ಕೈಕಂಬದಲ್ಲಿ ನಿಲ್ಲಿಸಲಾಗಿದ್ದ ಎರಡು ಜೀಪ್‌ಗಳಲ್ಲೂ ಒಂದೇ […]" /> ಕೈಕಂಬದಲ್ಲಿ ನಿಲ್ಲಿಸಲಾಗಿದ್ದ ಎರಡು ಜೀಪ್‌ಗಳಲ್ಲೂ ಒಂದೇ […]"> Manjeshwar-ಮಂಜೇಶ್ವರ: ಒಂದೇ ನಂಬರ್ ಪ್ಲೇಟ್‌ ಹೊಂದಿದ್ದ 2 ಥಾರ್‌ ಜೀಪ್‌ ವಶ - Nikhara News | Kannada News Website
Connect with us

ಸ್ಥಳೀಯ

Manjeshwar-ಮಂಜೇಶ್ವರ: ಒಂದೇ ನಂಬರ್ ಪ್ಲೇಟ್‌ ಹೊಂದಿದ್ದ 2 ಥಾರ್‌ ಜೀಪ್‌ ವಶ

Published

on

Ad Widget

Ad Widget

Ad Widget

Ad Widget

ಒಂದೇ ರೀತಿಯ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್‌ ಜೀಪ್‌ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲ ಕುಂಜಾರ್‌ ನಿವಾಸಿ ಫಕ್ರುದ್ದೀನ್‌ ಅವರ ಮಾಲಕತ್ವದ ಜೀಪ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಲಾಗಿತ್ತು. ಆ ವಾಹನದ ನೈಜ ನೋಂದಣಿ ಸಂಖ್ಯೆ ಬೇರೆಯಾಗಿರುವುದು ಪೊಲೀಸರ ಪರಿಶೀಲನೆಯಲ್ಲಿ ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಜೇಶ್ವರ, ಸೆ.16: ಒಂದೇ ರೀತಿಯ ನಂಬರ್‌ ಪ್ಲೇಟ್‌ ಅಳವಡಿಸಿಕೊಂಡಿದ್ದ ಎರಡು ಮಹೀಂದ್ರ ಥಾರ್‌ ಜೀಪ್‌ಗಳನ್ನು ಮಂಜೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೈಕಂಬದಲ್ಲಿ ನಿಲ್ಲಿಸಲಾಗಿದ್ದ ಎರಡು ಜೀಪ್‌ಗಳಲ್ಲೂ ಒಂದೇ ರೀತಿಯ ನಂಬರ್‌ ಪ್ಲೇಟ್‌ ಇರುವುದನ್ನು ಸ್ಥಳೀಯರು ಗಮನಿಸಿದ್ದರು. ಈ ಕುರಿತು ಮಂಜೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Ad Widget

Ad Widget <> Ad Widget

ಪರಿಶೀಲನೆ ವೇಳೆ ಒಂದು ಜೀಪ್‌ನ ನಂಬರ್‌ ಪ್ಲೇಟ್‌ ನೈಜವಾಗಿದ್ದು, ಮತ್ತೊಂದು ಜೀಪ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿರುವುದು ಪತ್ತೆಯಾಗಿದೆ. ಬೇಲ ಕುಂಜಾರ್‌ ನಿವಾಸಿ ಫಕ್ರುದ್ದೀನ್‌ ಅವರ ಮಾಲಕತ್ವದ ಜೀಪ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಲಾಗಿತ್ತು. ಆ ವಾಹನದ ನೈಜ ನೋಂದಣಿ ಸಂಖ್ಯೆ ಬೇರೆಯಾಗಿರುವುದು ಪೊಲೀಸರ ಪರಿಶೀಲನೆಯಲ್ಲಿ ತಿಳಿದುಬಂದಿದೆ.

ತಮ್ಮ ವಾಹನದ ಮೇಲೆ ಹಣಕಾಸು ಸಂಸ್ಥೆಯ ಸಾಲವಿರುವುದರಿಂದ, ವಾಹನವನ್ನು ಸಂಸ್ಥೆಯವರು ವಶಕ್ಕೆ ಪಡೆಯುವ ಆತಂಕದಿಂದ ಸ್ವಂತ ಜೀಪ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿದ್ದಾಗಿ ಫಕ್ರುದ್ದೀನ್‌ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

Ad Widget

Ad Widget

ಈ ಸಂಬಂಧ ಫಕ್ರುದ್ದೀನ್‌ ಅವರ ಜೀಪ್‌ಗೆ ನೋಟಿಸ್‌ ಜಾರಿ ಮಾಡಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!