ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಕ್ರೀಡಾಕೂಟವು ದಿನಾಂಕ 5,6,7 ಸೆಪ್ಟೆಂಬರ್ 2026 ರಂದು ಹೈದರಾಬಾದ್ ನಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ.
14 ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರ್ವಿನ್. ಸಿ.(ಚಿತ್ರ ನಾಯಗಂ ಮತ್ತು ಪ್ರವೀಣ ದಂಪತಿಗಳ ಪುತ್ರ )8ನೇ ತರಗತಿ 100 ಮೀಟರ್ ನಲ್ಲಿ ಚಿನ್ನದ ಪದಕ 80 ಮೀಟರ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ ಹಾಗೂ 4x 100ಮೀ ರಿಲೆeಯಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ರಾಹುಲ್ ಕೆ (ಹರೀಶ್ ಕೆ ಮತ್ತು ಭವಾನಿ ದಂಪತಿಗಳ ಪುತ್ರ)8ನೇ ತರಗತಿ 200 ಮೀಟರ್ ಓಟದಲ್ಲಿ ಚಿನ್ನದ ಪದಕ 400 m ನಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ.
14ರ ವಾಯುಮಾನದ ಬಾಲಕಿಯರ ವಿಭಾಗದಲ್ಲಿ ಹನ್ಸಿಕ ಎನ್.(ವಸಂತಕುಮಾರಿಯನ್ ಮತ್ತು ಸುಜಾತ ದಂಪತಿಗಳ ಪುತ್ರಿ) ಆರನೇ ತರಗತಿ ಉದ್ದ ಜಿಗಿತದಲ್ಲಿ ಚಿನ್ನದ ಪದಕವನ್ನು ಪಡೆದಿರುತ್ತಾರೆ .ಮಾನ್ವಿ ಪಿ ರೈ(ಪ್ರವೀಣ್ ರೈ ಮತ್ತು ಪೂಜಾಲತಾ ದಂಪತಿಗಳ ಪುತ್ರಿ )ಎಂಟನೇ ತರಗತಿ ಗುಂಡು ಎಸೆತದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.
17ರ ವಯೋಮಾನದ ಬಾಲಕರ ವಿಭಾಗದಲ್ಲಿ ವೈಭವ್ ಕಾಮತ್ (ವಿದ್ಯಾಧರ್ ಕಾಮತ್ ಮತ್ತು ಮುಕ್ತ ದಂಪತಿಗಳ ಪುತ್ರ) ಹತ್ತನೇ ತರಗತಿ ತ್ರಿವಿಧ ಜಿಗಿತದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಕೃತಿಕ್ ಆರ್ (ರಾಜೇಶ್ ಯನ್ ಮತ್ತು ರೇಖಾ ಆರ್ ದಂಪತಿಗಳ ಪುತ್ರ) ಹತ್ತನೇ ತರಗತಿ 110 ಮೀಟರ್ ಹರ್ಡಲ್ಸ್ ನಲ್ಲೆ ಚಿನ್ನದ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ ಪ್ರೀತಮ್ (ಕರುಣಾಕರ ಮತ್ತು ಜಯಂತಿ ದಂಪತಿಗಳ ಪತ್ರ) .9ನೇ ತರಗತಿ 110ಮೀ ಹರ್ಡಲ್ಸ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಆತ್ಮಿ ಕೆ.ಎಲ್.( ಲಕ್ಷ್ಮಣಗೌಡ ಬೆಳ್ಳಿ ಪಾಡಿ ಮತ್ತು ಅಶ್ವಿನಿ ದಂಪತಿಗಳ ಪುತ್ರಿ)9ನೇ ತರಗತಿ 100 ಮೀಟರ್ ಓಟದಲ್ಲಿ ಚಿನ್ನದ ಪದಕ 200 ಮೀಟರ್ ನಲ್ಲಿ ಚಿನ್ನದ ಪದಕ 400 ಮೀಟರ್ ನಲ್ಲಿ ಚಿನ್ನದ ಪದಕ ಪಡೆದು ವೈಯಕ್ತಿಕ ಚಾಂಪಿಯನ್ ಆಗಿರುತ್ತಾರೆ.
ವಂಶಿತಾ ಯನ್ (ವಸಂತ ಕುಮಾರ್ ಎನ್ ಮತ್ತು ಸುಜಾತ ದಂಪತಿಗಳ ಪುತ್ರಿ.) ಉದ್ದ ಜಿಗಿತದಲ್ಲಿ ಪ್ರಥಮ. ತ್ರಿವಿಧ ಜಿಗಿತದಲ್ಲಿ ಪ್ರಥಮ. ಹಾಗೂ 400 ಮೀಟರ್ ಹಡಲ್ಸನಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಯಕ್ತಿಕ ಚಾಂಪಿಯನ್ ಆಗಿರುತ್ತಾರೆ. ನಿಧಿಶ್ರೀ ಕೆ.( ದೇರಣ್ಣ ಗೌಡ ಮತ್ತು ಹೇಮಲತ ದಂಪತಿಗಳ ಪುತ್ರಿ) 100 ಮೀಟರ್ ಹಡಲ್ಸ ನಲ್ಲಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ನಿಷ್ಮಾ ಕೆ (ಪ್ರದೀಪ್ ಮತ್ತು ಪ್ರಶಾಂತಿ ದಂಪತಿಗಳ ಪುತ್ರಿ). 9ನೇ ತರಗತಿ ಚಕ್ರ ಎಸೆದಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಈ ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳ 29 ರಿಂದ ನವಂಬರ್ 4 ರವರೆಗೆ ಉತ್ತರ ಪ್ರದೇಶದ ಗಝಿಯಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ತಿಳಿಸಿರುತ್ತಾರೆ.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಶಿಕ್ಷಣ
Ambika-ಅಂಬಿಕಾ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ
ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ವತಿಯಿಂದ ‘ಜ್ಞಾನ ಚಂದನ’ ಹಾಗೂ ‘ಜ್ಞಾನ ನಂದನ’ ಪುಸ್ತಕಗಳ ಆಧಾರಿತವಾಗಿ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ನರಿಮೊಗರು ನಿವಾಸಿ ಎಮ್ ಅರ್ಜುನ್ ಕಾಮತ್ ಮತ್ತು ನೀತಾ ಕಾಮತ್ ಎನ್ ದಂಪತಿಯ ಪುತ್ರ 5ನೇ ತರಗತಿಯ ಎಮ್ ಅನ್ಶ್ ಕಾಮತ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಹಿರಿಯ ಪ್ರಾಥಮಿಕ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕೆಮ್ಮಾಯಿ ನಿವಾಸಿ ಪ್ರಸನ್ನ ಹೆಚ್ ಎಸ್ ಮತ್ತು ಗೀತಾ ಡಿ ದಂಪತಿಯ ಪುತ್ರಿ 5ನೇ ತರಗತಿಯ ಅಕ್ಷರ ಹೆಚ್ ಪಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಬ್ಬರೂ ಮುಂದೆ ಪುಂಜಾಲಕಟ್ಟೆಯಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಭಾಷಣ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಮಾತನಾಡಿದರು.
ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು
ನೀಡಿದ್ದು, ದೇಶದ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯಲ್ಲಿ ತನ್ನದೇ ಕೊಡುಗೆಯನ್ನು ನೀಡಿದೆ ಎಂದು ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್ ಡಿ’ ಸೋಜಾ ಹೇಳಿದರು.

ಅವರು ನವೆಂಬರ್ 20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತ,
ರೆ. ಫಾ. ಪತ್ರವೋ ಇವರ ದೂರದರ್ಶಿ ಚಿಂತನೆಯ ಫಲವಾಗಿ ಈ ಕಾಲೇಜು ಜನ್ಮತಾಳಿದ್ದು, ಇಂದು ಮತ್ತಷ್ಟು ಮೂಲ ಸೌಕರ್ಯಗಳ ವಿಸ್ತರಣೆಯೊಂದಿಗೆ ಸಂಸ್ಥೆಯು ಇನ್ನಷ್ಟು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಲು ಅಣಿಯಾಗಿದೆ. ಸುಸಜ್ಜಿತ ಮೂಲ ಸೌಕರ್ಯಗಳ ವಿಸ್ತರಣೆಗೆ ಕಾರಣೀಕರ್ತರಾದ ಎಲ್ಲರನ್ನೂ ಅಭಿನಂದಿಸಿ, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಕಾರ್ಯದರ್ಶಿಗಳಾದ ರೆ. ಡಾ. ಪ್ರವೀಣ್ ಲಿಯೋ ಲಸ್ರದೋ ಮಾತನಾಡಿ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಕಳೆದ ಹಲವಾರು ದಶಕಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಿದೆ. ಇಂದು ಬದಲಾದ ಪರಿಸ್ಥಿತಿಯಲ್ಲಿ ಮೂಲ ಸೌಕರ್ಯಗಳ ವಿಸ್ತರಣೆಯನ್ನು ಮನಗಂಡು ದಾನಿಗಳ ಸಹಾಯದಿಂದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರಿಗೆ ಉತ್ತಮ ಸೌಕರ್ಯಗಳನ್ನು ನಿರ್ಮಿಸಿದ್ದೇವೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಷನ್(CBE) ನ ಉಪಾಧ್ಯಕ್ಷರಾದ ಮೊನ್ಸಿಂಜೋರ್ ಮ್ಯಾಕ್ಸಿಮ್ ಎಲ್ ನೋರೋನ್ಹ ಮಾತನಾಡಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬೆಳವಣಿಗೆಗಳು ತುಂಬಾ ಸಂತೋಷವನ್ನು ನೀಡುತ್ತಿದ್ದು, ಇಂದು ವಿದ್ಯಾರ್ಥಿಗಳಿಗೆ ನೀಡಿದ ಹೆಚ್ಚುವರಿ ಸೌಲಭ್ಯಗಳು ಸಂಸ್ಥೆಯ ಬೆಳವಣಿಗೆಗೆ ಹಿಡಿದ ಕನ್ನಡಿಯಾಗಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯನ್ನು ಅಭಿನಂದಿಸಿ, ಮುಂದಿನ ದಿನಗಳಲ್ಲೂ ಕಾಲೇಜು ಉತ್ತಮ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡಲಿ ಎಂದು ಆಶಿಸಿದರು.
ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕಟ್ಟಡ ಕಾಮಗಾರಿಯ ಮೇಲ್ವಿಚಾರಣೆಯನ್ನು ನಿರ್ವಹಿಸಿದ ಓಸ್ವಾಡ್ಡ್ ಲೂಯಿಸ್ ಹಾಗೂ ಜೋಸೆಫ್ ಸೆರವೋರನ್ನು ಸನ್ಮಾನಿಸಲಾಯಿತು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಷನ್ ಲಾಸ್ರಾದೋ, ಕಾಲೇಜಿನ ರಕ್ಷಕ – ಶಿಕ್ಷಕ ಸಂಘದ ಉಪಾಧ್ಯಕ್ಷ ಅ್ಯಂಟೋನಿ ಒಲಿವೆರಾ, ಪ ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀ ಪ್ರಕಾಶ್ ಬಿ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಯರಾದ ರೆ. ಫಾ. ಮ್ಯಾಕ್ಸಿಮ್ ಡಿ’ ಸೋಜಾ, ಮಾಯಿದೆ ದೇವುಸ್ ಚರ್ಚ್ ನ ಸಹಾಯಕ ಪ್ಯಾರಿಸ್ ಧರ್ಮ ಗುರುಗಳಾದ ರೆ.ಫಾ ಮಾರ್ವಿನ್ ಪ್ರವೀಣ್ ಲೋಬೋ ಹಾಗೂ ಚ್ಯಾರಿಟಿ ಟೀಮ್ ನ ಸದಸ್ಯರಾದ ಸ್ಟೀಫನ್ ಪಿಂಟೋ, ಓಸ್ವಾಲ್ಡ್ ರೋಡ್ರಿಗಸ್ ವೇದಿಕೆಯಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು, ದಾನಿಗಳು, ಗಣ್ಯರು, ಬೋಧಕ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ನೂತನ ಕಟ್ಟಡದಲ್ಲಿ ವಿಸ್ತೃತ ಸಭಾಂಗಣ, ವಿಜ್ಞಾನ ಪ್ರಯೋಗಾಲಯಗಳು, ಉಪನ್ಯಾಸಕರ ಕೊಠಡಿಗಳು, ತರಗತಿ ಕೋಣೆಗಳು ಹಾಗೂ ಸುಸಜ್ಜಿತ ಶೌಚಾಲಯಗಳು ವಿಧ್ಯಾರ್ಥಿಗಳ ಉಪಯೋಗಕ್ಕೆ ಲಭ್ಯವಿದೆ.
ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಸ್ವಾಗತಿಸಿ, ಉಪನ್ಯಾಸಕರಾದ ಸುಮಾ ಡಿ ವಂದಿಸಿ, ಡಾ. ಆಶಾ ಸಾವಿತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.
-
ದಕ್ಷಿಣ ಕನ್ನಡ21 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು22 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















