Connect with us

ಸ್ಥಳೀಯ

Soujanya case-ಸೌಜನ್ಯ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಲಿದೆಯಾ ಈ ಸಾಕ್ಷ್ಯ? ಎಲ್ಲರ ಕಣ್ಣು ‘ಮೆಟೀರಿಯಲ್ ಆಬ್ಜೆಕ್ಟ್ ನಂ.15’ ಮೇಲೆ !!!

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಬೆನ್ನಲ್ಲೇ, ಪ್ರಕರಣದಲ್ಲಿ ಈ ಹಿಂದೆ ಸಂಗ್ರಹಿಸಲಾಗಿದ್ದ ‘ಮೆಟೀರಿಯಲ್ ಆಬ್ಜೆಕ್ಟ್ ನಂ.15’ ಮತ್ತೆ ಪ್ರಮುಖ ಸಾಕ್ಷ್ಯವಾಗಿ ಗಮನ ಸೆಳೆದಿದೆ.

Ad Widget

Ad Widget

Ad Widget

Ad Widget

ಧರ್ಮಸ್ಥಳ, ಸೆ.22: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಬೆನ್ನಲ್ಲೇ, ಪ್ರಕರಣದಲ್ಲಿ ಈ ಹಿಂದೆ ಸಂಗ್ರಹಿಸಲಾಗಿದ್ದ ‘ಮೆಟೀರಿಯಲ್ ಆಬ್ಜೆಕ್ಟ್ ನಂ.15’ ಮತ್ತೆ ಪ್ರಮುಖ ಸಾಕ್ಷ್ಯವಾಗಿ ಗಮನ ಸೆಳೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೌಜನ್ಯ ಅವರ ಚೂಡಿದಾರ್ ಟಾಪ್ ಎಂದು ಗುರುತಿಸಲಾಗಿರುವ ಮೆಟೀರಿಯಲ್ ಆಬ್ಜೆಕ್ಟ್ ನಂ.15ರಲ್ಲಿ ಪತ್ತೆಯಾಗಿದ್ದ ಡಿಎನ್‌ಎ ಮಾದರಿಗಳು ಇನ್ನೂ ತನಿಖೆಗೆ ಉಪಯುಕ್ತವಾಗಬಹುದು ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದೆ. ಪ್ರಕರಣದ ಮರುತನಿಖೆಗೆ ಸದ್ಯ ಲಭ್ಯವಿರುವ ಸಾಕ್ಷ್ಯಗಳನ್ನು ಬಳಸಿಕೊಳ್ಳಬಹುದೆಂದು ನ್ಯಾಯಾಲಯ ಸೂಚಿಸಿದೆ. ಹೊಸ ಎಸ್‌ಐಟಿ ತನಿಖೆಗೆ ಮೂರು ತಿಂಗಳ ಗಡುವನ್ನೂ ನೀಡಲಾಗಿದೆ.

Ad Widget

Ad Widget <> Ad Widget

ಚೂಡಿದಾರ್ ಟಾಪ್‌ನಲ್ಲಿ ಪತ್ತೆಯಾಗಿದ್ದ ಕೂದಲು
ಬೆಂಗಳೂರು ಟಾಕ್ಸಿಕಾಲಜಿ ವಿಭಾಗದ ಸಹಾಯಕ ನಿರ್ದೇಶಕ ವಿನೋದ್ ಜೆ. ಲಕ್ಕಪ್ಪ ಅವರು ಈ ಹಿಂದೆ ನಡೆಸಿದ್ದ ಡಿಎನ್‌ಎ ವಿಶ್ಲೇಷಣೆಯ ಸಂದರ್ಭದಲ್ಲಿ ಮೆಟೀರಿಯಲ್ ಆಬ್ಜೆಕ್ಟ್ ನಂ.15ರಲ್ಲಿದ್ದ ಸಾಕ್ಷ್ಯಗಳ ಕುರಿತು ಹೇಳಿಕೆ ನೀಡಿದ್ದರು ಎನ್ನಲಾಗಿದೆ.



Ad Widget

ವಸ್ತುಗಳು ತಮ್ಮ ಬಳಿ ಬಂದಾಗ ಅವುಗಳನ್ನು ತೆರೆದು ಪರಿಶೀಲಿಸುವುದಿಲ್ಲ ಎಂದು ಅವರು ವಿಚಾರಣೆ ವೇಳೆ ತಿಳಿಸಿದ್ದರು. ಆದರೆ ಮೆಟೀರಿಯಲ್ ಆಬ್ಜೆಕ್ಟ್ ನಂ.15ರಲ್ಲಿ ಆರೋಪಿಯನ್ನು ಹೊರತುಪಡಿಸಿದ ವ್ಯಕ್ತಿಗಳ ಕೂದಲು ಪತ್ತೆಯಾಗಿರುವುದಾಗಿ ಸಾಕ್ಷ್ಯ ನೀಡಿದ್ದರು.

Ad Widget

Ad Widget

ಅನುಮಾನಾಸ್ಪದ ವ್ಯಕ್ತಿಗಳನ್ನು ಗುರುತಿಸಿದಲ್ಲಿ ಅವರ ರಕ್ತದ ಮಾದರಿಗಳನ್ನು ಪಡೆದು ಡಿಎನ್‌ಎ ಪರೀಕ್ಷೆ ನಡೆಸಬಹುದೆಂಬ ಸಾಧ್ಯತೆಯನ್ನೂ ಅವರು ಉಲ್ಲೇಖಿಸಿದ್ದರು. ಹೀಗಾಗಿ ಟಾಪ್‌ನಲ್ಲಿ ಪತ್ತೆಯಾಗಿರುವ ಡಿಎನ್‌ಎ ಮಾದರಿಯೊಂದಿಗೆ ಹೊಸದಾಗಿ ಗುರುತಿಸಲಾಗುವ ಶಂಕಿತರ ಡಿಎನ್‌ಎಯನ್ನು ಹೋಲಿಕೆ ಮಾಡಲು ಸಾಧ್ಯವಿರುವುದು ಮರುತನಿಖೆಯಲ್ಲಿ ಪ್ರಮುಖ ಅಂಶವಾಗಬಹುದು.

ಮತ್ತೆ ಮಹತ್ವ ಪಡೆಯಲಿರುವ 8 ಸಂಭಾವ್ಯ ಸಾಕ್ಷಿಗಳು?
ಪ್ರಕರಣದ ಮರುತನಿಖೆಯಲ್ಲಿ ಈ ಹಿಂದೆ ಉಲ್ಲೇಖಿಸಲಾಗಿದ್ದ ಎಂಟು ಸಂಭಾವ್ಯ ಸಾಕ್ಷಿಗಳೂ ಮತ್ತೊಮ್ಮೆ ಮಹತ್ವ ಪಡೆಯುವ ಸಾಧ್ಯತೆಯಿದೆ.

ಈ ಎಂಟು ಮಂದಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿತ್ತು. ಬಳಿಕ ರಾಜ್ಯ ಸರ್ಕಾರ ಅವರನ್ನು ಪತ್ತೆಹಚ್ಚಿ ರಕ್ಷಣೆ ನೀಡಿತ್ತು. ಕಡಿಮೆ ಅವಧಿಯಲ್ಲಿ ಈ ಸಾಕ್ಷಿಗಳನ್ನು ಪತ್ತೆಹಚ್ಚಲು ಸಾಧ್ಯವಾಗಿದ್ದರೂ, ಹಿಂದಿನ ತನಿಖೆ ನಡೆಸಿದ ಸಂಸ್ಥೆಗಳು ಅವರನ್ನು ಏಕೆ ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಿ ವಿಚಾರಿಸಲಿಲ್ಲ ಎಂಬ ಪ್ರಶ್ನೆಯನ್ನೂ ಸುಪ್ರೀಂ ಕೋರ್ಟ್ ಎತ್ತಿದೆ ಎಂದು ವರದಿಯಾಗಿದೆ.

ಸಂತೋಷ್ ರಾವ್‌ಗೆ ಮರುತನಿಖೆಯಿಂದ ರಕ್ಷಣೆ
ಹೊಸ ಎಸ್‌ಐಟಿ ತನಿಖೆಯಿಂದ ಸಂತೋಷ್ ರಾವ್ ಅವರನ್ನು ಸುಪ್ರೀಂ ಕೋರ್ಟ್ ಹೊರಗಿಟ್ಟಿದೆ. ಈಗಾಗಲೇ ಪ್ರಕರಣದ ವಿಚಾರಣೆ ಎದುರಿಸಿ ಖುಲಾಸೆಯಾಗಿರುವ ಹಿನ್ನೆಲೆಯಲ್ಲಿ, ಸಂವಿಧಾನದ ವಿಧಿ 20(2) ಹಾಗೂ ಸಿಆರ್‌ಪಿಸಿ ಸೆಕ್ಷನ್ 300ರ ಅಡಿಯಲ್ಲಿ ಅವರಿಗೆ ರಕ್ಷಣೆ ಇದೆ ಎಂದು ನ್ಯಾಯಾಲಯ ಹೇಳಿದೆ.

ಹೀಗಾಗಿ ಸಂತೋಷ್ ರಾವ್ ಅವರನ್ನು ಇದೇ ಪ್ರಕರಣದಲ್ಲಿ ಮತ್ತೊಮ್ಮೆ ತನಿಖೆಗೊಳಪಡಿಸುವುದು ಅಥವಾ ಅವರ ವಿರುದ್ಧ ಮರು ವಿಚಾರಣೆ ನಡೆಸುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದೇ ವೇಳೆ ಮಲ್ಲಿಕ್ ಜೈನ್, ದೀರಜ್ ಜೈನ್ ಹಾಗೂ ಉದಯ್ ಜೈನ್ ಅವರ ಪಾತ್ರಗಳ ಕುರಿತು ಎಸ್‌ಐಟಿ ಸ್ವತಂತ್ರವಾಗಿ ತನಿಖೆ ನಡೆಸಲು ಅವಕಾಶ ನೀಡಲಾಗಿದೆ. ಆದರೆ ಈ ತನಿಖೆಗೆ ಅವಕಾಶ ನೀಡಿರುವುದರಿಂದ ಅವರು ತಪ್ಪಿತಸ್ಥರು ಎಂದು ಅರ್ಥವಲ್ಲ ಎಂಬ ಅಂಶವನ್ನೂ ಗಮನಿಸಬೇಕಾಗಿದೆ.

ಹೊಸ ಎಸ್‌ಐಟಿಗೆ ಮೂರು ತಿಂಗಳ ಗಡುವು
ಪ್ರಕರಣದ ಮರುತನಿಖೆಗಾಗಿ ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆಧುನಿಕ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಪೊಲೀಸ್ ಅಧಿಕಾರಿಗಳನ್ನು ತಂಡದಲ್ಲಿ ಸೇರಿಸಬೇಕು ಹಾಗೂ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಂಡದ ನೇತೃತ್ವ ವಹಿಸಬೇಕು ಎಂದು ಸೂಚಿಸಲಾಗಿದೆ.

ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆ, ಸಿಐಡಿ ಅಥವಾ ಸಿಬಿಐ ತನಿಖಾ ತಂಡಗಳಲ್ಲಿ ಭಾಗಿಯಾಗಿದ್ದ ಯಾವುದೇ ಅಧಿಕಾರಿಯನ್ನು ಹೊಸ ಎಸ್‌ಐಟಿಯಲ್ಲಿ ಸೇರಿಸಬಾರದು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ಹೊಸ ತಂಡವು ಮೂರು ತಿಂಗಳೊಳಗೆ ಮರುತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಬಳಿಕ ಪ್ರಕರಣವು ಕಾನೂನು ಪ್ರಕ್ರಿಯೆಯಂತೆ ಮುಂದುವರಿಯಲಿದೆ.

ಸೌಜನ್ಯ ಪ್ರಕರಣದ ಹಿನ್ನೆಲೆ
2012ರ ಅಕ್ಟೋಬರ್ 9ರಂದು ಉಜಿರೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಸೌಜನ್ಯ ಕಾಲೇಜಿನಿಂದ ಮನೆಗೆ ಮರಳುವ ವೇಳೆ ನಾಪತ್ತೆಯಾಗಿದ್ದರು. ಅಕ್ಟೋಬರ್ 10ರಂದು ಆಕೆಯ ಮೃತದೇಹ ಪತ್ತೆಯಾಗಿತ್ತು.

ಆರಂಭದಲ್ಲಿ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸಿದ್ದು, ಬಳಿಕ ಪ್ರಕರಣ ಸಿಐಡಿಗೆ ಹಾಗೂ ನಂತರ ಸಿಬಿಐಗೆ ವರ್ಗಾವಣೆಯಾಗಿತ್ತು. ಸಿಬಿಐ ಸಂತೋಷ್ ರಾವ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಆದರೆ 2023ರ ಜೂನ್‌ನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಸಾಕ್ಷ್ಯಗಳ ಕೊರತೆಯ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.

2024ರಲ್ಲಿ ಸೌಜನ್ಯ ಅವರ ತಾಯಿ ಮರುತನಿಖೆ ಕೋರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಆ ಅರ್ಜಿ ವಜಾಗೊಂಡ ಬಳಿಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸೆಪ್ಟೆಂಬರ್ 21, 2026ರಂದು ಸುಪ್ರೀಂ ಕೋರ್ಟ್ ಪ್ರಕರಣದ ಹೊಸ ತನಿಖೆಗೆ ನಿರ್ದೇಶನ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವುದು ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ತಂದಿದೆ.

ಮರುತನಿಖೆಯ ಆದೇಶವು ಯಾರನ್ನೂ ತಪ್ಪಿತಸ್ಥರೆಂದು ಘೋಷಿಸುವುದಲ್ಲ. ಪ್ರಕರಣದ ಸತ್ಯಾಸತ್ಯತೆ ಹಾಗೂ ಹೊಣೆಗಾರಿಕೆಯನ್ನು ಹೊಸ ತನಿಖೆಯ ಮೂಲಕ ಪರಿಶೀಲಿಸುವ ಪ್ರಕ್ರಿಯೆಯಾಗಿದೆ.

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಬಿಗ್ ನ್ಯೂಸ್

Nagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಧರ್ಮಸ್ಥಳದಲ್ಲಿ ವರದಿಯಾಗಿರುವ ಅಸಹಜ ಸಾವುಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಹಲವು ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದಾಗಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲು ಪ್ರಸ್ತುತ ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಸಂಪೂರ್ಣ ಅಧಿಕಾರ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಅವರು ಹೇಳಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಂವಾದವೊಂದರಲ್ಲಿ ಮಾತನಾಡಿದ ಚೌದರಿ , ಎಸ್‌ಐಟಿ ತನಿಖಾ ವರದಿಯಲ್ಲಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳ ಸಂಖ್ಯೆ ಹಾಗೂ ಗ್ರಾಮ ಪಂಚಾಯತ್‌ನಲ್ಲಿ ದಾಖಲಾಗಿರುವ ಸಾವುಗಳ ವಿವರಗಳಲ್ಲಿ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಅಳವಾಗಿ ತನಿಖೆ ನಡೆಸಲು ಸರ್ಕಾರ ಅವಕಾಶ ನೀಡಬೇಕು ಎಂದು ಎಸ್‌ಐಟಿ ತಿಳಿಸಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget <> Ad Widget

ಬಂಗ್ಲೆ ಗುಡ್ಡೆಯಲ್ಲಿ ಹಲವಾರು ಅಸ್ತಿಪಂಜರಗಳು ಪತ್ತೆಯಾಗಿರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ಬಂಗ್ಲೆ ಗುಡ್ಡೆ ಸ್ಮಶಾನವಲ್ಲದಿದ್ದರೂ ಅಲ್ಲಿ ಇಷ್ಟೊಂದು ಎಲುಬುಗಳು ಮತ್ತು ಅಸ್ತಿಪಂಜರಗಳು ಪತ್ತೆಯಾಗಿರುವುದು ಹೇಗೆ ಎಂಬುದರ ಕುರಿತು ಉನ್ನತ ತನಿಖೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.



Ad Widget

ಪತ್ತೆಯಾದ ಕೆಲವು ಅಸ್ತಿಪಂಜರಗಳ ಪರೀಕ್ಷೆಯಲ್ಲಿ ಅವು ಪುರುಷರದ್ದು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಒಂದು ಹುಡುಗಿಯ ಅಸ್ತಿಪಂಜರವನ್ನು ಆಸಿಡ್‌ನಿಂದ ಸುಟ್ಟಿರುವ ಸ್ಥಿತಿಯಲ್ಲಿ ಹೂತುಹಾಕಲಾಗಿದೆ ಎಂಬ ಮಾಹಿತಿ ನೀಡಲಾಗಿತ್ತು. ಆದರೆ, ಆ ವ್ಯಕ್ತಿ ಆಸಿಡ್‌ನಿಂದ ಮೃತಪಟ್ಟಿಲ್ಲ ಎಂಬುದು ಡಿಎನ್‌ಎ ವರದಿಯಲ್ಲಿ ತಿಳಿದುಬಂದಿದೆ ಎಂದು ನಾಗಲಕ್ಷ್ಮೀ ಚೌದರಿ ಹೇಳಿದ್ದಾರೆ.

Ad Widget

Ad Widget

ಈ ರೀತಿಯಾಗಿ ವಿವಿಧ ವರದಿಗಳ ನಡುವೆ ವ್ಯತ್ಯಾಸ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಎಸ್‌ಐಟಿಗೆ ಪೂರಕ ತನಿಖೆ ನಡೆಸಲು ಸಂಪೂರ್ಣ ಅಧಿಕಾರ ನೀಡಬೇಕು ಎಂದು ಸರ್ಕಾರಕ್ಕೆ ಪತ್ರದ ಮೂಲಕ ಶಿಫಾರಸು ಮಾಡಿರುವುದಾಗಿ ಅವರು ತಿಳಿಸಿದ್ದಾರೆ.

ಪ್ರಸ್ತುತ ರಚನೆಯಾಗಿರುವ ಎಸ್‌ಐಟಿ ವ್ಯಾಪ್ತಿಗೆ ಈ ಹೊಸ ಮಾಹಿತಿಗಳು ಸ್ವಯಂಚಾಲಿತವಾಗಿ ಸೇರುತ್ತವೆಯೇ ಎಂಬ ಬಗ್ಗೆ ಕಾನೂನುಬದ್ಧ ಸ್ಪಷ್ಟತೆ ಅಗತ್ಯವಿದೆ. ಆದ್ದರಿಂದ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿ, ಈ ಎಲ್ಲ ವಿಷಯಗಳನ್ನು ಈಗಾಗಲೇ ರಚಿಸಿರುವ ಎಸ್‌ಐಟಿಗೆ ವಹಿಸಬೇಕು. ಅಗತ್ಯವಿದ್ದರೆ ಅದರ ‘ಟರ್ಮ್ಸ್ ಆಫ್ ರೆಫರೆನ್ಸ್’ (ತನಿಖೆಯ ವ್ಯಾಪ್ತಿ) ವಿಸ್ತರಿಸಬೇಕು ಎಂದು ಮಹಿಳಾ ಆಯೋಗ ಶಿಫಾರಸು ಮಾಡಿದೆ.

ಸರ್ಕಾರದ ಪ್ರತಿಕ್ರಿಯೆಗಾಗಿ ಇನ್ನೂ 15 ದಿನ ಕಾಯಲಾಗುವುದು. ಬಳಿಕ ಎರಡು ಬಾರಿ ಸರ್ಕಾರಕ್ಕೆ ನೆನಪಿನ ಪತ್ರ ಕಳುಹಿಸುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading