ಮಂಗಳೂರು
Kishore Kumar Puttur-ಗ್ರಾಮೀಣ ಪ್ರದೇಶದ ನಿವೇಶನ ಹಾಗೂ ಕಟ್ಟಡ ನಿರ್ಮಾಣ ತಾಂತ್ರಿಕ ಅನುಮೋದನೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸಿ: ನಗರಾಭಿವೃದ್ಧಿ ಸಚಿವರಿಗೆ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಮನವಿ
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಮನವಿ ಸಲ್ಲಿಸಿದರು.
ಮಂಗಳೂರು, ಸೆ.17: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಮನವಿ ಸಲ್ಲಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಭೂ ಪರಿವರ್ತನೆ, ಹಿಂದಿನ ವಿನ್ಯಾಸ ಅನುಮೋದನೆ, ಸ್ಥಳೀಯ ಸಂಸ್ಥೆಗಳಿಂದ ಕಟ್ಟಡ ಪರವಾನಗಿ ಹಾಗೂ ಪ್ರಸ್ತುತ ನಗರ ಯೋಜನಾ ನಿಯಮಗಳ ನಡುವಿನ ವ್ಯತ್ಯಾಸದಿಂದಾಗಿ ಅನೇಕ ಸಾರ್ವಜನಿಕರು ತಮ್ಮ ಸ್ವಂತ ಜಮೀನು ಹಾಗೂ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಳ್ಳಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಗಮನ ಸೆಳೆದರು
ಭೂ ಪರಿವರ್ತನೆಗೊಂಡ ಜಮೀನಿನ ಒಂದು ಭಾಗಕ್ಕೆ ಹಿಂದೆ ವಿನ್ಯಾಸ ಅನುಮೋದನೆ ದೊರೆತಿದ್ದರೂ ಉಳಿದ ಭಾಗಕ್ಕೆ ಪ್ರಸ್ತುತ ನಿಯಮಗಳ ಕಾರಣದಿಂದ ಅನುಮೋದನೆ ನಿರಾಕರಿಸುವ ಪ್ರಕರಣಗಳಿದ್ದು, ಇಂತಹ ಹಳೆಯ ಪ್ರಕರಣಗಳಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸುವುದು,
ಅದೇ ರೀತಿ, ಅಗತ್ಯ ರಸ್ತೆ ಮಾರ್ಜಿನ್ ಬಿಟ್ಟು ಭೂ ಪರಿವರ್ತನೆ ಮಾಡಿಕೊಂಡಿರುವ ನಿವೇಶನಗಳಿಗೆ ಸ್ಥಳದ ವಾಸ್ತವಿಕ ಪರಿಸ್ಥಿತಿ ಹಾಗೂ ಲಭ್ಯ ದಾಖಲೆಗಳನ್ನು ಪರಿಶೀಲಿಸಿ ಅರ್ಹ ಪ್ರಕರಣಗಳಲ್ಲಿ ತಾಂತ್ರಿಕ ಅನುಮೋದನೆ ನೀಡುವ ವ್ಯವಸ್ಥೆ ರೂಪಿಸಬೇಕು,
ಈಗಾಗಲೇ ಭೂ ಪರಿವರ್ತನೆಗೊಂಡು ಕಟ್ಟಡ ನಿರ್ಮಾಣವಾಗಿದ್ದು, ಸ್ಥಳೀಯ ಸಂಸ್ಥೆಯಿಂದ ಕದ ನಂಬ್ರ ಅಥವಾ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪಡೆಯದಿರುವ ಹಳೆಯ ಪ್ರಕರಣಗಳಲ್ಲಿ ಹಿಂದಿನ ಹಂತದಲ್ಲಿ ವಿನ್ಯಾಸ ಅನುಮೋದನೆ ಪಡೆಯದಿರುವ ಕಾರಣದಿಂದ ಪ್ರಸ್ತುತ ಅನುಮೋದನೆಗೆ ತೊಂದರೆಯಾಗುತ್ತಿದೆ. ಇಂತಹ ಪ್ರಕರಣಗಳನ್ನು ನಿಯಮಾನುಸಾರ ಸಕ್ರಮಗೊಳಿಸಲು ವಿಶೇಷ ವ್ಯವಸ್ಥೆ ಕಲ್ಪಿಸುವುದು.
ತಾಂತ್ರಿಕ ಅನುಮೋದನೆ ದೊರೆತ ನಂತರವೂ Commencement Certificate ಹಾಗೂ Completion Certificate ಪಡೆಯಲು ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅನುಮೋದನೆಯ ಮುಂದಿನ ಹಂತಗಳನ್ನೂ ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ವ್ಯವಸ್ಥೆ ಜಾರಿಗೆ ತರಬೇಕು.
ಈಗಾಗಲೇ ಕಾನೂನುಬದ್ಧವಾಗಿ ನಿರ್ಮಿಸಿರುವ ಕಟ್ಟಡಗಳ ವಿಸ್ತರಣೆ, ಹೆಚ್ಚುವರಿ ಮಹಡಿ ಅಥವಾ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಅರ್ಜಿ ಸಲ್ಲಿಸುವಾಗ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳಿಗೂ ಸ್ಪಷ್ಟ ನಿಯಮಾವಳಿ ರೂಪಿಸುವುದು.
ಇದಲ್ಲದೆ, ಒಂದು ಉದ್ದೇಶಕ್ಕಾಗಿ ವಿನ್ಯಾಸ ಅನುಮೋದನೆ ಪಡೆದ ನಂತರ ಕಾನೂನುಬದ್ಧವಾಗಿ ಭೂ ಬಳಕೆಯ ಉದ್ದೇಶ ಬದಲಾವಣೆ ಮಾಡಿಕೊಂಡು ಮತ್ತೊಂದು ಉದ್ದೇಶಕ್ಕಾಗಿ ಪರಿಷ್ಕೃತ ವಿನ್ಯಾಸ ಅನುಮೋದನೆ ಕೋರುವ ಅರ್ಜಿಗಳಿಗೂ ಭೂ ಪರಿವರ್ತನೆ ಆದೇಶ ಹಾಗೂ ಸಂಬಂಧಿತ ದಾಖಲೆಗಳ ಆಧಾರದ ಮೇಲೆ ಅನುಮೋದನೆ ನೀಡಲು ಸ್ಪಷ್ಟ ಕಾರ್ಯವಿಧಾನ ರೂಪಿಸುವುದು.
ಸರ್ಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರದಿಂದ 94C, 94CC ಸೇರಿದಂತೆ ಹಕ್ಕುಪತ್ರದ ಆಧಾರದ ಮೇಲೆ ನಿವೇಶನ ಪಡೆದಿರುವ ಬಡ ಹಾಗೂ ಮಧ್ಯಮ ವರ್ಗದ ಫಲಾನುಭವಿಗಳು ತಮ್ಮ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಳ್ಳಲು ಮುಂದಾದಾಗ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ಎದುರಾಗುತ್ತಿರುವ ತಾಂತ್ರಿಕ ಅನುಮೋದನೆ ಸಮಸ್ಯೆಗಳನ್ನೂ ಸರಳಗೊಳಿಸುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯರು ಸಚಿವರ ಗಮನಕ್ಕೆ ತಂದಿದ್ದಾರೆ.
ಆನ್‌ಲೈನ್ ವ್ಯವಸ್ಥೆ ಮತ್ತು ಕಾಲಮಿತಿ ಜಾರಿಗೆ ಒತ್ತಾಯ
ಸಾರ್ವಜನಿಕರು ಒಂದೇ ಅರ್ಜಿಗಾಗಿ ವಿವಿಧ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಲು ಸಂಪೂರ್ಣ ಪಾರದರ್ಶಕ ಆನ್‌ಲೈನ್ ವ್ಯವಸ್ಥೆ ಜಾರಿಗೆ ತರಬೇಕು. ಅರ್ಜಿಯ ಪ್ರಸ್ತುತ ಸ್ಥಿತಿ, ತಾಂತ್ರಿಕ ಆಕ್ಷೇಪಣೆಗಳು, ಅಗತ್ಯ ದಾಖಲೆಗಳು ಹಾಗೂ ಅರ್ಜಿ ವಿಲೇವಾರಿ ಹಂತಗಳ ಮಾಹಿತಿಯನ್ನು ಆನ್‌ಲೈನ್‌ನಲ್ಲೇ ಅರ್ಜಿದಾರರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಅಲ್ಲದೆ, ಅರ್ಜಿಗಳನ್ನು ಸಕಾಲ ಕಾಯ್ದೆಯಡಿ ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡುವ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಂಬಂಧಪಟ್ಟ ನಗರ ಯೋಜನಾ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗಳಿಗೆ ಏಕರೂಪದ ಮಾರ್ಗಸೂಚಿ ರೂಪಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ.
ಗ್ರಾಮೀಣ ಪ್ರದೇಶದ ಸಾಮಾನ್ಯ ಜನರು ತಮ್ಮ ಸ್ವಂತ ನಿವೇಶನದಲ್ಲಿ ಕಾನೂನುಬದ್ಧವಾಗಿ ಮನೆ ನಿರ್ಮಿಸಿಕೊಳ್ಳುವ ಸಂದರ್ಭದಲ್ಲಿ ಎದುರಿಸುತ್ತಿರುವ ಈ ಸಮಸ್ಯೆಗಳನ್ನು ಮಾನವೀಯ ಹಾಗೂ ಪ್ರಾಯೋಗಿಕ ದೃಷ್ಟಿಕೋನದಿಂದ ಪರಿಗಣಿಸಿ, ಇಲಾಖೆಗಳ ನಡುವಿನ ಸಮನ್ವಯದ ಕೊರತೆಯನ್ನು ನಿವಾರಿಸುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯರು ಆಗ್ರಹಿಸಿದ್ದಾರೆ.
ಮಂಗಳೂರು ನಗರದ ಸ್ವಚ್ಛತೆಯ ಬಗ್ಗೆ ಪ್ರಸ್ತಾಪ
ಮಂಗಳೂರು ನಗರದ ಕಸವನ್ನು ವಿಲೇವಾರಿ ಮಾಡುತ್ತಿರುವ ಪಚ್ಚ ನಾಡಿ ಘಟಕದಲ್ಲಿ ಒಂಬತ್ತು ಲಕ್ಷ ಟನ್ ಗಿಂತಲೂ ಹೆಚ್ಚು ಕಸ ಉಳಿದುಕೊಂಡಿದ್ದು ಸದರಿ ಕಸವನ್ನು ವಿಲೇವಾರಿ ಮಾಡಲು ಸೂಕ್ತ ಕ್ರಮ ವಹಿಸಬೇಕು ಮತ್ತು ಘಟಕಕ್ಕೆ ಒಮ್ಮೆ ಭೇಟಿ ನೀಡುವಂತೆ ಸಚಿವರಿಗೆ ವಿನಂತಿಸಿದರು.
ಮಂಗಳೂರಿನ ಸ್ವಚ್ಛತೆಗೆ ರಾಮಕೃಷ್ಣ ಮಿಷನ್ ಕೈಗೊಂಡ ಮಾದರಿ ಕ್ರಮಗಳನ್ನು ತಿಳಿಸಿದರು ಮತ್ತು ಜಿಲ್ಲೆಯ ಸ್ವಚ್ಛತೆಯ ಬಗ್ಗೆ ಶ್ರಮಿಸುತ್ತಿರುವ ಜನ ಶಿಕ್ಷಣ ಟ್ರಸ್ಟ್ ನ ನಿರ್ದೇಶಕರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ವಚ್ಛತಾ ರಾಯಭಾರಿಯಾದ ಶೀನ ಶೆಟ್ಟಿ ಮತ್ತು ನಿರ್ದೇಶಕರಾದ ಕೃಷ್ಣ ಮೂಲ್ಯ ರವರ ಪರಿಶ್ರಮವನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ಮಂಗಳೂರು ನಗರದ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿ ಸಭೆಯಲ್ಲಿ ವಿನಂತಿಸಿದರು
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಮಂಗಳೂರು
Puvamma-ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮಂಗಳೂರಿನ ಪೂವಮ್ಮ; ಕನಿಷ್ಠ ಅಭಿನಂದನೆ ಕೂಡ ಸಲ್ಲಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕುಟುಂಬ ಬೇಸರ
2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಂಗಳೂರು, ಅ.1: 2026ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದ ಭಾರತೀಯ ತಂಡದ ಸದಸ್ಯೆಯಾಗಿರುವ ಮಂಗಳೂರಿನ ಎಂ.ಆರ್. ಪೂವಮ್ಮ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅವರ ತಾಯಿ ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
ಕಿರಣ್ ಪಹಲ್, ಪ್ರಾಚಿ ಚೌಧರಿ, ಎಂ.ಆರ್. ಪೂವಮ್ಮ ಹಾಗೂ ವಿಥ್ಯಾ ರಾಮರಾಜ್ ಒಳಗೊಂಡ ಭಾರತ ತಂಡ 3:29.69 ನಿಮಿಷಗಳಲ್ಲಿ ಗುರಿ ತಲುಪಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಚಿನ್ನ ಗೆದ್ದಿದೆ. ಇದು ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತಕ್ಕೆ ದೊರೆತ ಚಿನ್ನದ ಪದಕವಾಗಿದೆ.
ಆದರೆ, ಈ ಸಾಧನೆ ಮಾಡಿದ ಪೂವಮ್ಮ ಅವರನ್ನು ರಾಜ್ಯ ಸರ್ಕಾರ ಈವರೆಗೆ ಗುರುತಿಸಿಲ್ಲ ಎಂಬುದು ಕುಟುಂಬದ ಬೇಸರಕ್ಕೆ ಕಾರಣವಾಗಿದೆ. ಪೂವಮ್ಮ ಅವರ ತಾಯಿ ಜಾಜಿ ಮಾಧ್ಯಮಗಳೊಂದಿಗೆ ಮಾತನಾಡಿ, 20 ವರ್ಷಗಳಿಂದ ಅಥ್ಲೆಟಿಕ್ಸ್‌ನಲ್ಲಿ ಶ್ರಮಿಸುತ್ತಿರುವ ಮಗಳಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ನನ್ನ ಮಗಳು 36 ವರ್ಷದವಳಾಗಿದ್ದು, ಕಳೆದ 20 ವರ್ಷಗಳಿಂದ ಅಥ್ಲೆಟಿಕ್ಸ್‌ಗಾಗಿ ಶ್ರಮಿಸುತ್ತಿದ್ದಾಳೆ. ಬೇರೆ ರಾಜ್ಯಗಳಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಆದರೆ ಪೂವಮ್ಮ ಸಾಧನೆ ಮಾಡಿದ ಬಳಿಕವೂ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕರೆ ಕೂಡ ಬಂದಿಲ್ಲ” ಎಂದು ಜಾಜಿ ಬೇಸರ ವ್ಯಕ್ತಪಡಿಸಿದ್ದಾರೆ.
“ಕ್ಯಾಶ್ ಪ್ರೈಸ್ ನೀಡುವುದು ಒಂದು ವಿಚಾರ. ಈ ಬಾರಿ ದೇಶಕ್ಕೆ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ತಂದುಕೊಟ್ಟ ತಂಡದಲ್ಲಿ ಪೂವಮ್ಮ ಇದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಕನಿಷ್ಠ ಶುಭಾಶಯದ ಸಂದೇಶವೂ ಬಂದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಂಗಳೂರಿನವರೇ ಆಗಿದ್ದರೂ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಮತ್ತು ಕೇರಳದಲ್ಲಿ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ದೊಡ್ಡ ಮೊತ್ತದ ಬಹುಮಾನಗಳನ್ನು ಘೋಷಿಸಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನಿಷ್ಠ ಗುರುತಿಸುವಿಕೆಯೂ ಸಿಗದಿರುವುದು ಬೇಸರ ತಂದಿದೆ ಎಂದು ಜಾಜಿ ತಿಳಿಸಿದ್ದಾರೆ.
ಪೂವಮ್ಮ ಕಠಿಣ ತರಬೇತಿ ಮತ್ತು ಹಲವು ವರ್ಷಗಳ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ. ಕಳೆದ ಮೂರು-ನಾಲ್ಕು ವರ್ಷಗಳ ಶ್ರಮಕ್ಕೆ ಇದೀಗ ಫಲ ಸಿಕ್ಕಿದೆ. ಅಥ್ಲೆಟಿಕ್ಸ್ ಆಕೆಯ ಜೀವನದ ಅವಿಭಾಜ್ಯ ಭಾಗವಾಗಿದೆ. ನಾವು ಮಧ್ಯಮ ವರ್ಗದ ಕುಟುಂಬವಾಗಿದ್ದು, ತರಬೇತಿಗಾಗಿ ಸಾಕಷ್ಟು ವೆಚ್ಚ ಮಾಡಬೇಕಾಗುತ್ತದೆ. ಸರ್ಕಾರದಿಂದ ಬೆಂಬಲ ದೊರೆತರೆ ಅದು ಕ್ರೀಡಾಪಟುಗಳಿಗೆ ಇನ್ನಷ್ಟು ಸ್ಫೂರ್ತಿ ನೀಡುತ್ತದೆ ಎಂದು ಜಾಜಿ ಹೇಳಿದ್ದಾರೆ.
ಪೂವಮ್ಮ ಅವರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಅಭಿನಂದಿಸಿದ್ದು, 4×400 ಮೀಟರ್ ರಿಲೇ ತಂಡದ ವೇಗ ಮತ್ತು ದೃಢಸಂಕಲ್ಪ ಭಾರತವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ದಿದೆ ಎಂದು ಶ್ಲಾಘಿಸಿದ್ದಾರೆ.
-
ಬಿಗ್ ನ್ಯೂಸ್19 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು16 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized24 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ22 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಶಿಕ್ಷಣ18 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ


















