ಉದ್ಯೋಗ
Puttur-ಪುತ್ತೂರು: ಇಬ್ಬರು CBSE ವಿದ್ಯಾರ್ಥಿಗಳಿಗೆ ಮನೆಗೆ ಬಂದು ಟ್ಯೂಷನ್ ನೀಡಲು ಅರ್ಹ ಶಿಕ್ಷಕಿಯರು ಬೇಕಾಗಿದ್ದಾರೆ
ಪುತ್ತೂರಿನ ಪಡ್ನೂರು ಪ್ರದೇಶದಲ್ಲಿ ಇಬ್ಬರು ಮಕ್ಕಳಿಗೆ ಮನೆಗೆ ಬಂದು ಟ್ಯೂಷನ್ ನೀಡಲು ಅರ್ಹ ಶಿಕ್ಷಕಿಯರು ಬೇಕಾಗಿದ್ದಾರೆ. ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಟ್ಯೂಷನ್ ನೀಡಲು ಸಾಧ್ಯವಾಗುವ ಶಿಕ್ಷಕಿಯರಿಗೆ ಆದ್ಯತೆ ನೀಡಲಾಗುವುದು. B.Sc., B.Ed. ಅಥವಾ M.Sc. ವಿದ್ಯಾರ್ಹತೆ ಹೊಂದಿರುವವರು ಸಂಪರ್ಕಿಸಬಹುದಾಗಿದೆ.
ಪುತ್ತೂರು: ಪುತ್ತೂರಿನ ಪಡ್ನೂರು ಪ್ರದೇಶದಲ್ಲಿ ಇಬ್ಬರು ಮಕ್ಕಳಿಗೆ ಮನೆಗೆ ಬಂದು ಟ್ಯೂಷನ್ ನೀಡಲು ಅರ್ಹ ಶಿಕ್ಷಕಿಯರ ಬೇಕಾಗಿದ್ದಾರೆ.
10ನೇ ತರಗತಿ CBSE ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಹಾಗೂ 5ನೇ ತರಗತಿ CBSE ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಟ್ಯೂಷನ್ ನೀಡಬೇಕಾಗಿದೆ.
ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಟ್ಯೂಷನ್ ನೀಡಲು ಸಾಧ್ಯವಾಗುವ ಶಿಕ್ಷಕಿಯರಿಗೆ ಆದ್ಯತೆ ನೀಡಲಾಗುವುದು. B.Sc., B.Ed. ಅಥವಾ M.Sc. ವಿದ್ಯಾರ್ಹತೆ ಹೊಂದಿರುವವರು ಸಂಪರ್ಕಿಸಬಹುದಾಗಿದೆ.
ಆಸಕ್ತ ಹಾಗೂ ಅರ್ಹ ಶಿಕ್ಷಕಿಯರು ಹೆಚ್ಚಿನ ಮಾಹಿತಿಗಾಗಿ 9448285151 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುಳ್ಯ
Puttur-ಸುಳ್ಯ ಮತ್ತು ಪುತ್ತೂರಿನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದಿರುವ ‘ವಿದ್ಯಾಮಾತಾ ಅಕಾಡೆಮಿ’ ಸಂಸ್ಥೆಯು ತನ್ನ ವಿವಿಧ ಶಾಖೆ ಮತ್ತು ವಿಭಾಗಗಳಿಗೆ ಅಗತ್ಯವಿರುವ ನೌಕರರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನವನ್ನು ಆಯೋಜಿಸಿದೆ.
ಸಂಸ್ಥೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಶಿಕ್ಷಕಿ ಹಾಗೂ ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತರು ಈ ಅವಕಾಶವನ್ನು ಪಡೆದುಕೊಳ್ಳಬಹುದಾಗಿದೆ.
ಸುಳ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಮಹಿಳಾ ಕಂಪ್ಯೂಟರ್ ಶಿಕ್ಷಕಿಯ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಅಗತ್ಯವಿದೆ. ಅದೇ ರೀತಿ, ಪುತ್ತೂರು ಹಾಗೂ ಅದರ ಸುತ್ತಮುತ್ತಲಿನ ಭಾಗಗಳಲ್ಲಿ ಕಾರ್ಯನಿರ್ವಹಿಸಲು ಬಿಸಿನೆಸ್ ಡೆವಲಪ್ಮೆಂಟ್ ಆಫೀಸರ್ (Business Development Officer) ಹುದ್ದೆಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ತಮ್ಮ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಬಯಸುವ ಹಾಗೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಅಭ್ಯರ್ಥಿಗಳಿಗೆ ಇದು ಸೂಕ್ತ ವೇದಿಕೆಯಾಗಿದೆ.
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇರ ಸಂದರ್ಶನವು ದಿನಾಂಕ 26-10-2026 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಉದ್ಯೋಗ
Puttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
ಪುತ್ತೂರು: ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಉತ್ತಮ ಅವಕಾಶ. ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಪುತ್ತೂರಿನ ಶ್ರೀ ತಿರುಮಲಾ TVS ಸಂಸ್ಥೆಯಲ್ಲಿ ಸೇಲ್ಸ್, ಸರ್ವೀಸ್, ಅಕೌಂಟ್ಸ್, ಫೈನಾನ್ಸ್, ಇನ್ಶೂರೆನ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ.
TVS ಸಂಸ್ಥೆಯ ಪ್ರೀಮಿಯಂ, EV ಹಾಗೂ IC ವಿಭಾಗಗಳಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ‘ಪುತ್ತೂರಿನ ಅತಿದೊಡ್ಡ 2-ವೀಲರ್ ಜಾಬ್ ಓಪನಿಂಗ್’ ಎಂಬ ಘೋಷಣೆಯೊಂದಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
ಸೇಲ್ಸ್ ವಿಭಾಗದಲ್ಲಿ ಹಲವು ಅವಕಾಶ
ಪುತ್ತೂರು ಸೇಲ್ಸ್ ವಿಭಾಗದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಎಕ್ಸ್ಚೇಂಜ್ ಕೋಆರ್ಡಿನೇಟರ್, ಸೇಲ್ಸ್ ಟೆಲಿಕಾಲಿಂಗ್ (CRE), ಅಕೌಂಟ್ಸ್ ಮ್ಯಾನೇಜರ್, ಫೈನಾನ್ಸ್ ಮ್ಯಾನೇಜರ್, ರಿಸೆಪ್ಷನಿಸ್ಟ್, RTO ಎಕ್ಸಿಕ್ಯೂಟಿವ್, ಇನ್ವಾಯ್ಸ್ ಎಕ್ಸಿಕ್ಯೂಟಿವ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಫೈನಾನ್ಸ್ ಕೋಆರ್ಡಿನೇಟರ್ ಹಾಗೂ ಇನ್ಶೂರೆನ್ಸ್ ಎಕ್ಸಿಕ್ಯೂಟಿವ್ ಸೇರಿದಂತೆ ಹಲವು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸರ್ವೀಸ್ ವಿಭಾಗದಲ್ಲೂ ಭರ್ಜರಿ ನೇಮಕಾತಿ
ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಪಾರ್ಟ್ಸ್ ಮ್ಯಾನೇಜರ್, ವಾಷಿಂಗ್ ಸಿಬ್ಬಂದಿ, PDI ಟೆಕ್ನಿಷಿಯನ್, ಸರ್ವೀಸ್ ಮ್ಯಾನೇಜರ್, ನೆಟ್ವರ್ಕ್ ಕೋಆರ್ಡಿನೇಟರ್, ವಾರಂಟಿ ಇನ್ಚಾರ್ಜ್, ಅಕ್ಸಿಡೆಂಟ್ ಸೂಪರ್ವೈಸರ್, CRE ಟೆಲಿಕಾಲಿಂಗ್, CRM, PDI ಸೂಪರ್ವೈಸರ್ ಹಾಗೂ ಪೇಂಟರ್ ಮತ್ತು ಡೆಂಟಿಂಗ್ ಹುದ್ದೆಗಳಿಗೆ ಅವಕಾಶವಿದೆ.

ಬೆಳ್ಳಾರೆಯಲ್ಲೂ ಉದ್ಯೋಗದ ಬಾಗಿಲು ತೆರೆದಿದೆ
ಬೆಳ್ಳಾರೆ ಭಾಗದಲ್ಲಿಯೂ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಸರ್ವೀಸ್ ವಿಭಾಗದಲ್ಲಿ ಅಡ್ವೈಸರ್, ಪಾರ್ಟ್ಸ್ ಪಿಕರ್, ಬಿಲ್ಲಿಂಗ್/ರಿಸೆಪ್ಷನಿಸ್ಟ್ ಎಕ್ಸಿಕ್ಯೂಟಿವ್, ಫ್ಲೋರ್ ಸೂಪರ್ವೈಸರ್, ಟೆಕ್ನಿಷಿಯನ್ ಹಾಗೂ ವಾಷಿಂಗ್ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಸೇಲ್ಸ್ ವಿಭಾಗದಲ್ಲಿ 6 ಸೇಲ್ಸ್ ಎಕ್ಸಿಕ್ಯೂಟಿವ್ ಹಾಗೂ 2 ರಿಸೆಪ್ಷನಿಸ್ಟ್ ಹುದ್ದೆಗಳಿಗೂ ಅವಕಾಶವಿದೆ.
PF, ESI ಜೊತೆಗೆ ₹25 ಸಾವಿರದವರೆಗೆ ಗಳಿಕೆ!
ಆಯ್ಕೆಯಾಗುವ ಅಭ್ಯರ್ಥಿಗಳಿಗೆ PF, ESI, ಸ್ಪಾಟ್ ಇನ್ಸೆಂಟಿವ್, ಮಾಸಿಕ ಹಾಗೂ ತ್ರೈಮಾಸಿಕ ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ಪೆಟ್ರೋಲ್ ವೋಚರ್ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ವರೆಗೆ ಗಳಿಸುವ ಅವಕಾಶ ಇದೆ ಎಂದು ಸಂಸ್ಥೆ ತಿಳಿಸಿದೆ.
ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರು ಮಾತ್ರವಲ್ಲದೆ, ಸೇಲ್ಸ್, ಅಕೌಂಟ್ಸ್, ಫೈನಾನ್ಸ್, ಟೆಲಿಕಾಲಿಂಗ್, ಗ್ರಾಹಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಹುಡುಕುತ್ತಿರುವವರೂ ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ.
ಉದ್ಯೋಗಾವಕಾಶ ಸೀಮಿತವಾಗಿರುವುದರಿಂದ ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಪರ್ಕಿಸಬಹುದು.
📞 ಸಂಪರ್ಕ: +91 82965 79206
📍 ವಿಳಾಸ: ಶ್ರೀ ತಿರುಮಲಾ TVS, ಬೈಪಾಸ್ ಜಂಕ್ಷನ್, ಮಂಜಲ್ಪಡ್ಡು, ಮೇನ್ ರೋಡ್, ಬೋಳ್ವಾರ್ ವೆಸ್ಟ್, ಪುತ್ತೂರು–574201.
ಉದ್ಯೋಗ
Constable recruitment: ಕಾನ್ಸ್ಟೆಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ; 3,991 ಹುದ್ದೆಗಳಿಗೆ 19,396 ಅಭ್ಯರ್ಥಿಗಳು
ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಬೆಂಗಳೂರು, ಸೆ.25: ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ (ಆರ್ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ದೇಹದಾರ್ಢ್ಯ ಪರೀಕ್ಷೆ (ಪಿಎಸ್ಟಿ) ಹಾಗೂ ಸಹಿಷ್ಣುತೆ ಪರೀಕ್ಷೆ (ಇಟಿ) ಸೆ.28ರಿಂದ ಆರಂಭವಾಗಲಿದೆ. ಪೊಲೀಸ್ ನೇಮಕಾತಿ ವಿಭಾಗವು ವಲಯವಾರು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ 19,396 ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಉಳಿಕೆ ಮೂಲ ವೃಂದದ (ಆರ್ಪಿಸಿ) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (ಕೆಕೆ) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮಂಗಳೂರಿನಲ್ಲಿ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (ಕಾರವಾರ), ಚಿಕ್ಕಮಗಳೂರು ಹಾಗೂ ಮಂಗಳೂರು ನಗರ ಘಟಕಗಳ ವ್ಯಾಪ್ತಿಯ 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಈ ಅಭ್ಯರ್ಥಿಗಳಿಗೆ ಸೆ.28ರಿಂದ ಅ.3ರವರೆಗೆ ಮಂಗಳೂರಿನ ಲಾಲ್ಬಾಗ್ನ ಮಂಗಳ ಕ್ರೀಡಾಂಗಣದಲ್ಲಿ ದೈಹಿಕ ಪರೀಕ್ಷೆ ನಡೆಯಲಿದೆ.
ಕರೆಪತ್ರ ಡೌನ್ಲೋಡ್ಗೆ ಸೂಚನೆ
ದೈಹಿಕ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್ಸೈಟ್ನಿಂದ ತಮ್ಮ ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಕರೆಪತ್ರದಲ್ಲಿ ನಮೂದಿಸಿರುವ ದಿನಾಂಕದಂದು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ವಿಭಾಗ ಸೂಚಿಸಿದೆ.
ಕಾನ್ಸ್ಟೆಬಲ್ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ
ಇದೇ ವೇಳೆ, ಕೆಎಸ್ಆರ್ಪಿ, ಕೆಎಸ್ಐಎಸ್ಎಫ್ ಹಾಗೂ ಐಆರ್ಬಿ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಸೆ.20ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕೇವಲ ಐದು ದಿನಗಳಲ್ಲಿ ಕೆಇಎ ಪ್ರಕಟಿಸಿದೆ.
ಪರೀಕ್ಷೆಯ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಸೆ.27ರೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ತಿಳಿಸಿದೆ.
ಉಳಿಕೆ ಮೂಲ ವೃಂದದ 1,13,390 ಹಾಗೂ ಕಲ್ಯಾಣ ಕರ್ನಾಟಕ ವೃಂದದ 33,061 ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಬರೆದಿದ್ದರು. ಪರೀಕ್ಷೆ ನಡೆದ ದಿನವೇ ಎಲ್ಲ ಅಭ್ಯರ್ಥಿಗಳ ಒಎಂಆರ್ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ24 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ20 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ















