Uncategorized
ಪ್ರಸಿದ್ದ ಪ್ರವಾಸಿ ತಾಣ ಬಿಸಿಲೆಯ ಪಟ್ಲ ಬೆಟ್ಟದಲ್ಲಿ ನಡೆಯುತ್ತಿದೆ ದಂಧೆ – ಅಪಾಯಕಾರಿ ರೀತಿ ಪ್ರವಾಸಿಗರ ಲೋಡ್ ಮಾಡಿಕೊಂಡ ಬೆಟ್ಟ ಪ್ರವೇಶಿಸುತ್ತವೆ ಖಾಸಗಿ ಪಿಕಪ್ ಗಳು : ಬೆಟ್ಟದ ರಸ್ತೆಯಲ್ಲಿ ಸೃಷ್ಟಿಯಾಗುತ್ತಿವೆ ‘ಕೃತಕ’ ಗುಂಡಿಗಳು- ಸ್ವಂತ ವಾಹನದಲ್ಲಿ ಹೋದವರಿಗೆ ಹಲ್ಲೆಗೆ ಯತ್ನ ಆರೋಪ – ಬೇಕಿದೆ ಪ್ರವಾಸಿಗರಿಗೆ ಸೂಕ್ತ ಭದ್ರತೆ
ಹಾಸನ: ಮೋಡಗಳಿಗೆ ಮುತ್ತಿಕ್ಕುವಂತಿರುವ ಹತ್ತಾರು ಬೆಟ್ಟಗಳು, ಆ ಬೆಟ್ಟಗಳ ನಡುವೆ ಹರಿಯುವ ಕುಮಾರಧಾರಾ ನದಿ, ಕಣ್ಣು ಹಾಯಿಸಿದಷ್ಟು ದಟ್ಟವಾಗಿ ಕಾಣುವ ನಿತ್ಯ ಹರಿದ್ವರ್ಣ ಕಾಡುಗಳು, ಹಕ್ಕಿಗಳ ಚಿಲಿಪಿಲಿ ಕಲರವ ತಟ್ಟನೆ ಹಿಮಾಲಯಕ್ಕೆ ಹೋದ ಅನುಭವ.
ಇದೆಲ್ಲವೂ ಸಮುದ್ರ ಮಟ್ಟದಿಂದ ಸಾವಿರಾರು ಅಡಿ ಎತ್ತರದಲ್ಲಿರುವ ಬಿಸಿಲೆ ಘಾಟಿಯ ಪಟ್ಲ ಬೆಟ್ಟದ ಮೇಲಿನಿಂದ ಕಾಣುವ ಸುಂದರ ದೃಶ್ಯ. ಆದರೆ ಇಲ್ಲಿ ನಡೆಯುತ್ತಿದೆ ಪ್ರವಾಸಿಗರ ದೋಚಲು ಭಾರಿ ದೊಡ್ಡ ದಂಧೆ .
ಸಕಲೇಶಪುರ ತಾಲ್ಲೂಕಿನ ಹಾಗೂ ಹಾಸನ ಗಡಿ ಭಾಗದಲ್ಲಿರುವ ಈ ಬಿಟ್ಟ ನೋಡುಗರನ್ನು ನಿಬ್ಬೆರಗಾಗಿಸದೇ ಇರದು. ಈ ಬೆಟ್ಟದ ವಿಶೇಷ ಎಂದರೆ ಹಾಸನ, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿದೆ, ಈ ಮೂರು ಜಿಲ್ಲೆಗಳ ಗಡಿ ರೇಖೆಯನ್ನು ಈ ಬೆಟ್ಟ ಪ್ರತಿನಿಧಿಸುತ್ತದೆ.
ಬೆಟ್ಟದ ತುದಿ ತಲುಪುತ್ತಿದ್ದಂತೆ ಅಲ್ಲಿಯ ಸುಂದರ ದೃಶ್ಯಾವಳಿ ಗಳನ್ನೂ ನೋಡುತ್ತಲೇ ಅಲ್ಲಿನ ತಂಗಾಳಿಗೆ ಮಾಯವಾಗುತ್ತದೆ. ಕೆಲಕಾಲ ಅಲ್ಲಿ ಆಸ್ವಾದಿಸಿದರೆ ಮನಸ್ಸಿಗೆ ನೆಮ್ಮದಿ.
ಪಟ್ಲ ಬೆಟ್ಟದ ಮೇಲಿನಿಂದ ಒಂದು ದಿಕ್ಕಿಗೆ ಕೊಡಗು ಜಿಲ್ಲೆಯ ಮಲ್ಲಳ್ಳಿ ಜಲಪಾತ, ಇನ್ನೊಂದು ಕಡೆ ವೀವ್ ಪಾಯಿಂಟ ಕಾಣಿಸುತ್ತದೆ. ಬೆಟ್ಟದ ಎದುರಿಗೆ ಪುಷ್ಪಗಿರಿ ವನ್ಯದಾಮದ ಜೋಡಿ ಬೆಟ್ಟಗಳು ತಲೆ ಎತ್ತಿ ನಿಂತಿವೆ. ಈ ಎಲ್ಲಾ ಬೆಟ್ಟಗಳ ಸಾಲನ್ನು ಕುಮಾರ ಧಾರ ನದಿ ಸೀಳಿಕೊಂಡು ಹೋಗಿವೆ.
ಹಾಸನ ಜಿಲ್ಲಾ ಕೇಂದ್ರದಿಂದ ಪಟ್ಟಬೆಟ್ಟ 80 ಕಿ.ಮೀ ದೂರದಲ್ಲಿದೆ. ಸುಬ್ರಹ್ಮಣ್ಯದಿಂದ 30ಕಿಮೀ ದೂರದಲ್ಲಿರುವ ಈ ಬೆಟ್ಟ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಪ್ರವಾಸಿಗರು ಆಗಮಿಸುತ್ತಾರೆ.
ಪಟ್ಲದಲ್ಲಿ ನಡೆಯುತ್ತಿದೆ ದಂಧೆ: ಸುಮಾರು 3 ವರ್ಷಗಳಿಂದ ಈಚೆಗೆ ಭಾರಿ ಪ್ರಸಿದ್ಧ ಪಡೆದ ಈ ಬೆಟ್ಟದಲ್ಲಿ ಈಗೀಗ ಬಾರಿ ದೊಡ್ಡ ದಂಧೆಯೇ ಆಗುತ್ತಿದೆ.
ಅಲ್ಲಿ ಬಿಳಿ ಬೋರ್ಡ್ ನ ಖಾಸಗಿ ಪಿಕಪ್ ಗಳನ್ನು ಹೊಂದಿರುವ ವಾಹನ ಮಾಲಿಕರು ಬೆಟ್ಟಕ್ಕೆ ಖಾಸಗಿ ವಾಹನಗಳ ಮೂಲಕ ಸಂಚರಿಸಲು ಅವಕಾಶ ನೀಡುತ್ತಿಲ್ಲ. ತಮ್ಮ ಖಾಸಗಿ ಬಿಳಿ ನಂಬರ್ ಪ್ಲೇಟ್ ಹೊಂದಿರುವ ಪಿಕಪ್ ನಲ್ಲೇ ಬಾಡಿಗೆ ನಡೆಸಿ ಮತ್ತು ಅಪಾಯಕಾರಿ ರೀತಿ ಜನರನ್ನು ತುಂಬಿಸಿ ಕಾನೂನು ಉಲ್ಲಂಘಿಸಿದರೂ ಸಂಬಂಧಪಟ್ಟ ಇಲಾಖೆ ಮೌನವಾಗಿರುವುದೇ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.
ಗೂಡ್ಸ್ ವಾಹನದಲ್ಲಿ ಪ್ರವಾಸಿಗರನ್ನು ಸಾಗಿಸಿ ಏನಾದರು ಅವಘಡ ಸಂಭವಿಸಿದರೆ ಇನ್ಸೂರೆನ್ಸ್ ಕ್ಲೈಮ್ ಆಗುವುದಿಲ್ಲ. ಇಷ್ಟು ವರ್ಷದಿಂದ ಪ್ರವಾಸಿಗರನ್ನು ಸಾಗಿಸಿದರೂ ಆರ್ ಟಿ ಓ ಯಾಕೆ ಮೌನವಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯ ಲೋಲಾಕ್ಷ ಪ್ರಶ್ನಿಸುತಿದ್ದಾರೆ.
ಒಂದು ವೇಳೆ ಖಾಸಗಿ ವಾಹನಗಳ ಮೂಲಕ ಸಂಚರಿಸಿದರೇ ಏನೇನೋ ನೆಪವೊಡ್ಡಿ ಜಗಳಕ್ಕೆ ಬರುತ್ತಾರೆ ಮತ್ತು ಹಲ್ಲೆಗೆ ಮುಂದಾಗುತ್ತಾರೆ.
ಕೇವಲ 2 ಕಿಮೀ ಗೆ ಒಬ್ಬೊಬ್ಬ ಪ್ರವಾಸಿಗರತ್ರ ಸಾವಿರಾರು ರೂಪಾಯಿ ತೆಗೆದುಕೊಂಡು ಪಿಕಪ್ ನಲ್ಲಿ ಅಪಾಯಕಾರಿ ರೀತಿ ತುಂಬಿಸಿಕೊಂಡು ದೂರದ ಬೆಟ್ಟ ವೀಕ್ಷಣೆಗೆ ಕರೆದುಕೊಂಡು ಹೋಗುತ್ತಾರೆ.
ಬೆಟ್ಟದ ರಸ್ತೆಯು ಬಾರಿ ಅಪಾಯಕಾರಿ ಸ್ಥಿತಿಯಲ್ಲಿದೆ, ಕೇವಲ ಪಿಕಪ್ ವಾಹನಕ್ಕೆ ಸಂಚರಿಸಲು ಮಾತ್ರ ಸಾಧ್ಯವಾಗುವಂತೆ ಇಟ್ಟುಕೊಂಡಿದ್ದಾರೆ ಮತ್ತು ಪ್ರವೇಶ ಸ್ಥಳದಲ್ಲೇ ದೊಡ್ಡ ಹೊಂಡ ಮಾಡಿ ಪ್ರವಾಸಿಗರು ತಮ್ಮ ಸ್ವಂತ ವಾಹನದಲ್ಲಿ ಪ್ರವೇಶಿಸಲು ಹೆದರುವಂತೆ ಮಾಡುತ್ತಾರೆ ಎಂದು ಆರೋಪಿಸುತ್ತಾರೆ ಪ್ರವಾಸಿಗರು.
ರಸ್ತೆಯಲ್ಲಿ ಹಲವು ಪಿಕಪ್ ಗಳು ಮಗುಚಿ ಬಿದ್ದು, ಪ್ರವಾಸಿಗರಿಗೆ ಗಾಯಗಳಾದ ಘಟನೆಯೂ ನಡೆದಿದೆ ಎನ್ನುತ್ತಾರೆ ಬೆಂಗಳೂರಿನ ಪ್ರವಾಸಿಗರೊಬ್ಬರು.
ಅರಣ್ಯ ಇಲಾಖೆ ಪ್ರಕಾರ ಪಟ್ಲ ಬೆಟ್ಟಕ್ಕೆ ಪ್ರವೇಶ ನಿಷೇಧಿಸಿದೆ. ಆದರೆ ಅಲ್ಲಿ ಒಬ್ಬನೇ ಒಬ್ಬ ಅರಣ್ಯ ಇಲಾಖೆ ಸಿಬ್ಬಂದಿಯೂ ಇಲ್ಲ.
ಪಿಕಪ್ ವಾಹನದವರು ಪ್ರವಾಸಿಗರೊಂದಿಗೆ ನಡೆದುಕೊಳ್ಳುವ ರೀತಿಯ ವಿರುದ್ಧ ದೂರು ನೀಡಲು ಅಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯೂ ಇದೆ. ಅಲ್ಲಿ ಪೊಲೀಸ್ ಠಾಣೆಯ ಮಾಹಿತಿ ಬೋರ್ಡ್ ಕೂಡ ಇಲ್ಲ. ಸ್ಥಳಿಯ ಪೊಲೀಸ್ ಸಿಬ್ಬಂದಿಯೂ ಅಲ್ಲಿ ಭದ್ರತೆಗಿಲ್ಲ .
ಪ್ರಸಿದ್ದ ಪ್ರವಾಸಿ ತಾಣವನ್ನು ಈ ದಂಧೆಯಿಂದ ಮುಕ್ತಗೊಳಿಸಿ ಸೂಕ್ತ ರಕ್ಷಣೆ ಸಿಕ್ಕಿದರೆ ಬರುವ ಪ್ರವಾಸಿಗರ ಸಂಖ್ಯೆಯೂ ಜಾಸ್ತಿಯಾಗಬಹುದು.
ಸ್ವಲ್ಪ ದೂರ ರಸ್ತೆಯನ್ನು ಕಾಂಕ್ರಿಟಿಕರಣಗೊಳಿಸಿದರೆ ಪ್ರವಾಸಿಗರಿಗೂ ಮುಕ್ತವಾಗಿ ಈ ಬೆಟ್ಟದ ಸೊಬಗನ್ನು ವೀಕ್ಷಿಸಿಬಹುದು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಮಂಗಳೂರು21 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ20 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು21 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ15 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
Uncategorized22 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ20 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಶಿಕ್ಷಣ22 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು16 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















