ಅಪರಾಧ
Bharat Kumdel,Goonda Act : ವರ್ಷಗಳ ಹಿಂದೆ ನಡೆದ ಬಂಟ್ವಾಳದ ರೆಹಮಾನ್ ಹತ್ಯೆ : ಭರತ್ ಕುಮ್ದೇಲ್ ಸಹಿತ 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ
ಬಂಟ್ವಾಳ: ವರ್ಷಗಳ ಹಿಂದೆ ಹತ್ಯೆಯಾದ ಬಂಟ್ವಾಳ ಅಬ್ಧುಲ್ ರೆಹಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಈ ಪೈಕಿ ಆರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯನ್ನೂ ಅನ್ವಯಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಹಾಗೂ ರಂಜಿತ್ (35) ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯ ಕ್ರೈಂ ನಂ. 54/2025ಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅನ್ವಯಿಸಲಾಗಿದ್ದು, ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಮೇ 27ರಂದು ಕೊಲೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿ ಪ್ರದೇಶದಲ್ಲಿ 2025ರ ಮೇ 27ರಂದು ಅಬ್ದುಲ್ ರೆಹಮಾನ್ ಎಂಬವರ ಹತ್ಯೆ ನಡೆದಿತ್ತು. ಮರಳು ಅನ್‌ಲೋಡ್ ಮಾಡುತ್ತಿದ್ದ ವೇಳೆ ಬೈಕ್‌ಗಳಲ್ಲಿ ಬಂದ ಗುಂಪೊಂದು ರೆಹಮಾನ್ ಹಾಗೂ ಅವರೊಂದಿಗೆ ಇದ್ದ ಕಲಂದರ್ ಶಾಫಿ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರೆಹಮಾನ್ ಮೃತಪಟ್ಟಿದ್ದರು. ಕಲಂದರ್ ಶಾಫಿ ಗಾಯಗೊಂಡಿದ್ದರು.
ಕೆಲ ದಿನಗಳ ಹಿಂದೆ ಬಜ್ಪೆಯಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯ ನಡೆದಿದೆ ಎಂಬ ಆರೋಪವೂ ಆಗ ಕೇಳಿಬಂದಿತ್ತು.ರೆಹಮಾನ್ ಅವರು ಬಡಗಬೆಳ್ಳೂರು ಗ್ರಾಮದ ಸ್ಥಳೀಯ ಜುಮಾ ಮಸೀದಿಯ ಕಾರ್ಯದರ್ಶಿ ಹಾಗೂ ಪಿಕಪ್ ವಾಹನ ಚಾಲಕರಾಗಿದ್ದರು ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕ್ರೈಂ ನಂ. 54/2025ರಲ್ಲಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ 15 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ತನಿಖೆಯ ಸಂದರ್ಭದಲ್ಲಿ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA/ಕೋಕಾ) ಅಡಿಯಲ್ಲಿ ಕಾನೂನು ಕ್ರಮ ಕೈಗೊಂಡಿದ್ದರು. 2025ರ ಅಕ್ಟೋಬರ್‌ನಲ್ಲಿ ಭರತ್ ರಾಜ್ ಅಲಿಯಾಸ್ ಭರತ್ ಕುಮ್ಡೇಲು ವಿರುದ್ಧವೂ ಕೋಕಾ ಕಾಯ್ದೆ ಅನ್ವಯಿಸಲಾಗಿತ್ತು. ಭರತ್ ಕುಮ್ಡೇಲು ವಿರುದ್ಧ ಇದಕ್ಕೂ ಮೊದಲು ಒಂದು ಕೊಲೆ ಪ್ರಕರಣ ದಾಖಲಾಗಿತ್ತು.
Six accused have been booked under the Goonda Act in connection with the Abdul Rehman murder case at Ira Kodi in Bantwal. KCOCA has also been invoked against all accused in Crime No. 54/2025 registered at Bantwal Rural Police Station.
ಅಂತರ ರಾಜ್ಯ
Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.
ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ನಿಧನ ವಾರ್ತೆ20 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ19 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ19 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ19 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ19 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ13 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ19 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ18 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















