ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 […]" /> ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 […]"> ಮಂಗಳೂರು : ಪಬ್'ನಲ್ಲಿ ಪ್ರತಿಷ್ಠಿತ ಕಾಲೇಜ್ ವಿದ್ಯಾರ್ಥಿಗಳ ಮೋಜು ಮಸ್ತಿ‌ ಪ್ರಕರಣ | ಹಲವರು ಪೊಲೀಸರ ವಶ - Nikhara News | Kannada News Website
Connect with us

Uncategorized

ಮಂಗಳೂರು : ಪಬ್’ನಲ್ಲಿ ಪ್ರತಿಷ್ಠಿತ ಕಾಲೇಜ್ ವಿದ್ಯಾರ್ಥಿಗಳ ಮೋಜು ಮಸ್ತಿ‌ ಪ್ರಕರಣ | ಹಲವರು ಪೊಲೀಸರ ವಶ

Published

on

Ad Widget

Ad Widget

Ad Widget

Ad Widget

ಮ‌ಂಗಳೂರು, ಜು.26: ಮಂಗಳೂರಿನ ಪಬ್ ಒಂದರಲ್ಲಿ ಕಾಲೇಜ್ ವಿದ್ಯಾರ್ಥಿ – ವಿದ್ಯಾರ್ಥಿನಿಯರ ಮೋಜು – ಮಸ್ತಿ ನಡೆಸಿದ ವಿಚಾರವಾಗಿ ಪಬ್ ಮ್ಯಾನೇಜರ್ ಹಾಗೂ ಸಿಬಂದಿಗಳನ್ನು ಪೊಲೀಸರು ಜು 26 ರಂದು ಬೆಳಿಗ್ಗೆ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

ನಿನ್ನೆ ( ಜು 25ರಂದು ರಾತ್ರಿ) ಮಂಗಳೂರು ನಗರದ ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ರೆಸ್ಟೋರೆಂಟ್‌ನ ಮೇಲೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು.

Ad Widget

Ad Widget alt="Ad Widget"/>

Ad Widget

ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 ವರ್ಷದವರು ಮೇಲಿನವರು ಪಬ್ ಗೆ ಬರಬಹುದಾಗಿದ್ದೂ ಅದಕ್ಕಿಂತ ಕಡಿಮೆ ವಯಸ್ಸಿನವರಿಗೆ ಹಾಗೂ ಅಪ್ರಾಪ್ತರಿಗೆ ಪಬ್ ಒಳಗೆ ಪ್ರವೇಶ ನೀಡಲಾಗಿದೆ, ಮದ್ಯಪಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಪಬ್ ಮ್ಯಾನೇಜರ್ ಹಾಗೂ ಸಿಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget <> Ad Widget

ಇನ್ನು ಪಬ್ ಓನರ್ ಮುಂಬೈ ನಲ್ಲಿದ್ದು ಅವರ ಜತೆ ಪೊಲೀಸರಿಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದರು. ಪಬ್ ಓನರ್ ಬಳಿ ಪಬ್ ಒಳಗಿನ ಸಿಸಿಟಿವಿ ದೃಶ್ಯಗಳ ಪರಿಶೀಲನೆಗೆ ಅಗತ್ಯವಿರುವ ಪಾಸ್ ವರ್ಡ್ ಇದ್ದು ಅದು ಸಿಕ್ಕ ಬಳಿಕವಷ್ಟೇ ಪರಿಶೀಲನೆ ಸಾದ್ಯ ಎಂದು ತಿಳಿಸಿದರು.

ಇತ್ತೀಚೆಗೆ ಕಿಸ್ಸಿಂಗ್ ಪಂದ್ಯ ಮೂಲಕ ಕುಖ್ಯಾತಿ ಗಳಿಸಿದ‌ ಮಂಗಳೂರಿನ ಪ್ರಸಿದ್ದ ಕಾಲೇಜೊಂದರ 25 ರಿಂದ 30 ವಿದ್ಯಾರ್ಥಿನಿಯರು ಈ ಪಬ್‌ ನಲ್ಲಿ ವಿದಾಯ ಕೂಟವೊಂದರ ಸೆಲೆಬ್ರೆಷನ್‌ ನಿಮಿತ್ತ ಭಾಗವಹಿಸಿದ್ದರು ಎನ್ನಲಾಗಿದೆ.

Ad Widget

Ad Widget

Big Breaking : ಮಂಗಳೂರು: ಬಜರಂಗದಳ ಕಾರ್ಯಕರ್ತರಿಂದ ಪಬ್ ಮೇಲೆ ದಾಳಿ – ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮೋಜು ಮಸ್ತಿಗೆ ಬ್ರೇಕ್ – ತುಂಡುಡುಗೆ ತೊಟ್ಟ ವಿದ್ಯಾರ್ಥಿಗಳ ವಿಡಿಯೋ ವೈರಲ್

ಇನ್ನು ಪ್ರಕರಣದ ತನಿಖೆಯ ಉದ್ದೇಶದಿಂದ ಇಂದು ಬೆಳಗ್ಗೆ ಪೊಲೀಸ್ ಕಮಿಷನರ್‌ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ರಿಸೈಕಲ್ ರೆಸ್ಟೋರೆಂಟ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಪೊಲೀಸ್ ಆಯುಕ್ತರು ” ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಸಂಘಟನೆಯ ಕಾರ್ಯಕರ್ತರು ಎಂದು ಹೇಳಿಕೊಂಡು ಪಬ್ ಮುಂದೆ 10 ರಿಂದ 12 ಯುವಕರು ಜಮಾಯಿಸಿದ್ದಾರೆ. ಹಾಗೂ ಅವರು ಇಲ್ಲಿನ ಬೌನ್ಸರ್ ಬಳಿ ಪಬ್ ಒಳಗಡೆ ಮೈನರ್ ಹುಡುಗ-ಹುಡುಗಿ ಮದ್ಯಪಾನ ಮಾಡುತ್ತಿರುವುದಾಗಿ ಆರೋಪಿಸಿದ್ದಾರೆ.

ಈ ಮಾಹಿತಿಯನ್ನು ಬೌನ್ಸರ್ ಪಬ್ ಒಳಗಿದ್ದ ಮ್ಯಾನೇಜರ್ ಗೆ ತಿಳಿಸಿದ್ದಾರೆ. ಮ್ಯಾನೇಜರ್ ಒಳಗಡೆ ಹೋಗಿ ಪರಿಶೀಲನೆ ನಡೆಸಿದ್ದು ಈ ವೇಳೆ ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇದ್ದರು ಎಂದವರು ತಿಳಿಸಿದರು.

ಮ್ಯಾನೇಜರ್ ಹೊರಗೆ ಹೋಗಲು ಹೇಳಿದ ಬಳಿಕ ವಿದ್ಯಾರ್ಥಿಗಳು ಹೊರಗೆ ಹೋಗಿದ್ದಾರೆ. ಬೌನ್ಸರ್ ಹೇಳಿದ ಪ್ರಕಾರ ಸಂಘಟನೆಯ ಕಾರ್ಯಕರ್ತರು ಪಬ್ ಒಳಗೆ ಹೋಗಿಲ್ಲ. ಹೊರ ಭಾಗದಲ್ಲೇ ಮಾತನಾಡಿ ಹೋಗಿದ್ದಾರೆ. ಈ ಬಗ್ಗೆ ಸಿಸಿಟಿವಿ ಪರಿಶೀಲನೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಪಬ್ ಮ್ಯಾನೇಜರ್ ಮತ್ತು ಬೌನ್ಸರ್ ಹೇಳಿಕೆ ಪಡೆಯಲಾಗಿದೆ. ಇಲ್ಲಿ ಯಾವುದೇ ಅಟಾಕ್, ಯಾ ದೈಹಿಕ ಹಲ್ಲೆ ನಡೆದದ್ದು ಮೇಲ್ನೊಟಕ್ಕೆ‌ಕಂಡು ಬಂದಿಲ್ಲ ಎಂದರು.

ಹೊರಗಿನ ವ್ಯಕ್ತಿಗಳು ಬಂದು ಈ ರೀತಿ ಐಡಿ, ಲೈಸೆನ್ಸ್ ಕೇಳಲು ಬೇರೆಯವರಿಗೆ ಅವಕಾಶ ಇಲ್ಲ. ಈ ಬಗ್ಗೆ ಪರಾಮರ್ಶೆ ಮಾಡಿ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಮೊನ್ನೆ ನಡೆದ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವಿಡಿಯೋ ಪ್ರಕರಣ ವಿದ್ಯಾರ್ಥಿಗಳು ಮತ್ತು ಈ ಘಟನೆ ವಿದ್ಯಾರ್ಥಿಗಳಿಗೆ ಸಂಬಂಧ ಇಲ್ಲ. ಅಂತಿಮ ಪದವಿ ವಿದ್ಯಾರ್ಥಿಗಳು ಪಬ್ ಗೆ ಬಂದಿದ್ದರು‌. ಈ ಪಬ್ ನಲ್ಲಿ ಹಾಕಿರೋ ನಿಯಮದ ಪ್ರಕಾರ 21 ವರ್ಷದವರು ಬರಬಹುದು. ಹೀಗಾಗಿ ಈ ಬಗ್ಗೆ ಮಾಹಿತಿ ಕಲೆ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳ ಅಶ್ಲೀಲ ವೀಡಿಯೊ ಪ್ರಕರಣಕ್ಕೂ ಪಬ್ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ ಕಮಿಷನರ್ ಶಶಿಕುಮಾರ್, ರಿಸೈಕಲ್ ರೆಸ್ಟೋರೆಂಟ್ ಪಬ್ ಬಹಳಷ್ಟು ವರ್ಷಗಳಿಂದ ಇದೆ ಎಂದರು. ಈ ವೇಳೆ ಡಿಸಿಪಿ ಅಂಶು ಕುಮಾರ್, ಎಸಿಪಿ ಪರಮೇಶ್ವರ ಹೆಗಡೆ, ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪಸಾದ್, ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು ಉಪಸ್ಥಿತರಿದ್ದರು.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!