Connect with us

ಬಿಗ್ ನ್ಯೂಸ್

iPhone ‘Duo’-ಆಪಲ್‌ನಿಂದ ಮೊದಲ ಫೋಲ್ಡೇಬಲ್ ಐಫೋನ್ ‘ಡ್ಯುಯೊ’ ಬಿಡುಗಡೆ

Published

on

Ad Widget

Ad Widget

Ad Widget

Ad Widget

ತಂತ್ರಜ್ಞಾನ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಪಲ್‌ನ ಮೊದಲ ಮಡಚಬಹುದಾದ ಸ್ಮಾರ್ಟ್‌ಫೋನ್ ಕೊನೆಗೂ ಅನಾವರಣಗೊಂಡಿದೆ. ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಪಲ್ ಸಂಸ್ಥೆ ತನ್ನ ಮೊದಲ ಫೋಲ್ಡೇಬಲ್ ಫೋನ್ ‘ಐಫೋನ್ ಡ್ಯುಯೊ’ (iPhone Duo) ಅನ್ನು ಬಿಡುಗಡೆ ಮಾಡಿದೆ.

Ad Widget

Ad Widget

Ad Widget

Ad Widget

ಕ್ಯುಪರ್ಟಿನೊ (ಕ್ಯಾಲಿಫೋರ್ನಿಯಾ): ತಂತ್ರಜ್ಞಾನ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಪಲ್‌ನ ಮೊದಲ ಮಡಚಬಹುದಾದ ಸ್ಮಾರ್ಟ್‌ಫೋನ್ ಕೊನೆಗೂ ಅನಾವರಣಗೊಂಡಿದೆ. ಕ್ಯಾಲಿಫೋರ್ನಿಯಾದ ಕ್ಯುಪರ್ಟಿನೊದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಪಲ್ ಸಂಸ್ಥೆ ತನ್ನ ಮೊದಲ ಫೋಲ್ಡೇಬಲ್ ಫೋನ್ ‘ಐಫೋನ್ ಡ್ಯುಯೊ’ (iPhone Duo) ಅನ್ನು ಬಿಡುಗಡೆ ಮಾಡಿದೆ.

Ad Widget

Ad Widget alt="Ad Widget"/>

Ad Widget

ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಿಕಾ ಕಂಪನಿಗಳು ಈಗಾಗಲೇ ಹಲವು ಫೋಲ್ಡಬಲ್ ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿದ್ದರೂ, ಆಪಲ್ ಈ ವಿಭಾಗಕ್ಕೆ ಕಾಲಿಟ್ಟಿರಲಿಲ್ಲ. ಇದೀಗ ಐಫೋನ್ ಡ್ಯುಯೊ ಮೂಲಕ ಆಪಲ್ ಕೂಡ ಫೋಲ್ಡಬಲ್ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಪ್ರವೇಶಿಸಿದೆ.

Ad Widget

Ad Widget <> Ad Widget

ವಿನ್ಯಾಸ, ಡಿಸ್‌ಪ್ಲೇ, ಕ್ಯಾಮೆರಾ ಹಾಗೂ ಕಾರ್ಯಕ್ಷಮತೆಯಲ್ಲಿ ಹಲವು ಹೊಸ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಐಫೋನ್ ಡ್ಯುಯೊ, ಆಪಲ್‌ನ ಅತ್ಯಾಧುನಿಕ A20 Pro ಚಿಪ್‌ನೊಂದಿಗೆ ಬಿಡುಗಡೆಯಾಗಿದೆ.

7.6 ಇಂಚಿನ ಬೃಹತ್ ಡಿಸ್‌ಪ್ಲೇ
ಫೋನ್ ಮುಚ್ಚಿದಾಗ 5.4 ಇಂಚಿನ Super Retina XDR ಡಿಸ್‌ಪ್ಲೇ ಹೊಂದಿರಲಿದ್ದು, ಒಂದೇ ಕೈಯಲ್ಲಿ ಸುಲಭವಾಗಿ ಬಳಸಬಹುದಾಗಿದೆ. ಫೋನ್ ತೆರೆದಾಗ 7.6 ಇಂಚಿನ ದೊಡ್ಡ ಡಿಸ್‌ಪ್ಲೇ ಲಭ್ಯವಾಗಲಿದ್ದು, ಮಲ್ಟಿಟಾಸ್ಕಿಂಗ್ ಮತ್ತು ಗೇಮಿಂಗ್‌ಗೆ ಅನುಕೂಲವಾಗಲಿದೆ.

Ad Widget

Ad Widget

ಡಿಸ್‌ಪ್ಲೇಯಲ್ಲಿ ಮಡಚಿದ ಗುರುತುಗಳು (crease) ಹೆಚ್ಚು ಗೋಚರಿಸದಂತೆ ವಿನ್ಯಾಸಗೊಳಿಸಲಾಗಿದೆ. ಬಾಳಿಕೆ ಹೆಚ್ಚಿಸಲು ಗ್ರೇಡ್ 5 ಟೈಟಾನಿಯಂ ಫ್ರೇಮ್ ಹಾಗೂ ಮುಂಭಾಗದಲ್ಲಿ ಹೆಚ್ಚು ಗಟ್ಟಿಮುಟ್ಟಾದ Ceramic Shield 2 ಬಳಸಲಾಗಿದೆ. 100ಕ್ಕೂ ಹೆಚ್ಚು ಬಿಡಿಭಾಗಗಳನ್ನು ಒಳಗೊಂಡ ನಿಖರವಾದ ಹಿಂಜ್ ವ್ಯವಸ್ಥೆ ಫೋನ್‌ನ್ನು ಸುಗಮವಾಗಿ ಮಡಚಲು ಮತ್ತು ತೆರೆಯಲು ನೆರವಾಗಲಿದೆ.

48MP ಕ್ಯಾಮೆರಾ; AI ಆಧಾರಿತ ಹೊಸ ಫೀಚರ್‌ಗಳು
ಕ್ಯಾಮೆರಾ ವಿಭಾಗದಲ್ಲೂ ಐಫೋನ್ ಡ್ಯುಯೊ ಹಲವು ವಿಶೇಷತೆಗಳನ್ನು ಹೊಂದಿದೆ. 48 ಮೆಗಾಪಿಕ್ಸೆಲ್ Fusion ಮುಖ್ಯ ಕ್ಯಾಮೆರಾ ಹಾಗೂ 48 ಮೆಗಾಪಿಕ್ಸೆಲ್ Ultra-Wide ಲೆನ್ಸ್ ನೀಡಲಾಗಿದೆ.

ಫೋಲ್ಡಬಲ್ ವಿನ್ಯಾಸದ ಪ್ರಯೋಜನ ಪಡೆದುಕೊಂಡಿರುವ ಆಪಲ್, Smart Take ಎಂಬ ವಿಶೇಷ AI ಫೀಚರ್ ಪರಿಚಯಿಸಿದೆ. ಬಳಕೆದಾರರು ಕ್ಯಾಮೆರಾ ಮುಂದೆ ಪೋಸ್ ನೀಡುವಾಗ ಅತ್ಯುತ್ತಮ ಕ್ಷಣವನ್ನು AI ಸ್ವಯಂಚಾಲಿತವಾಗಿ ಆಯ್ಕೆ ಮಾಡಿ ಸೆರೆಹಿಡಿಯಲಿದೆ.

ಇದರೊಂದಿಗೆ Duo Preview ಮೂಲಕ ಫೋಟೋ ತೆಗೆಯುವಾಗ ಹೊರಗಿನ ಡಿಸ್‌ಪ್ಲೇಯಲ್ಲೇ ವ್ಯಕ್ತಿಗಳು ತಮ್ಮ ಭಂಗಿಯನ್ನು ನೋಡಿಕೊಳ್ಳಬಹುದು. ಮಕ್ಕಳ ಗಮನವನ್ನು ಕ್ಯಾಮೆರಾ ಕಡೆ ಸೆಳೆಯಲು Kid Cue ಎಂಬ ವಿಶೇಷ ಸೌಲಭ್ಯವನ್ನೂ ನೀಡಲಾಗಿದೆ.

A20 Pro ಚಿಪ್; 44 ಗಂಟೆಗಳವರೆಗೆ ವಿಡಿಯೋ ಪ್ಲೇಬ್ಯಾಕ್
ಐಫೋನ್ ಡ್ಯುಯೊದಲ್ಲಿ ಅತ್ಯಾಧುನಿಕ A20 Pro ಚಿಪ್ ಅಳವಡಿಸಲಾಗಿದ್ದು, ಫೋನ್ ಹೆಚ್ಚು ಬಿಸಿಯಾಗದಂತೆ ತಡೆಯಲು ವಿಶೇಷ Vapor Chamber ಕೂಲಿಂಗ್ ವ್ಯವಸ್ಥೆ ನೀಡಲಾಗಿದೆ.

ಡ್ಯುಯಲ್ ಬ್ಯಾಟರಿ ವ್ಯವಸ್ಥೆಯೊಂದಿಗೆ ಹೊರಗಿನ ಡಿಸ್‌ಪ್ಲೇಯಲ್ಲಿ 44 ಗಂಟೆಗಳವರೆಗೆ ಹಾಗೂ ಒಳಗಿನ ಡಿಸ್‌ಪ್ಲೇಯಲ್ಲಿ 31 ಗಂಟೆಗಳವರೆಗೆ ವಿಡಿಯೋ ವೀಕ್ಷಣೆ ಸಾಧ್ಯವಾಗಲಿದೆ ಎಂದು ತಿಳಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ 20 ನಿಮಿಷಗಳಲ್ಲಿ ಶೇ.50ರಷ್ಟು ಚಾರ್ಜ್ ಮಾಡಬಹುದಾಗಿದೆ.

ಫೋಲ್ಡಬಲ್ ಡಿಸ್‌ಪ್ಲೇಗೆ ಅನುಗುಣವಾಗಿ ವಿನ್ಯಾಸಗೊಳಿಸಿರುವ iOS 27 ಹಾಗೂ ವೈಯಕ್ತಿಕೀಕರಿಸಿದ Siri AI ಕೂಡ ಬಳಕೆದಾರರ ಅನುಭವವನ್ನು ಮತ್ತಷ್ಟು ಸುಧಾರಿಸಲಿದೆ.

ಭಾರತದಲ್ಲಿ ಬೆಲೆ ₹2.99 ಲಕ್ಷದಿಂದ
ಭಾರತೀಯ ಮಾರುಕಟ್ಟೆಯಲ್ಲಿ ಐಫೋನ್ ಡ್ಯುಯೊ ಬೆಲೆ ₹2,99,900ರಿಂದ ಆರಂಭವಾಗಲಿದೆ. 256GB, 512GB, 1TB ಮತ್ತು 2TB ಸ್ಟೋರೇಜ್ ಆಯ್ಕೆಗಳಲ್ಲಿ ಫೋನ್ ಲಭ್ಯವಾಗಲಿದೆ.

ಸ್ಟಾರ್ ವೈಟ್ ಮತ್ತು ನೈಟ್ ಸೈ ಬಣ್ಣಗಳಲ್ಲಿ ದೊರೆಯಲಿರುವ ಐಫೋನ್ ಡ್ಯುಯೊಗೆ ಅಕ್ಟೋಬರ್ 16ರಿಂದ ಮುಂಗಡ ಕಾಯ್ದಿರಿಸುವಿಕೆ ಆರಂಭವಾಗಲಿದ್ದು, ಅಕ್ಟೋಬರ್ 23ರಿಂದ ಮಾರಾಟಕ್ಕೆ ಲಭ್ಯವಾಗಲಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಬಿಗ್ ನ್ಯೂಸ್

Shashikumar Bhat-ಶಶಿಕುಮಾರ್ ಭಟ್ ಪಡಾರು ಅವರಿಗೆ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಕಾಳುಮೆಣಸು, ಅಡಿಕೆ ಹಾಗೂ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಭಟ್ ಪಡಾರು ಅವರು ಗೋವಾ ರಾಜ್ಯ
ತೋಟಗಾರಿಕೆ ನಿಗಮ ಹಾಗೂ ಕನ್ನಡ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ಗೋವಾ – ಕರ್ನಾಟಕ ಸಂಸ್ಥೆ ಕೊಡಮಾಡುವ ಗಡಿನಾಡ ಕನ್ನಡಿಗ ಕೃಷಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಪುತ್ತೂರು ಕೇಂದ್ರಿತವಾಗಿ ಹಲವು ಕೃಷಿ ಸಂಬಂಧಿ ಸಮಾವೇಶಗಳನ್ನೂ ಆಯೋಜಿಸುತ್ತಿರುವ ಶಶಿಕುಮಾರ್ ಭಟ್ಪ ಡಾರು ಅವರು ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ, ತರಬೇತಿ, ಸಲಹೆ – ಮಾರ್ಗದರ್ಶನಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ಕೊಡಮಾಡಕಲಾಗುತ್ತಿದೆ. ಪ್ರಶಸ್ತಿ ಪ್ರದಾನ
ಸಮಾರಂಭ ನವೆಂಬರ್ 22ರಂದು ವಾಸ್ಕೋ ಗೋವಾದ ಬೈನಾದಲ್ಲಿನ ರವೀಂದ್ರ ಭವನದಲ್ಲಿ ನಡೆಯಲಿದೆ.

Ad Widget

Ad Widget <> Ad Widget

ಶಶಿಕುಮಾರ್ ಭಟ್ ಪಡಾರು ಅವರ ಸಾಧನೆಯ ಹಾದಿ:
ಕರಾವಳಿಯ ಜೀವನಾಡಿಯಾದ ಅಡಿಕೆ ಕೃಷಿ ಇಂದು ಹಳದಿ ಎಲೆ ರೋಗ, ಮಾರುಕಟ್ಟೆ ಅಸ್ಥಿರತೆ, ಹವಾಮಾನ ವೈಪರೀತ್ಯ, ಕೂಲಿ ಸಮಸ್ಯೆ ಮೊದಲಾದ ನಾನಾ ಸಂಕಷ್ಟಗಳಿಂದ ನಲುಗಿ ಹೋಗುತ್ತಿರುವ ಈ ಆಧುನಿಕ ದಿನಮಾನಗಳಲ್ಲಿ, ಕೃಷಿಕರಿಗೆ ಹೊಸ ದಾರಿ, ಹೊಸ ಸಾಧ್ಯತೆಯ ಬೆಳಕನ್ನು ತೋರಿಸಿದ ದೀಪಸ್ತಂಭ ಶಶಿಕುಮಾರ ಭಟ್ ಪಡಾರು.

ಕಾಳುಮೆಣಸಿನ ಕ್ರಾಂತಿಯ ಹರಿಕಾರ:
ಅಡಿಕೆಯೊಂದಿಗೆ ಕಾಳುಮೆಣಸು ಬೆಳೆದರೆ ರೈತನ ಆದಾಯ ದ್ವಿಗುಣವಾಗುತ್ತದೆ ಎಂಬ ಸತ್ಯವನ್ನು ಮನಗಂಡು, ಅದನ್ನು ಕೇವಲ ತಮ್ಮ ತೋಟಕ್ಕೆ ಸೀಮಿತಗೊಳಿಸದೆ ಸಾವಿರಾರು ರೈತರಿಗೆ
ಮನದಟ್ಟು ಮಾಡಿದವರು. ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ವಿನಿಮಯಕ್ಕಾಗಿ ವಾಟ್ಸಾಪ್ ತಂಡಗಳನ್ನು ರಚಿಸಿ, ಸಾವಿರಾರು ಮಂದಿಯನ್ನು ಒಗ್ಗೂಡಿಸಿ, ಪ್ರತಿನಿತ್ಯ ತಳಿ ಆಯ್ಕೆ, ನಾಟಿ ವಿಧಾನ,
ರೋಗ ನಿರ್ವಹಣೆ, ಇಳುವರಿ ಹೆಚ್ಚಳದ ಬಗ್ಗೆ ಚರ್ಚಿಸಿ, ಅವರಲ್ಲಿ ಕಾಳುಮೆಣಸಿನ ಬಗೆಗೆ ಆಸಕ್ತಿ ಹಚ್ಚಿಸಿದ ಅಪರೂಪದ ಸಂಘಟಕರು. ಇಂದು ಕರಾವಳಿಯ ಸಾವಿರಾರು ಯುವ ರೈತರು ಅವರ ವಾಟ್ಸಾಪ್ ತಂಡಗಳಿಂದಲೇ ಕೃಷಿಗೆ ಮರಳಿದ್ದಾರೆ.

Ad Widget

Ad Widget

ಮನೆ ಬಾಗಿಲಿಗೆ ಕೃಷಿ ಸೇವೆ – ಕೇವಲ ಮಾರಾಟವಲ್ಲ ಬದ್ಧತೆ:
ಕೇವಲ ಪ್ರೇರಣೆ ನೀಡುವುದಕ್ಕೆ ಸೀಮಿತವಾಗದೆ, ಆಸಕ್ತ ಕೃಷಿಕರ ಮನೆ ಬಾಗಿಲಿಗೇ ಗುಣಮಟ್ಟದ, ರೋಗ ನಿರೋಧಕ ಶಕ್ತಿಯುಳ್ಳ ಕಾಳುಮೆಣಸಿನ ಗಿಡಗಳನ್ನು ತಲುಪಿಸುವುದು, ನಂತರ ತಜ್ಞರ ಮೂಲಕ ಬೆಳೆಸುವ ವೈಜ್ಞಾನಿಕ ವಿಧಾನವನ್ನು ತಿಳಿಸಿಕೊಡುವುದು ಮತ್ತು ಫಸಲು ಬರುವವರೆಗೂ ದೀರ್ಘಕಾಲಿಕ ಮಾರ್ಗದರ್ಶನ ನೀಡುವುದರ ಮೂಲಕ ಹೊಸಬರೂ ಧೈರ್ಯದಿಂದ ಕೃಷಿಗಿಳಿಯುವಂತೆ ಮಾಡಿದ್ದಾರೆ. ರೈತರು ಗಿಡಗಳಿಗೆ ಉಂಟಾದ ತೊಂದರೆಗೆ ಸಂಬಂಧಿಸಿದಂತೆ ಫೋಟೋ ಕಳುಹಿಸಿದರೆ ತಕ್ಷಣ ಪರಿಹಾರ ಸೂಚಿಸುವ ಅವರ ಕಾಳಜಿ ಅನನ್ಯ.

ದಾಖಲೆಯ ಸಾಧನೆ – ಮೂವತ್ತು ಲಕ್ಷದತ್ತ ಪಯಣ:
ಕಳೆದ ಬೆರಳೆಣಿಕೆಯ ವರ್ಷಗಳಲ್ಲಿ ಸರಿಸುಮಾರು ಇದುವರೆಗೆ ಮೂವತ್ತು ಲಕ್ಷಕ್ಕಿಂತಲೂ ಅಧಿಕ ಕಾಳುಮೆಣಸಿನ ಗಿಡಗಳನ್ನು ಕೃಷಿಕರ ತೋಟಗಳಿಗೆ ತಲುಪಿಸುವ ಮೂಲಕ ಕರಾವಳಿ
ಜಿಲ್ಲೆಗಳಲ್ಲಿ ಕಾಳುಮೆಣಸಿನ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ. ಇದು ಕೇವಲ ಸಂಖ್ಯೆಯಲ್ಲ, ಕರಾವಳಿಯ ಕೃಷಿ ಭೂಪಟವನ್ನೇ ಬದಲಾಯಿಸಿದ ಸಾಧನೆ.

ಅಡಿಕೆಯೊಂದಿಗೆ ಸಮಗ್ರ ಸಹಬೆಳೆಗಳ ಕನಸು:
ಕಾಳುಮೆಣಸಿಗೆ ಮಾತ್ರ ಸೀಮಿತವಾಗದೆ, ಇವರು ಅಡಿಕೆಯ ಸಹಬೆಳೆಗಳಾಗಿ ಕಾಫಿ, ಏಲಕ್ಕಿ ಬೆಳೆಯುವುದಕ್ಕೂ ರೈತರನ್ನು ದೊಡ್ಡ ಮಟ್ಟದಲ್ಲಿ ಪ್ರೋತ್ಸಾಹಿಸುತ್ತಿದ್ದಾರೆ. ಅಡಿಕೆ ತೋಟದಲ್ಲಿ ಖಾಲಿ
ಇರುವ ಜಾಗದಲ್ಲಿ ಕಾಫಿ ಮತ್ತು ಏಲಕ್ಕಿ ಬೆಳೆದು ಹೆಚ್ಚುವರಿ ಆದಾಯ ಗಳಿಸುವ ವೈಜ್ಞಾನಿಕ ಮಾದರಿಯನ್ನು ಪರಿಚಯಿಸಿದ್ದಾರೆ. ಅದಕ್ಕಾಗಿ ಗುಣಮಟ್ಟದ ಕಾಫಿ ಮತ್ತು ಏಲಕ್ಕಿ ಗಿಡಗಳನ್ನೂ ರೈತರಿಗೆ
ಒದಗಿಸುತ್ತಿದ್ದಾರೆ.

ಸಮಗ್ರ ತೋಟಗಾರಿಕಾ ಸೇವೆ:

ಇದೀಗ ಸಮಾನ ಮನಸ್ಕ ಸ್ನೇಹಿತರನ್ನು ಕೂಡಿಕೊಂಡು, ಗುಣಮಟ್ಟದ ಕಾಫಿ, ಅಡಿಕೆ, ತೆಂಗು, ಅತ್ಯಧಿಕ ಇಳುವರಿಯ ಲಿಂಬೆ, ಏಪಲ್, ಏಲಕ್ಕಿ ಮುಂತಾದ ತೋಟಗಾರಿಕಾ ಬೆಳೆಗಳ ಗಿಡಗಳನ್ನು
ಒದಗಿಸುವ ಮಹತ್ಕಾರ್ಯದಲ್ಲೂ ನಿರತರಾಗಿದ್ದಾರೆ. ರೈತನಿಗೆ ಬೇಕಾದ ಎಲ್ಲಾ ಗಿಡಗಳು – ಮಾಹಿತಿಗಳನ್ನು ಒಂದೇ ಸೂರಿನಡಿ, ಒಂದೇ ವಿಶ್ವಾಸಾರ್ಹ ಮೂಲದಲ್ಲಿ ಸಿಗುವಂತಹ ವ್ಯವಸ್ಥೆಯನ್ನು
ಕಟ್ಟಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!