[…]" /> […]"> Bantwal Pocso Case :ಬಂಟ್ವಾಳದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಕಠಿಣ ಶಿಕ್ಷೆ - Nikhara News | Kannada News Website
Connect with us

ಅಪರಾಧ

Bantwal Pocso Case :ಬಂಟ್ವಾಳದಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಕಠಿಣ ಶಿಕ್ಷೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) ಆದೇಶಿಸಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್ ಶಿಕ್ಷೆಗೆ ಗುರಿಯಾದ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಅ.ಕ್ರ. 141/2025ರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ಪ್ರಕಟಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ–2012ರ ಕಲಂ 4, 6, 8, 12, 19(1)(b), 21 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)–2023ರ ಕಲಂ 64(2)(f), 75 ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Ad Widget

Ad Widget <> Ad Widget

ಪ್ರಕರಣದ ತನಿಖೆಯನ್ನು ಬಂಟ್ವಾಳ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅಬ್ದುಲ್ ಲತಿಫ್ ಸೇರಿದಂತೆ ಮೂವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2)ದಲ್ಲಿ ವಿಚಾರಣೆ ನಡೆದಿದ್ದು, ಅಬ್ದುಲ್ ಲತಿಫ್ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಾನು ಕೆ.ಎಸ್. ಅವರು ಸೆ.19ರಂದು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.

Ad Widget

Ad Widget

ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.

Bantwal POCSO case: Abdul Latif convicted and sentenced to 20 years of rigorous imprisonment and fined ₹80,000 by the FTSC-2 court in Mangaluru.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.

Ad Widget

Ad Widget alt="Ad Widget"/>

Ad Widget

ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

Published

on

Ad Widget

Ad Widget

Ad Widget

Ad Widget

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಬೈಕ್ ಸವಾರ ನಿಧಾನವಾಗಿ ರಸ್ತೆ ಏರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಾಯಗೊಂಡಿದ್ದು, ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಅಪಘಾತದ ದೃಶ್ಯಗಳು ಸಮೀಪದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಪಘಾತಕ್ಕೆ ಕಾರಣವಾದ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಈ ದೃಶ್ಯಗಳು ಸಹಕಾರಿಯಾಗುವ ಸಾಧ್ಯತೆಯಿದೆ.

ಇನ್ನು ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕನ ಬಗ್ಗೆ ಸ್ಥಳೀಯವಾಗಿ ವಿವಿಧ ಚರ್ಚೆಗಳು ನಡೆಯುತ್ತಿದ್ದು, ಅಪಘಾತದ ವೇಳೆ ಚಾಲಕ ಮದ್ಯದ ಅಮಲಿನಲ್ಲಿದ್ದನೇ ಎಂಬ ಬಗ್ಗೆಯೂ ಆರೋಪಗಳು ಕೇಳಿಬಂದಿವೆ. ಆದರೆ ಈ ಆರೋಪಗಳಿಗೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

Ad Widget

Ad Widget

ಅಪಘಾತದ ಕುರಿತು ಸಂಬಂಧಪಟ್ಟ ಪೊಲೀಸ್ ಇಲಾಖೆ ಪರಿಶೀಲನೆ ನಡೆಸಿ, ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಆಧರಿಸಿ ವಾಹನ ಹಾಗೂ ಚಾಲಕನನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಾಯಾಳುವಿನ ಆರೋಗ್ಯ ಸ್ಥಿತಿ, ಅಪಘಾತಕ್ಕೆ ನಿಖರ ಕಾರಣ ಹಾಗೂ ಕಾರು ಚಾಲಕನ ಕುರಿತು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

Ad Widget
Continue Reading

ಅಪರಾಧ

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

Published

on

Ad Widget

Ad Widget

Ad Widget

Ad Widget

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget

Ad Widget

Ad Widget

ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Ad Widget

Ad Widget alt="Ad Widget"/>

Ad Widget

2024ರ ಡಿಸೆಂಬರ್ 11ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಸಂಜೀವ ನಾಯ್ಕ ತನ್ನ ಪತ್ನಿಗೆ ಹೃದಯಾಘಾತವಾಗಿದೆ ಎಂದು ನೆರೆಮನೆಯವರನ್ನು ನಂಬಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಮಹಿಳೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

Ad Widget

Ad Widget <> Ad Widget

ಮೃತದೇಹದ ಮೇಲೆ ಅನುಮಾನಾಸ್ಪದ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಶಯಾಸ್ಪದ ಸಾವು ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ವಿಟ್ಲ ಪೊಲೀಸ್ ಠಾಣೆಯ ನಿರೀಕ್ಷಕ ಹೆಚ್.ಇ. ನಾಗರಾಜ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎನ್‌ಎಸ್ ಕಲಂ 105 ಭಾಗ-2ರ ಅಡಿಯಲ್ಲಿ ಆರೋಪಿಗೆ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.

ಅಲ್ಲದೆ, ಬಿಎನ್‌ಎಸ್ ಕಲಂ 240ರ ಅಡಿಯಲ್ಲಿ ಸಾಕ್ಷ್ಯನಾಶ ಹಾಗೂ ಸುಳ್ಳು ಮಾಹಿತಿ ನೀಡಿದ ಅಪರಾಧಕ್ಕೆ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ ವಾದ ಮಂಡಿಸಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!