ಸ್ಥಳೀಯ
Rakshit Shivaram-ತುಳು ಭಾಷೆಗೆ ಅಧಿಕೃತ ಭಾಷಾ ಮಾನ್ಯತೆ ಹಾಗೂ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ₹1 ಕೋಟಿ ಅನುದಾನ: ರಾಜ್ಯ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ನಿರ್ಧಾರಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅಭಿನಂದನೆ
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ಘೋಷಿಸಿದ ರಾಜ್ಯ ಸರ್ಕಾರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಕರಾವಳಿ ಭಾಗದ ಸಾಂಸ್ಕೃತಿಕ ಅಸ್ಮಿತೆ ಹಾಗೂ ಕೋಟ್ಯಂತರ ತುಳು ಭಾಷಿಕರ ಭಾವನೆಯಾಗಿದ್ದ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ನುಡಿದಂತೆ ನಡೆದ ನಮ್ಮ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಸಾಧನೆಯಾಗಿದೆ. ಇದರೊಂದಿಗೆ ಕನ್ಯಾಡಿಯ ಪುಣ್ಯಕ್ಷೇತ್ರವಾದ ಶ್ರೀರಾಮ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಸರ್ಕಾರವು ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಗೆ ವಿಶೇಷ ಗೌರವ ನೀಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
“ಕರಾವಳಿ ಮಣ್ಣಿನಲ್ಲಿ ನಡೆದ ಈ ವಿಶೇಷ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ್ ಅವರ ನೇತೃತ್ವದ ಸರ್ಕಾರವು ತುಳುನಾಡಿನ ಜನರ ದಶಕಗಳ ಕಾಲದ ಹೋರಾಟ ಮತ್ತು ಆಶಯಗಳಿಗೆ ಸೂಕ್ತವಾಗಿ ಸ್ಪಂದಿಸಿದೆ. ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಬೆಳೆಸಲು ಪ್ರಮುಖ ಮೈಲಿಗಲ್ಲಾಗಲಿದೆ” ಎಂದು ಅವರು ತಿಳಿಸಿದ್ದಾರೆ.
ತುಳು ಭಾಷಾ ಮಾನ್ಯತೆಗಾಗಿ ಶ್ರಮಿಸಿದ ಕರಾವಳಿ ಭಾಗದ ಭಾಷಾ ಪ್ರೇಮಿಗಳು, ಸಾಹಿತಿಗಳು, ಸಂಘ-ಸಂಸ್ಥೆಗಳು ಹಾಗೂ ಕನ್ಯಾಡಿ ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡಿದ ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೂ ರಕ್ಷಿತ್ ಶಿವರಾಂ ಅವರು ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸಿದ್ದಾರೆ
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್22 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್14 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ20 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು22 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized21 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್22 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ20 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್21 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ

















