ಸ್ಥಳೀಯ
Dharamshala-Big Breaking: ಧರ್ಮಸ್ಥಳ ಸೌ ಜನ್ಯ ಪ್ರಕರಣಕ್ಕೆ ಮತ್ತೆ ಮರುಜೀವ: ಮರುತನಿಖೆಗೆ ಸುಪ್ರೀಂ ಅಸ್ತು; ಹೊಸ ಎಸ್ಐಟಿ ರಚಿಸಿ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಸೂಚನೆ; ಹಿಂದಿನ ತನಿಖಾಧಿಕಾರಿಗಳಿಗೆ ಹೊಸ ತಂಡದಲ್ಲಿ ಅವಕಾಶವಿಲ್ಲ
ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದ್ದು, ಹೊಸ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ದೆಹಲಿ/ಮಂಗಳೂರು, ಸೆ.21: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ 2012ರಲ್ಲಿ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದ್ದು, ಹೊಸ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸಬಾರದು ಎಂದು ನಿರ್ದೇಶಿಸಿದೆ. ಹೊಸ ತಂಡವು ಸ್ವತಂತ್ರವಾಗಿ ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಹಿಂದಿನ ತನಿಖೆಯ ಬಗ್ಗೆ ಆಕ್ಷೇಪ
ಪ್ರಕರಣದ ಮರುತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ಹಿಂದಿನ ತನಿಖೆಯಲ್ಲಿನ ಕೆಲವು ಅಂಶಗಳ ಕುರಿತು ಅರ್ಜಿದಾರರ ಪರ ವಕೀಲರು ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದರು. ಸಂತೋಷ್ ರಾವ್ ಪ್ರಕರಣದಲ್ಲಿ ನಿರಪರಾಧಿಯಾಗಿದ್ದು, ನೈಜ ಆರೋಪಿಗಳು ಬೇರೆ ಇರಬಹುದು ಎಂಬುದು ಅರ್ಜಿದಾರರ ಪರ ವಾದವಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದ ಸುಮಾರು 140ರಿಂದ 150 ಪುಟಗಳಷ್ಟು ಸಾಕ್ಷ್ಯಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪವೂ ವಿಚಾರಣೆ ವೇಳೆ ಪ್ರಸ್ತಾಪವಾಗಿತ್ತು. ಹಿಂದಿನ ತನಿಖೆಯಲ್ಲಿ ಸಾಕ್ಷ್ಯಗಳ ನಿರ್ವಹಣೆ ಮತ್ತು ತನಿಖೆಯ ಹಲವು ಅಂಶಗಳ ಕುರಿತು ಪ್ರಶ್ನೆಗಳನ್ನು ಎತ್ತಲಾಗಿತ್ತು.
ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಖುಲಾಸೆ
2012ರಲ್ಲಿ ಸೌಜನ್ಯ ನಾಪತ್ತೆಯಾದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ನಂತರ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿತ್ತು.
ಸುದೀರ್ಘ ವಿಚಾರಣೆಯ ಬಳಿಕ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯವು ಸಂತೋಷ್ ರಾವ್ ವಿರುದ್ಧ ಆರೋಪ ಸಾಬೀತುಪಡಿಸಲು ಅಗತ್ಯವಾದ ಸಾಕ್ಷ್ಯಾಧಾರಗಳಿಲ್ಲ ಎಂದು ಹೇಳಿ ಅವರನ್ನು ಖುಲಾಸೆಗೊಳಿಸಿತ್ತು.
ಸಿಬಿಐ ತನಿಖೆಯಲ್ಲಿ ಲೋಪದೋಷಗಳಿದ್ದು, ನೈಜ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ತನಿಖಾ ಸಂಸ್ಥೆ ವಿಫಲವಾಗಿದೆ ಎಂದು ಆಕ್ಷೇಪಿಸಿದ್ದ ಸೌಜನ್ಯ ಅವರ ತಾಯಿ ಕುಸುಮಾವತಿ, ಪ್ರಕರಣದ ಮರುತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಇದೀಗ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ಮರುತನಿಖೆಗೆ ಆದೇಶಿಸಿದೆ. ಹೊಸ ಎಸ್ಐಟಿ ರಚಿಸಿ ಸ್ವತಂತ್ರವಾಗಿ ತನಿಖೆ ನಡೆಸಬೇಕು ಹಾಗೂ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದೆ.
ಅಲ್ಲದೆ, ಈ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊಸ ತನಿಖಾ ತಂಡದಲ್ಲಿ ಸೇರಿಸದಂತೆ ಸ್ಪಷ್ಟವಾಗಿ ಸೂಚಿಸಿರುವುದು ಪ್ರಕರಣದ ಮುಂದಿನ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.
2012ರ ಅಕ್ಟೋಬರ್ನಲ್ಲಿ ನಡೆದಿದ್ದ ಘಟನೆ
2012ರ ಅಕ್ಟೋಬರ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪದ ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಸೌಜನ್ಯ ನಾಪತ್ತೆಯಾಗಿದ್ದರು. ಬಳಿಕ ಅವರ ಮೃತದೇಹ ಪತ್ತೆಯಾಗಿತ್ತು. ಪ್ರಕರಣದಲ್ಲಿ ಅತ್ಯಾಚಾರ ಮತ್ತು ಕೊಲೆ ಆರೋಪದಡಿ ತನಿಖೆ ಆರಂಭಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ರಾವ್ ಅವರನ್ನು ಬಂಧಿಸಿ ತನಿಖೆ ನಡೆಸಲಾಗಿತ್ತು. ಸಾರ್ವಜನಿಕರ ಆಕ್ರೋಶ ಮತ್ತು ಪ್ರತಿಭಟನೆಗಳ ನಡುವೆಯೇ ಪ್ರಕರಣದ ತನಿಖೆಯನ್ನು ಸಿಐಡಿಗೆ, ಬಳಿಕ ಸಿಬಿಐಗೆ ವಹಿಸಲಾಗಿತ್ತು.
ಸಿಬಿಐ ತನಿಖೆಯ ನಂತರ ನಡೆದ ನ್ಯಾಯಾಂಗ ವಿಚಾರಣೆಯಲ್ಲಿ ಸಂತೋಷ್ ರಾವ್ ಖುಲಾಸೆಯಾಗಿದ್ದರು. ಇದೀಗ ಸೌಜನ್ಯ ಅವರ ತಾಯಿ ಸಲ್ಲಿಸಿದ್ದ ಮೇಲ್ಮನವಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವುದರಿಂದ, 14 ವರ್ಷಗಳ ಹಿಂದೆ ನಡೆದಿದ್ದ ಈ ಪ್ರಕರಣ ಮತ್ತೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ.
ಹೊಸ ಎಸ್ಐಟಿ ತನಿಖೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಉಳಿದಿರುವ ಪ್ರಶ್ನೆಗಳಿಗೆ ಯಾವ ರೀತಿಯ ಉತ್ತರ ದೊರೆಯಲಿದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ20 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ21 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ21 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಬಿಗ್ ನ್ಯೂಸ್4 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು3 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















