ನಿಧನ ವಾರ್ತೆ
Ramakunja-ರಾಮಕುಂಜ: 33ರ ಹರೆಯದ ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ
ಊಟ ಮಾಡಿ ಮಲಗಿದ್ದ ಯುವಕನೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.22ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಜರುಕ್ಕು ನಿವಾಸಿ ದಿ. ವಿಶ್ವನಾಥ ಪೂಜಾರಿ ಅವರ ಪುತ್ರ ಸಚಿನ್ (33) ಎಂದು ಗುರುತಿಸಲಾಗಿದೆ.
ರಾಮಕುಂಜ: ಊಟ ಮಾಡಿ ಮಲಗಿದ್ದ ಯುವಕನೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.22ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಕಾಜರುಕ್ಕು ನಿವಾಸಿ ದಿ. ವಿಶ್ವನಾಥ ಪೂಜಾರಿ ಅವರ ಪುತ್ರ ಸಚಿನ್ (33) ಎಂದು ಗುರುತಿಸಲಾಗಿದೆ.
ಸಚಿನ್ ಅವರು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ (ಕೆಸಿಡಿಸಿ) ಮಂಗಳೂರು ವಿಭಾಗದಲ್ಲಿ ಕಳೆದ ಒಂದೂವರೆ ವರ್ಷದಿಂದ ಹೊರಗುತ್ತಿಗೆ ಆಧಾರದಲ್ಲಿ ಅರಣ್ಯ ವೀಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮೊದಲು ಕಾಜರುಕ್ಕು ಎಂಬಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು.
ಸೆ.22ರಂದು ಮಧ್ಯಾಹ್ನ ಸುಮಾರು 1.30ಕ್ಕೆ ಮನೆಗೆ ಬಂದ ಸಚಿನ್ ಊಟ ಮಾಡಿ ಮಲಗಿದ್ದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರ ತಾಯಿ ಎಬ್ಬಿಸಲು ತೆರಳಿದಾಗ ಸಚಿನ್ ಜೋರಾಗಿ ಉಸಿರಾಡುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮತ್ತೊಬ್ಬ ಪುತ್ರ ಚರಣ್ ಅವರಿಗೆ ಮಾಹಿತಿ ನೀಡಿದ್ದರು.
ಚರಣ್ ಅವರು ಮನೆಗೆ ಬಂದು ಸಚಿನ್ ಅವರಿಗೆ ಉಸಿರಾಟಕ್ಕೆ ತೊಂದರೆಯಾಗುತ್ತಿರುವುದನ್ನು ಗಮನಿಸಿ, ಪರಿಚಯದ ಪ್ರಶಾಂತ್ ಅವರ ಕಾರಿನಲ್ಲಿ ಚಿಕಿತ್ಸೆಗೆ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ, ಮಧ್ಯಾಹ್ನ 3.10ರ ಸುಮಾರಿಗೆ ಪರೀಕ್ಷಿಸಿದ ವೈದ್ಯಾಧಿಕಾರಿಗಳು ಸಚಿನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್ನ ಫುಟ್ಬೋರ್ಡ್ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್24 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಶಿಕ್ಷಣ8 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಚಿನ್ನ-ಬೆಳ್ಳಿ ದರ7 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಸ್ಥಳೀಯ7 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಸಿನೆಮಾ6 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಅಪರಾಧ7 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ7 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಆರೋಗ್ಯ7 hours agoBantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ















