ಶಿಕ್ಷಣ
Philomena-ಸಂತ ಫಿಲೋಮೀನಾ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ; ಮಕ್ಕಳಲ್ಲಿ ಆತ್ಮವಿಶ್ವಾಸ, ಜೀವನಪ್ರಜ್ಞೆ ಬೆಳೆಸುವುದು ಪೋಷಕರ ಜವಾಬ್ದಾರಿ: ಪ್ರೊ. ದಾಮೋದರ ಕಣಜಾಲು
ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 12 ಶನಿವಾರ, ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು, ಸೆ.15: ಸಂತ ಫಿಲೋಮೀನಾ (ಸ್ವಾಯತ್ತ) ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 12 ಶನಿವಾರ, ಕಾಲೇಜಿನ ರಜತ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಟ್ಟಂಪಾಡಿಯ ಪ್ರಾಂಶುಪಾಲರಾದ ಪ್ರೊ. ದಾಮೋದರ ಕಣಜಾಲು ಅವರು ‘ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಪೋಷಕರ ಕಾಳಜಿ’ ವಿಷಯದ ಕುರಿತು ಮಾಹಿತಿ ನೀಡಿದರು.

“ಮಕ್ಕಳ ಬಗ್ಗೆ ಪೋಷಕರು ಅತಿಯಾದ ಕಾಳಜಿ ವಹಿಸುವ ಅಗತ್ಯವಿಲ್ಲ; ಬದಲಾಗಿ ಮಕ್ಕಳು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳುವಂತೆ ಬೆಳೆಸಬೇಕು. ಕೆಲವು ಪೋಷಕರು ತಮ್ಮ ಮಕ್ಕಳ ಚಟುವಟಿಕೆಗಳು ಹಾಗೂ ಮನೋಭಾವವನ್ನು ತಿಳಿದುಕೊಳ್ಳಲು ಸೂಕ್ತ ಗಮನ ಹರಿಸುವುದಿಲ್ಲ. ಮಕ್ಕಳು ದಾರಿ ತಪ್ಪಿದ ಬಳಿಕ ಅವರನ್ನು ಸರಿದಾರಿಗೆ ತರುವುದು ಕಷ್ಟವಾಗುತ್ತದೆ. ಆದ್ದರಿಂದ ಪೋಷಕರು ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು ಎಂದು ಸಲಹೆ ನೀಡಿ,“ಮಕ್ಕಳಿಗೆ ಬೀಗುವುದನ್ನಲ್ಲ, ಬಗ್ಗುವುದನ್ನು ಕಲಿಸಬೇಕು. ಈ ಮೌಲ್ಯಗಳು ಅವರಲ್ಲಿ ಮೂಡಬೇಕು. ಇದರಿಂದ ಜೀವನದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ದೊರೆಯುತ್ತದೆ. ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸಬೇಕು. ‘ಜೀವನದಲ್ಲಿ ನಾನು ಏನನ್ನೋ ಸಾಧಿಸುತ್ತಿದ್ದೇನೆ’ ಎಂಬ ಆತ್ಮಸಂತೃಪ್ತಿಯ ಜೀವನವನ್ನು ಕಟ್ಟಿಕೊಡುವ ಜವಾಬ್ದಾರಿ ಪೋಷಕರ ಮೇಲಿದೆ” ಎಂದು ಪ್ರೊ. ದಾಮೋದರ ಕಣಜಾಲು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂತ ಫಿಲೋಮೀನಾ ಕಾಲೇಜಿನ ಸಂಚಾಲಕರಾದ ಅತಿ ವಂI ಡಾI ಜಾನ್ ಬಿ. ಸಲ್ದಾನ್ಹಾ. ಅವರು ಜೆನ್-ಜಿ ಪೀಳಿಗೆಯ ಕುರಿತು ಮಾತನಾಡಿ, “ಮಕ್ಕಳಲ್ಲಿ ಪ್ರಶ್ನಿಸುವ ಅಭ್ಯಾಸ ಬೆಳೆಯಬೇಕು. ಅವರಿಗೆ ಮೂಲಭೂತ ಅಗತ್ಯಗಳು ದೊರೆಯುವಂತಾಗಬೇಕು. ಅವರು ಉತ್ತಮ ಕೆಲಸ ಹಾಗೂ ಉತ್ತಮ ಜೀವನದತ್ತ ಸಾಗಲು ಸೂಕ್ತ ಮಾರ್ಗದರ್ಶನದ ಅಗತ್ಯವಿದೆ. ಮಕ್ಕಳ ಪ್ರಶ್ನೆಗಳಿಗೆ ನಾವು ಸರಿಯಾದ ಉತ್ತರಗಳನ್ನು ನೀಡಬೇಕಾಗಿದೆ” ಎಂದರು.

ಲಿಂಗ ಸಮಾನತೆಯ ಅಗತ್ಯವನ್ನು ಒತ್ತಿ ಹೇಳಿದ ಅವರು, “ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ಗೌರವ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ಅಗತ್ಯವಿದೆ” ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂIಡಾI ಆ್ಯಂಟನಿ ಪ್ರಕಾಶ್ ಮೊಂತೇರೊ, ಕಾರ್ಯಕ್ರಮಕ್ಕೆ ಪ್ರಸ್ತಾವಿಕ ನುಡಿಗಳನ್ನಾಡಿದರು.

ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಪ್ರಶಾಂತ್ ರೈ ಅವರು ವಾರ್ಷಿಕ ವರದಿ ವಾಚಿಸಿದರು. ಖಜಾಂಚಿ ಶ್ರೀಮತಿ ಪ್ರೇಮಲತಾ ಕೆ. ಅವರು ಆಯವ್ಯಯ ಪತ್ರ ಮಂಡಿಸಿದರು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ವಿ. ಅವರ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಅಧಿಕಾರ ಹಸ್ತಾಂತರ ನಡೆಯಿತು.
ನೂತನ ಅಧ್ಯಕ್ಷರಾಗಿ ಸತೀಶ್ ನಾಯ್ಕ್, ಕಡಬ , ಉಪಾಧ್ಯಕ್ಷರಾಗಿ ಶ್ರೀಮತಿ ಮೀನಾಕ್ಷಿ ವಿ. ರೈ ಆಯ್ಕೆಯಾದರು.

ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರದೋ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ವಾರಿಜ ಎಂ. ಮತ್ತು ಬಳಗ ಪ್ರಾರ್ಥಿಸಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಡಾ. ಅಬೂಬಕರ್ ಆರ್ಲಪದವು ಸ್ವಾಗತಿಸಿ ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ. ವಂದಿಸಿ, ಶ್ರೀಮತಿ ಶಿವಾನಿ ಮಲ್ಯ ಎನ್. ನಿರೂಪಿಸಿದರು.
ಶಿಕ್ಷಣ
Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.
ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ಮಾತನಾಡಿದರು.
ಪುತ್ತೂರು,ಅ.1: ಸ್ಪರ್ಧಾತ್ಮಕ ಪರೀಕ್ಷೆಗಳಿಂದ ಸರ್ಟಿಫಿಕೇಟ್ ಮಾತ್ರವಲ್ಲ, ಉಜ್ವಲ ಭವಿಷ್ಯ, ಒಳ್ಳೆಯ ವೇತನ ಹಾಗೂ ಹೆಸರು ಇತ್ಯಾದಿಗಳೆಲ್ಲವೂ ಲಭಿಸಲಿದೆ. ಇಂದಿನ ಕಾಲದಲ್ಲಿ ಕಲಿಕೆಗೆ ಬೇಕಾದ ಅನೇಕ ಸಂಪನ್ಮೂಲಗಳು ಲಭ್ಯವಿರುವಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪೂರ್ವಸಿದ್ಧತೆ ಎಂಬುದು ನಾವು ಉತ್ತೀರ್ಣರಾಗಲು ಅತ್ಯಗತ್ಯ. ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ಸಕ್ರಿಯರಾಗಿ ಅಧ್ಯಯನ ನಡೆಸಿ ಎಲ್ಲಾ ರೀತಿಯಿಂದಲೂ ಸಿದ್ಧರಾಗಿ ಪರೀಕ್ಷೆಯನ್ನು ಜಯಿಸಬೇಕು ಎಂದು ಬೆಳ್ಳಾರೆಯ ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪವಿತ್ರಾ ತಿಳಿಸಿದರು.
ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದೊಂದಿಗೆ ನಡೆದ ಐದು ದಿನಗಳ ‘ಯುಜಿಸಿ-ನೆಟ್/ಕೆ-ಸೆಟ್ ಪರೀಕ್ಷೆಗಳ ಪ್ರಿಪರೇಷನ್ ಟೂಲ್ಸ್’ ವಿಷಯದ ಕುರಿತಾದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ ಅಧ್ಯಾಪಕ ವೃತ್ತಿಯನ್ನು ಬಯಸಿ ಹೋಗುವವರಿಗೆ, ಸಂಶೋಧನಾ ಕ್ಷೇತ್ರವನ್ನು ಆರಿಸುವವರಿಗೆ ನೆಟ್ ಹಾಗೂ ಕೆ-ಸೆಟ್ ಪರೀಕ್ಷೆಗಳನ್ನು ಪೂರ್ಣಗೊಳಿಸುವುದು ಅಗತ್ಯ. ಪರೀಕ್ಷೆಗೆ ಸಿದ್ಧರಾಗಲು ನಿರಂತರವಾಗಿ ಓದಿನಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ಇವುಗಳ ಪಠ್ಯಕ್ರಮಗಳನ್ನು ಅಭ್ಯಾಸಿಸಿ ಪರಿಣತರಿಂದ ಮಾರ್ಗದರ್ಶನವನ್ನು ಪಡೆದು ಯಶಸ್ಸು ಗಳಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ.ಬಿ ಸ್ವಾಗತಿಸಿ ಪ್ರಥಮ ಎಂಕಾಂ ವಿದ್ಯಾರ್ಥಿ ಧನರಾಜ್ ವಂದಿಸಿದರು. ಪ್ರಥಮ ಎಂಕಾಂ ವಿದ್ಯಾರ್ಥಿನಿ ಪ್ರತೀಕ್ಷಾ ಯು.ಕೆ ನಿರೂಪಿಸಿದರು.
ಶಿಕ್ಷಣ
Philomena-ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಆಚರಣೆಯು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ ಸಹಾಯಕ ಧರ್ಮಗುರು
ಫಾ. ಮರ್ವಿನ್ ಲೋಬೊ ಮಾತನಾಡಿ, ಗಾಂಧೀಜಿಯವರ ಜೀವನ ನಮಗೆ ದಾರಿದೀಪವಾಗಿದ್ದು, ಪ್ರತಿಯೊಬ್ಬರು ಅವರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯಬೇಕು.
ಮುಖ್ಯವಾಗಿ ಸತ್ಯ ಮತ್ತು ಅಹಿಂಸೆ ಗಾಂಧೀಜಿಯವರು ತೋರಿಸಿದ ಎರಡು ಮಾರ್ಗಗಳು. ಇಂದು ಅಹಿಂಸೆ ಕೇವಲ ಭೌತಿಕವಾಗಿ ಅಷ್ಟೇ ಅಲ್ಲದೆ, ಸಾಮಾಜಿಕ ಜಾಲತಾಣ ಗಳಲ್ಲಿ ಕೂಡ ಪಾಲನೆಯನ್ನು ಮಾಡಬೇಕಾಗಿದೆ. ಗಾಂಧೀಜಿಯ ಮರಣದ 78 ವರ್ಷಗಳ ನಂತರವೂ ಗಾಂಧೀಜಿಯವರ ಜೀವನ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಮಹಾತ್ಮಾ ಗಾಂದೀಜಿಯವರ ಸರಳ ಜೀವನ ನಮಗೆ ಪಾಠವಾಗಬೇಕು. ಅವರಿಗೆ ಅತ್ಯಂತ ವಿಲಾಸಿ ಜೀವನವನ್ನು ನಡೆಸುವ ಅವಕಾಶ ಇದ್ದರೂ, ಕೂಡ ಭಾರತೀಯರಿಗಾಗಿ ಅವರು ಸರಳ ಮತ್ತು ನ್ಯಾಯ ಸಮ್ಮತ ಜೀವನವನ್ನು ಆಯ್ಕೆ ಮಾಡಿಕೊಂಡರು.

ಸತ್ಯದೊಂದಿಗಿನ ನನ್ನ ಪ್ರಯೋಗಗಳು ಎನ್ನುವ ಪುಸ್ತಕದಲ್ಲಿ ಅವರು ಅವರ ಜೀವನದಲ್ಲಿ ನಡೆದಂತಹ ಘಟನೆಗಳನ್ನು ವಿವರಿಸಿದ್ದು, ಇಂದಿನ ಯುವಕರು ಕಡ್ಡಾಯವಾಗಿ ಈ ಪುಸ್ತಕವನ್ನು ಓದಬೇಕೆಂದು ತಿಳಿಸಿದರು.
ಉಪನ್ಯಾಸಕರಾದ ಭರತ್ ಕುಮಾರ್ ಗಾಂಧೀಜಿಯವರ ತತ್ವ, ಸಿದ್ಧಾಂತಗಳ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ಯಶವಂತ್ ಎಂ ಡಿ ಹಾಗೂ ಗೋವಿಂದ್ ಪ್ರಕಾಶ್ ಸಿ. ಏಚ್ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಸುಮಾ ಡಿ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
-
ಪುತ್ತೂರು19 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್22 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು22 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್21 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ22 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ಅಪರಾಧ20 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ21 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ22 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ


















