Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ಹಿಂದಿ ದಿವಸ’ ಆಚರಣೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ಹಿಂದಿ ಸಂಘ ಇದರ ಆಶ್ರಯದಲ್ಲಿ ಸೆ 11 ರಂದು ಕಾಲೇಜು ಸಭಾಂಗಣದಲ್ಲಿ ‘ಹಿಂದಿ ದಿವಸ – 2026’ ದಿನಾಚರಣೆಯನ್ನು ನಡೆಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪ. ಪೂ ಕಾಲೇಜು ಹಾಗೂ ಹಿಂದಿ ಸಂಘ ಇದರ ಆಶ್ರಯದಲ್ಲಿ ಸೆ 11 ರಂದು ಕಾಲೇಜು ಸಭಾಂಗಣದಲ್ಲಿ ‘ಹಿಂದಿ ದಿವಸ – 2026’ ದಿನಾಚರಣೆಯನ್ನು ನಡೆಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ರಾಮಕೃಷ್ಣ ಕೆ. ಎಸ್. ಮಾತನಾಡಿ, ಹಿಂದಿ ಭಾಷೆಯ ಮಹತ್ವವನ್ನು ಹೇಳುತ್ತಾ,    
ಭಾಷೆಗಳು ಸಂಹವನದ ಮಾಧ್ಯಮವಾಗಿದ್ದು, ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಎಲ್ಲಾ ಭಾಷೆಗಳೂ ಅತೀ ಅನಿವಾರ್ಯವಾಗಿದ್ದು, ಹಲವಾರು ಅವಕಾಶಗಳಿಗೆ ದಾರಿದೀಪವಾಗಿವೆ.

Ad Widget

Ad Widget <> Ad Widget

ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳು ಒಂದೇ ರಥದ ಎರಡು ಚಕ್ರಗಳಂತಿದ್ದು, ಈ ಭಾಷೆಗಳನ್ನು ಕಲಿಯುವುದರಿಂದ ಭಾಷೆಗಳ ಜೊತೆಗೆ ನಮ್ಮ ಬೆಳವಣಿಗೆ ಕೂಡ ಸಾದ್ಯವಿದೆ. ಬಾಷಾ ಜ್ಞಾನವು ಮಾನವನ ಚಿಂತನ ಶಕ್ತಿಯನ್ನು ಹೆಚ್ಚಿಸುತ್ತದೆ. ವಿವಿಧ ಸಂಸ್ಕೃತಿಯ ಪರಿಚಯವನ್ನು ಮಾಡಿಕೊಡುತ್ತದೆ ಎಂದು  ಹೇಳಿದರು.



Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ನಾವು ಕಲಿಯುವ ಪ್ರತಿಯೊಂದು ಭಾಷೆಯೂ ನಮಗೆ ಹೊಸ ಸಂಸ್ಕೃತಿ ಮತ್ತು ಹೊಸ ಸಮಾಜವನ್ನು ಪರಿಚಯಿಸುತ್ತದೆ. ಇದರ ಜೊತೆಗೆ ನಮ್ಮ ಜ್ಞಾನವೂ ವೃದ್ಧಿಯಾಗುತ್ತದೆ. ಭಾರತೀಯ ಭಾಷೆಗಳು  ವ್ಯಾಕರಣ ಪೂರ್ವಕವಾಗಿ ಅತ್ಯಂತ ಶ್ರೀಮಂತವಾಗಿದ್ದು, ಹೊಸ ಹೊಸ ಭಾಷೆಗಳು ಜೀವನದ ವಿವಿಧ ಮಜಲುಗಳಲ್ಲಿ ಉಪಯೋಗಕ್ಕೆ ಬರುತ್ತವೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಹಿಂದಿ ಸಂಘದ ನಿರ್ದೇಶಕರಾದ ಡಾ. ಬಿ. ಲತಾ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಮತ್ತು  ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಹಿಂದಿ ದಿನಾಚರಣೆಯ ಪ್ರಯುಕ್ತ ನಡೆಸಿದ  ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಅಭಿನಂದಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಫಾತಿಮಾ ರಿಝ ಸ್ವಾಗತಿಸಿ, ಜಸ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ವೈಷ್ಣವ್ ಕೆ. ಎಸ್ ವಂದಿಸಿ, ಸಮರ್ಥ್ ಎಂ. ಆರ್ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Bappalige-ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಾಳೆ (ಅ.16) ಸಾರ್ವಜನಿಕ ಅಕ್ಷರಾಭ್ಯಾಸ ಕಾರ್ಯಕ್ರಮ

Published

on



Ad Widget

Ad Widget

Ad Widget

Ad Widget

ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget

Ad Widget

ಪುತ್ತೂರು: ನವರಾತ್ರಿಯ ಪ್ರಯುಕ್ತ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅ.16ರಂದು ಶಾರದಾ ಪೂಜೆ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

Ad Widget

Ad Widget

Ad Widget alt="Ad Widget"/>

Ad Widget

ಆ ಪ್ರಯುಕ್ತ ಸಾರ್ವಜನಿಕರಿಗೆ ತಮ್ಮ‌ ಮಕ್ಕಳ ಅಕ್ಷರಾಭ್ಯಾಸಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

Ad Widget

Ad Widget <> Ad Widget

ಅಕ್ಷರಾಭ್ಯಾಸ ಕಾರ್ಯಕ್ರಮವು ಬಪ್ಪಳಿಗೆಯಲ್ಲಿ, ಶೃಂಗೇರಿ‌ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಉದ್ಘಾಟಿಸಿದ ಶ್ರೀ ಶಂಕರ ಸಭಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.



Ad Widget

ಆಸಕ್ತರು ಪಾರಂಪರಿಕ ಉಡುಗೆಗಳೊಂದಿಗೆ ತಮ್ಮ ಮಕ್ಕಳನ್ನು‌ ಕರೆತಂದು ಅಕ್ಷರಾಭ್ಯಾಸ ನಡೆಸಬಹುದಾಗಿ ಪ್ರಕಟಣೆ ತಿಳಿಸಿದೆ.

Continue Reading

ಶಿಕ್ಷಣ

Sanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ ಸಾನಿಧ್ಯ ಎಸ್. ರಾವ್‌ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹರಿಯಾಣದ ಕುರುಕ್ಷೇತ್ರದಲ್ಲಿ ಅಕ್ಟೋಬರ್ 1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನ 7ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸಾನಿಧ್ಯ ಎಸ್. ರಾವ್ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ರಾಷ್ಟ್ರಮಟ್ಟದಲ್ಲಿ ಪ್ರತಿಸ್ಪರ್ಧಿಗಳಿಗೆ ತೀವ್ರ ಪೈಪೋಟಿ ನೀಡಿದ ಸಾನಿಧ್ಯ, ತಮ್ಮ ಚೆಸ್ ಕೌಶಲ್ಯ ಮತ್ತು ಅತ್ಯುತ್ತಮ ಪ್ರದರ್ಶನದ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಯೊಂದಿಗೆ ಅವರು ಮುಂದಿನ ಹಂತದ ಎಸ್‌ಜಿಎಫ್‌ಐ (School Games Federation of India) ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

Ad Widget

Ad Widget <> Ad Widget

ಸುದೇಶ್ ಮತ್ತು ಶ್ರುತಿ ದಂಪತಿಯ ಪುತ್ರಿಯಾದ ಸಾನಿಧ್ಯ, ನಿರಂತರ ಪರಿಶ್ರಮ, ಏಕಾಗ್ರತೆ ಹಾಗೂ ಕ್ರೀಡಾ ಕೌಶಲ್ಯದ ಮೂಲಕ ಈ ಮಹತ್ವದ ಯಶಸ್ಸು ಸಾಧಿಸಿದ್ದಾರೆ.



Ad Widget

ವಿದ್ಯಾರ್ಥಿನಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಮುಂದಿನ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್‌ಫೆಸ್ಟ್ 2K26’

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು, ಅ. 7: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ದರ್ಬೆ, ಪುತ್ತೂರಿನ ವಾಣಿಜ್ಯ ವಿಭಾಗದ ವತಿಯಿಂದ ರಾಜ್ಯಮಟ್ಟದ ಅಂತರ್ ಕಾಲೇಜು ವಾಣಿಜ್ಯ ಮೇಳ ‘ಬಿಜ್‌ಫೆಸ್ಟ್ 2K26’ ಅನ್ನು ಅಕ್ಟೋಬರ್ 7ರಂದು ಕಾಲೇಜಿನ ಎಸ್‌ಜೆಎಂ ಸಭಾಂಗಣದಲ್ಲಿ ಆಯೋಜಿಸಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಪಿಯು ಹಾಗೂ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ, ವ್ಯವಹಾರಿಕ ಸೃಜನಶೀಲತೆ, ಸಂವಹನ ಕೌಶಲ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಿದ ಮೇಳದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಅಧ್ಯಕ್ಷತೆ ವಹಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಫಿನ್‌ಸ್ಟ್ರಾಟ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ನ ಸೀನಿಯರ್ ಅಸೋಸಿಯೇಟ್ ಜೋಸ್ವಿತಾ ಲೊರೇನ್ ಲೋಬೊ ಉದ್ಘಾಟಕರಾಗಿ ಭಾಗವಹಿಸಿದರು.



Ad Widget

ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಕಲಿಕೆ, ನವೀನ ಚಿಂತನೆ, ಉದ್ಯಮಶೀಲತೆ ಹಾಗೂ ಕೌಶಲಾಭಿವೃದ್ಧಿಯನ್ನು ಬೆಳೆಸುವ ಅಗತ್ಯವನ್ನು ಗಣ್ಯರು ಒತ್ತಿಹೇಳಿದರು. ಸಾಂಪ್ರದಾಯಿಕ ತರಗತಿ ಕಲಿಕೆಯನ್ನು ಮೀರಿ, ನೈಜ ಜಗತ್ತಿನ ವ್ಯವಹಾರಿಕ ಸನ್ನಿವೇಶಗಳಲ್ಲಿ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅನ್ವಯಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವುದು ಬಿಜ್‌ಫೆಸ್ಟ್‌ನ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಲಾಯಿತು.

Ad Widget

Ad Widget

ಮೇಳದಲ್ಲಿ ವಾಣಿಜ್ಯ ಹಾಗೂ ವ್ಯವಹಾರಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ಸಾಮರ್ಥ್ಯ, ಉದ್ಯಮಶೀಲ ಚಿಂತನೆ, ಸೃಜನಶೀಲತೆ, ಹಣಕಾಸು ಅರಿವು, ಸಂವಹನ ಕೌಶಲ, ನಾಯಕತ್ವ, ತಂಡಭಾವನೆ ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದವು. ವಿವಿಧ ಶಿಕ್ಷಣ ಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು, ಆರೋಗ್ಯಕರ ಸ್ಪರ್ಧೆ ಹಾಗೂ ಸಹಕಾರದ ವಾತಾವರಣ ನಿರ್ಮಿಸಿದರು.

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪಿಯು ವಿಭಾಗದಲ್ಲಿ ಸಂತ ಫಿಲೋಮಿನಾ ಪಿಯು ಕಾಲೇಜು, ಪುತ್ತೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ಪಡೆದುಕೊಂಡಿತು. ಅಂಬಿಕಾ ಪಡವಿ ಪೂರ್ವ ವಿದ್ಯಾಲಯ, ಪುತ್ತೂರು ಸಮಗ್ರ ರನ್ನರ್‌ಅಪ್ ಸ್ಥಾನ ಗಳಿಸಿತು.

ಪದವಿ ವಿಭಾಗದಲ್ಲಿ ಸಂತ ಅಲೋಶಿಯಸ್ ಕಾಲೇಜು, ಮಂಗಳೂರು ಸಮಗ್ರ ವಿಜೇತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರೆ, ತ್ರಿಶಾ ಕಾಲೇಜು, ಮಂಗಳೂರು ಸಮಗ್ರ ರನ್ನರ್‌ಅಪ್ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತೋರಿದ ಸತತ ಸಾಧನೆ, ಸಿದ್ಧತೆ, ತಂಡಕಾರ್ಯ ಹಾಗೂ ಪ್ರತಿಭೆಗೆ ಈ ಫಲಿತಾಂಶ ಸಾಕ್ಷಿಯಾಯಿತು.

ವಿಜೇತರಿಗೆ ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ವಹಿಸಿದ್ದರು. ಪುತ್ತೂರಿನ ಸಿಗ್ನೇಚರ್ ಮೆನ್ಸ್ ವೆಡ್ಡಿಂಗ್ ಸ್ಟುಡಿಯೊದ ಮಾಲೀಕ ಇಶಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವಿವಿಧ ಸ್ಪರ್ಧೆಗಳ ವಿಜೇತರು ಹಾಗೂ ರನ್ನರ್‌ಅಪ್‌ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೇಳದಲ್ಲಿ ಭಾಗವಹಿಸಿದ ಎಲ್ಲ ಶಿಕ್ಷಣ ಸಂಸ್ಥೆಗಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading