Connect with us

ಬಿಗ್ ನ್ಯೂಸ್

Bangalore-ಬಿಸಿಲ ಬೇಗೆಯಿಂದ ಕಾದು ಕೆಂಡವಾಗಿದ್ದ ಬೆಂಗಳೂರಿನಲ್ಲಿ ಭಾರಿ ಮಳೆ – ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ಅಸ್ತವ್ಯಸ್ಥ

Published

on

Ad Widget

Ad Widget

Ad Widget

Ad Widget

ಬಿಸಿಲಿನ ಬೇಗೆಯಿಂದ ಕಾದು ಕೆಂಡವಾಗಿದ್ದ ರಾಜಧಾನಿ ಬೆಂಗಳೂರಿಗೆ ಮಂಗಳವಾರ ಸಂಜೆ ವರುಣ ತಂಪೆರೆದಿದ್ದಾನೆ. ಹಲವು ದಿನಗಳ ಬಳಿಕ ಏಕಾಏಕಿ ಆರಂಭವಾದ ಭಾರೀ ಮಳೆ ಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರ ದಟ್ಟಣೆಯೂ ಹೆಚ್ಚಾಯಿತು.

Ad Widget

Ad Widget

Ad Widget

Ad Widget

ಬೆಂಗಳೂರು: ಬಿಸಿಲಿನ ಬೇಗೆಯಿಂದ ಕಾದು ಕೆಂಡವಾಗಿದ್ದ ರಾಜಧಾನಿ ಬೆಂಗಳೂರಿಗೆ ಮಂಗಳವಾರ ಸಂಜೆ ವರುಣ ತಂಪೆರೆದಿದ್ದಾನೆ. ಹಲವು ದಿನಗಳ ಬಳಿಕ ಏಕಾಏಕಿ ಆರಂಭವಾದ ಭಾರೀ ಮಳೆ ಗಂಟೆಗೂ ಹೆಚ್ಚು ಕಾಲ ಸುರಿದಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತು. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ಸಂಚಾರ ದಟ್ಟಣೆಯೂ ಹೆಚ್ಚಾಯಿತು.

Ad Widget

Ad Widget alt="Ad Widget"/>

Ad Widget

ಕಚೇರಿ ಮುಗಿಸಿ ಮನೆಗೆ ತೆರಳುತ್ತಿದ್ದವರು ಮಳೆಯ ಆರ್ಭಟಕ್ಕೆ ಸಿಲುಕಿದರು. ಹಲವರು ಬಸ್ ನಿಲ್ದಾಣಗಳು ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಆಶ್ರಯ ಪಡೆದರು. ಹಲಸೂರು ಟ್ರಿನಿಟಿ ಸರ್ಕಲ್, ಸೋಮೇಶ್ವರ ಸರ್ಕಲ್, ಬಿಟಿಎಂ ಲೇಔಟ್, ಡೇರಿ ಸರ್ಕಲ್, ಎಚ್‌ಎಸ್‌ಆರ್ ಲೇಔಟ್ ಸೇರಿದಂತೆ ಹಲವು ಪ್ರದೇಶಗಳಲ್ಲಿ 20ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಾಯವಾಣಿ ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ತಗ್ಗು ಪ್ರದೇಶಗಳು ಜಲಾವೃತ
ವಿಧಾನಸೌಧ, ಶಿವಾಜಿನಗರ, ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕನಗರ, ಹಲಸೂರು, ಎಚ್‌ಎಎಲ್, ಕೋರಮಂಗಲ, ಎಚ್‌ಎಸ್‌ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ವೈಟ್‌ಫೀಲ್ಡ್, ಕೆ.ಆರ್.ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಕೆಲ ತಗ್ಗು ಪ್ರದೇಶಗಳ ಮನೆಗಳಿಗೂ ನೀರು ನುಗ್ಗಿದ್ದು, ನಿವಾಸಿಗಳು ತೊಂದರೆ ಅನುಭವಿಸಿದರು. ಚರಂಡಿಗಳಲ್ಲಿ ಕಸ ತುಂಬಿಕೊಂಡಿದ್ದ ಕಾರಣ ನೀರು ಸರಾಗವಾಗಿ ಹರಿಯದೆ ಹಲವು ಕಡೆ ರಸ್ತೆಗಳ ಮೇಲೆಯೇ ನಿಂತಿತ್ತು.

Ad Widget

Ad Widget

ಬೈಕ್ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ರಸ್ತೆ ಬದಿಯ ಅಂಗಡಿಗಳ ಆಶ್ರಯ ಪಡೆದರೆ, ಕಾರು ಸೇರಿದಂತೆ ಇತರೆ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದವು. ಇದರಿಂದ ನಗರದ ಹಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಕಾಂಪೌಂಡ್ ಕುಸಿದು 4 ಹಸುಗಳ ಸಾವು
ದೊಮ್ಮಲೂರಿನ ಮಿಲಿಟರಿ ಕಾಂಪೌಂಡ್‌ನ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಅದರಡಿ 8 ಹಸುಗಳು ಸಿಲುಕಿಕೊಂಡಿದ್ದು, ನಾಲ್ಕು ಹಸುಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತಿದ್ದ ಮಳೆನೀರನ್ನು ತೆರವುಗೊಳಿಸುವ ಕಾರ್ಯವೂ ಕೈಗೊಳ್ಳಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಬಂದ್
ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನ್ನು ಬಂದ್ ಮಾಡಲಾಗಿತ್ತು. ಸಣ್ಣ ಮಳೆಯಾದರೂ ಇಲ್ಲಿ ನೀರು ನಿಲ್ಲುವ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿದರು.

ಈ ಹಿಂದೆ ಕೂಡ ಅಂಡರ್‌ಪಾಸ್‌ನಲ್ಲಿ ಮಳೆನೀರು ನಿಂತು ಅವಘಡಗಳು ಸಂಭವಿಸಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿಧಾನಗೊಂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಕಾರ್ಯನಿರ್ವಹಿಸಿದರು.

ಶಾಂತಿನಗರ ಸುತ್ತಮುತ್ತ ಮೊಣಕಾಲುದ್ದ ನೀರು
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ ಸುತ್ತಮುತ್ತಲಿನ ಹಲವು ಜಂಕ್ಷನ್‌ಗಳು ಜಲಾವೃತಗೊಂಡಿದ್ದವು. ಕೆಲವು ಕಡೆ ಮೊಣಕಾಲುದ್ದ ನೀರು ನಿಂತಿತ್ತು. ಮೇಯೋಹಾಲ್ ಕೋರ್ಟ್ ಜಂಕ್ಷನ್, ಗರುಡಾ ಮಾಲ್ ಜಂಕ್ಷನ್, ಟ್ರಿನಿಟಿ ಸರ್ಕಲ್, ಅನಿಲ್ ಕುಂಬ್ಳೆ ಜಂಕ್ಷನ್, ಯುಬಿ ಸಿಟಿ ಜಂಕ್ಷನ್, ಎಎಸ್‌ಸಿ ಸೆಂಟರ್, ಎಚ್‌ಎಎಲ್ ವಿಮಾನ ನಿಲ್ದಾಣ ಜಂಕ್ಷನ್, ಟಾನಿಕ್ ಜಂಕ್ಷನ್ ಹಾಗೂ ಜೆ.ಸಿ. ಕಚೇರಿ ಜಂಕ್ಷನ್‌ಗಳಲ್ಲಿ ನೀರು ನಿಂತಿತ್ತು.

ಸಂಚಾರ ಪೊಲೀಸರು ಹಾಗೂ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಸ್ತೆ ಮತ್ತು ಚರಂಡಿಗಳಲ್ಲಿ ನಿಂತಿದ್ದ ನೀರನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಮಾರಪ್ಪನಪಾಳ್ಯದಲ್ಲಿ 5.4 ಸೆಂ.ಮೀ. ಮಳೆ
ನಗರದಲ್ಲಿ ಮಂಗಳವಾರ ದಾಖಲಾದ ಮಳೆಯ ಪೈಕಿ ಮಾರಪ್ಪನಪಾಳ್ಯದಲ್ಲಿ 5.4 ಸೆಂ.ಮೀ. ಮಳೆಯಾಗಿದ್ದು, ಅತ್ಯಧಿಕ ಪ್ರಮಾಣವಾಗಿದೆ. ನಾಗಾಪುರದಲ್ಲಿ 4.7 ಸೆಂ.ಮೀ., ಸಂಪಂಗಿ ರಾಮನಗರದಲ್ಲಿ 4.4 ಸೆಂ.ಮೀ., ಆನೇಕಲ್‌ನ ಮುಗಳೂರಿನಲ್ಲಿ 3.9 ಸೆಂ.ಮೀ., ನಂದಿನಿ ಲೇಔಟ್‌ನಲ್ಲಿ 3.8 ಸೆಂ.ಮೀ. ಮಳೆ ದಾಖಲಾಗಿದೆ.

ಗುಟ್ಟಹಳ್ಳಿ ಮತ್ತು ದಾಸರಹಳ್ಳಿಯಲ್ಲಿ 3.1 ಸೆಂ.ಮೀ., ಬಸವನಗುಡಿಯಲ್ಲಿ 2.8, ಶಿವನಗರ ಮತ್ತು ಬಾಗಲಗುಂಟೆಯಲ್ಲಿ 2.7, ಜ್ಞಾನಭಾರತಿ ಮತ್ತು ಆಲೂರಿನಲ್ಲಿ 2.4, ಮಾದಾವರ ಮತ್ತು ಬಳ್ಳೂರಿನಲ್ಲಿ 2.1, ದೊರೆಸಾನಿಪಾಳ್ಯ ಹಾಗೂ ಹೊಸ್ಕೂರಿನಲ್ಲಿ 1.8 ಮತ್ತು ಕಾಟನ್‌ಪೇಟೆಯಲ್ಲಿ 1.5 ಸೆಂ.ಮೀ. ಮಳೆಯಾಗಿದೆ.

ಮೇಲ್ಸೇತುವೆಗಳ ಕೆಳಗೆ ಕೆರೆಯಂತಾದ ರಸ್ತೆಗಳು
ಹೆಬ್ಬಾಳ ಫ್ಲೈಓವರ್‌ನ ಕೆಂಪೇಗೌಡ ಸರ್ವಿಸ್ ರಸ್ತೆ ಹಾಗೂ ವೀರನಪಾಳ್ಯ ಸರ್ವಿಸ್ ರಸ್ತೆಗಳಲ್ಲೂ ನೀರು ನಿಂತಿತ್ತು. ಆರ್.ಟಿ.ನಗರದ ಸಿ.ಎಲ್. ಕ್ರಾಸ್ ರಸ್ತೆ, ಚಾಮರಾಜಪೇಟೆ ಮಾರ್ಕೆಟ್ ಮೇಲ್ಸೇತುವೆ, ರಾಯನ್ ಸರ್ಕಲ್, ಪೀಣ್ಯ ಫ್ಲೈಓವರ್ ಕೆಳಭಾಗ, ಹಲಸೂರು ಸರ್ಕಲ್, ಕೋರಮಂಗಲ ರಿಂಗ್ ರಸ್ತೆ, ಶಿವಾಜಿನಗರ, ಕೆ.ಜಿ.ಹಳ್ಳಿ, ಮಡಿವಾಳ, ಬೊಮ್ಮನಹಳ್ಳಿ, ರೂಪೇನ ಅಗ್ರಹಾರ, ಸಿಲ್ಕ್ ಬೋರ್ಡ್ ಜಂಕ್ಷನ್, ಬಿಟಿಎಂ ಲೇಔಟ್, ಮೈಕೋ ಲೇಔಟ್, ನಾಗಾರ್ಜುನ ಜಂಕ್ಷನ್, ಜೆ.ಡಿ.ಮರ ಜಂಕ್ಷನ್ ಹಾಗೂ ಆಡುಗೋಡಿ ಜಂಕ್ಷನ್ ಸೇರಿದಂತೆ ಹಲವು ಕಡೆ ಮೇಲ್ಸೇತುವೆಗಳ ಕೆಳಭಾಗದಲ್ಲಿ ನೀರು ನಿಂತಿತ್ತು.

ಪಾಲಿಕೆ ಅಧಿಕಾರಿಗಳು ಹಾಗೂ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ನೀರು ತೆರವುಗೊಳಿಸುವ ಕಾರ್ಯ ನಡೆಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಅಂತರ ರಾಜ್ಯ

Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್‌ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್‌ಗೆ SMS, 10 ಸಾವಿರ ರೂ.ವರೆಗೆ ದಂಡ..!

Published

on

Ad Widget

Ad Widget

Ad Widget

Ad Widget

ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.

Ad Widget

Ad Widget alt="Ad Widget"/>

Ad Widget

ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.

Ad Widget

Ad Widget <> Ad Widget

ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್‌ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.

ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್‌ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.

Ad Widget

Ad Widget

ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್‌ಗೆ SMS ರವಾನೆಯಾಗಲಿದೆ.

SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:

  • ವಾಹನದ ನೋಂದಣಿ ಸಂಖ್ಯೆ.
  • ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
  • ವಾಹನದ ವಿಮೆ ಅವಧಿ ಮುಗಿದ ದಿನಾಂಕ.
  • ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
    ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ.
  • ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
  • ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.

ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.

ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್‌ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.

ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

Published

on

Ad Widget

Ad Widget

Ad Widget

Ad Widget

ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.

Ad Widget

Ad Widget alt="Ad Widget"/>

Ad Widget

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

Ad Widget

Ad Widget <> Ad Widget

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.

ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Ad Widget

Ad Widget

ಸಂಘದ ಅಧ್ಯಕ್ಷ ಭಾಸ್ಕರ್ ಪೆರುವಾಯಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!