Connect with us

ನಿಧನ ವಾರ್ತೆ

Murder-ಆಸ್ತಿ ಹಂಚಿಕೆ ವಿಚಾರ ವಿವಾದ: ಗ್ರಾ.ಪಂ.ಕಚೇರಿಯಲ್ಲೇ ಮಾಜಿ ಸೈನಿಕ ಹಾಗೂ ಪುತ್ರಿಯನ್ನು ಕೊಚ್ಚಿ ಕೊಲೆ

Published

on

Ad Widget

Ad Widget

Ad Widget

Ad Widget

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ಹೋಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಮೃತಪಟ್ಟವರು.

Ad Widget

Ad Widget

Ad Widget

Ad Widget

ಬೆಳಗಾವಿ: ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ಹೋಗಿ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಭೀಕರ ಘಟನೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಬುಧವಾರ ನಡೆದಿದೆ.

Ad Widget

Ad Widget alt="Ad Widget"/>

Ad Widget

ಅವರಾದಿ ಗ್ರಾಮದ ನಿವಾಸಿ, ಮಾಜಿ ಸೈನಿಕ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಮೃತಪಟ್ಟವರು. ದಾಳಿಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget <> Ad Widget

ರುದ್ರಪ್ಪ ಕುಂದರಗಿ ಕುಟುಂಬದಲ್ಲಿ ಹಲವು ದಿನಗಳಿಂದ ಆಸ್ತಿ ಹಂಚಿಕೆ ವಿಚಾರವಾಗಿ ವಿವಾದ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಮಾತುಕತೆ ಹಾಗೂ ಕಾಗದಪತ್ರಗಳ ಪರಿಶೀಲನೆಗಾಗಿ ರುದ್ರಪ್ಪ ಹಾಗೂ ಶಶಿಕಲಾ ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು.

ಈ ವೇಳೆ ಮಾತಿನ ಚಕಮಕಿ ನಡೆದು ಜಗಳ ವಿಕೋಪಕ್ಕೆ ತಿರುಗಿದೆ. ರುದ್ರಪ್ಪ ಅವರ ಇಬ್ಬರು ಸಹೋದರರು ಹಾಗೂ ಸಹೋದರನ ಪುತ್ರ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

ಗ್ರಾಮ ಪಂಚಾಯಿತಿ ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಎದುರೇ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರುದ್ರಪ್ಪ ಹಾಗೂ ಶಶಿಕಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಕಿತ್ತೂರು ಠಾಣೆಯ ಸಿಪಿಐ ಶಿವಾನಂದ ಗುಡಗನಟ್ಟಿ ಹಾಗೂ ಪಿಎಸ್‌ಐ ಭರತ್ ಎಸ್. ಗಂಗಾಧರ ಹಂಪಣ್ಣವರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.

ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Ad Widget

Ad Widget

ಘಟನೆಯಲ್ಲಿ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಅವರು ಸೆಲೂನ್ ಸಿಬ್ಬಂದಿ ಎಂದು ತಿಳಿದುಬಂದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!