ಸ್ಥಳೀಯ
Madavu-ಅಭಿನವ ಕೇಸರಿ ಮಾಡಾವು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.13ರಂದು ‘ಮಾಡಾವು ಮೊಸರು ಕುಡಿಕೆ’ – ವಿವಿಧ ಕ್ರೀಡಾಕೂಟ
ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ಸೆ.13 ರಂದು ನಡೆಯಲಿದೆ. ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು ಬೆಳಿಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಮಾಡಾವು ಜ್ಯೋತಿ ಚಿಕಿತ್ಸಾಲಯದ ಡಾ| ರಾಮಚಂದ್ರ ಭಟ್ ದೀಪ ಪ್ರಜ್ವಲಿಸಿ ಉದ್ಘಾಟಿಸುವರು.
ಮಾಡಾವು : ಅಭಿನವ ಕೇಸರಿ ಮಾಡಾವು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಕ್ರೀಡಾಕೂಟ ಮಾಡಾವು ಕಟ್ಟೆಯ ಅಯ್ಯಪ್ಪ ಭಜನಾ ಮಂದಿರದ ಬಳಿ ಸೆ.13 ರಂದು ನಡೆಯಲಿದೆ.
ಬೆಳಿಗ್ಗೆ 8.30ರಿಂದ ಕ್ರೀಡಾಕೂಟ ಆರಂಭವಾಗಲಿದ್ದು ಬೆಳಿಗ್ಗೆ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ ಮಾಡಾವು ಜ್ಯೋತಿ ಚಿಕಿತ್ಸಾಲಯದ ಡಾ| ರಾಮಚಂದ್ರ ಭಟ್ ದೀಪ ಪ್ರಜ್ವಲಿಸಿ ಉದ್ಘಾಟಿಸುವರು.
ಅತಿಥಿಗಳಾಗಿ ಮಾಡಾವು ಅಯ್ಯಪ್ಪ ಭಜನಾ ಮಂದಿರ ಅಧ್ಯಕ್ಷ ರವೀಂದ್ರ ರೈ ನೆಲ್ಯಾಜೆ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಕೆಯ್ಯೂರು ಇದರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಕೆ ಜಯರಾಮ ರೈ, ಕೆಯ್ಯೂರು ಹಾಲು ಉತ್ಪಾದಕರ ಸಂಘದ ನಿವೃತ್ತ ಕಾರ್ಯದರ್ಶಿ ಚಂದ್ರಹಾಸ ರೈ ಬೊಳಿಕ್ಕಳ ಮಠ, ಪಿಂಚಣಿ ಮತ್ತು ಸಣ್ಣ ಉಳಿತಾಯ ಇಲಾಖೆ ಮಂಗಳೂರು ಇದರ ಸಹಾಯಕ ನಿರ್ದೇಶಕರು ಪ್ರಸನ್ನ ಎಂ.ಪಿ, ಅಯ್ಯಪ್ಪ ಭಕ್ತವೃಂದ ಮಾಡಾವು ಇದರ ಅಧ್ಯಕ್ಷರಾದ ಸುಬ್ರಾಯ ಗೌಡ ಮಾಡಾವು, ದ. ಕ. ಜಿ. ಪಂ. ಕಿರಿಯ ಪ್ರಾ. ಶಾಲೆ ಮಾಲೆತ್ತೋಡಿ ಮುಖ್ಯಗುರುಗಳಾದ ತಿಮ್ಮಪ್ಪ ಕೊಡ್ಲಾಡಿ, ಶ್ರೀ ಹೊಸಮ್ಮ ದೈವಸ್ಥಾನ ನಿತ್ಯಕರ್ಮಿ ಮೋನಪ್ಪ ಪೂಜಾರಿ, ಉಳ್ಳಾಕುಲು ಫ್ರೆಂಡ್ಸ್ ಕ್ಲಬ್ ಪಾಲ್ತಾಡಿ ಅಧ್ಯಕ್ಷ ವೆಂಕಟರಮಣ ಗೌಡ, ಶ್ರೀ ಕೊರಗಜ್ಜ ದೈವಸ್ಥಾನ ಅಸಂತಡ್ಕ ನಿತ್ಯಕರ್ಮಿ ಗಿರೀಶ್, ಶ್ರೀಕ್ಷೇತ್ರ ಧ.ಗ್ರಾ. ಯೋ. ಸೇವಾ ಪ್ರತಿನಿಧಿ ಲತಾ ಕೈತಡ್ಕ ಉಪಸ್ಥಿತರಿರುವರು.
ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಭಿನವ ಕೇಸರಿ ಮಾಡಾವು ಇದರ ಗೌರವಾಧ್ಯಕ್ಷರಾದ ಸುಬ್ರಹ್ಮಣ್ಯ ರೈ ಬೊಳಿಕ್ಕಳ ಶೇಡಿ, ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ಹಿಂದೂ ಮುಖಂಡ ಪುತ್ತೂರು ಅರುಣ್ ಕುಮಾರ್ ಪುತ್ತಿಲ, ನಿವೃತ್ತ ಸೇನಾಧಿಕಾರಿ ರಮೇಶ್ ರೈ ಬೋಳೋಡಿ, ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕ ಅಧ್ಯಕ್ಷ ಸಹಜ್ ರೈ ಬಳಜ್ಜ, ಮಾತೃಶ್ರೀ ಅರ್ಥ್ ಮೂವರ್ಸ್ ಮಾಲಕ ಮೋಹನ್ ದಾಸ್ ರೈ ಕುಂಬ್ರ, ದ. ಕ ಜಿಲ್ಲೆ ಬಿಜೆಪಿ ಉಪಾಧ್ಯಕ್ಷ ಪ್ರಸನ್ನಕುಮಾರ್ ಮಾರ್ತಾ, ವಕೀಲರಾದ ಕೃಷ್ಣಪ್ರಸಾದ್ ರೈ ಕಣಿಯಾರು, ಇಂಡಿಯನ್ ರೈಲ್ವೆ ಮಂಗಳೂರು ಅಶ್ವತ್ ಕೆ ಎಸ್, ಉಪಸ್ಥಿತರಿರುವರು.
ಅಭಿನವ ಯಕ್ಷಕಲಾ ಕೇಂದ್ರ ಮಾಡಾವು ಇದರ ವಿದ್ಯಾರ್ಥಿಗಳಿಂದ, ಯಕ್ಷಗಾನ ಗುರು ವಾಸುದೇವ ರೈ ಬೆಳ್ಳಾರೆ ಇವರ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ ಚಂದ್ರಹಾಸ ಸಂಜೆ ಆರರಿಂದ ಏಳು ಮೂವತ್ತರ ತನಕ ನಡೆಯಲಿದೆ, ರಾತ್ರಿ 9:30 ರಿಂದ 10:30ರ ತನಕ ಭಾರ್ಗವ ವಿಜಯ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಆರು ವರ್ಷದ ಒಳಗಿನ ಮಕ್ಕಳಿಗೆ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ.
ಕ್ರೀಡಾಕೂಟ ಪಂದ್ಯಾಟಗಳು ಕೆಯ್ಯರು, ಪಾಲ್ತಾಡಿ, ಕೆದಂಬಾಡಿ, ಕೊಳಿಗೆ, ಮತ್ತು ಅರಿಯಡ್ಕ ಗ್ರಾಮಸ್ಥರಿಗೆ ಸೀಮಿತವಾಗಿದ್ದು, ಪುರುಷರ ವಿಭಾಗದಲ್ಲಿ ಮಡಕೆ ಒಡೆಯುವುದು, ಜಾರುಕಾಂಬ ನಡಿಗೆ, ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರ ವಿಭಾಗದಲ್ಲಿ ಮಡಕೆ ಒಡೆಯುವುದು, ಭಕ್ತಿ ಗೀತೆ, ಹಗ್ಗ ಜಗ್ಗಾಟ, ಜಾರುಕಂಬ ನಡಿಗೆ, ಹಾಗೂ ಮಕ್ಕಳ ವಿಭಾಗದಲ್ಲಿ ಭಕ್ತಿ ಗೀತೆ, ಸಂಗೀತ ಕುರ್ಚಿ, ಚಿತ್ರಕಲೆ ಪೆನ್ಸಿಲ್ ಸ್ಕೆಚ್ ನಡೆಯಲಿದೆ. ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ ಎಂದು ಅಭಿನವ ಕೇಸರಿ ಮಾಡಾವು ಅಧ್ಯಕ್ಷ ದೀಕ್ಷಿತ್ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಬಿಗ್ ನ್ಯೂಸ್5 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಅಂತರ ರಾಜ್ಯ22 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು5 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized4 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು















