ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಮಹಾತ್ಮ ಗಾಂಧಿ […]" /> ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಮಹಾತ್ಮ ಗಾಂಧಿ […]"> Rakshit Shivaram-ಶಿರ್ಲಾಲು : ಕಸ್ತೂರಿರಂಗನ್ ವರದಿ ಗ್ರಾಮಸಭೆಗೆ ಅಧಿಕಾರಿಗಳೇ ಗೈರು; ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ - ಮಾಹಿತಿ ಇಲ್ಲದೆ ಸಭೆಗೆ ಬಂದು ಸಭೆ ಮುಂದೂಡಿದ ಅಧಿಕಾರಿಗಳು..! - Nikhara News | Kannada News Website
Connect with us

ಸ್ಥಳೀಯ

Rakshit Shivaram-ಶಿರ್ಲಾಲು : ಕಸ್ತೂರಿರಂಗನ್ ವರದಿ ಗ್ರಾಮಸಭೆಗೆ ಅಧಿಕಾರಿಗಳೇ ಗೈರು; ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ – ಮಾಹಿತಿ ಇಲ್ಲದೆ ಸಭೆಗೆ ಬಂದು ಸಭೆ ಮುಂದೂಡಿದ ಅಧಿಕಾರಿಗಳು..!

Published

on

Ad Widget

Ad Widget

Ad Widget

Ad Widget

ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಕಸ್ತೂರಿರಂಗನ್ ವರದಿಯ ಅಧಿಸೂಚನೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಂದ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪಡೆಯಲು ಬೆಳ್ತಂಗಡಿಯ ಶಿರ್ಲಾಲು ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಗ್ರಾಮಸಭೆ ಕರೆಯಲಾಗಿತ್ತು. ಆದರೆ ಅಧಿಕಾರಿಗಳು ಸಭೆಗೆ ಹಾಜರಾಗದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.

Ad Widget

Ad Widget alt="Ad Widget"/>

Ad Widget

ಸೆ.21ರಂದು ಬೆಳಗ್ಗೆ 10 ಗಂಟೆಯಿಂದ ಮಹಾತ್ಮ ಗಾಂಧಿ ಶಿರ್ಲಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಶೇಷ ಗ್ರಾಮಸಭೆ ನಡೆಸುವುದಾಗಿ ಪಂಚಾಯತ್ ವತಿಯಿಂದ ಕರೆಯೋಲೆ ನೀಡಲಾಗಿತ್ತು. ಕಸ್ತೂರಿರಂಗನ್ ಅಧಿಸೂಚನೆಯ ಕುರಿತು ಶಿರ್ಲಾಲು ಗ್ರಾಮದ ವ್ಯಾಪ್ತಿಯ ಗ್ರಾಮಸ್ಥರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಪಡೆಯುವುದು ಸಭೆಯ ಉದ್ದೇಶವಾಗಿತ್ತು.

Ad Widget

Ad Widget <> Ad Widget

ಗ್ರಾಮಸಭೆಗೆ ಸುಮಾರು 250 ಗ್ರಾಮಸ್ಥರು ಸೇರಿದ್ದರು. ಆದರೆ ಬೆಳಗ್ಗೆ 10 ಗಂಟೆಗೆ ಸಭೆ ನಿಗದಿಯಾಗಿದ್ದರೂ ಮಧ್ಯಾಹ್ನವಾದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿರಲಿಲ್ಲ. ಇದರಿಂದ ಸಭೆಗೆ ಆಗಮಿಸಿದ್ದ ಗ್ರಾಮಸ್ಥರಲ್ಲಿ ಅಸಮಾಧಾನ ವ್ಯಕ್ತವಾಯಿತು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಿತ್ ಶಿವರಾಂ ಅವರು ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಅಧಿಕಾರಿಗಳ ಗೈರು ಕುರಿತು ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡರು.

Ad Widget

Ad Widget

ಸಭೆಗೆ ಬಂದ ಅಧಿಕಾರಿಗಳಲ್ಲಿ ಕಸ್ತೂರಿರಂಗನ್ ವರದಿ ಬಾಧಿತ ಗ್ರಾಮದ ಕಿಂಚಿತ್ತು ಮಾಹಿತಿಯೂ ಇಲ್ಲದೆ ರಕ್ಷಿತ್ ಶಿವರಾಂ ಎದುರು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ. ನಂತರ ಸಭೆಯನ್ನು ಸೆ.25ಕ್ಕೆ ಮುಂದೂಡಲಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!