ಶ್ರೇಯಸ್ ಅಯ್ಯರ್(63), ಸಂಜು ಸಾಮ್ಸನ್(54) ಅರ್ಧಶತಕ ಸಿಡಿಸುವ ಮೂಲಕ ಭಾರತದ ಚೇಸಿಂಗ್‌ಗೆ ಉತ್ತಮ ಸಾಥ್ ನೀಡಿದರು.ಆದರೆ, ಆಟಕ್ಕೆ ರೋಚಕತೆ […]" /> ಶ್ರೇಯಸ್ ಅಯ್ಯರ್(63), ಸಂಜು ಸಾಮ್ಸನ್(54) ಅರ್ಧಶತಕ ಸಿಡಿಸುವ ಮೂಲಕ ಭಾರತದ ಚೇಸಿಂಗ್‌ಗೆ ಉತ್ತಮ ಸಾಥ್ ನೀಡಿದರು.ಆದರೆ, ಆಟಕ್ಕೆ ರೋಚಕತೆ […]"> ಎರಡನೇ ಏಕದಿನ ಪಂದ್ಯ :  ಕೈಜಾರುತ್ತಿದ್ದ ಪಂದ್ಯವನ್ನು  ಸ್ಪೋಟಕ ಆಟದಿಂದ ಮೇಲಕ್ಕೆತ್ತಿ ಭಾರತಕ್ಕೆ ಗೆಲುವು ತಂದು ಕೊಟ್ಟ ಅಕ್ಷರ್ ಪಟೇಲ್ - Nikhara News | Kannada News Website
Connect with us

Uncategorized

ಎರಡನೇ ಏಕದಿನ ಪಂದ್ಯ :  ಕೈಜಾರುತ್ತಿದ್ದ ಪಂದ್ಯವನ್ನು  ಸ್ಪೋಟಕ ಆಟದಿಂದ ಮೇಲಕ್ಕೆತ್ತಿ ಭಾರತಕ್ಕೆ ಗೆಲುವು ತಂದು ಕೊಟ್ಟ ಅಕ್ಷರ್ ಪಟೇಲ್

Published

on

Ad Widget

Ad Widget

Ad Widget

Ad Widget

ಟ್ರಿನಿಡ್ಯಾಡ್(ಜು.25): ವೆಸ್ಟ್‌ಇಂಡೀಸ್‌ ತಂಡ ನೀಡಿದ ಬೃಹತ್‌ ಗುರಿಯನ್ನ ಬೆನ್ನತ್ತಿದ್ದ ಭಾರತ  ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ  ಕೈವಶ ಮಾಡಿಕೊಂಡಿದೆ.

Ad Widget

Ad Widget

Ad Widget

Ad Widget

ಕ್ವೀನ್ಸ್ ಪಾರ್ಕ್ ಓವಲ್ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ವಿಂಡೀಸ್ ತಂಡ ನೀಡಿದ 312 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ  49.4 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ತಲುಪಿತು.

Ad Widget

Ad Widget alt="Ad Widget"/>

Ad Widget

ಶ್ರೇಯಸ್ ಅಯ್ಯರ್(63), ಸಂಜು ಸಾಮ್ಸನ್(54) ಅರ್ಧಶತಕ ಸಿಡಿಸುವ ಮೂಲಕ ಭಾರತದ ಚೇಸಿಂಗ್‌ಗೆ ಉತ್ತಮ ಸಾಥ್ ನೀಡಿದರು.ಆದರೆ, ಆಟಕ್ಕೆ ರೋಚಕತೆ ತಂದುಕೊಟ್ಟಿದ್ದು ಆಲ್‌ರೌಂಡರ್ ಅಕ್ಷರ್ ಪಟೇಲ್, ಕೈಜಾರುತ್ತಿದ್ದ ಪಂದ್ಯವನ್ನು ತಮ್ಮ ಸ್ಪೋಟಕ ಬ್ಯಾಟಿಂಗ್‌ನಿಂದ ಭಾರತದ ಕಡೆ ತಿರುಗಿಸಿದರು. 35 ಎಸೆತಗಳಲ್ಲಿ 3 ಬೌಂಡರಿ, 5 ಸಿಕ್ಸರ್ ಸಹಿತ 64 ರನ್ ಸಿಡಿಸಿ ಗೆಲುವಿನ ರೂವಾರಿಯಾದರು

Ad Widget

Ad Widget <> Ad Widget

ಅಂತಿಮ ಓವರ್ ನಲ್ಲಿ ಗೆಲ್ಲಲು ಮೂರು ಎಸೆತದಲ್ಲಿ 6 ರನ್ ಗಳ ಅಗತ್ಯವಿದ್ದಾಗ ಅಕ್ಸರ್ ಪಟೇಲ್ ಸಿಕ್ಸರ್ ಎತ್ತುವ ಮೂಲಕ ಭಾರತಕ್ಕೆ ರೋಚಕ ಜಯ ತಂದಿತ್ತರು.

ಅಂತಿಮ ಕ್ಷಣದಲ್ಲಿ  ಅಧ್ಬುತ ಬ್ಯಾಟಿಂಗ್ ಪ್ರದರ್ಶನ ತೋರಿದ ಅಕ್ಸರ್ ಪಟೇಲ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-0 ಅತರದಲ್ಲಿ ಗೆದ್ದು ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದೆ

Ad Widget

Ad Widget

ಆತಿಥೇಯರ ವಿರುದ್ಧದ ಮೊದಲನೇ ಪಂದ್ಯದಲ್ಲಿ ರೋಚಕವಾಗಿ ಗೆದ್ದು ಆತ್ಮವಿಶ್ವಾಸದಲ್ಲಿದ್ದ ಟೀಂ ಇಂಡಿಯಾಗೆ ಕೆರಿಬಿಯನ್ನರು 311 ರನ್‌ಗಳ ಬೃಹತ್‌ ಟಾರ್ಗೆಟ್‌ ನೀಡಿದ್ದರು.

ವಿಂಡೀಸ್‌ ತಂಡದ ಪರ ಶಾಯ್ ಹೋಪ್‌ ಆಕರ್ಷಕ 115 ರನ್‌ ಗಳಿಸಿ 100ನೇ ಪಂದ್ಯದಲ್ಲಿ ಶತಕ ಸಿಡಿಸಿ ಸಂಭ್ರಮಪಟ್ಟಿದ್ದರು. ನಂತರ ಬಂದ ಶಮರ್ ಬ್ರೂಕ್ಸ್(35), ಕೆ ಮೇಯರ್ಸ್(39) ಹಾಗೂ ಪೂರನ್‌ 75 ರನ್‌ ಸೇರಿದಂತೆ ಉಳಿದ ಆಟಗಾರರು ತಂಡಕ್ಕೆ ನೀಡಿದ ರನ್‌ ಕೊಡುಗೆಯಿಂದ ವಿಂಡೀಸ್‌ ತಂಡ ಅಂತಿಮವಾಗಿ 6 ವಿಕೆಟ್‌ ಕಳೆದುಕೊಂಡು 311 ರನ್‌ಗಳ ಗುರಿಯನ್ನ ಭಾರತಕ್ಕೆ ನೀಡಿತ್ತು.

ಭಾರತದ ಪರ ಶಾರ್ದೂಲ್ ಠಾಕೂರ್‌ 3, ದೀಪಕ್‌ ಹೂಡಾ, ಅಕ್ಸರ್‌ ಪಟೇಲ್‌ ಹಾಗೂ ಯಜುವೇಂದ್ರ ಚಹಾಲ್‌ ತಲಾ ಒಂದು ವಿಕೆಟ್‌ ಕಬಳಿಸಿದ್ದರು. ಇನ್ನು ವಿಂಡೀಸ್‌ ತಂಡದ ಪರ ಅಲ್ಜಾರಿ ಜೋಸೆಫ್(2), ಕೈಲ್ ಮೇಯರ್ಸ್(2) ರೊಮಾರಿಯೋ ಶೆಫರ್ಡ್ ಹಾಗೂ ಕೈಲ್ ಮೇಯರ್ಸ್ ತಲಾ 1 ವಿಕೆಟ್‌ ಪಡೆದು ಸಂಭ್ರಮಿಸಿದರು.

ಸಂಕ್ಷಿಪ್ತ ಸ್ಕೋರ್

ವೆಸ್ಟ್ ಇಂಡೀಸ್: 311/6

ಶಾಯ್ ಹೋಪ್: 115
ನಿಕೊಲಸ್ ಪೂರನ್: 74

ಬೌಲಿಂಗ್:
ಶಾರ್ದೂಲ್ ಠಾಕೂರ್: 54/3

ಭಾರತ: 49.4 ಓವರ್- 312/8

ಅಕ್ಷರ್ ಪಟೇಲ್: ಅಜೇಯ 64
ಶ್ರೇಯಸ್ ಅಯ್ಯರ್: 63
ಸಂಜು ಸಾಮ್ಸನ್: 54

ಬೌಲಿಂಗ್:
ಅಲ್ಜಾರಿ ಜೋಸೆಫ್: 46/2

ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯ ಜು.27 ರಂದು ಟ್ರಿನಿಡ್ಯಾಡ್‌ನಲ್ಲಿ ನಡೆಯಲಿದೆ.

Ad Widget
Click to comment

Leave a Reply

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

Uncategorized

Puttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು

Published

on

Ad Widget

Ad Widget

Ad Widget

Ad Widget

ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತರಾಗಿ ಊರಿಗೆ ತೆರಳಿದ್ದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಹಣ ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡೂರು ಗ್ರಾಮದ ಕೃಷ್ಣನಗರದಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕೃಷ್ಣನಗರದಲ್ಲಿ ಉದಯ ಕುಮಾರ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಹಿರೇಬಂಡಾಡಿ ಮೂಲದ ಯತೀಶ್ ಅವರು ಕುಟುಂಬ ಸಮೇತರಾಗಿ ವಾಸವಾಗಿದ್ದಾರೆ. ಸಹೋದರ ತಿಲಕ್ ಅವರ ಮದುವೆ ಕಾರ್ಯಕ್ರಮದ ನಿಮಿತ್ತ ನ.12ರಂದು ರಾತ್ರಿ ಮನೆಗೆ ಬೀಗ ಹಾಕಿ ಕುಟುಂಬದೊಂದಿಗೆ ಹಿರೇಬಂಡಾಡಿ ಗ್ರಾಮದ ಕೆಮ್ಮಾರದಲ್ಲಿರುವ ತಮ್ಮ ಮನೆಗೆ ತೆರಳಿದ್ದರು.

Ad Widget

Ad Widget <> Ad Widget

ಮದುವೆ ಕಾರ್ಯಕ್ರಮ ಮುಗಿಸಿ, ನ.16ರಂದು ರಾತ್ರಿ ನಡೆಯಲಿದ್ದ ಔತಣಕೂಟಕ್ಕೆ ತೆರಳುವ ಮೊದಲು ಮಗುವಿನ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಹೋಗಲು ಸಂಜೆ ವೇಳೆ ಬಾಡಿಗೆ ಮನೆಗೆ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ತಕ್ಷಣ ಮನೆಯೊಳಗೆ ತೆರಳಿ ಪರಿಶೀಲಿಸಿದಾಗ ಎರಡು ಕಬ್ಬಿಣದ ಕಪಾಟುಗಳ ಬಾಗಿಲುಗಳನ್ನು ಯಾವುದೋ ಸಾಧನದಿಂದ ಮೀಟಿ ತೆರೆಯಲಾಗಿತ್ತು. ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.

Ad Widget

Ad Widget

ಕಳ್ಳರು ಮೂರು ಜೊತೆ ಚಿನ್ನದ ಬೆಂಡೋಲೆ (12 ಗ್ರಾಂ), ಒಂದು ಮೂಗುತಿ (1 ಗ್ರಾಂ), ಮಗುವಿನ ಎರಡು ಜೊತೆ ಕಿವಿಯೋಲೆಗಳು (ಒಟ್ಟು 5 ಗ್ರಾಂ), ಎರಡು ಮಗುವಿನ ಬಳೆಗಳು (4 ಗ್ರಾಂ), 40 ಸಾವಿರ ರೂ. ಮೌಲ್ಯದ ಡೈಮಂಡ್ ಪೆಂಡೆಂಟ್ ಹಾಗೂ 3 ಸಾವಿರ ರೂ. ನಗದು ಹಣವನ್ನು ಕಳವು ಮಾಡಿದ್ದಾರೆ.

ಕಳವಾದ ಚಿನ್ನಾಭರಣಗಳ ಒಟ್ಟು ತೂಕ ಸುಮಾರು 22 ಗ್ರಾಂ ಆಗಿದ್ದು, ನಗದು ಹಣ ಹಾಗೂ ಡೈಮಂಡ್ ಪೆಂಡೆಂಟ್ ಸೇರಿದಂತೆ ಕಳವಾದ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 2.19 ಲಕ್ಷ ರೂ. ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!