Connect with us

ರಾಜಕೀಯ

Kasturi Rangan Report-ಕಸ್ತೂರಿ ರಂಗನ್ ವರದಿ: ಕರಡು ಅಧಿಸೂಚನೆ ತಿರಸ್ಕರಿಸಲು ವಿಧಾನಮಂಡಲದ ಸರ್ವಾನುಮತದ ನಿರ್ಣಯ

Published

on



Ad Widget

Ad Widget

Ad Widget

Ad Widget

ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪಿಕೊಳ್ಳದಿರಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದ ನಿರ್ಣಯ ಕೈಗೊಂಡಿವೆ.

Ad Widget

Ad Widget

Ad Widget

Ad Widget

ಬೆಂಗಳೂರು: ಪಶ್ಚಿಮ ಘಟ್ಟಗಳಿಗೆ ಸಂಬಂಧಿಸಿದ ಡಾ. ಕೆ. ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಯನ್ನು ಯಥಾವತ್ತಾಗಿ ಒಪ್ಪಿಕೊಳ್ಳದಿರಲು ಕರ್ನಾಟಕ ವಿಧಾನಮಂಡಲದ ಉಭಯ ಸದನಗಳು ಮಂಗಳವಾರ ಸರ್ವಾನುಮತದ ನಿರ್ಣಯ ಕೈಗೊಂಡಿವೆ.

Ad Widget

Ad Widget

Ad Widget alt="Ad Widget"/>

Ad Widget

ಇದರೊಂದಿಗೆ ವರದಿಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸುವುದು, ಗ್ರಾಮವಾರು ಹಾಗೂ ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆ ನಡೆಸುವುದು ಮತ್ತು ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ಯುವುದು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನಲ್ಲಿ ಕರಡು ಅಧಿಸೂಚನೆ ಕುರಿತು ನಡೆದ ಚರ್ಚೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರಿಸಿ ಈ ನಿರ್ಣಯಗಳನ್ನು ಮಂಡಿಸಿದರು. ಉಭಯ ಸದನಗಳು ಒಮ್ಮತದಿಂದ ಅವುಗಳಿಗೆ ಅಂಗೀಕಾರ ನೀಡಿದವು.



Ad Widget

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ
ಕಸ್ತೂರಿ ರಂಗನ್ ವರದಿಯಲ್ಲಿನ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget

Ad Widget

ಸಮಿತಿಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು, ರೈತರು, ಕೈಗಾರಿಕೆ ಹಾಗೂ ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಅರಣ್ಯ-ಪರಿಸರ ತಜ್ಞರು ಮತ್ತು ಶೈಕ್ಷಣಿಕ ಸಂಸ್ಥೆಗಳ ಪರಿಣಿತರನ್ನು ಒಳಗೊಳ್ಳಲು ಉದ್ದೇಶಿಸಲಾಗಿದೆ. ಸಮಿತಿಯು ಭೌತಿಕ ಸಮೀಕ್ಷೆ ನಡೆಸಿ ಪರಿಸರ ಸೂಕ್ಷ್ಮ ಪ್ರದೇಶ, ಅರಣ್ಯ, ಕೃಷಿ, ತೋಟಗಾರಿಕೆ ಹಾಗೂ ಜನವಸತಿ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸುವ ಕುರಿತು ಶಿಫಾರಸು ಮಾಡಲಿದೆ.

ಗ್ರಾಮವಾರು, ಸರ್ವೇ ನಂಬರ್‌ವಾರು ಸಮೀಕ್ಷೆ
2026ರ ಜುಲೈ 27ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಪರಿಸರ ಸೂಕ್ಷ್ಮ ಪ್ರದೇಶ ಅಧಿಸೂಚನೆಯಲ್ಲಿ ಕರ್ನಾಟಕದ 10 ಜಿಲ್ಲೆಗಳ 1,449 ಗ್ರಾಮಗಳ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಈ ಕರಡು ಅಧಿಸೂಚನೆಯು ಉಪಗ್ರಹ ಆಧಾರಿತ ಸಮೀಕ್ಷೆಯನ್ನು ಅವಲಂಬಿಸಿದ್ದು, ಜಂಟಿ ಭೌತಿಕ ಸಮೀಕ್ಷೆ ಅಥವಾ ಸರ್ವೇ ನಂಬರ್ ಆಧಾರಿತವಾಗಿಲ್ಲ ಎಂದು ಅವರು ಹೇಳಿದರು.

ಅರಣ್ಯ ಹಾಗೂ ಕೃಷಿ-ತೋಟಗಾರಿಕೆ ಪ್ರದೇಶಗಳು ಉಪಗ್ರಹ ಚಿತ್ರಗಳಲ್ಲಿ ಒಂದೇ ರೀತಿಯಾಗಿ ಕಾಣಿಸಿಕೊಳ್ಳುವುದರಿಂದ ಗೊಂದಲ ಉಂಟಾಗುತ್ತಿದೆ. ಗ್ರಾಮದ ಶೇ.20ರಷ್ಟು ಭಾಗ ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಇಡೀ ಗ್ರಾಮವನ್ನೇ ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸುವುದು ಸೂಕ್ತವಲ್ಲ ಎಂದು ಶಿವಕುಮಾರ್ ತಿಳಿಸಿದರು.

ಇಂತಹ ನಿರ್ಬಂಧಗಳಿಂದ ಮನೆ ನಿರ್ಮಾಣ, ಆಸ್ತಿ ವಾರಸುದಾರಿಕೆ, ಕೃಷಿ, ತೋಟಗಾರಿಕೆ, ರಸ್ತೆ, ಶಾಲೆ, ಆಸ್ಪತ್ರೆ ಹಾಗೂ ಕುಡಿಯುವ ನೀರಿನಂತಹ ಮೂಲಸೌಕರ್ಯ ಕಾಮಗಾರಿಗಳಿಗೆ ತೊಂದರೆಯಾಗುವ ಆತಂಕವಿದೆ ಎಂದರು.

ಆದ್ದರಿಂದ ಗ್ರಾಮವಾರು ಹಾಗೂ ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆ ನಡೆಸಿ, ಮನೆಗಳು, ಶಾಲೆಗಳು, ತೋಟಗಾರಿಕೆ ಪ್ರದೇಶಗಳು, ಕುಡಿಯುವ ನೀರು ಮತ್ತು ವಿದ್ಯುತ್ ಮೂಲಸೌಕರ್ಯಗಳ ನಕ್ಷೆ ಸಿದ್ಧಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಕೇಂದ್ರಕ್ಕೆ ಸರ್ವಪಕ್ಷ ನಿಯೋಗ
ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಪ್ರಧಾನಿ ಹಾಗೂ ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿಯಾಗಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ ನಿಲುವನ್ನು ಕೇಂದ್ರದ ಮುಂದೆ ಸಮರ್ಥವಾಗಿ ಮಂಡಿಸಲು ಕರ್ನಾಟಕದ ಎಲ್ಲ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದು ಅವರು ಹೇಳಿದರು.

ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ 2004ರಿಂದಲೂ ಆಕ್ಷೇಪಗಳನ್ನು ಸಲ್ಲಿಸುತ್ತಾ ಬಂದಿದೆ. 2021, 2022 ಹಾಗೂ 2024ರಲ್ಲಿಯೂ ಸಚಿವ ಸಂಪುಟದ ನಿಲುವನ್ನು ಕೇಂದ್ರಕ್ಕೆ ತಿಳಿಸಲಾಗಿದೆ. ಈಗಾಗಲೇ ಆರು ಕರಡು ಅಧಿಸೂಚನೆಗಳನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಶಿವಕುಮಾರ್ ವಿವರಿಸಿದರು.

ರೈತರು ಮತ್ತು ಪರಿಸರ ಎರಡಕ್ಕೂ ಆದ್ಯತೆ
ಪಶ್ಚಿಮ ಘಟ್ಟಗಳ ಪರಿಸರ, ಜೀವವೈವಿಧ್ಯ, ನದಿಗಳ ಮೂಲ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದು ಸರ್ಕಾರದ ಬದ್ಧತೆಯಾಗಿದೆ. ಅದೇ ವೇಳೆ ಹಲವು ತಲೆಮಾರುಗಳಿಂದ ಪಶ್ಚಿಮ ಘಟ್ಟಗಳಲ್ಲಿ ವಾಸಿಸುತ್ತಿರುವ ರೈತರು, ತೋಟಗಾರರು, ಆದಿವಾಸಿಗಳು ಹಾಗೂ ಸ್ಥಳೀಯ ಕುಟುಂಬಗಳಿಗೆ ತೊಂದರೆ ನೀಡುವುದು ಅಥವಾ ಅವರನ್ನು ಸ್ಥಳಾಂತರಿಸುವುದು ಸರ್ಕಾರದ ಉದ್ದೇಶವಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಈಗಾಗಲೇ ಮಂಜೂರಾಗಿರುವ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸೇರಿಸಬಾರದು. ಪುನರ್ವಸತಿ ವ್ಯವಸ್ಥೆಯಿಲ್ಲದೆ ಸ್ಥಳೀಯರನ್ನು ತೆರವುಗೊಳಿಸಬಾರದು. ಬಗರ್‌ಹುಕುಂ, ಅರಣ್ಯ ಹಕ್ಕು ಕಾಯ್ದೆ, ಡೀಮ್ಡ್ ಫಾರೆಸ್ಟ್, ಭೂಮಂಜೂರಾತಿ, ಮೇಲ್ಮನವಿ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪರಿಶೀಲಿಸದೆ ಸ್ಥಳೀಯರ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದರು.

ಅರಣ್ಯ ಹಕ್ಕು ಕಾಯ್ದೆಯ ಅನುಷ್ಠಾನದ ಕುರಿತು ತಕ್ಷಣ ಸಭೆ ನಡೆಸಲಾಗುವುದು ಎಂದರು.

ಅಕ್ರಮ ಒತ್ತುವರಿ, ಬೇಟೆ ತಡೆಗೆ ಕ್ರಮ
ಅರಣ್ಯ ಪ್ರದೇಶಗಳಲ್ಲಿ ಹೊಸದಾಗಿ ಒತ್ತುವರಿ ಮಾಡುವುದನ್ನು ಸಂಪೂರ್ಣವಾಗಿ ತಡೆಯಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಕಾಡಂಚಿನಲ್ಲಿ ವಾಸಿಸುವವರು ತಮ್ಮ ಬಳಿಯಿರುವ ಬಂದೂಕುಗಳನ್ನು ನವೆಂಬರ್ 1ರೊಳಗೆ ಪೊಲೀಸ್ ಠಾಣೆಗಳಿಗೆ ಒಪ್ಪಿಸಬೇಕು. ಪರವಾನಗಿ ಹೊಂದಿರುವವರಿಗೆ ಪರಿಶೀಲನೆ ಬಳಿಕ ಅವುಗಳನ್ನು ಹಿಂತಿರುಗಿಸಲಾಗುವುದು; ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಕ್ರಮ ಬೇಟೆ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕಾಗಿ ಆಧುನಿಕ ತಂತ್ರಜ್ಞಾನ, ಕ್ಯಾಮೆರಾಗಳು ಹಾಗೂ ಆನೆಗಳ ಚಲನವಲನದ ಮೇಲೆ ನಿಗಾ ವಹಿಸುವ ವ್ಯವಸ್ಥೆಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ವಿಧಾನಮಂಡಲದ ಆರು ಪ್ರಮುಖ ನಿರ್ಣಯಗಳು:
ವರದಿಯ ನ್ಯೂನತೆಗಳನ್ನು ಪರಿಶೀಲಿಸಿ ತಿದ್ದುಪಡಿ ಸೂಚಿಸಲು ಉನ್ನತ ಮಟ್ಟದ ಸಮಿತಿ ರಚನೆ.
ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ.
ಗ್ರಾಮವಾರು ಹಾಗೂ ಸರ್ವೇ ನಂಬರ್‌ವಾರು ಭೌತಿಕ ಸಮೀಕ್ಷೆ ನಡೆಸುವುದು.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಲು ಸರ್ವಪಕ್ಷ ನಿಯೋಗ ಕೊಂಡೊಯ್ಯುವುದು.
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ಜತೆಗೆ ರೈತರ ಹಿತಾಸಕ್ತಿಗೂ ಆದ್ಯತೆ ನೀಡುವುದು.
ಮಾನವ-ವನ್ಯಜೀವಿ ಸಂಘರ್ಷ ತಡೆಗೆ ಆಧುನಿಕ ತಂತ್ರಜ್ಞಾನ ಬಳಕೆ.

Ad Widget
Click to comment

Leave a Reply

ಸ್ಥಳೀಯ

Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ

Published

on



Ad Widget

Ad Widget

Ad Widget

Ad Widget

ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget

Ad Widget

ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.

Ad Widget

Ad Widget <> Ad Widget

ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.



Ad Widget

ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Ad Widget

Ad Widget

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿದ್ದು, ವಿವಿಧ ಭಾಗಗಳಿಂದ ಕಂಬಳ ಕೋಣಗಳು ಮೈಸೂರಿನತ್ತ ಪ್ರಯಾಣ ಬೆಳೆಸಲಿವೆ.

Ad Widget
Continue Reading

ರಾಜಕೀಯ

U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್

Published

on



Ad Widget

Ad Widget

Ad Widget

Ad Widget

ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್‌ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್‌ ಬಿಚ್ಚಿಟ್ಟಿದ್ದಾರೆ

Ad Widget

Ad Widget <> Ad Widget

ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.



Ad Widget

ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.

Ad Widget

Ad Widget

ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ

ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548

Ad Widget
Continue Reading

ಅಂತರ ರಾಜ್ಯ

Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್

Published

on



Ad Widget

Ad Widget

Ad Widget

Ad Widget

ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.



Ad Widget

ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.

Ad Widget

Ad Widget

ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.

ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.

ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.

ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್‌ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.

ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.

ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading