ಸ್ಥಳೀಯ
Kodishree prediction-ದಕ್ಷಿಣ ಭಾರತಕ್ಕೆ ಭೂಕುಸಿತ, ಜಲಪ್ರಳಯದ ಭೀತಿ: ಸಮುದ್ರದ ನೀರು ನುಗ್ಗಿ ಊರುಗಳು ಮುಳುಗಲಿವೆ – ಕೋಡಿಶ್ರೀ ಭವಿಷ್ಯ
ನೇಪಾಳ ಹಾಗೂ ಉತ್ತರ ಭಾರತದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ, ಮೇಘಸ್ಫೋಟ ಮತ್ತು ಜಲಪ್ರಳಯದಂತಹ ಪ್ರಕೃತಿ ವಿಕೋಪಗಳು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆ ಇದೆ ಎಂದು ಹಾಸನದ ಕೋಡಿಮಠ ಸಂಸ್ಥಾನದ ಪೀಠಾಧಿಪತಿ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ (ಕೋಡಿಶ್ರೀ) ಭವಿಷ್ಯ ನುಡಿದಿದ್ದಾರೆ.
ಹಾಸನ: ನೇಪಾಳ ಹಾಗೂ ಉತ್ತರ ಭಾರತದಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ, ಮೇಘಸ್ಫೋಟ ಮತ್ತು ಜಲಪ್ರಳಯದಂತಹ ಪ್ರಕೃತಿ ವಿಕೋಪಗಳು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆ ಇದೆ ಎಂದು ಹಾಸನದ ಕೋಡಿಮಠ ಸಂಸ್ಥಾನದ ಪೀಠಾಧಿಪತಿ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ (ಕೋಡಿಶ್ರೀ) ಭವಿಷ್ಯ ನುಡಿದಿದ್ದಾರೆ.
ಹಾಸನದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಟ್ಟೆಯಿಲ್ಲದ ಬಾವಿ ಹುಟ್ಟಿ, ನೆಟ್ಟನೀ ಸುರಂಗವ ಕೊರೆದು, ಗಟ್ಟಿಭೂಮಿ ಬಟ್ಟಬಯಲಾಯ್ತು” ಎಂಬ ಕಾಲಜ್ಞಾನ ವಚನವನ್ನು ಉಲ್ಲೇಖಿಸಿ ಮುಂದಿನ ದಿನಗಳಲ್ಲಿ ಪ್ರಕೃತಿ ವಿಕೋಪಗಳು ಹೆಚ್ಚಾಗುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಸಮುದ್ರದ ನೀರು ನುಗ್ಗಿ ಊರುಗಳು ಮುಳುಗಲಿವೆ
ನೇಪಾಳದಲ್ಲಿ ಬೆಟ್ಟ ಕುಸಿದು ಮಹಾಪ್ರವಾಹ ಉಂಟಾಗಿ ಸಾವು-ನೋವು ಸಂಭವಿಸಿದ ರೀತಿಯಲ್ಲೇ ದಕ್ಷಿಣ ಭಾರತದಲ್ಲೂ ಅನಾಹುತಗಳು ಸಂಭವಿಸಬಹುದು ಎಂದು ಕೋಡಿಶ್ರೀ ಹೇಳಿದ್ದಾರೆ.
ಸಮುದ್ರದ ನೀರು ಒಳನುಗ್ಗಿ ಕೆಲವು ಪ್ರದೇಶಗಳು ಹಾಗೂ ಊರುಗಳು ಮುಳುಗುವಂತಹ ಪರಿಸ್ಥಿತಿ ಎದುರಾಗಬಹುದು. ಕಳೆದ 2-3 ವರ್ಷಗಳಿಂದಲೂ ಈ ಕುರಿತು ತಾವು ಎಚ್ಚರಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ದೇಶದ ವಿವಿಧೆಡೆ ಭೀಕರ ಪ್ರವಾಹ, ಯುದ್ಧಗಳು ಹಾಗೂ ಆಡಳಿತ ವರ್ಗದಲ್ಲಿ ಅತೃಪ್ತಿಯಂತಹ ಬೆಳವಣಿಗೆಗಳು ನಡೆಯಲಿವೆ ಎಂದು ಈ ಹಿಂದೆ ಹೇಳಿದ್ದೆ. ಇದೀಗ ಅವುಗಳು ಸಾಬೀತಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಷ್ಟಗಳು ಎದುರಾಗಬಹುದು ಎಂದು ಅವರು ಹೇಳಿದ್ದಾರೆ. ಇಂತಹ ಪರಿಸ್ಥಿತಿಯಿಂದ ಪಾರಾಗಲು ಪ್ರತಿಯೊಬ್ಬರೂ ಭಗವಂತನಲ್ಲಿ ಮೊರೆಹೋಗಬೇಕು ಎಂದು ಸಲಹೆ ನೀಡಿದ್ದಾರೆ.
ಹಿಂಗಾರು ಮಳೆ ರೈತರಿಗೆ ನೆಮ್ಮದಿ ತರಲಿದೆ
ಮುಂಗಾರು ಮಳೆ ವಿರಳವಾಗಿರುವುದರಿಂದ ಅನ್ನ ಮತ್ತು ನೀರಿಗೆ ತತ್ವಾರ ಎದುರಾಗಿದೆ ಎಂದು ಹೇಳಿದ ಕೋಡಿಶ್ರೀ, ರೈತರು ಧೃತಿಗೆಡಬೇಕಿಲ್ಲ ಎಂದು ಭರವಸೆ ನೀಡಿದ್ದಾರೆ.
ಹಿಂಗಾರು ಮಳೆ ಸಮೃದ್ಧವಾಗಿ ಸುರಿಯಲಿದ್ದು, ನಾಡಿನ ಕೆರೆ-ಕಟ್ಟೆಗಳು ಭರ್ತಿಯಾಗಲಿವೆ. ಮುಂಗಾರು ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಹಿಂಗಾರು ಮಳೆಯಿಂದ ಶೇ.90ರಷ್ಟು ಪರಿಹಾರ ಸಿಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಬೋರ್‌ವೆಲ್‌ಗಳ ಅತಿಯಾದ ಬಳಕೆಯಿಂದ ಭೂಮಿಯ ತಳಪಾಯ ಸಡಿಲ?
ಪ್ರಕೃತಿ ವಿಕೋಪಗಳ ಕುರಿತು ಮಾತನಾಡಿದ ಕೋಡಿಶ್ರೀ, ಬೋರ್‌ವೆಲ್‌ಗಳ ಅತಿಯಾದ ಬಳಕೆಯಿಂದ ಭೂಮಿಯ ತಳಪಾಯ ದುರ್ಬಲವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಭೂಮಿಯ ಮೇಲ್ಮೈಯ ಕೆಳಭಾಗದಲ್ಲಿ ಬಂಡೆಯ ಪದರಗಳಿದ್ದು, ಅದರ ಮೇಲೆಯೇ ಭೂಮಿ ನಿಂತಿದೆ. ಆದರೆ ಮಾನವರು ಜಗತ್ತಿನಾದ್ಯಂತ ಕೋಟ್ಯಂತರ ಬೋರ್‌ವೆಲ್‌ಗಳನ್ನು ಕೊರೆದು ಭೂಮಿಯ ತಳಪಾಯವನ್ನು ಸಡಿಲಗೊಳಿಸಿದ್ದಾರೆ. ಇದರಿಂದ ಭೂಕಂಪ, ಬೆಟ್ಟ ಕುಸಿತ ಮತ್ತು ಪ್ರವಾಹಗಳು ಹೆಚ್ಚಾಗುತ್ತಿವೆ ಎಂದು ಅವರು ಹೇಳಿದ್ದಾರೆ.
ಹಿಂದೆ 40-50 ಅಡಿ ಆಳದ ಬಾವಿಗಳ ನೀರನ್ನು ಬಳಸುತ್ತಿದ್ದ ಜನರು ಆರೋಗ್ಯವಂತರಾಗಿದ್ದರು. ಈಗ ಸಾವಿರಾರು ಅಡಿ ಆಳದಿಂದ ನೀರು ಪಡೆಯುತ್ತಿರುವುದರಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಕೋಡಿಶ್ರೀ ಕಳವಳ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಮುಖ್ಯಮಂತ್ರಿ ಆಗ್ತಿಯಪ್ಪ ಎಂದಿದ್ದೆ: ಕೋಡಿಶ್ರೀ
ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ಕೋಡಿಶ್ರೀ, ಡಿ.ಕೆ. ಶಿವಕುಮಾರ್ ಅವರು ತಮ್ಮ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಮುಂದೆ ಮುಖ್ಯಮಂತ್ರಿ ಆಗ್ತಿಯಪ್ಪ” ಎಂದು ತಾವು ಹೇಳಿದ್ದಾಗಿ ನೆನಪಿಸಿಕೊಂಡಿದ್ದಾರೆ.
ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವದಿಸೋಣ, ಅಶುಭ ಮಾತುಗಳು ಬೇಡ ಎಂದು ಹೇಳಿದ ಅವರು, ಅಧಿಕಾರ ಸಿಗುವುದು ಪೂರ್ವಜನ್ಮದ ಪುಣ್ಯ ಎಂದಿದ್ದಾರೆ.
ಅನುಭವಿಗಳಿಗೆ ಹಾಗೂ ಜನಪರ ನಾಯಕರಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಸರಳತೆ, ಸಜ್ಜನಿಕೆ ಮತ್ತು ಬಡವರ ಕಷ್ಟಕ್ಕೆ ಸ್ಪಂದಿಸುವ ಗುಣ ಡಿ.ಕೆ. ಶಿವಕುಮಾರ್ ಅವರಲ್ಲಿದ್ದು, ಅವರ ಜನಸೇವೆ ಮುಂದುವರಿಯಲಿ ಎಂದು ಕೋಡಿಶ್ರೀ ಹಾರೈಸಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್9 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ15 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು17 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized16 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್17 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ15 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್16 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















