ರಾಜಕೀಯ
Krishna Bairegowda-ರಾತ್ರಿ ಬೆಂಗಳೂರು ಪ್ರದಕ್ಷಿಣೆ ಹಾಕಿದ ಕೃಷ್ಣ ಬೈರೇಗೌಡ; ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕಿಡಿ
ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಶುಕ್ರವಾರ ರಾತ್ರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ದಿಢೀರ್ ಪ್ರದಕ್ಷಿಣೆ ನಡೆಸಿ, ರಸ್ತೆ, ಬೀದಿ ದೀಪ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಜೆ.ಪಿ.ನಗರ ಮೆಟ್ರೋ ನಿಲ್ದಾಣದಿಂದ ಅಧಿಕಾರಿಗಳೊಂದಿಗೆ ರೌಂಡ್ಸ್ ನಡೆಸಿದ ಸಚಿವರು, ಹಲವು ಕಡೆ ಕಂಡುಬಂದ ಅವ್ಯವಸ್ಥೆಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು: ನಗರದ ದಕ್ಷಿಣ ಭಾಗದಲ್ಲಿ ಶುಕ್ರವಾರ ರಾತ್ರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳೊಂದಿಗೆ ದಿಢೀರ್ ಪ್ರದಕ್ಷಿಣೆ ನಡೆಸಿ, ರಸ್ತೆ, ಬೀದಿ ದೀಪ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಜೆ.ಪಿ.ನಗರ ಮೆಟ್ರೋ ನಿಲ್ದಾಣದಿಂದ ಅಧಿಕಾರಿಗಳೊಂದಿಗೆ ರೌಂಡ್ಸ್ ನಡೆಸಿದ ಸಚಿವರು, ಹಲವು ಕಡೆ ಕಂಡುಬಂದ ಅವ್ಯವಸ್ಥೆಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಟಾರ್ ಕಿತ್ತುಹೋಗಿದ್ದ ರಸ್ತೆಗಳನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಬೆಂಗಳೂರಿನ ಲಕ್ಷಣ ಇಲ್ಲಿದೆಯಾ ಅಥವಾ ಅವಲಕ್ಷಣವೇ? ನಿಮಗೆ ಯಾವ ಭಾಷೆಯಲ್ಲಿ ಹೇಳಲಿ?” ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ “ಬಾಯಿ ಬಿಟ್ಟರೆ ಬರೀ ಸುಳ್ಳು ಮಾತಾಡ್ತೀರಿ” ಎಂದು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಕಿಡಿಕಾರಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸಮಸ್ಯೆಗಳು ಒಂದೆರಡಲ್ಲ. ಬಾಳಿಕೆ ಬರುವ ರಸ್ತೆಗಳಿಲ್ಲ, ಫುಟ್‌ಪಾತ್‌ಗಳು ಸರಿಯಾಗಿಲ್ಲ. ರಾತ್ರಿ ವೇಳೆ ಸಂಚಾರ ನಡೆಸಲು ಅಗತ್ಯವಿರುವ ಬೀದಿ ದೀಪಗಳ ನಿರ್ವಹಣೆಯೂ ಸಮರ್ಪಕವಾಗಿಲ್ಲ ಎಂದು ಹೇಳಿದರು.
ಸಾರಕ್ಕಿಯಿಂದ ಬನ್ನೇರುಘಟ್ಟ ಮಾರ್ಗದವರೆಗೆ ಇರುವ ಬೀದಿ ದೀಪಗಳ ಸ್ಥಿತಿಯನ್ನೂ ಸಚಿವರು ವಿವರಿಸಿದರು. ಸಾರಕ್ಕಿ ಮೆಟ್ರೋದಿಂದ ಗೊಟ್ಟಿಗೆರೆವರೆಗೆ ಒಟ್ಟು 1,540 ಬೀದಿ ದೀಪಗಳಿದ್ದು, ಈ ಪೈಕಿ 1,010 ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದ ದೀಪಗಳು ಉರಿಯುತ್ತಿಲ್ಲ. ಬೀದಿ ದೀಪಗಳ ನಿರ್ವಹಣೆ ಮಾಡುವಂತೆ ಜುಲೈನಲ್ಲೇ ಅಧಿಕಾರಿಗಳಿಗೆ ಸೂಚಿಸಿದ್ದರೂ ತಳಮಟ್ಟದಲ್ಲಿ ನಿರೀಕ್ಷಿತ ಸುಧಾರಣೆ ಕಂಡುಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ಗೌಂಡ್ ಲೆವೆಲ್‌ನಲ್ಲಿ ಸಮಸ್ಯೆ’
ಮೂಲಭೂತ ಸೌಕರ್ಯಗಳೇ ಸುಧಾರಣೆಯಾಗದಿದ್ದರೆ ಹೇಗೆ ಎಂದು ಪ್ರಶ್ನಿಸಿದ ಸಚಿವರು, ಸಂಬಂಧಪಟ್ಟ ಗುತ್ತಿಗೆದಾರರೊಂದಿಗೆ ಈ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದರು.
“ಅಧಿಕಾರಿಗಳಿಗೆ ಗೌಂಡ್ ಲೆವೆಲ್‌ನಲ್ಲಿ ಸಮಸ್ಯೆ ಏನು ಎಂಬುದನ್ನು ತೋರಿಸಲು ಬಂದಿದ್ದೇನೆ. ತಳಮಟ್ಟದ ಸಮಸ್ಯೆಗಳನ್ನು ತೋರಿಸಿದರೆ ಅಧಿಕಾರಿಗಳಿಗೆ ಮನವರಿಕೆಯಾಗಬಹುದು. ಬದಲಾವಣೆಯಾಗಬಹುದು ಎಂಬ ಆಶಯವಿದೆ” ಎಂದು ಹೇಳಿದರು.
ಈ ವೇಳೆ ದಕ್ಷಿಣ ನಗರ ಪಾಲಿಕೆ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮತ್ತೆ ಫುಟ್‌ಪಾತ್ ಒತ್ತುವರಿ ಮಾಡಿದರೆ ತೆರವು
ಕೆಲವು ಪ್ರದೇಶಗಳಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿದ ಬಳಿಕ ಮತ್ತೆ ಅತಿಕ್ರಮಣ ಮಾಡಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ ಎಂದು ಸಚಿವರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಫುಟ್‌ಪಾತ್ ಮರುಒತ್ತುವರಿ ತಡೆಯಲು ಪೊಲೀಸರು ಹಾಗೂ ಪಾಲಿಕೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ರಚಿಸುವುದಾಗಿ ಹೇಳಿದರು.
ಟೋಯಿಂಗ್ ವಾಹನಗಳ ಹರಾಜಿಗೆ ಸೂಚನೆ
ಟೋಯಿಂಗ್ ಮಾಡಿರುವ ವಾಹನಗಳನ್ನು ಕಾನೂನುಬದ್ಧವಾಗಿ ಹರಾಜು ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚಿಸಿದರು.
ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ರಸ್ತೆ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ, ಅನಾಥ ವಾಹನಗಳ ತೆರವು ಹಾಗೂ ನಿರಂತರ ಸ್ವಚ್ಛತಾ ಅಭಿಯಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಜಿಬಿಎ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆಯನ್ನೂ ನಡೆಸಿದರು.
ಯಾರ್ಡ್‌ಗಳಲ್ಲಿ ದೀರ್ಘಕಾಲದಿಂದ ಬಾಕಿ ಇರುವ ವಾಹನಗಳನ್ನು ತೆರವುಗೊಳಿಸಬೇಕು. ದಶಕಗಳಿಂದ ಕೆಟ್ಟು ನಿಂತಿರುವ ವಾಹನಗಳನ್ನು ಕಾನೂನುಬದ್ಧವಾಗಿ ಹರಾಜು ಮಾಡಲು ಸಾಧ್ಯವಾಗದಿದ್ದರೆ, ಮುಖ್ಯ ಆಯುಕ್ತರ ಸೂಚನೆಯಂತೆ ನೋಂದಾಯಿತ ಸ್ಕ್ರ್ಯಾಪ್ ಸಂಗ್ರಹಕಾರರಿಗೆ ಹಸ್ತಾಂತರಿಸುವ ಸಾಧ್ಯತೆಯನ್ನೂ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಪೊಲೀಸ್ ಠಾಣೆಗಳಲ್ಲಿ 11,346 ವಾಹನ
ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಗಳ ಆವರಣದಲ್ಲಿ ಸುಮಾರು 11,346 ವಾಹನಗಳು ದೀರ್ಘಕಾಲದಿಂದ ನಿಂತಿದ್ದು, ಇದರಿಂದ ಸಾರ್ವಜನಿಕರ ಓಡಾಟಕ್ಕೂ ತೊಂದರೆಯಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು.
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ಒತ್ತುವರಿ ತೆರವು, ಅನಾಥ ವಾಹನಗಳ ತೆರವು ಹಾಗೂ ಸ್ವಚ್ಛತಾ ಕಾರ್ಯಗಳನ್ನು ಸಮನ್ವಯದಿಂದ ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕ್ಷೇತ್ರಮಟ್ಟದ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.
-
ನಿಧನ ವಾರ್ತೆ22 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಬಿಗ್ ನ್ಯೂಸ್17 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಪುತ್ತೂರು14 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಅಪರಾಧ23 hours ago
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ
-
Uncategorized22 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ20 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಮಂಗಳೂರು16 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಬಿಗ್ ನ್ಯೂಸ್15 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ


















