Connect with us

ರಾಜಕೀಯ

Kishore Kumar Puttur-ಉಪ್ಪಿನಂಗಡಿ ಗ್ರಾ.ಪಂ. ಭ್ರಷ್ಟಾಚಾರದ ಮಹಾಪೂರ: ಪುತ್ತೂರು ಶಾಸಕ ಅಶೋಕ್ ರೈ ಅವರೇ, ನಿಮ್ಮ ಮೂಗಿನಡಿಯೇ ನಡೆಯುವ ಭ್ರಷ್ಟಾಚಾರದ ಕುರಿತು ಜಾಣ ಮೌನ ಏಕೆ? – ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

Published

on



Ad Widget

Ad Widget

Ad Widget

Ad Widget

ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ ಹಲವು ಗಂಭೀರ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Ad Widget

Ad Widget

Ad Widget

Ad Widget

ಮೈಕ್ ಸಿಕ್ಕಾಗಲೆಲ್ಲಾ ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ನೀತಿಬೋಧನೆ ಮಾಡುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಸ್ವಕ್ಷೇತ್ರದ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರದ ದಂಧೆ ಬೆತ್ತಲಾಗಿದ್ದು, ಶಾಸಕರು ಈ ಬಗ್ಗೆ ತಳೆದಿರುವ ಜಾಣ ಮೌನ ಹಲವು ಗಂಭೀರ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬುಧವಾರ (ಸೆ. 9) ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳ ತಂಡ ಉಪ್ಪಿನಂಗಡಿ ಪಂಚಾಯಿತಿಗೆ ಕಡತ ಪರಿಶೀಲನೆಗೆ ಭೇಟಿ ನೀಡಿದ ವೇಳೆ ಸಾರ್ವಜನಿಕರಿಂದ ವ್ಯಕ್ತವಾದ ಆಕ್ರೋಶ ಹಾಗೂ ದೂರುಗಳ ಸರಮಾಲೆಯನ್ನು ಉಲ್ಲೇಖಿಸಿ ಶಾಸಕರು ಕಟುವಾದ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

Ad Widget

Ad Widget <> Ad Widget

ಮೈಕ್ ಮುಂದೆ ಭಾಷಣ, ಮನೆಯಂಗಳದಲ್ಲೇ ಲೂಟಿ:
“ವೇದಿಕೆಗಳಲ್ಲಿ ನಿಂತು ತಮ್ಮ ಕ್ಷೇತ್ರದಲ್ಲಿ ಯಾರಾದರೂ ಲಂಚ ಕೇಳಿದರೆ ನನ್ನ ಗಮನಕ್ಕೆ ತನ್ನಿ ಎಂದು ವೀರಾವೇಷದಲ್ಲಿ ಗರ್ಜಿಸುವ ಶಾಸಕ ಅಶೋಕ್ ರೈ ಅವರಿಗೆ, ತಮ್ಮದೇ ಕ್ಷೇತ್ರದ ಉಪ್ಪಿನಂಗಡಿ ಪಂಚಾಯಿತಿಯಲ್ಲಿ ನಡೆಯುತ್ತಿರುವ ಈ ಬಹಿರಂಗ ಲೂಟಿ ಕಣ್ಣಿಗೆ ಕಾಣುತ್ತಿಲ್ಲವೇ? ಭ್ರಷ್ಟಾಚಾರದ ವಿರುದ್ಧದ ಹೋರಾಟ ಕೇವಲ ಭಾಷಣಕ್ಕೆ ಸೀಮಿತವಾಗಿರಬಾರದು; ಅಧಿಕಾರದ ಅಂಗಳದಲ್ಲೂ ಇರಬೇಕು. ಮನೆಯ ಅಂಗಳದಲ್ಲೇ ಭ್ರಷ್ಟಾಚಾರದ ಹೊಳೆ ಹರಿಯುತ್ತಿರುವಾಗ ಶಾಸಕರು ಕಣ್ಮುಚ್ಚಿ ಕುಳಿತಿರುವುದು, ಈ ಅಕ್ರಮಗಳಲ್ಲಿ ಅವರಿಗೂ ಪಾಲಿದೆಯೇ ಎಂಬ ಸಾರ್ವಜನಿಕರ ಸಂಶಯಕ್ಕೆ ಪುಷ್ಟಿ ನೀಡುತ್ತಿದೆ. ಇತರರ ಮೇಲೆ ಬೆರಳು ತೋರಿಸುವ ಮುನ್ನ ತಮ್ಮ ಕ್ಷೇತ್ರದ ಆಡಳಿತ ವ್ಯವಸ್ಥೆಯ ಬಗ್ಗೆ ಶಾಸಕರು ಆತ್ಮಾವಲೋಕನ ಮಾಡಿಕೊಳ್ಳಲಿ” ಎಂದು ಕಿಶೋರ್ ಕುಮಾರ್ ಪುತ್ತೂರು ನೇರವಾಗಿ ಚಾಟಿ ಬೀಸಿದ್ದಾರೆ.



Ad Widget

ತಾ.ಪಂ. ಇಒಗೆ ಎರಡು ತಿಂಗಳ ಹಿಂದೆಯೇ ತಿಳಿಸಿದ್ದರೂ ನಿರ್ಲಕ್ಷ್ಯ:
“ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳು, ಲಂಚಗುಳಿತನ ಹಾಗೂ ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳದ ಬಗ್ಗೆ ನಾನು ಖುದ್ದಾಗಿ ಎರಡು ತಿಂಗಳ ಹಿಂದೆಯೇ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ (EO) ದೂರವಾಣಿ ಕರೆ ಮಾಡಿ ಸಂಪೂರ್ಣ ವಿವರ ನೀಡಿದ್ದೆ. ಸಂಬಂಧಪಟ್ಟ ಪಿಡಿಒ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು, ಆ ಜಾಗಕ್ಕೆ ದಕ್ಷ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದ್ದೆ. ಆದರೆ, ತಾಲೂಕು ಪಂಚಾಯತ್ ಇಒ ಅವರಿಗೆ ಎಲ್ಲವೂ ಗೊತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಸಂಪೂರ್ಣ ಮೌನ ವಹಿಸಿದ್ದಾರೆ. ಶಾಸಕರ ಜತೆಗೆ ತಾಲೂಕು ಪಂಚಾಯತ್ ಇಒ ಅವರಿಗೂ ಈ ಲೂಟಿಯ ಕಮಿಷನ್ ಕಟ್ಟು ಹೋಗ್ತಾ ಇದೆಯಾ? ಎಂಬ ಬಲವಾದ ಸಂಶಯ ಸಾರ್ವಜನಿಕರಲ್ಲಿ ಮೂಡಿದೆ,” ಎಂದು ಶಾಸಕರು ಕಿಡಿಕಾರಿದ್ದಾರೆ.

Ad Widget

Ad Widget

ಅಂಗವಿಕಲರಿಂದ ₹1 ಲಕ್ಷ ಲಂಚ, ದಲ್ಲಾಳಿಗಳ ರಾಜ್ ಭಂಡಾರ:
“ಉಪ್ಪಿನಂಗಡಿ ಪಂಚಾಯಿತಿಯಲ್ಲಿ ಲಂಚ ನೀಡದೆ ಬಡವರ ಯಾವ ಕೆಲಸಗಳೂ ನಡೆಯುತ್ತಿಲ್ಲ ಎಂಬುದು ಲೋಕಾಯುಕ್ತರ ಪರಿಶೀಲನೆಯಲ್ಲಿ ಸಾಬೀತಾಗಿದೆ. ಮನೆಗೆ ಡೋರ್ ನಂಬರ್ ನೀಡಲು ಸ್ವತಃ ಅಂಗವಿಕಲ ವ್ಯಕ್ತಿಯೊಬ್ಬರಿಂದ ಮಧ್ಯವರ್ತಿ ಮೂಲಕ ₹1 ಲಕ್ಷ ರೂಪಾಯಿ ಲಂಚ ವಸೂಲಿ ಮಾಡಲಾಗಿದೆ ಎಂಬ ದೂರು ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದು. ಪಂಚಾಯಿತಿ ಕಚೇರಿಯಲ್ಲಿ ವ್ಯಾಪಾರ ಪರವಾನಗಿ ನವೀಕರಣ, ಮನೆ ತೆರಿಗೆ, ಕಡತ ವಿಲೇವಾರಿ ಪ್ರತಿಯೊಂದಕ್ಕೂ ದಲ್ಲಾಳಿಗಳ ಮೂಲಕವೇ ವ್ಯವಹಾರ ನಡೆಯುತ್ತಿದೆ. ಅಧಿಕಾರಿಗಳ ಗಮನಕ್ಕೆ ಬಾರದೆ ಈ ಮಧ್ಯವರ್ತಿಗಳ ದಂಧೆ ನಡೆಯಲು ಸಾಧ್ಯವೇ? ಜನಸಾಮಾನ್ಯರ ಹಕ್ಕಿನ ಕಚೇರಿ ಇಂದು ಬ್ರೋಕರ್‌ಗಳ ಅಡ್ಡೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರ್ಗಾವಣೆಯಾದರೂ ಪ್ರಭಾರ ನೀಡಿದ ಹಿಂದಿರುವ ಶಾಸಕರ ಕೃಪಾಕಟಾಕ್ಷ:
“ಸುಮಾರು 6-7 ವರ್ಷಗಳಿಗೂ ಹೆಚ್ಚು ಕಾಲ ಇದೇ ಪಂಚಾಯಿತಿಯಲ್ಲಿ ಠಿಕಾಣಿ ಹೂಡಿದ್ದ ಪಿಡಿಒ ವಿರುದ್ಧ ಇಷ್ಟೆಲ್ಲಾ ಸಾರ್ವಜನಿಕ ಆರೋಪಗಳಿದ್ದರೂ, ಅವರನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಮತ್ತೆ ಉಪ್ಪಿನಂಗಡಿಗೇ ಪ್ರಭಾರ ಅಧಿಕಾರಿಯಾಗಿ ಉಳಿಸಿಕೊಂಡಿರುವುದು ಯಾರ ಹಿತಾಸಕ್ತಿಗಾಗಿ? ತಾ.ಪಂ. ಇಒ ಬೆಂಬಲ ಹಾಗೂ ಶಾಸಕರ ನೇರ ಆಶೀರ್ವಾದವಿಲ್ಲದೆ ಈ ಅಕ್ರಮ ಆದೇಶ ಸಾಧ್ಯವೇ? ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ, ಭ್ರಷ್ಟ ಅಧಿಕಾರಿಯನ್ನು ಅದೇ ಪಂಚಾಯಿತಿಯಲ್ಲಿ ಕೂರಿಸಲು ಆಡಳಿತಾತ್ಮಕವಾಗಿ ರಕ್ಷಣೆ ನೀಡುತ್ತಿರುವ ಹಿಂದಿನ ರಹಸ್ಯವೇನು?” ಎಂದು ಅವರು ಪ್ರಶ್ನಿಸಿದ್ದಾರೆ.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading