ಕಡೂರು ಠಾಣಾ ಪಿಎಸ್‌ಐ ಸಲ್ಲಿಸಿರುವ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು […]" /> ಕಡೂರು ಠಾಣಾ ಪಿಎಸ್‌ಐ ಸಲ್ಲಿಸಿರುವ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು […]"> ASI Veerendra-ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ: ಕಡೂರು ಎಎಸ್‌ಐ ವೀರೇಂದ್ರ ಅಮಾನತು - Nikhara News | Kannada News Website
Connect with us

ಸ್ಥಳೀಯ

ASI Veerendra-ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ: ಕಡೂರು ಎಎಸ್‌ಐ ವೀರೇಂದ್ರ ಅಮಾನತು

Published

on

Ad Widget

Ad Widget

Ad Widget

Ad Widget

ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ ಮಾಡಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ಎಚ್.ಡಿ. ವೀರೇಂದ್ರರನ್ನು ಅಮಾನತು ಮಾಡಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಮಗಳೂರು, ಸೆ. 23: ರೌಡಿಶೀಟರ್ ಜೊತೆ ಮದ್ಯಪಾನ ಪಾರ್ಟಿ ಮಾಡಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಠಾಣೆಯ ಎಎಸ್‌ಐ ಎಚ್.ಡಿ. ವೀರೇಂದ್ರರನ್ನು ಅಮಾನತು ಮಾಡಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಡೂರು ಠಾಣಾ ಪಿಎಸ್‌ಐ ಸಲ್ಲಿಸಿರುವ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದ್ದಾರೆ.

Ad Widget

Ad Widget <> Ad Widget

ಎಸ್‌ಪಿ ಆದೇಶದಲ್ಲಿ ತಿಳಿಸಿರುವಂತೆ, ಸಖರಾಯಪಟ್ಟಣ ಠಾಣೆಯ ಎಎಸ್‌ಐ ಎಚ್.ಡಿ. ವೀರೇಂದ್ರ ಅವರು ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುದ್ಲಾಪುರ ಗ್ರಾಮದಲ್ಲಿ ತಮ್ಮ ಪತ್ನಿಯ ಹೆಸರಿನಲ್ಲಿರುವ ಸನ್ ಮೂನ್ ಗ್ರೂಪ್ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಸೆಪ್ಟೆಂಬರ್ 15ರಂದು ರಾತ್ರಿ ಸಖರಾಯಪಟ್ಟಣ ಪೊಲೀಸ್ ಠಾಣೆಯ ರೌಡಿಶೀಟರ್ ನವೀನ್ ನಾಯ್ಕ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದರು. ಈ ಪಾರ್ಟಿಯಲ್ಲಿ ಸುಮಾರು 80-90 ಮಂದಿ ಸೇರಿ ಮದ್ಯಪಾನ ಮಾಡಿ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗಿತ್ತು.

ಮುದ್ಲಾಪುರ ಗ್ರಾಮದಲ್ಲಿ ಈ ಬಾರ್ ತೆರೆಯುವ ವಿಚಾರವಾಗಿ ಈ ಹಿಂದೆ ಬಾರ್ ಮಾಲಕರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ವಿರೋಧ ಉಂಟಾಗಿ ಕಡೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.

Ad Widget

Ad Widget

ಆದರೂ ಜವಾಬ್ದಾರಿಯುತ ಎಎಸ್‌ಐ ಹುದ್ದೆಯಲ್ಲಿರುವ ವೀರೇಂದ್ರ ಅವರು ರೌಡಿಶೀಟರ್ ಜೊತೆ ಬಾರ್‌ನಲ್ಲಿ ಹುಟ್ಟುಹಬ್ಬ ಆಚರಿಸುತ್ತಾ ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಕಿರುಕುಳ ನೀಡಿ, ಕಾನೂನು ಸುವ್ಯವಸ್ಥೆಗೆ ಸಮಸ್ಯೆ ಉಂಟಾಗಬಹುದಾದ ವಾತಾವರಣ ಸೃಷ್ಟಿಸಲು ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ. ವೀರೇಂದ್ರರನ್ನು ತಕ್ಷಣದಿಂದಲೇ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!