ಬಿಗ್ ನ್ಯೂಸ್
Mangalore-Big Breaking: ಮಂಗಳೂರು ಜೈಲ್ ಜಾಮರ್ ನಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ : ಸಮಸ್ಯೆ ಪರಿಹಾರಕ್ಕೆ ಆಂಟೆನಾ ವಿನ್ಯಾಸ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರು: ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ, ಸಮಸ್ಯೆಯನ್ನು ಪರಿಹರಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ, ಐಟಿ-ಬಿಟಿ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು ಜಿಲ್ಲಾ ಕಾರಾಗೃಹದ ಆವರಣದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್ಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಮೊಬೈಲ್ ಸಂಪರ್ಕದ ಮೇಲೆ ಅನಗತ್ಯ ಪರಿಣಾಮ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಸಚಿವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗಾಗಲೇ ಜಂಟಿ ತಾಂತ್ರಿಕ ಸಮೀಕ್ಷೆಯನ್ನು ನಡೆಸಲಾಗಿದೆ. ಸಮೀಕ್ಷೆಯ ಆಧಾರದ ಮೇಲೆ ಸಂಬಂಧಪಟ್ಟ ಸಂಸ್ಥೆಯು ಕಾರಾಗೃಹದ ಭದ್ರತಾ ಅಗತ್ಯತೆಗಳಿಗೆ ಅನುಗುಣವಾಗಿ ಆಂಟೆನಾಗಳ ವಿನ್ಯಾಸ ಹಾಗೂ ಜಾಮರ್ಗಳ ಸಾಮರ್ಥ್ಯವನ್ನು ಸರಿಹೊಂದಿಸುವ ಕ್ರಮ ಕೈಗೊಂಡಿದೆ. ಕಾರಾಗೃಹದೊಳಗೆ ಜಾಮರ್ಗಳು ತಮ್ಮ ಉದ್ದೇಶಿತ ಭದ್ರತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದರ ಜೊತೆಗೆ, ಸುತ್ತಮುತ್ತಲಿನ ಸಾರ್ವಜನಿಕರಿಗೆ ಮೊಬೈಲ್ ಸಂಪರ್ಕ ಸೇವೆಗಳಲ್ಲಿ ಉಂಟಾಗುತ್ತಿರುವ ಅನಗತ್ಯ ವ್ಯತ್ಯಯವನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ಉದ್ದೇಶದಿಂದ ಮತ್ತಷ್ಟು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಸಚಿವರು ಮಾಹಿತಿ ನಿಡಿದ್ದಾರೆ.
ಈ ನಿಟ್ಟಿನಲ್ಲಿ ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಮನ್ವಯ ಸಾಧಿಸಿ, ಮೊಬೈಲ್ ನೆಟ್ವರ್ಕ್ ಸೇವೆಗಳ ಮೇಲೆ ಜಾಮರ್ಗಳಿಂದ ಉಂಟಾಗುತ್ತಿರುವ ಪರಿಣಾಮವನ್ನು ತಗ್ಗಿಸಲು ಅಗತ್ಯವಿರುವ ತಾಂತ್ರಿಕ ಹೊಂದಾಣಿಕೆಗಳನ್ನು ಮಾಡಲಾಗುತ್ತಿದೆ.
“ಕಾರಾಗೃಹದ ಭದ್ರತೆ ಅತ್ಯಂತ ಮುಖ್ಯವಾಗಿರುವಂತೆಯೇ, ಕಾರಾಗೃಹದ ಸುತ್ತಮುತ್ತ ವಾಸಿಸುವ ಸಾರ್ವಜನಿಕರಿಗೆ ಮತ್ತು ಇತರ ಬಳಕೆದಾರರಿಗೆ ಮೊಬೈಲ್ ಸಂಪರ್ಕ ಸೇವೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದೂ ಅಗತ್ಯ. ಈ ಎರಡೂ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ತಾಂತ್ರಿಕ ಪರಿಹಾರಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
“ಜಂಟಿ ತಾಂತ್ರಿಕ ಸಮೀಕ್ಷೆಯ ಆಧಾರದ ಮೇಲೆ ಈಗಾಗಲೇ ಅಗತ್ಯ ಹೊಂದಾಣಿಕೆಗಳನ್ನು ಕೈಗೊಳ್ಳಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಮನ್ವಯದಿಂದ ಮತ್ತಷ್ಟು ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ,” ಎಂದು ಅವರು ಹೇಳಿದ್ದಾರೆ.
ಕಾರಾಗೃಹದ ಭದ್ರತಾ ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಕಾಪಾಡಿಕೊಂಡೇ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಹಾಗೂ ತಾಂತ್ರಿಕ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ.
ಬಿಗ್ ನ್ಯೂಸ್
G.L. Acharya Jewellers-ವಿಜಯದಶಮಿ ಪ್ರಯುಕ್ತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ನಿಂದ ವಿಶೇಷ ಕೊಡುಗೆ
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಿಜಯದಶಮಿ ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸುವ ಉದ್ದೇಶದಿಂದ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆಯಾದ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಗ್ರಾಹಕರಿಗಾಗಿ ಚಿನ್ನಾಭರಣಗಳ ಮೇಕಿಂಗ್ ಚಾರ್ಜ್ ಶುಲ್ಕದ ಮೇಲೆ ಗ್ರಾಹಕರಿಗೆ ಗರಿಷ್ಠ ರೂ.600ವರೆಗೆ ರಿಯಾಯಿತಿ ನೀಡಲಾಗುತ್ತಿದೆ.ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್ಗೆ ಫ್ಲಾಟ್ ರೂ.8000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತಿ ಕೆ.ಜಿಗೆ ಫ್ಲಾಟ್ ರೂ.8000 ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ವಜ್ರಾಭರಣಗಳನ್ನು ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆಗಳಲ್ಲೇ ನೀಡುವುದರ ಜೊತೆಗೆ, ಪ್ರತಿ ಕ್ಯಾರೆಟ್ ಗೆ ರೂ.8000 ವಿಶೇಷ ರಿಯಾಯಿತಿ ನೀಡಲಾಗುವುದು ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಆಭರಣ ಖರೀದಿಗೆ ಈ ಕೊಡುಗೆ ವಿಶೇಷ ಅವಕಾಶವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಇತರೆ ಮಳಿಗೆಯ ಹಳೆಯ ಚಿನ್ನವನ್ನು 0% ರೇಟ್ ಡಿಡಕ್ಷನ್ನೊಂದಿಗೆ ಎಕ್ಸ್ಚೇಂಜ್ ಮಾಡಿಕೊಳ್ಳುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ.
ವಿಜಯದಶಮಿ ಹಾಗೂ ನವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಗ್ರಾಹಕರಿಗಾಗಿ ಆಕರ್ಷಕ ಚಿನ್ನಾಭರಣಗಳ ವೈವಿಧ್ಯಮಯ ಸಂಗ್ರಹವನ್ನು ಸಂಸ್ಥೆ ಸಿದ್ಧಪಡಿಸಿದೆ.ಸಾಂಪ್ರದಾಯಿಕ ವಿನ್ಯಾಸಗಳ ಜೊತೆಗೆ ಆಧುನಿಕ ಶೈಲಿಯ ಆಭರಣಗಳೂ ಲಭ್ಯವಿದ್ದು ಗ್ರಾಹಕರ ವಿವಿಧ ಅಭಿರುಚಿ ಹಾಗೂ ಅಗತ್ಯಗಳಿಗೆ ತಕ್ಕಂತೆ ಹಲವು ವಿನ್ಯಾಸಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಗ್ರಾಹಕರಿಗೆ ಹೆಚ್ಚಿನ ಉಳಿತಾಯದ ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಕೊಡುಗೆಗಳನ್ನು ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಕೊಡುಗೆ ಚಿನ್ನದ ನಾಣ್ಯಗಳು, ಚಿನ್ನದ ಗಟ್ಟಿಗಳು ಹಾಗೂ ಎಲ್ಲೋ ಟ್ಯಾಗ್ ಹೊಂದಿರುವ ಆಭರಣಗಳಿಗೆ ಅನ್ವಯಿಸುವುದಿಲ್ಲ. ಅಲ್ಲದೆ ಈ ಕೊಡುಗೆಯನ್ನು ಯಾವುದೇ ಚಿನ್ನದ ಉಳಿತಾಯ ಯೋಜನೆ ಅಥವಾ ಇತರ ಯಾವುದೇ ಯೋಜನೆಯೊಂದಿಗೆ ಸಂಯೋಜಿಸಲು ಸಾಧ್ಯವಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಪುತ್ತೂರಿನಲ್ಲಿ ಆರಂಭಗೊಂಡಿರುವ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಆರು ದಶಕಗಳಿಗೂ ಹೆಚ್ಚು ಕಾಲ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು -ಮುನ್ನಡೆಯುತ್ತಿದೆ.ಗುಣಮಟ್ಟ,ಸೊಬಗು, ಪಾರದರ್ಶಕತೆ ಹಾಗೂ ಗ್ರಾಹಕರ ಹಿತಕ್ಕೆ ಆದ್ಯತೆ -ನೀಡುತ್ತಾ ಸಂಸ್ಥೆ ತನ್ನ ಸೇವೆಯನ್ನು ಮುಂದುವರಿಸಿಕೊಂಡು ಬರುತ್ತಿದೆ.
ಮಂಗಳೂರು
Dakshina Kannada-ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಪ್ರಸ್ತಾವ: ಸಾರ್ವಜನಿಕ ಅಭಿಪ್ರಾಯ ಆಹ್ವಾನಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರ ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ. ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲತೆಗಳನ್ನು ಪರಿಗಣಿಸಿ ಈ ಪ್ರಸ್ತಾವವನ್ನು ಸರ್ಕಾರ ಮುಂದಿಟ್ಟಿದೆ.
ಭಾರತ ಸರ್ಕಾರದ ಗೃಹ ಸಚಿವಾಲಯದ 1953ರ ಸೆಪ್ಟೆಂಬರ್ 11ರ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4A) ಅಡಿಯಲ್ಲಿ ಲಭ್ಯವಿರುವ ಅಧಿಕಾರಗಳನ್ವಯ ಮರುನಾಮಕರಣ ಪ್ರಕ್ರಿಯೆ ಕೈಗೊಳ್ಳಲು ಉದ್ದೇಶಿಸಲಾಗಿದೆ.
ಈ ಸಂಬಂಧ ಸಾರ್ವಜನಿಕರು ತಮ್ಮ ಸಲಹೆ ಮತ್ತು ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಸರ್ಕಾರಕ್ಕೆ ಸಲ್ಲಿಸಬಹುದು. ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಭಿಪ್ರಾಯ ಸಲ್ಲಿಸಬೇಕಾದ ವಿಳಾಸಗಳು
- ಮುಖ್ಯಮಂತ್ರಿಯವರ ಸಚಿವಾಲಯ, ಕೊಠಡಿ ಸಂಖ್ಯೆ: 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು – 560001; ಇ-ಮೇಲ್: cm.kar@nic.in
- ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ, ಕೊಠಡಿ ಸಂಖ್ಯೆ: 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು – 560001; ಇ-ಮೇಲ್: Prs.revenue@gmail.com
- ಗಮನಿಸಿ: ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಅಧಿಸೂಚನೆ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗೆ ಸಲ್ಲಿಸಬೇಕು.
ಬಿಗ್ ನ್ಯೂಸ್
Puttur-ಪುತ್ತೂರಿನಲ್ಲಿ ಜಯದೇವ, ಕಿದ್ವಾಯಿ, ನಿಮ್ಹಾನ್ಸ್ ಘಟಕ ಸ್ಥಾಪನೆಗೆ ಹಕ್ಕೊತ್ತಾಯ; 1 ಲಕ್ಷ ಸಹಿ ಸಂಗ್ರಹದ ಗುರಿ; ಸೇಡಿಯಾಪು, ಆರ್ಯಾಪುವಿನಲ್ಲಿ ಜಮೀನು ಗುರುತು
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು: ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಒಂದೇ ಆವರಣದಲ್ಲಿ ಉನ್ನತ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಪುತ್ತೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ, ಕಿದ್ವಾಯಿ ಸ್ಮಾರಕ ಕ್ಯಾನ್ಸರ್ ಆಸ್ಪತ್ರೆ ಹಾಗೂ ನಿಮ್ಹಾನ್ಸ್ನ ಘಟಕಗಳನ್ನು ಸ್ಥಾಪಿಸಲು ಜನಾಂದೋಲನ ಆರಂಭವಾಗಿದೆ. ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯು ಒಂದು ಲಕ್ಷ ಸಹಿ ಸಂಗ್ರಹಿಸುವ ಗುರಿ ಹೊಂದಿದ್ದು, ಈಗಾಗಲೇ 20 ಸಾವಿರ ಸಹಿಗಳನ್ನು ಸಂಗ್ರಹಿಸಿದೆ.
ಪುತ್ತೂರು ಸರ್ಕಾರಿ ವೈದ್ಯಕೀಯ ಕಾಲೇಜಿನ ಜತೆಗೆ ಮೂರು ಪ್ರಮುಖ ಸರ್ಕಾರಿ ಆಸ್ಪತ್ರೆಗಳ ಘಟಕಗಳನ್ನೂ ಸ್ಥಾಪಿಸುವ ಮೂಲಕ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸಮಿತಿಯ ಆಶಯವಾಗಿದೆ.
ಈ ಕುರಿತು ಸೋಮವಾರ ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅಭಿಯಾನದ ಉದ್ದೇಶ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಲಾಯಿತು.
120 ಎಕರೆ ಸರ್ಕಾರಿ ಜಮೀನಿನತ್ತ ಗಮನ
ಆಸ್ಪತ್ರೆಗಳ ಘಟಕಗಳ ಸ್ಥಾಪನೆಗೆ ಅಗತ್ಯವಿರುವ ಜಮೀನು ಗುರುತಿಸುವ ಪ್ರಕ್ರಿಯೆಗೆ ಸಮಿತಿ ಆದ್ಯತೆ ನೀಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿರುವ ಸೇಡಿಯಾಪು ಪ್ರದೇಶದ ಸಮೀಪ ಸುಮಾರು 120 ಎಕರೆ ಸರ್ಕಾರಿ ಜಮೀನು ಲಭ್ಯವಿದ್ದು, ಆರ್ಯಾಪು ಗ್ರಾಮದಲ್ಲಿಯೂ ಸುಮಾರು 88 ಎಕರೆ ಜಾಗ ಗುರುತಿಸಲಾಗಿದೆ. ಸೂಕ್ತ ಸ್ಥಳ ಆಯ್ಕೆ ಮಾಡಿ ಆಸ್ಪತ್ರೆಗಳ ಘಟಕಗಳಿಗೆ ಜಮೀನು ಮೀಸಲಿಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಸಮಿತಿಯ ಸಂಚಾಲಕ ಅಮಳ ರಾಮಚಂದ್ರ ತಿಳಿಸಿದ್ದಾರೆ.
ಸಮನ್ವಯದ ಚಿಕಿತ್ಸೆಗೆ ಅವಕಾಶ
ಅಮೆರಿಕದಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಸಾಮೆತ್ತಡ್ಕದ ಡಾ. ಸಂದೀಪ್ ನಾಯಕ್ ಮಾತನಾಡಿ, ‘ಒಂದೇ ಆವರಣದಲ್ಲಿ ಹಲವು ಸಂಸ್ಥೆಗಳು, ಸಮನ್ವಯದ ಚಿಕಿತ್ಸೆ’ ಎಂಬ ಪರಿಕಲ್ಪನೆಯೊಂದಿಗೆ ಅಭಿಯಾನ ರೂಪಿಸಲಾಗಿದೆ ಎಂದರು.
ಹೃದಯ, ಕ್ಯಾನ್ಸರ್ ಹಾಗೂ ನರಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ತಜ್ಞರು ಸಮನ್ವಯದಿಂದ ಕಾರ್ಯನಿರ್ವಹಿಸಲು ಇಂತಹ ವ್ಯವಸ್ಥೆ ನೆರವಾಗಲಿದೆ. ತುರ್ತು ಸಂದರ್ಭಗಳಲ್ಲಿ ರೋಗಿಗಳನ್ನು ದೂರದ ನಗರಗಳಿಗೆ ಕರೆದೊಯ್ಯುವ ಅಗತ್ಯವೂ ಕಡಿಮೆಯಾಗಬಹುದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಣತಿ ಗಳಿಸಲು ಅವಕಾಶ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ವೈದ್ಯಕೀಯ ಕಾಲೇಜಿನೊಂದಿಗೆ ಸಂಶೋಧನಾ ಕೇಂದ್ರ, ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ವೃದ್ಧಾಪ್ಯ ಆರೈಕೆ ಕೇಂದ್ರಗಳನ್ನೂ ಸ್ಥಾಪಿಸಬೇಕು. ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಒಂದು ಸೀಟು ಮೀಸಲಿಡಬೇಕು ಎಂದು ಅವರು ಒತ್ತಾಯಿಸಿದರು.
ಸರ್ಕಾರಿ ಸ್ವಾಮ್ಯಕ್ಕೆ ಒತ್ತು
ವೈದ್ಯಕೀಯ ಕಾಲೇಜು ಸಂಪೂರ್ಣ ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಯಬೇಕು. ಅಗತ್ಯ ಅನುದಾನ, ವೈದ್ಯಕೀಯ ಸೌಲಭ್ಯ ಹಾಗೂ ಸಿಬ್ಬಂದಿ ನೇಮಕಾತಿಯನ್ನು ಸರ್ಕಾರ ಖಚಿತಪಡಿಸಬೇಕು. ಹೋರಾಟ ರಾಜಕೀಯೇತರ ಮತ್ತು ಜಾತ್ಯತೀತ ನೆಲೆಯಲ್ಲಿ ಮುಂದುವರಿಯಬೇಕು ಎಂಬುದು ಸಮಿತಿಯ ನಿಲುವಾಗಿದೆ.
ಹಿರಿಯ ವೈದ್ಯಕೀಯ ಕಾಲೇಜು ಹೋರಾಟಗಾರ ದಿನೇಶ್ ಭಟ್ ಕೆ. ಮಾತನಾಡಿ, ಪುತ್ತೂರಿನಲ್ಲಿ ಉನ್ನತ ಆರೋಗ್ಯ ಸೇವೆಗಳ ಅಭಿವೃದ್ಧಿ ಅಗತ್ಯ ಎಂದರು. ಸುಳ್ಯ, ವಿಟ್ಲ, ಬಂಟ್ವಾಳ, ಬೆಳ್ತಂಗಡಿ ಹಾಗೂ ಕಡಬ ಭಾಗದ ಜನರಿಗೂ ಈ ಯೋಜನೆಯಿಂದ ಅನುಕೂಲವಾಗಲಿದೆ ಎಂಬುದು ಸಮಿತಿಯ ಆಶಯವಾಗಿದೆ.
ಸಭೆಯಲ್ಲಿ ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ, ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಪ್ರಧಾನ ಕಾರ್ಯದರ್ಶಿ ಝೇವಿಯರ್ ಡಿಸೋಜ, ಉಪಾಧ್ಯಕ್ಷ ವಿಶ್ವಪ್ರಸಾದ್ ಸೇಡಿಯಾಪು ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ20 hours ago
ಕಳವು ಮಾಡಿ ಮನೆಗೆ ಬೆಂಕಿ ಹಚ್ಚಿದ ಶಂಕೆ: ಪುತ್ತೂರಿನಲ್ಲಿ ಪ್ರಕರಣ ದಾಖಲು
-
ಅಂತರ ರಾಜ್ಯ18 hours agoRestaurant-ನೀರಿನ ಬಾಟ್ಲಿಗೆ ₹2 ಹೆಚ್ಚುವರಿ ವಸೂಲಿ; ರೆಸ್ಟೋರೆಂಟ್ಗೆ ₹1 ಲಕ್ಷ ದಂಡ..!
-
ಕಾರ್ಯಕ್ರಮಗಳು12 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಸುಳ್ಯ20 hours ago
ಸಿಜೆಪಿ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಬಂಧನ, ತಿಹಾರ್ ಜೈಲಿಗೆ ಶಿಫ್ಟ್ ಸಾಧ್ಯತೆ
-
Uncategorized18 hours agoKumaraswamy-ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯ ಮೌನವಾಗಿರಬಾರದು – ಸಿಬಿಐ ತನಿಖೆಗೆ ಕುಮಾರಸ್ವಾಮಿ ಆಗ್ರಹ
-
ನಿಧನ ವಾರ್ತೆ18 hours agoBoat Sink-ಹಾಜಿಪುರ: ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
-
ಕಾರ್ಯಕ್ರಮಗಳು12 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು11 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ


















