ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ‘ಅನ್ಲಾಕಿಂಗ್ ಆಪರ್ಚುನಿಟಿಸ್’ ವಿಶೇಷ ಕಾರ್ಯಾಗಾರ
ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ ನಡೆದ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್, ವಾಣಿಜ್ಯ ವಿಭಾಗ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಆಯೋಜಿಸಿದ ‘ಅನ್ಲಾಕಿಂಗ್ ಆಪರ್ಚುನಿಟಿಸ್’ ಎಂಬ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಂಶೋಧನಾ ಮಾರ್ಗದರ್ಶಕ ಡಾ.ಪಿ.ಎನ್. ಉದಯಚಂದ್ರ ಮಾತನಾಡಿದರು.
ಪುತ್ತೂರು, ಸೆ.10: ಪದವಿ ಶಿಕ್ಷಣವು ಒಂದು ಮೆಟ್ಟಿಲು ಮಾತ್ರ. ಪದವಿ ನಂತರದ ಉನ್ನತ ವ್ಯಾಸಾಂಗ ಮತ್ತು ಸರಿಯಾದ ವೃತ್ತಿ ಆಯ್ಕೆಯು ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಬ್ಯಾಂಕಿಂAಗ್, ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಅಥವಾ ಪದವಿಯ ನಂತರ ಸಿಎ, ಸಿಎಸ್ ನಂತಹ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಅದಕ್ಕಾಗಿ ಹೆಚ್ಚಿನ ಸಂಶೋಧನಾ ಮನೋಭಾವ ಬೆಳೆಸಿಕೊಳ್ಳುವುದು ಮತ್ತು ಅವಕಾಶಗಳ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಸರಿಯಾದ ಸಂಸ್ಥೆಯ ಆಯ್ಕೆ ಮತ್ತು ನಿರಂತರ ಪ್ರಯತ್ನದಿಂದ ಮಾತ್ರ ಉನ್ನತ ವ್ಯಾಸಾಂಗದಲ್ಲಿ ಯಶಸ್ಸು ಸಾಧ್ಯ ಎಂದು ಉಜಿರೆಯ ಎಸ್.ಡಿ.ಎಮ್ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾನಿಲಯ ಮಂಗಳೂರು ಇದರ ಸಂಶೋಧನಾ ಮಾರ್ಗದರ್ಶಕ ಡಾ.ಪಿ.ಎನ್. ಉದಯಚಂದ್ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಇವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ ನಡೆದ ಟ್ರೈನಿಂಗ್ ಆ್ಯಂಡ್ ಪ್ಲೇಸ್ಮೆಂಟ್ ಸೆಲ್, ವಾಣಿಜ್ಯ ವಿಭಾಗ ಮತ್ತು ವ್ಯವಹಾರ ಆಡಳಿತ ವಿಭಾಗ ಹಾಗೂ ಐಕ್ಯೂಎಸಿ ಇದರ ಸಹಯೋಗದಲ್ಲಿ ಆಯೋಜಿಸಿದ ‘ಅನ್ಲಾಕಿಂಗ್ ಆಪರ್ಚುನಿಟಿಸ್’ ಎಂಬ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್.ಎಸ್ ಮಾತನಾಡಿ, ಬಿ.ಕಾಂ ಮತ್ತು ಬಿಬಿಎ ಎನ್ನುವುದು ಕೆಲವೇ ಉದ್ಯೋಗಗಳಿಗೆ ಸೀಮಿತವಾಗಿರದೆ ಅದರಾಚೆಗೂ ಹಲವಾರು ಸೇವೆಗಳಿಗೆ ಮತ್ತು ಉದ್ಯೋಗಳಿಗೆ ಅವಕಾಶಗಳಿವೆ. ಅವಕಾಶಗಳಿಗೆ ಕೊರತೆಯಿಲ್ಲ, ಸರಿಯಾದ ದಾರಿಯನ್ನು ಆಯ್ಕೆ ಮಾಡಿಕೊಂಡರೆ ಮುಂದೆ ಯಶಸ್ಸನ್ನು ಕಾಣಬಹುದು ಎಂದು ಹೇಳಿದರು.
ವೇದಿಕೆಯಲ್ಲಿ ವಿವೇಕಾನಂದ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಮತ್ತು ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ರೇಖಾ ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ವಿವೇಕಾನಂದ ಕಾಲೇಜಿನ ತೃತೀಯ ಬಿಬಿಎ ವಿಭಾಗದ ವಿದ್ಯಾರ್ಥಿನಿ ಧನಲಕ್ಷ್ಮಿ ಸ್ವಾಗತಿಸಿ, ಬಿ.ಕಾಂ ವಿಭಾಗದ ವಿದ್ಯಾರ್ಥಿನಿ ಚೈತ್ರ ಪೂಜಾರಿ ವಂದಿಸಿ, ಬಿಬಿಎ ವಿಭಾಗದ ವಿಧ್ಯಾರ್ಥಿನಿ ದೀಪ್ತಿ ಪ್ರಭು ನಿರೂಪಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
ಪುತ್ತೂರು17 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್20 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ23 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್19 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ22 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ18 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















