ದಕ್ಷಿಣ ಕನ್ನಡ
ಪುತ್ತೂರು : ಮುನಿಸು ಮರೆತು ಲೋಕ ಅದಾಲತ್‌ನಲ್ಲಿ ಒಂದಾದ ಮೂರು ದಂಪತಿ | ರಾಜಿ ಸಂಧಾನದ ಬಳಿಕ ಹಾರ ಬದಲಿಸಿಕೊಂಡು ಹೊಸ ಜೀವನದ ಸಂಕಲ್ಪ

ಪುತ್ತೂರು, ಸೆ.19: ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಒಂದಾಗಿ, ಹೊಸ ಜೀವನದ ಸಂಕಲ್ಪದೊಂದಿಗೆ ಜತೆಯಾಗಿ ತೆರಳಿದರು.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪುತ್ತೂರು ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಪುತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಲೋಕ ಅದಾಲತ್ ಈ ಹೃದಯಸ್ಪರ್ಶಿ ಕ್ಷಣಕ್ಕೆ ಸಾಕ್ಷಿಯಾಯಿತು.
ಪುತ್ತೂರು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯ ಹಾಗೂ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಈ ಮೂರು ಪ್ರಕರಣಗಳು ವಿವಾಹ ವಿಚ್ಛೇದನ ಹಾಗೂ ದಾಂಪತ್ಯದಲ್ಲಿನ ಭಿನ್ನಾಭಿಪ್ರಾಯಗಳಿಗೆ ಸಂಬಂಧಿಸಿದ್ದವು. ನ್ಯಾಯಾಧೀಶರಾದ ಪ್ರಕೃತಿ ಕಲ್ಯಾಣಪುರ ಹಾಗೂ ರಮ್ಯಾ ಆರ್. ಅವರು ಪ್ರಕರಣಗಳನ್ನು ಇತ್ಯರ್ಥಪಡಿಸಿದರು. 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ ಅವರು ದಂಪತಿಗಳಿಗೆ ಮಾರ್ಗದರ್ಶನ ನೀಡಿದರು.
ದಿನೇಶ್–ವತ್ಸಲಾ ಪಿ. ಹಾಗೂ ಸಂದೀಪ್–ಲತಾ ಹಾಗೂ ಗೌರಿ – ಸೂರ್ಯಪ್ರಕಾಶ್ ದಂಪತಿಗಳು ಪರಸ್ಪರರ ಮೇಲಿನ ವಿರಸವನ್ನು ಮರೆತು ಮತ್ತೆ ಒಟ್ಟಾಗಿ ಬಾಳುವ ನಿರ್ಧಾರ ಕೈಗೊಂಡರು. ಸಂಧಾನದ ವೇಳೆ ದಾಂಪತ್ಯ ಜೀವನದ ಮಹತ್ವ, ಕುಟುಂಬದ ಮೌಲ್ಯಗಳು ಹಾಗೂ ಪರಸ್ಪರ ಹೊಂದಾಣಿಕೆಯ ಅಗತ್ಯವನ್ನು ಮನವರಿಕೆ ಮಾಡಿಕೊಡಲಾಯಿತು. ಬಳಿಕ ಮೂರು ಜೋಡಿಗಳು ಪರಸ್ಪರ ಹಾರ ಬದಲಿಸಿಕೊಂಡು, ಹೊಸ ಜೀವನ ಆರಂಭಿಸುವ ಸಂಕಲ್ಪದೊಂದಿಗೆ ನ್ಯಾಯಾಲಯದಿಂದ ಜತೆಯಾಗಿ ತೆರಳಿದರು.ದಂಪತಿಗಳು ಒಂದಾಗುವಲ್ಲಿ ನ್ಯಾಯವಾದಿಗಳು ಹಾಗೂ ಸಂಧಾನಕಾರರು ಪ್ರಮುಖ ಪಾತ್ರ ವಹಿಸಿದರು.
515 ಪ್ರಕರಣ ಇತ್ಯರ್ಥ
ಪುತ್ತೂರು ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 897 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಈ ಪೈಕಿ 515 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಒಟ್ಟು ₹74,25,673 ಮೊತ್ತ ಪಾವತಿಗೆ ಆದೇಶ ನೀಡಲಾಗಿದೆ.
ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ 59 ಪ್ರಕರಣಗಳನ್ನು ಕೈಗೆತ್ತಿಕೊಂಡಿದ್ದು, 7 ಪ್ರಕರಣಗಳು ಇತ್ಯರ್ಥಗೊಂಡಿವೆ. ₹10,64,424 ಮೊತ್ತ ಪಾವತಿಗೆ ಆದೇಶಿಸಲಾಗಿದೆ.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ 204 ಪ್ರಕರಣಗಳಲ್ಲಿ 139 ಇತ್ಯರ್ಥಗೊಂಡಿದ್ದು, ₹16,05,050 ಪಾವತಿಗೆ ಆದೇಶಿಸಲಾಗಿದೆ. ಹೆಚ್ಚುವರಿ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ 199 ಪ್ರಕರಣಗಳಲ್ಲಿ 110 ಇತ್ಯರ್ಥಗೊಂಡಿದ್ದು, ₹16,20,000 ಪಾವತಿಗೆ ಆದೇಶಿಸಲಾಗಿದೆ.
ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ 325 ಪ್ರಕರಣಗಳಲ್ಲಿ 186 ಇತ್ಯರ್ಥಗೊಂಡಿದ್ದು, ₹31,32,499 ಪಾವತಿಗೆ ಆದೇಶಿಸಲಾಗಿದೆ. ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ 98 ಪ್ರಕರಣಗಳಲ್ಲಿ 71 ಇತ್ಯರ್ಥಗೊಂಡಿದ್ದು, ₹3,700 ಪಾವತಿಗೆ ಆದೇಶಿಸಲಾಗಿದೆ. 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ 12 ಪ್ರಕರಣಗಳಲ್ಲಿ 2 ಪ್ರಕರಣಗಳು ಇತ್ಯರ್ಥಗೊಂಡಿವೆ.
ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ, ರಮ್ಯಾ ಆರ್., ಪ್ರಕೃತಿ ಕಲ್ಯಾಣಪುರ ಹಾಗೂ ದೇವರಾಜ್ ವೈ.ಎಚ್. ಅವರು ವಿಚಾರಣೆ ಪ್ರಕ್ರಿಯೆ ನಡೆಸಿದರು.
wo estranged couples reunited through mediation at Puttur Lok Adalat after resolving marital disputes, choosing reconciliation and a fresh start together.
ಬಿಗ್ ನ್ಯೂಸ್
Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ
ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಮಂಗಳೂರು
ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.
ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.
ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.
ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.
ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.
ಮಂಗಳೂರು
Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ
ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.
ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
-
Uncategorized20 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized22 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized21 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized22 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized24 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
ಅಂತರ ರಾಜ್ಯ5 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
Uncategorized21 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |
-
ಬಿಗ್ ನ್ಯೂಸ್6 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ