ಅಪರಾಧ
Bantwal-ಬಂಟ್ವಾಳ: ನೀರು ಸರಬರಾಜು ಕಡಿತ ವಿಚಾರ: ತಲವಾರು, ರಾಡ್‌ನಿಂದ ದಾಳಿ; ಮೂವರ ವಿರುದ್ಧ ಪ್ರಕರಣ
ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್‌ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ: ಪಂಚಾಯಿತಿ ನೀರು ಸರಬರಾಜು ಕಡಿತಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ದ್ವೇಷ ಹೊಂದಿದ್ದ ಮೂವರು ವ್ಯಕ್ತಿಗಳು ತಲವಾರು ಹಾಗೂ ಕಬ್ಬಿಣದ ರಾಡ್‌ಗಳಿಂದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆರೋಪ ಕೇಳಿಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೆಂಕಬೆಳ್ಳೂರು ಗ್ರಾಮದ ಧನುಪೂಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಅವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಶಾಂತ್, ರಾಮದಾಸ ಹಾಗೂ ಶಂಕರ ಎಂಬವರ ವಿರುದ್ಧ ಆರೋಪ ಮಾಡಲಾಗಿದೆ.
ದೂರುದಾರ ಪ್ರಶಾಂತ್ ಬೆಳ್ಚಾಡ್ ಅವರು ಬಡಗಬೆಳ್ಳೂರು ಗ್ರಾಮ ಪಂಚಾಯಿತಿಯ ತೆಂಕಬೆಳ್ಳೂರು ವಾರ್ಡ್‌ನಲ್ಲಿ ಪಂಚಾಯಿತಿ ನೀರು ಸರಬರಾಜು ಮಾಡುವ ಕೆಲಸ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಕಮ್ಮಾಜಿ-ಧನುಪೂಜೆ ನಾಗಶ್ರೀ ಮಿತ್ರ ಮಂಡಳಿಯವರು ಪಂಚಾಯಿತಿಯ ಅನುಮತಿ ಪಡೆಯದೆ ಒಂದು ಇಂಚಿನ ಪೈಪ್ ಅಳವಡಿಸಿ ನೀರು ಸರಬರಾಜು ಮಾಡುತ್ತಿರುವುದನ್ನು ಪಂಚಾಯಿತಿ ಗಮನಕ್ಕೆ ತಂದ ಹಿನ್ನೆಲೆಯಲ್ಲಿ, ಪಿಡಿಒ ಅವರ ಆದೇಶದಂತೆ ನೀರು ಸರಬರಾಜು ಕಡಿತಗೊಳಿಸಲಾಗಿತ್ತು.
ಈ ವಿಚಾರವಾಗಿ ಮಿತ್ರ ಮಂಡಳಿಯ ಅಧ್ಯಕ್ಷ ರಾಮದಾಸ ಅವರು ದೂರುದಾರರ ಮೇಲೆ ದ್ವೇಷ ಹೊಂದಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇದೇ ವೇಳೆ, ದೂರುದಾರರ ಪರಿಚಯದ ಮೂಡಾಯಿಕೊಡಿ ನಿವಾಸಿ ಪ್ರಶಾಂತ್ ಅವರು ₹5 ಸಾವಿರ ಸಾಲ ಪಡೆದಿದ್ದು, ಹಣವನ್ನು ಹಿಂದಿರುಗಿಸದೆ ಸೆ.7ರಂದು ದೂರವಾಣಿ ಮೂಲಕ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ.
ಅಂಗಡಿ ಬಳಿ ತಲವಾರು, ರಾಡ್‌ನಿಂದ ದಾಳಿ
ಸೆ.20ರಂದು ಸಂಜೆ ಸುಮಾರು 4.45ಕ್ಕೆ ಪ್ರಶಾಂತ್ ಬೆಳ್ಚಾಡ್ ಅವರು ದ್ವಿಚಕ್ರ ವಾಹನದಲ್ಲಿ ಕಮ್ಮಾಜಿಯ ಶ್ರೀ ಕಾವೇಶ್ವರ ಜನರಲ್ ಸ್ಟೋರ್‌ಗೆ ದಿನಸಿ ಸಾಮಗ್ರಿ ಖರೀದಿಸಲು ತೆರಳಿದ್ದರು. ಈ ವೇಳೆ ಧನುಪೂಜೆ ಕಡೆಯಿಂದ ಆಟೋರಿಕ್ಷಾದಲ್ಲಿ ಬಂದ ಪ್ರಶಾಂತ್, ರಾಮದಾಸ ಹಾಗೂ ಶಂಕರ ಅವರು ದೂರುದಾರರ ಮೇಲೆ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರಶಾಂತ್ ಅವರ ಕೈಯಲ್ಲಿ ತಲವಾರು ಹಾಗೂ ರಾಮದಾಸ ಮತ್ತು ಶಂಕರ ಅವರ ಕೈಯಲ್ಲಿ ಕಬ್ಬಿಣದ ರಾಡ್‌ಗಳಿದ್ದವು ಎನ್ನಲಾಗಿದೆ. ಆರೋಪಿಗಳು ದೂರುದಾರರ ಬಳಿಗೆ ಬಂದು ಬೆದರಿಕೆ ಹಾಕಿದ್ದು, ಪ್ರಶಾಂತ್ ತಲವಾರಿನಿಂದ ಕುತ್ತಿಗೆಗೆ ಬೀಸಿದಾಗ ದೂರುದಾರರು ಕೈ ಅಡ್ಡ ಇಟ್ಟ ಪರಿಣಾಮ ಎಡಗೈ ಮಣಿಗಂಟಿಗೆ ಗಂಭೀರ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮತ್ತೊಮ್ಮೆ ತಲವಾರಿನಿಂದ ದಾಳಿ ನಡೆಸಿದಾಗ ಬಲಗೈ ಅಡ್ಡ ಇಟ್ಟ ಪರಿಣಾಮ ಅಂಗೈಗೂ ಗಾಯವಾಗಿದ್ದು, ಎಡ ಕಿವಿಯ ಕೆಳಭಾಗದಲ್ಲೂ ಗಾಯವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಕೊಲೆ ಮಾಡುವುದಾಗಿ ಬೆದರಿಕೆ ಆರೋಪ
ನೀರು ಸರಬರಾಜು ಕಡಿತಗೊಳಿಸಿದ ವಿಚಾರವನ್ನು ಪ್ರಸ್ತಾಪಿಸಿದ ರಾಮದಾಸ ಅವರು ದೂರುದಾರರನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆರೋಪಿಗಳಿಂದ ತಪ್ಪಿಸಿಕೊಂಡು ದೂರುದಾರರು ಅಂಗಡಿಯೊಳಗೆ ಓಡಲು ಪ್ರಯತ್ನಿಸಿದ ವೇಳೆ ತಿಲಕ್ ಹಾಗೂ ಪ್ರೀತಂ ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ಪ್ರಶಾಂತ್ ಅವರನ್ನು ತಿಲಕ್ ಹಾಗೂ ಪ್ರೀತಂ ಅವರು ಖಾಸಗಿ ವಾಹನದಲ್ಲಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಅಪರಾಧ
Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು
ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.
ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.
ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.
ಅಪರಾಧ
Vittal Police raid :ಕೋಳಿ ಅಂಕಕ್ಕೆ ವಿಟ್ಲ ಪೊಲೀಸ್ ದಾಳಿ – ನಾಲ್ವರು ವಶಕ್ಕೆ

ವಿಟ್ಲ: ಪೆರುವಾಯಿ ಗ್ರಾಮದ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಅಕ್ರಮವಾಗಿ ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ವಶಕ್ಕೆ ಪಡೆದ ಘಟನೆ ಅಕ್ಟೋಬರ್ 2ರಂದು ನಡೆದಿದೆ.
ಪೆರುವಾಯಿ ಗ್ರಾಮದ ಸಾರ್ವಜನಿಕ ಜಾಗದಲ್ಲಿ ಜೂಜು ಕಟ್ಟಿ ಕೋಳಿ ಅಂಕ ಆಡಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಖಚಿತ ಮಾಹಿತಿ ಲಭಿಸಿತ್ತು. ಇದರನ್ವಯ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಆಡಿಸುತ್ತಿರುವುದು ಕಂಡು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದಾಳಿಯ ವೇಳೆ ಕೃಷಪ್ಪ (59), ಲಕ್ಷ್ಮಣ ನಾಯ್ಕ್ (38), ಶೋಬಿತ್ ರಾಜ್ (29) ಹಾಗೂ ಯುವರಾಜ್ (46) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. . ಸ್ಥಳದಲ್ಲಿದ್ದ ಕೋಳಿಗಳು, ಕೋಳಿ ಅಂಕಕ್ಕೆ ಬಳಸಲಾಗಿದ್ದ 3,050 ರೂಪಾಯಿ ನಗದು ಹಾಗೂ ಕತ್ತಿಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ ಹಾಗೂ ಇನ್ನಿತರ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Kollur-ಕೊಲ್ಲೂರು: ದನವನ್ನು ಕಾರಿಗೆ ತುಂಬಿಸಿಕೊಂಡು ಪರಾರಿಯಾಗಿದ್ದ ಆರೋಪಿಯ ಬಂಧನ
ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ.
ಕೊಲ್ಲೂರು: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಬಿಳಿ ಬಣ್ಣದ ಕಾರಿನಲ್ಲಿ ತುಂಬಿಸಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆ ನಿವಾಸಿ ಮೊಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.29ರಂದು ಮಧ್ಯರಾತ್ರಿ ಸುಮಾರು 1.30ರ ವೇಳೆಗೆ ಅಪರಿಚಿತರು ಕಾರಿನಲ್ಲಿ ಬಂದು ರಸ್ತೆ ಬದಿಯಲ್ಲಿದ್ದ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಕುರಿತು ಸ್ಥಳೀಯರು ನೀಡಿದ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಪತ್ತೆಹಚ್ಚಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನಿಬ್ಬರಿಗಾಗಿ ಶೋಧ
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಮೊಹಮ್ಮದ್ ಸಿನಾನ್ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಾರ್ಯಾಚರಣೆ
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಉಸ್ತುವಾರಿಯಲ್ಲಿ ಕೊಲ್ಲೂರು ಠಾಣೆ ಉಪನಿರೀಕ್ಷಕ ವಿನಯ್ ಎಂ. ಕೊರ್ಲಹಳ್ಳಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ಹೆಡ್‌ಕಾನ್‌ಸ್ಟೆಬಲ್ ನಾಗೇಂದ್ರ, ಕಾನ್‌ಸ್ಟೆಬಲ್‌ಗಳಾದ ರುದ್ರೇಶ, ನವೀನ್ ಕುಮಾರ್, ವಿಲಾಸ್ ರಾಠೋಡ ಹಾಗೂ ನಾಗರಾಜ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
ಪುತ್ತೂರು21 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್23 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಅಪರಾಧ23 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ
-
ಶಿಕ್ಷಣ24 hours agoNarendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
-
ಶಿಕ್ಷಣ24 hours agoVivekananda-ವಿವೇಕಾನಂದ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ; ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವಸಿದ್ಧತೆ ಅಗತ್ಯ : ಪ್ರತಿಮಾ
-
Uncategorized2 hours ago
ಸೌಜನ್ಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಕೀಲ ಮೋಹಿತ್ ಕುಮಾರ್ ಗೆ ಮಾತೃ ವಿಯೋಗ
-
Uncategorized1 hour ago
ಮಂಗಳೂರು : ಸಹಪಾಠಿಯೊಂದಿಗೆ ಜಗಳ: ಬಿಸಿಎ ವಿದ್ಯಾರ್ಥಿಗೆ ಚೂರಿಯಿಂದ ಇರಿತ; ಇಬ್ಬರು ವಶಕ್ಕೆ


















