Uncategorized
ಮಂಗಳೂರು : ಮಳೆ ನೀರು ನಿಂತು ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ಗುಂಡಿ ಕಾಣಿಸದೆ ಸ್ಕೂಟಿ ಬಿದ್ದು MSc ವಿದ್ಯಾರ್ಥಿನಿ ಗಂಭೀರ ಗಾಯ – ಒಂದು ವರ್ಷದ ಶೈಕ್ಷಣಿಕ ಬದುಕು ಹಾಳು

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ನೇತ್ರಾವತಿ ನದಿಗೆ ಅಳವಡಿಸಿರುವ ಸೇತುವೆಯ ಮಧ್ಯದಲ್ಲಿ ನಿರ್ಮಾಣಗೊಂಡಿರುವ ಹೊಂಡಕ್ಕೆ ವಿದ್ಯಾರ್ಥಿನಿ ಚಲಾಯಿಸುತ್ತಿದ್ದ ಸ್ಕೂಟಿ ಬಿದ್ದು ಆಕೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಗಾಯಗೊಂಡವರಾಗಿದ್ದು ಅಪಘಾತದಿಂದ ಆಕೆಯ ಬಲಗೈ ಮೂಳೆ ಮುರಿತವಾಗಿದೆ. ಇದರಿಂದ ಆಕೆಯ ಶೈಕ್ಷಣಿಕ ಬದುಕಿನ ಮೇಲೆ ತೀವ್ರತರವಾದ ಪೆಟ್ಟು ಬಿದ್ದಿದೆ.
ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಪರಿಸರ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ಎಂ.ಎಸ್ಸಿ ವ್ಯಾಸಂಗ ಮಾಡುತ್ತಿರುವ , ಕೊಟ್ಟಾರ ನಿವಾಸಿ ನಿಶ್ಮಿತಾ (19) ಗಾಯಗೊಂಡ ವಿದ್ಯಾರ್ಥಿನಿ. ‘
ನಿಶ್ಮಿತಾ ಅವರು ಜುಲೈ 22 ರಂದು ಸಂಜೆ ಕೊಣಾಜೆ ಕಡೆಯಿಂದ ಮಂಗಳೂರಿಗೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಜೋರಾಗಿ ಮಳೆಯಾಗಿತ್ತು. ನೇತ್ರಾವತಿ ಸೇತುವೆಯಲ್ಲಿ ಭಾರಿ ಗಾತ್ರದ ಹೊಂಡ ಇದ್ದುದು ಮಳೆಯಿಂದಾಗಿ ಅವರ ಅರಿವಿಗೆ ಬಂದಿರಲಿಲ್ಲ.
ಹೊಂಡಕ್ಕೆ ಸಿಲುಕಿ ವಾಹನವು ರಸ್ತೆಗೆ ಉರುಳಿತ್ತು. ಹೆದ್ದಾರಿಯಲ್ಲಿ ಗಾಯಗೊಂಡು ಬಿದ್ದಿದ್ದ ಅವರನ್ನು ರಿಕ್ಷಾ ಚಾಲಕರೊಬ್ಬರು ತಕ್ಷಣ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಿದ್ದರು.
ಈಕೆ ಅಪಘಾತದಲ್ಲಿ ಉಂಟಾದ ಗಾಯದ ಚಿಕಿತ್ಸೆಗಾಗಿ
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದರಿಂದ ಮುಂದಿನ ತಿಂಗಳು ನಡೆಯಲಿರುವ ಯುಜಿಸಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಹಾಗೂ ಎಂ.ಎಸ್ಸಿಯ ಆಂತರಿಕ ಪರೀಕ್ಷೆಗಳನ್ನು ಬರೆಯಲು ಸಾಧ್ಯವಾಗುತ್ತಿಲ್ಲ.
ಅವರ ಬಲಗೈ ಮೂಳೆ ಮುರಿತಕ್ಕೊಳಗಾಗಿರುವುದು ಎಕ್ಸ್ ರೇ ಪರೀಕ್ಷೆಯಲ್ಲಿ ಗೊತ್ತಾಗಿತ್ತು. ಅಲ್ಲದೇ, ಕೈ ಹಾಗೂ ಮೈ ಪೂರ್ತಿ ಅಲ್ಲಲ್ಲಿ ತರಚಿದ ಗಾಯಗಳಾಗಿದ್ದವು. ಬಲಗೈ ಮೂಳೆ ಜೋಡಿಸಲು ನಿಶ್ಮಿತಾ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಉಕ್ಕಿನ ಸಲಾಕೆಯನ್ನು ಅಳವಡಿಸಲಾಗಿದೆ. ಆರು ತಿಂಗಳುಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.
ಹೆದ್ದಾರಿಯ ಹೊಂಡದಿಂದಾಗಿ ಉಂಟಾದ ಅಪಘಾತದಿಂದಾಗಿ ಒಂದು ವರ್ಷ ಶಿಕ್ಷಣದಿಂದ ವಂಚಿತವಾಗುತ್ತಿದೆ’ಎಂದು ಅವರು ಮಾಧ್ಯಮಗಳ ಬಳಿ ಬೇಸರ ತೋಡಿಕೊಂಡಿದ್ದಾರೆ.
‘ಎಂಎಸ್ಸಿಯ ಪ್ರಾಜೆಕ್ಟ್ ಕೆಲಸಗಳಿದ್ದುದರಿಂದ ಅಂದು ದ್ವಿಚಕ್ರವಾಹನದಲ್ಲಿ ವಿಶ್ವವಿದ್ಯಾಲಯಕ್ಕೆ ತೆರಳಿದ್ದೆ. ಮನೆಗೆ ಮರಳುವ ಸಂದರ್ಭದಲ್ಲಿ ನೇತ್ರಾವತಿ ಸೇತುವೆಯಲ್ಲಿನ ಹೊಂಡದಿಂದಾಗಿ ಅಪಘಾತ ಉಂಟಾಗಿದೆ. ಎಂ.ಎಸ್ಸಿ ಅಂತಿಮ ವರ್ಷದ ಆಂತರಿಕ ಪರೀಕ್ಷೆಗಳು ಆಗಸ್ಟ್ನಲ್ಲಿ ನಡೆಯಲಿವೆ. ಕೈಯ ಮೂಳೆ ಮುರಿತಕ್ಕೊಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದರಿಂದ ಪರೀಕ್ಷೆ ಬರೆಯಲು ಸಾಧ್ಯವಿಲ್ಲದಂತಾಗಿದೆ. ಆ.12 ರಂದು ಯುಜಿಸಿ ಎನ್ಇಟಿಗೂ ಹಾಜರಾಗಲೂ ಸಾಧ್ಯವಾಗುತ್ತಿಲ್ಲ. ಒಂದು ವರ್ಷ ಅತಂತ್ರವಾಗಲಿದೆ’ ಎಂದು ನಿಶ್ಮಿತಾ ತಿಳಿಸಿದರು.
‘ಕೈಯ ಶಸ್ತ್ರಚಿಕಿತ್ಸೆಗೆ ಇದುವರೆಗೆ ₹ 65,000 ವೆಚ್ಚವಾಗಿದೆ. ಚಿಕಿತ್ಸೆಯ ವೆಚ್ಚವನ್ನು ಪೋಷಕರು ಭರಿಸಿದ್ದಾರೆ’ ಎಂದರು.
Uncategorized
Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು ಕಾಲೇಜು ಸಭಾಂಗಣದಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Uncategorized
ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.
ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.
ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
Uncategorized
ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರು ಚಾಲನೆ ನೀಡಿದರು.
ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.
ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.
-
ದಕ್ಷಿಣ ಕನ್ನಡ19 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ24 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
ಮಂಗಳೂರು20 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















