ ಸಿಐಡಿ ಅಧಿಕಾರಿಗಳು ಈಗಾಗಲೇ ನಿಗಾ ಇರಿಸಿದ್ದರಿಂದ, ಟೆಲಿಕಾಂ ಸೇವಾ ಪೂರೈಕೆದಾರರಿಂದ ಪೊಲೀಸರಿಗೆ ತಕ್ಷಣ ಮಾಹಿತಿ ರವಾನೆಯಾಗಿದೆ.
ಆಧಾರ್ ಮಾಹಿತಿ ಹಾಗೂ ಮೊಬೈಲ್ ನೆಟ್ವರ್ಕ್ ಸ್ಥಳದ ಆಧಾರದಲ್ಲಿ ತನಿಖೆ ಮುಂದುವರಿಸಿದ ಸಿಐಡಿ ತಂಡ ಕೊನೆಗೂ ತನಿಷ್ಕಾ ಮತ್ತು ತೇಜಸ್ವಿನಿ ಇರುವ ಸ್ಥಳದ ಸುಳಿವು ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.
ತನಿಷ್ಕಾ ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ. ಸಿಐಡಿ ಪೊಲೀಸರು ಆಕೆಯನ್ನು ಹೈಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
ಕೋರ್ಟ್ ಮುಂದೆ ಹಾಜರು; ವಿಚಾರಣೆ ಸೆ.16ಕ್ಕೆ ಮುಂದೂಡಿಕೆ
ವಿದ್ಯಾರ್ಥಿನಿಯರ ಪೋಷಕರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ಬುಧವಾರ ನ್ಯಾಯಮೂರ್ತಿ ಅನು ಶಿವರಾಮನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಪೊಲೀಸರು ತನಿಷ್ಕಾಳನ್ನು ನ್ಯಾಯಪೀಠದ ಮುಂದೆ ಹಾಜರುಪಡಿಸಿದರು.
ವಿದ್ಯಾರ್ಥಿನಿಯ ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ.
ಮದುವೆ ಬಗ್ಗೆ ಕುಟುಂಬಸ್ಥರಿಗೂ ಸುಳ್ಳು ಮಾಹಿತಿ
ತನಿಷ್ಕಾಳನ್ನು ಕನಕಪುರದ ಸಾತನೂರು ಸಮೀಪದ ಕಲ್ಲಿಗೌಡನದೊಡ್ಡಿಗೆ ಕರೆದೊಯ್ದಿದ್ದ ಯುವಕ, ತನಿಷ್ಕಾ ತನ್ನನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದಳು ಹಾಗೂ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಳು ಎಂದು ಮನೆಯವರಿಗೆ ತಿಳಿಸಿದ್ದ ಎನ್ನಲಾಗಿದೆ. ಅಲ್ಲದೆ, ಆಕೆ ತಮ್ಮದೇ ಜಾತಿಗೆ ಸೇರಿದವಳು ಎಂದು ಸುಳ್ಳು ಹೇಳಿ ಕುಟುಂಬಸ್ಥರನ್ನು ನಂಬಿಸಿ ಮದುವೆಯಾಗಿದ್ದಾನೆ ಎನ್ನಲಾಗಿದೆ.
ಮನೆ ಬಿಡಲು ಮೂರು ಕಾರಣ ಹೇಳಿದ ತನಿಷ್ಕಾ
ಪೊಲೀಸರ ಮುಂದೆ ತನಿಷ್ಕಾ ತನ್ನ ಮನೆ ತೊರೆಯಲು ಮೂರು ಪ್ರಮುಖ ಕಾರಣಗಳನ್ನು ಹೇಳಿದ್ದಾಳೆ ಎನ್ನಲಾಗಿದೆ. ಓದಿನಲ್ಲಿ ಹಿಂದೆ ಇದ್ದ ಕಾರಣ ಪೋಷಕರು ಬೈದು, ಹೊಡೆಯುತ್ತಿದ್ದರು ಎಂಬುದು ಮೊದಲ ಕಾರಣ. ತಾನು ತುಂಬಾ ಪ್ರೀತಿಸುತ್ತಿದ್ದ ನಾಯಿ ಮೃತಪಟ್ಟಿದ್ದರಿಂದ ಮಾನಸಿಕವಾಗಿ ನೊಂದಿದ್ದೆ ಎಂದು ಹೇಳಿದ್ದಾಳೆ.
ಇದರ ಜೊತೆಗೆ, ತನ್ನ ಕಷ್ಟ-ಸುಖಗಳನ್ನು ಹಂಚಿಕೊಳ್ಳುತ್ತಿದ್ದ ಅಜ್ಜಿ ಮೃತಪಟ್ಟಿದ್ದರಿಂದಲೂ ಖಿನ್ನತೆಗೆ ಒಳಗಾಗಿದ್ದೆ ಎಂದು ತನಿಷ್ಕಾ ಹೇಳಿದ್ದಾಳೆ ಎನ್ನಲಾಗಿದೆ.
ಇದೀಗ ತನಿಷ್ಕಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್ನೂ ಪತ್ತೆಯಾಗದ ತೇಜಸ್ವಿನಿಗಾಗಿ ಸಿಐಡಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















