ಶಿಕ್ಷಣ
Vivekananda-ವಿವೇಕಾನಂದ ವಿದ್ಯಾವರ್ಧಕ ಸಂಫದಲ್ಲಿ 45ನೇ ವರ್ಷದ ಗಣೇಶೋತ್ಸವ; ವೈಭವದ ಶೋಭಾಯಾತ್ರೆಗೆ ಸಾಕ್ಷಿಯಾದ 7000ಕ್ಕೂ ಹೆಚ್ಚು ವಿದ್ಯಾರ್ಥಿಗಳು
ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ.14 ರಿಂದ ಸೆ.16ರವರೆಗೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನಲ್ಲಿ ಗಣೇಶೋತ್ಸವವನ್ನು ಆಚರಿಸಲಾಯಿತು.
ಪುತ್ತೂರು, ಸೆ.16: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ.14 ರಿಂದ ಸೆ.16ರವರೆಗೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನಲ್ಲಿ ಗಣೇಶೋತ್ಸವವನ್ನು ಆಚರಿಸಲಾಯಿತು.

ಈ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧಾರ್ಮಿಕ ಉಪನ್ಯಾಸವನ್ನು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಕಾರ್ಯದರ್ಶಿ ಲತೇಶ್ ಬಾಕ್ರಬೈಲು ಮಾತನಾಡಿ, ಸಮಾಜದಲ್ಲಿರುವ ನೂರಾರು ಒಡಕುಗಳನ್ನು ದೂರಗೊಳಿಸಿ, ಪ್ರತಿಯೊಬ್ಬರನ್ನು ಒಂದುಗೂಡಿಸುವ ಉದ್ದೇಶದಿಂದ ಆಚರಣೆಗೆ ಬಂದ ಹಬ್ಬ ಚೌತಿ. ರಾಷ್ಟ್ರೀಯತೆ ಮತ್ತು ಧರ್ಮ ಒಂದೇ ಎಂದು ನಂಬಿದ ಪರಂಪರೆ ಭಾರತದ್ದು. ತ್ಯಾಗ ಪರಂಪರೆಯನ್ನು ಹೊಂದಿರುವ ಭಾರತೀಯರು ಸಮಾಜಕ್ಕಾಗಿ ಧಾರ್ಮಿಕತೆಯ ನಡುವೆ ಬದುಕಿದವರು. ಇದರಲ್ಲಿ ಪ್ರಮುಖ ಪಾತ್ರ ವಹಿಸಿರುವುದು ಪಂಚ ಪರಿವರ್ತನೆ ಎಂಬ ವಿಷಯ. ಅದು ನಮ್ಮ ಮನೆಗಳಿಂದಲೇ ಆರಂಭವಾದಾಗ ಮಾತ್ರ ಸಮಾಜ ಮತ್ತು ದೇಶ ಬೆಳೆಯಲು ಸಾಧ್ಯ ಎಂದು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಮತ್ತು ಹಿಂದೂ ಧಾರ್ಮಿಕತೆಯ ಕೊರತೆಯನ್ನು ನೀಗಿಸಿ, ಧಾರ್ಮಿಕ ಪದ್ಧತಿಗಳನ್ನು ಉಳಿಸಿಕೊಳ್ಳಲು ಚೌತಿ ಆಚರಣೆ ಒಂದು ಉತ್ತಮ ದಾರಿ. ರಾಷ್ಟ್ರೀಯ ಜಾಗೃತಿಯ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬಿತ್ತಿದಾಗ ಪರಿವರ್ತನೆಯ ಆಶಯಗಳು ಸುಲಭವಾಗಿ ತಲುಪುತ್ತವೆ. ವಿದ್ಯಾರ್ಥಿಗಳಲ್ಲಿ ಧಾರ್ಮಿಕ ನಂಬಿಕೆ ಮತ್ತು ಧರ್ಮದ ಭಾವನೆಯನ್ನು ಬೆಳೆಸುವಲ್ಲಿ ಗಣೇಶೋತ್ಸವ ಒಂದು ಪ್ರಮುಖ ಆಚರಣೆಯಾಗಿ ಪಾತ್ರ ವಹಿಸಿದೆ ಎಂದರು.
ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯ ನಾರಾಯಣ ಕೆ.ಎಂ, ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ, ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್, ವಿವೇಕಾನಂದ ಶ್ರೀ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ, ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಂಗ್ಲ ವಿಭಾಗದ ಉಪನ್ಯಾಸಕ ಪರಮೇಶ್ವರ ಶರ್ಮಾ ಪಿ.ಕೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ. ಸ್ವಾಗತಿಸಿ, ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಪ್ರಭು ಪ್ರಾರ್ಥಿಸಿದರು. ವಿವೇಕಾನಂದ ಪದವಿ ಕಾಲೇಜಿನ ಭಾರತೀಯ ಸಂಸ್ಕೃತಿ ಮತ್ತು ಲಲಿತಕಲಾ ಅಧ್ಯಯನ ಕೇಂದ್ರದ ಸಂಯೋಜಕಿ ಹಾಗೂ ಸಮಾಜಶಾಸ್ತç ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್. ವಂದಿಸಿ, ತೃತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ ಕೆ. ಮತ್ತು ಸುಮನಾ ನಿರೂಪಿಸಿದರು.
ಗಣಪತಿ ಹವನ, ರಂಗಪೂಜೆ, ಸರ್ವಸೇವೆ, ಮಹಾಪೂಜೆ, ಹರಕೆ ಸೇವೆ, ವಿದ್ಯಾರಕ್ಷೆ, ಕರ್ಪೂರಾರತಿ ಸೇವೆಗಳು ನಡೆದವು. ಭಕ್ತರು ಗಣೇಶನಿಗೆ ಸ್ವಯಂ ಆರತಿ ಬೆಳಗುವ ಅವಕಾಶ ಕಲ್ಪಿಸಲಾಗಿತ್ತು.
ಮೂರು ದಿನಗಳ ಕಾಲ ನಡೆದ ಈ ಆಚರಣೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ತೆಂಕಿಲ ವಿವೇಕಾನಂದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ, ಅರ್ಕ ಕೊಡಿಪ್ಪಾಡಿ ಮಹಾದೇವಿ ಭಜನಾ ಮಂಡಳಿ, ಕುಂಟ್ಯಾನ ಭ್ರಾಮರಿ ಭಜನಾ ತಂಡ, ವಿವೇಕಾನಂದ ಇನ್‌ಸ್ಟಿಟ್ಯೂಟ್ ಆಫ್ ಫಾರ್ಮಾಟಿಕಲ್ ಸೈನ್ಸಸ್, ವಿವೇಕಾನಂದ ಪದವಿ ಕಾಲೇಜು (ಸ್ವಾಯತ್ತ), ಪಡ್ಡಾಯೂರು ಅನ್ನಪೂರ್ಣೇಶ್ವರಿ ಭಜನಾ ಮಂಡಳಿ, ಕಬಕ ಶ್ರೀ ಮಹಾದೇವಿ ಮಹಿಳಾ ಮಂಡಳಿ, ವಿವೇಕಾನಂದ ಕಾಲೇಜು ಆಫ್ ಇಂಜಿನಿಯರ್ ಆ್ಯಂಡ್ ಟೆಕ್ನಾಲಜಿ, ವಿವೇಕಾನಂದ ಕಾನೂನು ಮಹಾವಿದ್ಯಾಲಯ, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜುಗಳಿಂದ ವಿವಿಧ ಸಾಂಸ್ಕೃತಿಕ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು.
ವೇದಿಕೆಯಲ್ಲಿ ವಿವೇಕಾನಂದ ಪದವಿ ಪತ್ರಿಕೋದ್ಯಮ ವಿಭಾಗದ ಪ್ರಾಯೋಗಿಕ ಪತ್ರಿಕೆ ವಿಕಸನ ಮತ್ತು ಸ್ನಾತಕೋತ್ತರ ಸಂಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವಿಕಾಸ ಪ್ರಾಯೋಗಿಕ ಪತ್ರಿಕೆ ಮತ್ತು ವಿನೂತನ ಪಾಕ್ಷಿಕ ಪತ್ರಿಕೆಯ ಗಣೇಶೋತ್ಸವದ ವಿಶೇಷ ಸಂಚಿಕೆಗಳನ್ನು ಬಿಡುಗಡೆಗೊಳಿಸಲಾಯಿತು.
ರೀಲ್ಸ್ ಮೇಕಿಂಗ್ ಸ್ಪರ್ಧೆ
45ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ರೀಲ್ಸ್ ಮೇಕಿಂಗ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಕಾಲೇಜಿನ ವಿದ್ಯಾರ್ಥಿನಿ ಸಹನಾ ಕೋಲ್ಪೆ (ಪ್ರಥಮ), ಸ್ವಸ್ತಿಕ್.ಎಂ (ದ್ವಿತೀಯ) ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿ ಸುಮಂತ್ ಪಿ.(ತೃತೀಯ) ಸ್ಥಾನ ಪಡೆದರು. ಅನಿಮೇಟೆಡ್ ರೀಲ್ಸ್ ಸ್ಪರ್ಧೆಯಲ್ಲಿ ಹರ್ಷಿತ್ ಎಂ.ಬಿ ಪ್ರಥಮ ಸ್ಥಾನ ಪಡೆದುಕೊಂಡರು.
ಪುಸ್ತಕ ಹಬ್ಬ
ಮುಖ್ಯ ಆಕರ್ಷಣೆಯಾಗಿ ಮಂಗಳೂರು ಸಾಹಿತ್ಯ ಕೇಂದ್ರದ ಆಶ್ರಯದಲ್ಲಿ ಪುಸ್ತಕ ಹಬ್ಬ ನಡೆಯಿತು. ಇಲ್ಲಿ ಮಕ್ಕಳ ಸಣ್ಣ ಕತೆಗಳು, ತುಳುನಾಡಿನ ಐತಿಹಾಸಿಕ ಕಥೆ ಪುಸ್ತಕಗಳು, ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಹೀಗೆ ೩೩೦ಕ್ಕಿಂತಲೂ ಹೆಚ್ಚಿನ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ನಡೆಯಿತು. ಈ ಪುಸ್ತಕ ಹಬ್ಬಕ್ಕೆ ವಿದ್ಯಾರ್ಥಿಗಳಿಂದ, ಶಿಕ್ಷಕರಿಂದ ಹಾಗೂ ಭಕ್ತರಿಂದ ಉತ್ತಮ ಪ್ರತಿಕ್ರಿಯೆ ದೊರಕಿತು.
ಶೋಭಾ ಯಾತ್ರೆ
ಸೆ.16ರಂದು ಸಂಜೆ ಗಣಪತಿಯ ಶೋಭಾ ಯಾತ್ರೆಯೂ ನಗರದ ವಿವೇಕಾನಂದ ಕ್ಯಾಂಪಸ್‌ನಿಂದ ಆರಂಭಗೊಂಡು ಬೊಳುವಾರು ಮಾರ್ಗವಾಗಿ ಸಾಗಿ ಹಾರಾಡಿಯಲ್ಲಿ ಗಣೇಶನ ಮೂರ್ತಿಯನ್ನು ವಿಸರ್ಜನೆಗೊಳಿಸುವ ಮೂಲಕ ಗಣೇಶೋತ್ಸವ ಸಂಪನ್ನಗೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವಿಧ ವಿದ್ಯಾಸಂಸ್ಥೆಗಳ 7000ಕ್ಕೂ ಅಧಿಕ ವಿದ್ಯಾರ್ಥಿಗಳು ಭವ್ಯ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ವಿದ್ಯಾರ್ಥಿ ತಂಡಗಳಿಂದ ಚಂಡೆ, ಕುಣಿತ ಭಜನೆ, ಹುಲಿವೇಷ, ಟ್ಯಾಬ್ಲೋ ಹಾಗೂ ಹಲವು ವಾದನಗಳೊಂದಿಗೆ ಗಣಪತಿಯ ಮೆರವಣಿಗೆ ಸಾಗಿತು.
ಶಿಕ್ಷಣ
Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ
ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿಕ್ಷಣ
Ambika-ಅಂಬಿಕಾ ವಿದ್ಯಾಲಯದ ಸಿಬಿಎಸ್‌ಇ ಸಂಸ್ಥೆಯಲ್ಲಿ ಯೋಧ ಗೌರವ ಕಾರ್ಯಕ್ರಮ; ಸೈನಿಕರ ಪ್ರಾಣರಕ್ಷಣೆಗೆ ಆಧುನಿಕ ತಂತ್ರಜ್ಞಾನಗಳಿವೆ – ಸುಂದರ ಪೂಜಾರಿ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದ ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಅವರು ಮಾತನಾಡಿದರು.
ಪುತ್ತೂರು: ಈಗಿನ ದಿನಮಾನಗಳಲ್ಲಿ ಸೈನ್ಯದ ಎಲ್ಲಾ ವಿಭಾಗಗಳಲ್ಲೂ ಸೈನಿಕರ ಪ್ರಾಣಕ್ಕೆ ಅಪಾಯವಾಗದಂತೆ ತಡೆಯಲು ತಂತ್ರಜ್ಞಾನ ಸಹಾಯಕವಾಗಿದೆ. ಸೈನಿಕರ ಪ್ರಾಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣದಿಂದ ಕರ್ತವ್ಯದ ಸಮಯದಲ್ಲಿ ಸೈನಿಕರು ಎಲ್ಲಿದ್ದರೂ ಮಿಲಿಟರಿ ವ್ಯವಸ್ಥೆಗೆ ಸೂಚನೆ ಸಿಗುವ ತಂತ್ರಜ್ಞಾನವಿದೆ ಎಂದು ದೇಶದ ಗಡಿ ಭದ್ರತಾ ಪಡೆಯಲ್ಲಿ ಸತತವಾಗಿ 34 ವರ್ಷಗಳ ಸೇವೆಯನ್ನು ಸಲ್ಲಿಸಿ ಜುಲೈ 31ರಂದು ನಿವೃತ್ತಿ ಹೊಂದಿ ಮರಳಿ ಊರಿಗೆ ಆಗಮಿಸಿದ ಸುಂದರ ಪೂಜಾರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯಲ್ಲಿ ಶನಿವಾರ ಆಯೋಜಿಸಲಾದ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ದೇಶಸೇವೆ ಮಾಡಲು ಸೈನ್ಯಕ್ಕೆ ಸೇರುವುದು ಒಂದು ಉತ್ತಮ ಸಾಧ್ಯತೆ. ಹಾಗೆಂದು ಸೈನ್ಯಕ್ಕೆ ಸೈನಿಕರಾಗಿಯೇ ಸೇರಬೇಕೆಂದಿಲ್ಲ. ವೈದ್ಯರಾಗಿಯೂ, ಅಭಿಯಂತರರಾಗಿಯೂ, ತಂತ್ರಜ್ಞರಾಗಿಯೂ ಕೂಡ ಸೇವೆಯನ್ನು ಸಲ್ಲಿಸಲು ಅವಕಾಶಗಳಿವೆ ಎಂದರಲ್ಲದೆ ತಮ್ಮ ದೀರ್ಘಕಾಲದ ಅನುಭವದ ಸಾರವನ್ನು ವಿದ್ಯಾಥಿಗಳೊಂದಿಗೆ ಹಂಚಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಸೈನಿಕರು ಕೇವಲ ಯುದ್ಧದ ಸಂದರ್ಭದಲ್ಲಿ ಮಾತ್ರವಲ್ಲದೆ ಪ್ರಾಕೃತಿಕ ವಿಕೋಪಗಳ ಸಂದರ್ಭದಲ್ಲಿಯೂ ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗುತ್ತಾರೆ. ತಮ್ಮ ಕುಟುಂಬವನ್ನು ಬಿಟ್ಟು ಸಮಾಜದ ವಿವಿಧ ಕುಟುಂಬಗಳ ರಕ್ಷಣೆಗಾಗಿ ತಮ್ಮನ್ನು ಮುಡಿಪಾಗಿಟ್ಟುಕೊಳ್ಳುತ್ತಾರೆ. ಹಾಗಾಗಿ ನಾವು ಎಲ್ಲೇ ಹೋಗಲಿ, ಎಷ್ಟೇ ದೂರ ಪ್ರಯಾಣಿಸಲಿ ನಮ್ಮ ಹೆಮ್ಮೆಯ ಸೈನಿಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಬಿಕಾ ವಿದ್ಯಾಸಂಸ್ಥೆಯು ಕೇವಲ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡಿಲ್ಲ. ನಮ್ಮ ದೇಶದ ಸೈನಿಕರನ್ನೂ ಒಡಗೂಡಿ ಅಂಬಿಕಾ ಪರಿವಾರವೆನಿಸಿಕೊಂಡಿದೆ ಎಂದು ನುಡಿದರು.
ಸುಂದರ ಪೂಜಾರಿ ದಂಪತಿಯನ್ನು ಅಂಬಿಕಾ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.
ಶಿಕ್ಷಣ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಮಾತಾಡಿದರು.

ಪುತ್ತೂರು: ಲೈಂಗಿಕ ಕಿರುಕುಳ ಎನ್ನುವುದು ಕೇವಲ ದೈಹಿಕ ಸ್ಪರ್ಶಕ್ಕೆ ಸೀಮಿತವಾಗಿಲ್ಲ ಬದಲಾಗಿ ಆಶ್ಲೀಲ ಸಂದೇಶಗಳನ್ನು ಕಳುಹಿಸುವುದು, ಮಾತುಗಳನ್ನಾಡುವುದು ಅಥವಾ ಅಂತಹ ಯಾವುದೇ ರೀತಿಯ ವರ್ತನೆಗಳೂ ಕೂಡಾ ಇದರಲ್ಲಿ ಸೇರಿವೆ ಎಂದು ಪುತ್ತೂರಿನ ಪ್ರಗತಿ ಸ್ಪೆಶಾಲಿಟಿ ಆಸ್ಪತ್ರೆಯ ವೃದ್ಧಾಪ್ಯ ರೋಗ ಮತ್ತು ಮಧುಮೇಹ ತಜ್ಞರಾದ ಡಾ. ಅನನ್ಯಲಕ್ಷ್ಮೀ ಸಂದೀಪ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ಆಂತರಿಕ ದೂರು ಸಮಿತಿ, ಡಾಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗ, ಡಾಟಾ ಸೈನ್ಸ್ ವಿದ್ಯಾರ್ಥಿ ಸಂಘ, ಪೇರೆಂಟ್ ರಿಲೇಶನ್ ಸೆಲ್ ಮತ್ತು ಗ್ರೀವೆನ್ಸ್ ರೆಡ್ರೆಸ್ಸಲ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಪರದೆಯಿಂದ ಆತ್ಮದ ಕಡೆಗೆ: ಜೆನ್-ಜೀ ನಡವಳಿಕೆಗಳು, ಮಿತಿಗಳು ಮತ್ತು ಅದರಾಚೆಗಿನ ಆಯಾಮಗಳು ಈ ವಿಷಯದ ಬಗ್ಗೆ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತಾಡಿದರು.
ಇಂದಿನ ಪೀಳಿಗೆ, ಅವರ ಪೋಷಕರು, ಶಿಕ್ಷಕರ ನಡುವಿನ ವ್ಯತ್ಯಾಸ ಮತ್ತು ಜವಾಬ್ಧಾರಿಗಳ ಬಗ್ಗೆ ವಾಸ್ತವಿಕ ಉದಾಹರಣೆಗಳನ್ನು ಉಲ್ಲೇಖಿಸಿದ ಅವರು ಯುವಜನತೆ ಪಾಲಿಸಬೇಕಾದ ಮತ್ತು ಪಾಲಿಸಬಾರದ ವಿಷಯಗಳ ಬಗ್ಗೆ ತಿಳಿಸಿದರು. ಒಬ್ಬರ ಸಾಮರ್ಥ್ಯವನ್ನು, ದೇಹದ ಆಕಾರವನ್ನು ಟೀಕಿಸುವುದು ಕೂಡಾ ಅಪರಾಧ. ಅಂತಹ ಸಂದರ್ಭದಲ್ಲಿ ಅದನ್ನು ಎದುರಿಸುವ, ಪ್ರತಿಕ್ರಿಯಿಸುವ ಬಗೆ ಮತ್ತು ದೂರು ಸಲ್ಲಿಸಬೇಕಾದ ಪ್ರಾಧಿಕಾರಗಳ ಬಗ್ಗೆ ತಿಳಿಸಿದರು. ನೀವು ಕೋಪಗೊಂಡಿದ್ದರೆ, ಅತಿಯಾದ ಉತ್ಸಾಹದಲ್ಲಿದ್ದರೆ ಅಥವಾ ಒತ್ತಡದಲ್ಲಿದ್ದರೆ ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು 10 ನಿಮಿಷಗಳ ಕಾಲ ಮುಂದೂಡಿ. ಸಾಧ್ಯವಾದರೆ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಮೊದಲು ಒಂದು ರಾತ್ರಿ ಚೆನ್ನಾಗಿ ಯೋಚಿಸಿ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಕ್ಷ.ಎಸ್.ಆರ್ ಮಾತನಾಡಿ ಮೊದಲು ಆಲಿಸಿ ನಂತರ ಮಾತನಾಡಿ, ಕೆಲವೊಮ್ಮೆ ಅಲ್ಲಿ ಉಪಸ್ಥಿತರಿದ್ದು ಮೌನವಾಗಿ ಆಲಿಸುವುದರಿಂದ ಜೀವನದಲ್ಲಿ ಹೆಚ್ಚಿನ ಪ್ರಯೋಜನಗಳಾಗುತ್ತದೆ ಎಂದರು. ಒಬ್ಬ ಉತ್ತಮ ಇಂಜಿನಿಯರ್ ಆಗುವ ಜತೆಯಲ್ಲಿ ದೇಶದ ಪ್ರಜ್ಞಾವಂತ ಪ್ರಜೆಯಾಗಿ ಎಂದು ನುಡಿದರು.
ಕಾಲೇಜು ಆಂತರಿಕ ದೂರು ಸಮಿತಿಯ ಅಧ್ಯಕ್ಷೆ ಡಾ.ಜೋತಿಮಣಿ.ಕೆ, ಡಾಟಾಸೈನ್ಸ್ ವಿಭಾಗ ಮುಖ್ಯಸ್ಥೆ ಪ್ರೊ.ರೂಪಾ.ಜಿ.ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
-
Uncategorized15 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized17 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ19 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ21 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್20 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ20 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















