Connect with us

ನಿಧನ ವಾರ್ತೆ

Pakistan:-ಪಾಕಿಸ್ತಾನ: ಶುಕ್ರವಾರ ಉಗ್ರರಿಂದ ದಾಳಿ; ಮಸೀದಿಗೆ ಸ್ಫೋಟಕ ತುಂಬಿದ ವಾಹನ ಡಿಕ್ಕಿ, ಹಲವು ಪೊಲೀಸರು ಸೇರಿ 27 ಮಂದಿ ಸಾವು- ಹಲವರ ಸ್ಥಿತಿ ಗಂಭೀರ

Published

on

Ad Widget

Ad Widget

Ad Widget

Ad Widget

ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ 78ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

Ad Widget

Ad Widget

Ad Widget

Ad Widget

ಪೇಶಾವರ, ಸೆ.18: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಭೀಕರ ಉಗ್ರ ದಾಳಿ ನಡೆದಿದ್ದು, ಮಸೀದಿಯೊಂದಕ್ಕೆ ಸ್ಫೋಟಕ ತುಂಬಿದ ವಾಹನವನ್ನು ಡಿಕ್ಕಿ ಹೊಡೆಸಿ ನಡೆಸಿದ ಸ್ಫೋಟದಲ್ಲಿ 15 ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ 78ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

Ad Widget

Ad Widget alt="Ad Widget"/>

Ad Widget

ಅಫ್ಘಾನಿಸ್ತಾನ ಗಡಿಗೆ ಹೊಂದಿಕೊಂಡಿರುವ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಕೋಹಾಟ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಕಚೇರಿಗಳ ಸಂಕೀರ್ಣದಲ್ಲಿದ್ದ ಮಸೀದಿಗೆ ದಾಳಿಕೋರ ಸ್ಫೋಟಕ ತುಂಬಿದ ವಾಹನವನ್ನು ವೇಗವಾಗಿ ತಂದು ಡಿಕ್ಕಿ ಹೊಡೆಸಿದ್ದಾನೆ ಎಂದು ಪ್ರಾಂತೀಯ ಪೊಲೀಸ್ ಮುಖ್ಯಸ್ಥ ಜುಲ್ಫಿಕರ್ ಹಮೀದ್ ತಿಳಿಸಿದ್ದಾರೆ.

Ad Widget

Ad Widget <> Ad Widget

ಸ್ಫೋಟದ ತೀವ್ರತೆಗೆ ಪೊಲೀಸ್ ಕಚೇರಿಯ ಹೊರಗೋಡೆ ಸಂಪೂರ್ಣ ಕುಸಿದುಬಿದ್ದಿದ್ದು, ಮಸೀದಿ ಕಟ್ಟಡಕ್ಕೂ ಭಾರೀ ಹಾನಿಯಾಗಿದೆ. ಇದೇ ವೇಳೆ ಇಬ್ಬರು ಶಸ್ತ್ರಸಜ್ಜಿತ ಉಗ್ರರು ಪೊಲೀಸ್ ಆವರಣಕ್ಕೆ ನುಗ್ಗಲು ಯತ್ನಿಸಿದ್ದು, ಭದ್ರತಾ ಸಿಬ್ಬಂದಿ ನಡೆಸಿದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎಂದು ವರದಿಯಾಗಿದೆ.

ಸ್ಫೋಟದಲ್ಲಿ ಗಾಯಗೊಂಡವರಲ್ಲಿ ಶುಕ್ರವಾರದ ಪ್ರಾರ್ಥನೆಗೆ ಆಗಮಿಸಿದ್ದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕವಿದೆ.

Ad Widget

Ad Widget

ಘಟನೆಯನ್ನು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹಾಗೂ ಅಧ್ಯಕ್ಷರು ತೀವ್ರವಾಗಿ ಖಂಡಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದಕ್ಕೂ ಒಂದು ದಿನ ಮೊದಲು ವಾಯುವ್ಯ ಪಾಕಿಸ್ತಾನದ ಹಂಗು ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಬೆಂಗಾವಲು ವಾಹನದ ಮೇಲೆ ರಸ್ತೆಬದಿಯ ಬಾಂಬ್ ದಾಳಿ ನಡೆದಿದ್ದು, ಆರು ಸೈನಿಕರು ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 10 ಉಗ್ರರು ಹತರಾಗಿದ್ದರು ಎನ್ನಲಾಗಿದೆ. ಇದರ ಬೆನ್ನಲ್ಲೇ ಮಸೀದಿಯಲ್ಲಿ ಈ ದಾಳಿ ನಡೆದಿದೆ.

ಪಾಕಿಸ್ತಾನಿ ತಾಲಿಬಾನ್‌ (TTP) ಇತ್ತೀಚಿನ ವರ್ಷಗಳಲ್ಲಿ ಪೊಲೀಸರು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ದಾಳಿಗಳನ್ನು ನಡೆಸುತ್ತಿದೆ. ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವು ಉಗ್ರರಿಗೆ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸುತ್ತಿದ್ದು, ಈ ಆರೋಪವನ್ನು ತಾಲಿಬಾನ್ ನಿರಾಕರಿಸುತ್ತಿದೆ.

Ad Widget
Click to comment

Leave a Reply

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ನಿಧನ ವಾರ್ತೆ

Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!

Published

on

Ad Widget

Ad Widget

Ad Widget

Ad Widget

ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget

Ad Widget

Ad Widget

ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.

Ad Widget

Ad Widget <> Ad Widget

ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.

ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.

Ad Widget

Ad Widget

ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು

Published

on

Ad Widget

Ad Widget

Ad Widget

Ad Widget

ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.

Ad Widget

Ad Widget

Ad Widget

Ad Widget

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.

Ad Widget

Ad Widget

ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!