ಸ್ಥಳೀಯ
Manipal-ಮಣಿಪಾಲ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪದಡಿ 21 ವರ್ಷದ ಯುವಕ ಬಂಧನ
ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್ ಬಿಂಗಾರೆ (21) ಬಂಧಿತ ಆರೋಪಿ.
ಮಣಿಪಾಲ: ಕಳೆದ ವರ್ಷ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ದಾದ್ರ ಮತ್ತು ನಗರ ಹವೇಲಿ ಹಾಗೂ ದಮನ್ ಮತ್ತು ದಿಯು ಮೂಲದ ಸಾಯಿ ಸಂಜಯ್ ಬಿಂಗಾರೆ (21) ಬಂಧಿತ ಆರೋಪಿ.
ಏನಿದು ಪ್ರಕರಣ?
ಅಸ್ಸಾಂನ ನಾಗಾಂವ್ ಮೂಲದ ವಿದ್ಯಾರ್ಥಿನಿಯೊಬ್ಬರು ಮಣಿಪಾಲದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದರು. 2025ರ ನವೆಂಬರ್ 7 ಮತ್ತು 8ರ ನಡುವಿನ ಅವಧಿಯಲ್ಲಿ ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ (ಯುಡಿಆರ್) ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ಬಳಿಕ ಅಂತಿಮ ವರದಿ ಸಲ್ಲಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದ್ದರು. ವಿದ್ಯಾರ್ಥಿನಿಯ ಬಳಿಯಿದ್ದ ಆಪಲ್ ಐಪ್ಯಾಡ್, ಐಫೋನ್, ಡೈರಿ ಹಾಗೂ ಇತರ ಡಿಜಿಟಲ್ ದಾಖಲೆಗಳನ್ನು ಪೊಲೀಸರು ಆಕೆಯ ತಂದೆಗೆ ಹಸ್ತಾಂತರಿಸಿದ್ದರು.
ದಾಖಲೆಗಳನ್ನು ಪರಿಶೀಲಿಸಿದ ವೇಳೆ ಸಾಯಿ ಬಿಂಗಾರೆ ಅಲಿಯಾಸ್ ಸಾಯಿ ಪಾಟೀಲ್ ಎಂಬಾತನೊಂದಿಗೆ ವಿದ್ಯಾರ್ಥಿನಿ ಸ್ನ್ಯಾಪ್‌ಚಾಟ್ ಮೂಲಕ ನಡೆಸಿದ್ದ ಸಂಭಾಷಣೆಗಳು ಪತ್ತೆಯಾಗಿದ್ದವು ಎನ್ನಲಾಗಿದೆ.
ನ್ಯಾಯಾಲಯಕ್ಕೆ ಖಾಸಗಿ ದೂರು
ಸಾಯಿ ಬಿಂಗಾರೆ ವಿದ್ಯಾರ್ಥಿನಿಗೆ ನಿರಂತರವಾಗಿ ಕಿರುಕುಳ ನೀಡಿದ್ದಲ್ಲದೆ, ಬ್ಲ್ಯಾಕ್‌ಮೇಲ್ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಾಧ್ಯತೆಯಿದೆ ಎಂದು ಶಂಕಿಸಿ ವಿದ್ಯಾರ್ಥಿನಿಯ ತಂದೆ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ನ್ಯಾಯಾಲಯದ ಸೂಚನೆಯಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ BNS ಕಲಂ 308(5) ಅಡಿಯಲ್ಲಿ ಹೊಸ ಪ್ರಕರಣ ಸಂಖ್ಯೆ 90/2026 ದಾಖಲಾಗಿತ್ತು.
ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐ ತಿಮ್ಮೇಶ್ ಬಿ.ಎನ್. ತನಿಖೆ ನಡೆಸಿ, ಸೆ.9ರಂದು ಸಾಯಿ ಸಂಜಯ್ ಬಿಂಗಾರೆನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ21 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ22 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ21 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್4 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು21 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು4 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















