ಬಿಗ್ ನ್ಯೂಸ್
Mecca-ಮೆಕ್ಕಾದಲ್ಲಿ ಇದೇ ಮೊದಲ ಬಾರಿಗೆ ವೈಮಾನಿಕ ದಾಳಿ ಎಚ್ಚರಿಕೆ; ಹೌಥಿ ಡ್ರೋನ್ ಹೊಡೆದುರುಳಿಸಿದ ಸೌದಿ
ಯೆಮೆನ್ನ ಹೌಥಿ ಬಂಡುಕೋರರು ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪಶ್ಚಿಮ ಭಾಗದ ಹಲವು ಪ್ರದೇಶಗಳಲ್ಲಿ ಕೆಲಕಾಲ ತುರ್ತು ವೈಮಾನಿಕ ಎಚ್ಚರಿಕೆ ಘೋಷಿಸಲಾಗಿತ್ತು ಎಂದು ವರದಿಯಾಗಿದೆ.
ರಿಯಾದ್: ಯೆಮೆನ್ನ ಹೌಥಿ ಬಂಡುಕೋರರು ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದ ಪಶ್ಚಿಮ ಭಾಗದ ಹಲವು ಪ್ರದೇಶಗಳಲ್ಲಿ ಕೆಲಕಾಲ ತುರ್ತು ವೈಮಾನಿಕ ಎಚ್ಚರಿಕೆ ಘೋಷಿಸಲಾಗಿತ್ತು ಎಂದು ವರದಿಯಾಗಿದೆ.
ಮೆಕ್ಕಾ ಸೇರಿದಂತೆ ಜೆಡ್ಡಾ ಮತ್ತು ತಾಇಫ್ ಗವರ್ನರೇಟ್ಗಳಲ್ಲಿ ವೈಮಾನಿಕ ದಾಳಿ ಬೆದರಿಕೆ ಕುರಿತು ಎಚ್ಚರಿಕೆ ನೀಡಲಾಗಿದ್ದು, ಈಗಾಗಲೇ ಪ್ರಾದೇಶಿಕ ಸಂಘರ್ಷದಿಂದ ಉದ್ವಿಗ್ನಗೊಂಡಿರುವ ಪ್ರದೇಶದಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿದೆ.
ವರದಿಗಳ ಪ್ರಕಾರ, ಮೆಕ್ಕಾದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ವೈಮಾನಿಕ ದಾಳಿ ಬೆದರಿಕೆ ಎಚ್ಚರಿಕೆ’ (Aerial Threat Alert) ನೀಡಲಾಗಿದೆ. ಮೆಕ್ಕಾದ ದಕ್ಷಿಣ ಭಾಗದಲ್ಲಿ ಹೌಥಿ ಬಂಡುಕೋರರಿಗೆ ಸೇರಿದ ಡ್ರೋನ್ವೊಂದನ್ನು ಸೌದಿ ಅರೇಬಿಯಾದ ವಾಯು ರಕ್ಷಣಾ ಪಡೆಗಳು ಪತ್ತೆಹಚ್ಚಿ ಹೊಡೆದುರುಳಿಸಿದ ಬಳಿಕ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ನಿಷೇಧಿತ ವಾಯುಪ್ರದೇಶವನ್ನು ಪ್ರವೇಶಿಸುವ ಮುನ್ನವೇ ಡ್ರೋನ್ ಅನ್ನು ಪತ್ತೆಹಚ್ಚಿ ನಾಶಪಡಿಸಲಾಗಿದೆ. ಇದರ ಬೆನ್ನಲ್ಲೇ ಮೆಕ್ಕಾ ಸೇರಿದಂತೆ ಪಶ್ಚಿಮ ಕರಾವಳಿಯ ಹಲವು ಪ್ರದೇಶಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಅಲರ್ಟ್ ಘೋಷಿಸಲಾಯಿತು ಎಂದು ವರದಿಯಾಗಿದೆ.
ಇರಾನ್ ಬೆಂಬಲಿತ ಹೌಥಿಗಳು ಹಾಗೂ ಸೌದಿ ಅರೇಬಿಯಾ ಬೆಂಬಲಿತ ಯೆಮೆನ್ ಸರ್ಕಾರದ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಮತ್ತಷ್ಟು ಸಂಕೀರ್ಣಗೊಂಡಿದೆ. ಹೌಥಿಗಳು ಸೌದಿ ಅರೇಬಿಯಾ ವಿರುದ್ಧ ಸಮುದ್ರ ದಿಗ್ಬಂಧನ ಘೋಷಿಸಿರುವುದಾಗಿ ಹೇಳಿಕೊಂಡಿದ್ದು, ಕೆಂಪು ಸಮುದ್ರದಲ್ಲಿನ ಸೌದಿ ಹಡಗುಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದಾಗಿ ವರದಿಗಳು ತಿಳಿಸಿವೆ.
ಆದರೆ ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡು ಯಾವುದೇ ದಾಳಿ ನಡೆಸಿಲ್ಲ ಎಂದು ಹೌಥಿ ಬಂಡುಕೋರರು ಸ್ಪಷ್ಟಪಡಿಸಿದ್ದಾರೆ. ವೈಮಾನಿಕ ದಾಳಿ ಬೆದರಿಕೆ ಕುರಿತು ರಿಯಾದ್ ಮಾಡಿರುವ ಆರೋಪ ಸುಳ್ಳು ಎಂದು ಹೌಥಿಗಳು ಹೇಳಿರುವುದಾಗಿ ವರದಿಯಾಗಿದೆ.
ಈ ಬೆಳವಣಿಗೆಯಿಂದ ಪವಿತ್ರ ನಗರವಾದ ಮೆಕ್ಕಾ ಸೇರಿದಂತೆ ಸೌದಿ ಅರೇಬಿಯಾದ ಪಶ್ಚಿಮ ಭಾಗದಲ್ಲಿ ಭದ್ರತಾ ಪರಿಸ್ಥಿತಿ ಕುರಿತು ಹೆಚ್ಚಿನ ಗಮನ ಹರಿಸಲಾಗಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Vitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿಟ್ಲ: ಕೊಲ್ನಾಡು ಗ್ರಾಮದ ಕುಳಾಲು ಬೊಲ್ಪಾದೆಯ ಅಪಾಯಕಾರಿ ರಸ್ತೆ ತಿರುವಿನಲ್ಲಿ ಮಂಗಳವಾರ ಕಾರು ಮತ್ತು ಆಕ್ಟಿವಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಆಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ವಿಟ್ಲ ಪಡೂರು ಗ್ರಾಮದ ಕಡಂಬು ನಿವಾಸಿ, ಮೇಸ್ತಿ ಕೆಲಸ ಮಾಡುತ್ತಿದ್ದ ರಾಮಣ್ಣ ಮೂಲ್ಯ (45) ಎಂದು ಗುರುತಿಸಲಾಗಿದೆ.
ರಾಮಣ್ಣ ಮೂಲ್ಯ ಅವರು ಕುಡ್ತಮುಗೇರು ಕಡೆಯಿಂದ ಕುಳಾಲು ಕಡೆಗೆ ಆಕ್ಟಿವಾದಲ್ಲಿ ತೆರಳುತ್ತಿದ್ದ ವೇಳೆ, ಬೊಲ್ಪಾದೆಯ ಅಪಾಯಕಾರಿ ತಿರುವಿನ ಏರು ರಸ್ತೆಯಲ್ಲಿ ಎದುರಿನಿಂದ ಬಂದ ಮಾರುತಿ ಕಾರು ಆಕ್ಟಿವಾಕ್ಕೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಆಕ್ಟಿವಾ ಸಂಪೂರ್ಣ ಜಖಂಗೊಂಡಿದ್ದು, ರಾಮಣ್ಣ ಮೂಲ್ಯ ಅವರ ಬಲಗೈ ಮೂಳೆ ಮುರಿದಿದೆ. ಡಿಕ್ಕಿಯ ಬಳಿಕ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದಿದೆ.
-
ನಿಧನ ವಾರ್ತೆ23 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ನಿಧನ ವಾರ್ತೆ17 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ21 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು20 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ಸ್ಥಳೀಯ22 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
Uncategorized15 hours agoLawyer Amrutesh-ಸೌಜನ್ಯ ಪ್ರಕರಣ ಮರುತನಿಖೆ : ಸಂತೋಷ್ ರಾವ್ ವಿರುದ್ಧ ಬಲವಾದ ಸಾಕ್ಷ್ಯಗಳಿವೆ: ಧಾರ್ಮಿಕ ಕ್ಷೇತ್ರದ ಮೇಲೆ ಷಡ್ಯಂತ್ರ ನಡೆಯುತ್ತಿದೆ : ಹೈಕೋರ್ಟ್ ವಕೀಲ ಅಮೃತೇಶ್
-
ಶಿಕ್ಷಣ16 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ
-
ಬಿಗ್ ನ್ಯೂಸ್17 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ


















