Uncategorized
Keyyuru-ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ವತಿಯಿಂದ ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಸನ್ಮಾನ
ಶತಮಾನೋತ್ಸವ ಆಚರಿಸಿಕೊಳ್ಳಲು ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಹಿರಿಯ ವಿದ್ಯಾರ್ಥಿಗಳಿಂದ ರಚನೆಯಾಗಿರುವ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ನ ವಿಶೇಷ ಸಭೆ ಮತ್ತು ಶಾಲೆಯ ಬಗ್ಗೆ ಡಾಕ್ಯುಮೆಂಟರಿ ನಿರ್ಮಾಣಕ್ಕೆ ವಿಡಿಯೋ ಮತ್ತು ಫೋಟೋಗ್ರಾಫಿ ಯನ್ನು LKGಯಿಂದ ಪದವಿ ಪೂರ್ವ ವಿದ್ಯಾರ್ಥಿಗಳೆಲ್ಲರನ್ನು ಒಟ್ಟು ಸೇರಿಸಿ ನಡೆಸಲಾಯಿತು.
ಶತಮಾನೋತ್ಸವ ಆಚರಿಸಿಕೊಳ್ಳಲು ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಹಿರಿಯ ವಿದ್ಯಾರ್ಥಿಗಳಿಂದ ರಚನೆಯಾಗಿರುವ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ನ ವಿಶೇಷ ಸಭೆ ಮತ್ತು ಶಾಲೆಯ ಬಗ್ಗೆ ಡಾಕ್ಯುಮೆಂಟರಿ ನಿರ್ಮಾಣಕ್ಕೆ ವಿಡಿಯೋ ಮತ್ತು ಫೋಟೋಗ್ರಾಫಿ ಯನ್ನು LKGಯಿಂದ ಪದವಿ ಪೂರ್ವ ವಿದ್ಯಾರ್ಥಿಗಳೆಲ್ಲರನ್ನು ಒಟ್ಟು ಸೇರಿಸಿ ನಡೆಸಲಾಯಿತು.
ಶಾಲಾ ಅಭಿವೃದ್ಧಿ ಸಮಿತಿ, ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್, ಶಿಕ್ಷಕ ಮತ್ತು ಉಪನ್ಯಾಸಕ ವೃಂದ, ಮುಖ್ಯಗುರುಗಳು, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಪೋಷಕರು, ವಿದ್ಯಾರ್ಥಿಗಳನ್ನು ಒಂದೇ ಕಡೆ ಸೇರಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೋಸ್ಕರ ಅಡಿಗಲ್ಲನ್ನು ಹಾಕುವ ಉದ್ದೇಶದಿಂದ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ಆಯೋಜಿಸಿತ್ತು.
ಸಾಧಕರಿಗೆ ಸನ್ಮಾನ
ಕೆ.ಪಿ.ಎಸ್. ಕೆಯ್ಯೂರಿನ ವಿದ್ಯಾರ್ಥಿಗಳಾದ ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿರುವ ದ್ವಾರಕಾ ಕನ್ಸ್ಟ್ರಕ್ಷನ್ ಮಾಲಕ ಶ್ರೀ ಗೋಪಾಲಕೃಷ್ಣ ಭಟ್, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಡಿಜಿ,ಐಜಿಪಿ ಪ್ರಸಂಶನಾ ಪದಕ ಪಡೆದಿರುವ ರಂಜಿತ್ ಕುಮಾರ್ ರೈ ನೂಜಿ ಬರಮೇಲು ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಎಂ.ಎ.ರಾಂಕ್ ವಿಜೇತೆ ಸೌಜನ್ಯ ಬಿ.ಎಂ. ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು, ಹಾಗೂ ಈ ಕಾರ್ಯಕ್ರಮದಲ್ಲಿ ಕೆ.ಪಿ.ಎಸ್. ಕೆಯ್ಯೂರು ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ಇದರ ಸಾಮಾನ್ಯ ಸಭೆಯ ಅಧ್ಯಕ್ಷರಾದ ಭಾಗೇಶ್ ರೈ ಕೆಯ್ಯೂರು ಇವರ ನೇತೃತ್ವದಲ್ಲಿ ನಡೆಯಿತು.
ವೆಬ್ಸೈಟ್ ಬಿಡುಗಡೆ
ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸದಸ್ಯತ್ವದ ನೋಂದಣಿ ಅಭಿಯಾನದ ಭಾಗವಾಗಿ ಶಾಲಾ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಎ.ಕೆ. ಜಯರಾಮ ರೈ ಇವರು ವೆಬ್ಸೈಟನ್ನು ಬಿಡುಗಡೆಗೊಳಿಸಿದರು. ವೆಬ್ಸೈಟನ್ನು ಟ್ರಸ್ಟ್ ನ ಕಾರ್ಯದರ್ಶಿ ಪ್ರಮಿತ್ ರಾಜ್ ರವರು ವಿನ್ಯಾಸಗೊಳಿಸಿದ್ದು, ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಸಹಕರಿಸಿದ ಎಲ್ಲರಿಗೂ ಟ್ರಸ್ಟ್ ನ ಕೋಶಾಧಿಕಾರಿ ಆನಂದ ರೈ.ಪಿ ರವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಹಸೀನಾ ಬಾನು ಎಸ್ ಇ, ಉಪ ಪ್ರಾಂಶುಪಾಲರಾದ ಅರುಣ್ ಕುಮಾರ್, ಮುಖ್ಯ ಗುರುಗಳಾದ ಬಾಬು ಬಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಆಯುಬ್ ಹಾಗೂ ಸದಸ್ಯರು, ಟ್ರಸ್ಟ್ ನ ಉಪಾಧ್ಯಕ್ಷ ಹಸೈನಾರ್ ಹಾಗೂ ಸರ್ವ ಸದಸ್ಯರು, ಶಿಕ್ಷಕ-ಉಪನ್ಯಾಸಕವೃಂದದರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್23 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ22 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ23 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ22 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್7 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ6 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ನಿಧನ ವಾರ್ತೆ6 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ಮಂಗಳೂರು23 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ

















