ನಿಧನ ವಾರ್ತೆ
Guwahati-ಪತ್ನಿಯನ್ನು ಕೊಂದು ತಲೆ ಫ್ರಿಡ್ಜ್ನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು
ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.
ಗುವಾಹಾಟಿ: ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಮೃತನನ್ನು ರಾಮಾನುಜ್ ಗೋಸ್ವಾಮಿ (30) ಎಂದು ಗುರುತಿಸಲಾಗಿದೆ.
ಸೋಮವಾರ ಮುಂಜಾನೆ ಹತಿಗಾಂವ್ ಠಾಣೆ ಪೊಲೀಸರು ಆತನನ್ನು ಗುವಾಹಾಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದು, ಬಳಿಕ ಠಾಣೆಗೆ ವಾಪಸ್ ಕರೆತರುತ್ತಿದ್ದರು.
ಈ ವೇಳೆ ನರಕಾಸುರ ಪಹಾಡ್ ಪ್ರದೇಶದ ಬಳಿ ಪೊಲೀಸ್ ವಾಹನ ಸಂಚರಿಸುತ್ತಿದ್ದಾಗ ರಾಮಾನುಜ್ ಏಕಾಏಕಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ನಡೆಸಿ, ಚಲಿಸುತ್ತಿದ್ದ ವಾಹನದಿಂದ ಹೊರಗೆ ಜಿಗಿದಿದ್ದಾನೆ. ಪರಿಣಾಮ ಆತ ಆಳವಾದ ಕಂದಕಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ.
ತಕ್ಷಣ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಆರೋಪಿಯ ಸಾವಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪತ್ನಿಯ ಭೀಕರ ಹತ್ಯೆ
ಸೆಪ್ಟೆಂಬರ್ 3ರಂದು ರಾಮಾನುಜ್ ತನ್ನ ಪತ್ನಿ ರಿಯಾ ತಾಲುಕ್ಸಾರ್ (25) ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಆಕೆಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆ ಹಾಗೂ ಬೆರಳುಗಳನ್ನು ಕಪ್ಪು ಪಾಲಿಥಿನ್ ಚೀಲದಲ್ಲಿ ಸುತ್ತಿ ಫ್ರಿಡ್ಜ್ನಲ್ಲಿ ಇಟ್ಟಿದ್ದ ಎನ್ನಲಾಗಿದೆ.
ಅಪಾರ್ಟ್ಮೆಂಟ್ನಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿತ್ತು.
‘ಪಶ್ಚಾತ್ತಾಪವಿಲ್ಲ’ ಎಂದಿದ್ದ ಆರೋಪಿ
ಸೆಪ್ಟೆಂಬರ್ 6ರಂದು ರಾಮಾನುಜ್ ಪೊಲೀಸರಿಗೆ ಶರಣಾಗಿದ್ದ. ಸೆಪ್ಟೆಂಬರ್ 8ರಂದು ನಡೆದ ಸ್ಥಳ ಪರಿಶೀಲನೆ ವೇಳೆ ಹತ್ಯೆ ಮಾಡಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಆತ ಹೇಳಿದ್ದ ಎನ್ನಲಾಗಿದೆ.
ಜೈಲಿನಿಂದ ಬಿಡುಗಡೆಯಾದ ಬಳಿಕ ತನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಯನ್ನೂ ಕೊಲ್ಲುವುದಾಗಿ ಆತ ಬೆದರಿಕೆ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಬಳಸಲಾಗಿದೆ ಎಂದು ಶಂಕಿಸಲಾದ ರಕ್ತದ ಕಲೆಗಳಿದ್ದ ಮಚ್ಚನ್ನೂ ಪೊಲೀಸರು ವಶಪಡಿಸಿಕೊಂಡಿದ್ದರು. ಘಟನೆ ನಡೆದ ವೇಳೆ ತಾನು ಮದ್ಯದ ಅಮಲಿನಲ್ಲಿದ್ದೆ ಎಂದು ರಾಮಾನುಜ್ ಹೇಳಿದ್ದ ಎನ್ನಲಾಗಿದ್ದು, ಫ್ಲ್ಯಾಟ್ನಲ್ಲಿ ಖಾಲಿ ಮದ್ಯದ ಬಾಟಲಿಗಳೂ ಪತ್ತೆಯಾಗಿದ್ದವು.
ಆದರೆ ಇದೀಗ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವುದರಿಂದ, ಆತನ ಸಾವಿನ ಹಿನ್ನೆಲೆಯಲ್ಲಿಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















