ದಕ್ಷಿಣ ಕನ್ನಡ
Leopard spotted in Nekkilady:ಉಪ್ಪಿನಂಗಡಿ : ನೆಕ್ಕಿಲಾಡಿಯಲ್ಲಿ ಚಿರತೆ ಪ್ರತ್ಯಕ್ಷ; ನಾಯಿಯನ್ನು ಬೇಟೆಯಾಡಿ ಕಾಡಿನತ್ತ ಎಳೆದೊಯ್ದಿತು !
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ನೆಕ್ಕಿಲಾಡಿ ಗ್ರಾಮದ ದರ್ಬೆ ಪರಿಸರದಲ್ಲಿ ಶನಿವಾರ (ಸೆ.13) ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ನಾಯಿಯೊಂದನ್ನು ಬೇಟೆಯಾಡಿ ಕಚ್ಚಿಕೊಂಡು ಕಾಡಿನತ್ತ ತೆರಳಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ದರ್ಬೆ ನಿವಾಸಿಯೊಬ್ಬರು ಚಿರತೆ ನಾಯಿಯನ್ನು ಕಚ್ಚಿಕೊಂಡು ಎಳೆದೊಯ್ಯುತ್ತಿರುವುದನ್ನು ನೋಡಿದ್ದಾರೆ ಎನ್ನಲಾಗಿದೆ. ಈ ವೇಳೆ ನಾಲೈದು ನಾಯಿಗಳು ಚಿರತೆಯನ್ನು ಬೆನ್ನಟ್ಟುತ್ತಾ ಬೊಗಳುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನಾಯಿಯನ್ನು ಕಚ್ಚಿಕೊಂಡಿದ್ದ ಚಿರತೆ ಚೀಮುಳ್ಳು, ಅನೌದಗುಂಡಿ ಭಾಗದತ್ತ ತೆರಳಿದೆ ಎನ್ನಲಾಗಿದೆ.
ಈ ಘಟನೆಗೂ ಮುನ್ನವೇ ನೆಕ್ಕಿಲಾಡಿ ಪರಿಸರದಲ್ಲಿ ಚಿರತೆ ಓಡಾಟದ ಬಗ್ಗೆ ಸ್ಥಳೀಯರಲ್ಲಿ ಅನುಮಾನವಿತ್ತು ಎನ್ನಲಾಗಿದೆ. ಈ ಪರಿಸರದಲ್ಲಿ ಕಳೆದೊಂದು ವಾರದಿಂದ ಪ್ರಾಣಿಯೊಂದು ಓಡಾಡುತ್ತಿರುವ ಕುರುಹುಗಳು ಹಾಗೂ ಸಾಂದರ್ಭಿಕ ಸಾಕ್ಷ್ಯಗಳು ಸ್ಥಳೀಯವಾಗಿ ದೊರೆತಿದ್ದವು.
34ನೇ ನೆಕ್ಕಿಲಾಡಿ ಗ್ರಾಮದ ಸೀಮಾ ಕಾಂಪೌಂಡ್ ಪರಿಸರದ ಹಮೀದ್ ಪರನೀರು ಅವರ ಮನೆಯ ಕಾರು ಪಾರ್ಕಿಂಗ್ ಸ್ಥಳದ ಬಳಿ ವಾರದ ಹಿಂದೆ ಯಾವುದೋ ಕಾಡುಪ್ರಾಣಿಯ ಹೆಜ್ಜೆ ಗುರುತು ಪತ್ತೆಯಾಗಿತ್ತು.ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯ ಸೆರೆಯಾಗದಿದ್ದರೂ, ಚಿರತೆ ಕೂಗಿದಂತೆ ಕೇಳಿಸುವ ಧ್ವನಿ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇದೀಗ ದರ್ಬೆ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾಗಿ ನಾಯಿಯನ್ನು ಬೇಟೆಯಾಡಿರುವ ಘಟನೆ ನಡೆದಿರುವುದರಿಂದ, ಹಿಂದೆ ಪತ್ತೆಯಾಗಿದ್ದ ಹೆಜ್ಜೆಗುರುತು ಹಾಗೂ ಧ್ವನಿಯೂ ಚಿರತೆಯದ್ದೇ ಆಗಿರಬಹುದೇ ಎಂಬ ಅನುಮಾನ ಸ್ಥಳೀಯರಲ್ಲಿ ಮೂಡಿದೆ.
ಚಿರತೆ ಸಂಚಾರದ ಹಿನ್ನೆಲೆಯಲ್ಲಿ ದರ್ಬೆ, ಚೀಮುಳ್ಳು ಹಾಗೂ ಅನೌದಗುಂಡಿ ಭಾಗದ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯ ಓಡಾಟದ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂಬ ಆಗ್ರಹವೂ ಕೇಳಿಬಂದಿದೆ.
A leopard was spotted in Darbe, Nekkiladi village near Uppinangadi on Saturday, preying on a local dog. Panicked residents demand swift action from the forest department after weeks of suspected sightings.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಮಂಗಳೂರು
Sudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ.
“ಭಾರತ್ ಮಾತಾ ಕೀ ಜೈ ಎಂದಿದ್ದಕ್ಕೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಹಾಗೂ ಪ್ರತಿಭಟನೆ ನಡೆಸಿದ್ದಕ್ಕೆ ಬಾಂಡ್ ಕೇಳಿದ್ದಾರೆ” ಎಂಬ ಎಬಿವಿಪಿ (ABVP) ಮತ್ತು ಬಿಜೆಪಿ ನಾಯಕರ ಆರೋಪ ಹಾಗೂ ಆಕ್ಷೇಪಗಳಿಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಕಟ್ಟುನಿಟ್ಟಿನ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಖಾಕಿ ತೊಡುವಾಗಲೇ ದೇಶದ ರಕ್ಷಣೆಗಾಗಿ ಪಣ ತೊಡುತ್ತೇವೆ. ಆದರೆ, ದೇಶಪ್ರೇಮ ಹಾಗೂ ‘ಭಾರತ್ ಮಾತಾ ಕೀ ಜೈ’ ಘೋಷಣೆಯನ್ನು ಗುರಾಣಿಯನ್ನಾಗಿ ಹಿಡಿದು ಯಾರು ಕೂಡ ಕಾನೂನು ವಿರೋಧಿ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, “ದೇಶದ ಪರ ಜೈಕಾರ ಹಾಕುವುದು ಹಾಗೂ ಆ ಮೂಲಕ ತಾವು ಮಾಡಿರುವ ತಪ್ಪನ್ನು ಮುಚ್ಚಿಹಾಕಲು ಯತ್ನಿಸಿ ಸಾರ್ವಜನಿಕರ ಗಮನ ಬೇರೆಡೆ ಸೆಳೆಯುವುದರಿಂದ ದೇಶಕ್ಕೆ ಯಾವುದೇ ಗೌರವ ಸಲ್ಲಿಸಿದಂತಾಗುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ. ಪ್ರತಿಭಟನೆ ನಡೆಸುವುದಕ್ಕೆ ನಾವು ಯಾವುದೇ ನಿಷೇಧ ಹೇರಿರಲಿಲ್ಲ. ಬದಲಿಗೆ ಸ್ಥಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಕೆಲವು ಕಡ್ಡಾಯ ಷರತ್ತುಗಳನ್ನು ವಿಧಿಸಿದ್ದೆವು. ಆದರೆ ಸಂಬಂಧಪಟ್ಟ ವಿದ್ಯಾರ್ಥಿಗಳು ಪ್ರತಿಭಟನೆಗೆ ಪೂರ್ವಾನುಮತಿ ತೆಗೆದುಕೊಂಡಿರಲಿಲ್ಲ. ಅಥವಾ ಪೊಲೀಸರಿಗೆ ಯಾವುದೇ ಅಧಿಕೃತ ಮಾಹಿತಿಯನ್ನೂ ನೀಡಿರಲಿಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರ ವಿರುದ್ಧ ಯಾವುದೇ ಕಠಿಣ ಕ್ರಮ ಜರುಗಿಸಿರಲಿಲ್ಲ ಎಂದು ತಿಳಿಸಿದ್ದಾರೆ.
“ಆದರೆ ಸ್ಥಳೀಯರಲ್ಲದೆ ಹೊರಗಡೆಯಿಂದ ಬಂದ ವ್ಯಕ್ತಿಗಳು ಪ್ರತಿಭಟನೆಗೆ ಇಳಿದಾಗ ಮತ್ತು ಕಾಲೇಜು ಆಡಳಿತ ಮಂಡಳಿಯಿಂದ ಈ ಬಗ್ಗೆ ದೂರು ಬಂದಾಗ ಪೊಲೀಸರು ಸುಮ್ಮನಿರಲು ಸಾಧ್ಯವಿಲ್ಲ. ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಬರುವ ಆತಂಕವಿದ್ದ ಕಾರಣ ಅಲ್ಲಿದ್ದ ಕೆಲವರನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಮುಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಬಾರದೆಂದು ಮುನ್ನೆಚ್ಚರಿಕೆಗಾಗಿ ಬಾಂಡ್ ಬರೆದುಕೊಡುವಂತೆ ಕೋರಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿ ಹಾಗೂ ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ಅಡಚಣೆಯಾಗಬಾರದೆಂಬ ಕಾರಣಕ್ಕೆ ಅಂತಿಮವಾಗಿ ಆ ರೀತಿಯ ಯಾವುದೇ ಬಾಂಡ್ ಪಡೆದಿರಲಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಅಪರಾಧ
Puttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
ಪುತ್ತೂರಿನಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಪುತ್ತೂರು: ನಗರದಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿದ್ದ ಎರಡು ಅಂಗಡಿಗಳಿಗೆ ಪುತ್ತೂರು ನಗರ ಪೊಲೀಸರು ತೆರಳಿ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
2026ರ ಅಕ್ಟೋಬರ್ 14ರಂದು ಸಂಜೆ ಪುತ್ತೂರು ಕಸಬ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಕೇರಳ ರಾಜ್ಯದ ಲಾಟರಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ವಾಸು ನಾಯ್ಕ್ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿ ಮಾಲೀಕ, ಪುತ್ತೂರು ಕಸಬ ನಿವಾಸಿ ಶ್ರೀನಿವಾಸ ಪೈ (33) ಎಂಬವರು ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ತಂದು ಹೆಚ್ಚಿನ ಬೆಲೆಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಪ್ರಕರಣ ದಾಖಲಿಸಲಾಗಿದೆ.
ಇದೇ ದಿನ ಪುತ್ತೂರು ಕಸಬ ಗ್ರಾಮದ ಲಿನೆಟ್ ಜಂಕ್ಷನ್ ಬಳಿಯ ಪಾನ್ ಸ್ಟಾಲ್ ಒಂದರಲ್ಲಿ ನಿಷೇಧಿತ ಲಾಟರಿ ಮಾರಾಟ ಮಾಡುತ್ತಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಸಹಾಯಕ ಪೊಲೀಸ್ ಉಪನಿರೀಕ್ಷಕ ಗಂಗಾಧರ ಎ.ಬಿ. ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ವೇಳೆ ಅಂಗಡಿ ಮಾಲೀಕ, ಪುತ್ತೂರು ಪಡ್ನೂರು ಗ್ರಾಮದ ನಿವಾಸಿ ಲಕ್ಷ್ಮಣ (42) ಎಂಬವರ ಬಳಿ ಮಾರಾಟಕ್ಕಾಗಿ ಇಟ್ಟಿದ್ದ ಲಾಟರಿ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಯಿತು. ಕೇರಳದಿಂದ ಲಾಟರಿ ಟಿಕೆಟ್ಗಳನ್ನು ತಂದು ಅಕ್ರಮವಾಗಿ ಮಾರಾಟ ಮಾಡುತ್ತಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಲಾಟರಿ ನಿಷೇಧ ಕಾಯ್ದೆ 1998ರ ಕಲಂ 7(iii)ರಂತೆ ಮತ್ತೊಂದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
-
ಸ್ಥಳೀಯ8 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ6 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಅಂತರ ರಾಜ್ಯ8 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಬಿಗ್ ನ್ಯೂಸ್8 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಶಿಕ್ಷಣ24 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಅಪರಾಧ2 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ರಾಜಕೀಯ6 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ
-
ಮಂಗಳೂರು2 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!


















