ಕಳೆದ ಸೆಪ್ಟೆಂಬರ್ 09 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡವು […]" />  ಕಳೆದ ಸೆಪ್ಟೆಂಬರ್ 09 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡವು […]"> ಹಲವು ಗಂಭೀರ ಆರೋಪ - ಲೋಕಾಯುಕ್ತ ದಾಳಿ ಹಿನ್ನಲೆ : ಈ ಹಿಂದೆ ಉಪ್ಪಿನಂಗಡಿ ಗ್ರಾ ಪಂ  PDO ಆಗಿದ್ದ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸಸ್ಪೆಂಡ್‌ - Nikhara News | Kannada News Website
Connect with us

Uncategorized

ಹಲವು ಗಂಭೀರ ಆರೋಪ – ಲೋಕಾಯುಕ್ತ ದಾಳಿ ಹಿನ್ನಲೆ : ಈ ಹಿಂದೆ ಉಪ್ಪಿನಂಗಡಿ ಗ್ರಾ ಪಂ  PDO ಆಗಿದ್ದ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಸಸ್ಪೆಂಡ್‌

Published

on

Ad Widget

Ad Widget

Ad Widget

Ad Widget

ಮಂಗಳೂರು: ಸಾರ್ವಜನಿಕ ಸೇನೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಮುಂತಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿರುವ ,  ವಾರದ ಹಿಂದಿನವರೆಗೂ   ಉಪ್ಪಿನಂಗಡಿ ಗ್ರಾಮಾಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ  (ಪಿಡಿಒ) ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Ad Widget

Ad Widget

Ad Widget

Ad Widget

ಘಟನೆಯ ಹಿನ್ನೆಲೆ:

Ad Widget

Ad Widget alt="Ad Widget"/>

Ad Widget

 ಕಳೆದ ಸೆಪ್ಟೆಂಬರ್ 09 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡವು ಉಪ್ಪಿನಂಗಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭದಲ್ಲಿ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳಲ್ಲಿ ವಿಳಂಬ ಮಾಡಿದ್ದು, ಲಂಚದ ಬೇಡಿಕೆ ಇಟ್ಟಿರುವುದು ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈ ಕುರಿತು ಒಟ್ಟು 15ಕ್ಕೂ ಹೆಚ್ಚು ಸಾರ್ವಜನಿಕ ದೂರುಗಳು ದಾಖಲಾಗಿದ್ದವು.

Ad Widget

Ad Widget <> Ad Widget

ಪ್ರಮುಖ ದೂರುಗಳು ಮತ್ತು ಆರೋಪಗಳು:

ವ್ಯಾಪಾರ ಪರವಾನಗಿ ನವೀಕರಣದಲ್ಲಿ ವಿಳಂಬ ಮತ್ತು ಲಂಚದ ಆರೋಪ.

Ad Widget

Ad Widget

ವೈಯಕ್ತಿಕ ಕೆಲಸ ಹಾಗೂ ದಾಖಲೆಗಳಿಗೆ ಸಂಬಂಧಿಸಿದಂತೆ ಹಣದ ಬೇಡಿಕೆ.

ಕಳಪೆ ಕಾಮಗಾರಿಗಳ ನಿರ್ವಹಣೆ ಮತ್ತು ನಿಗದಿತ ಅನುದಾನ ಸರಿಯಾಗಿ ಬಳಸದಿರುವುದು.

ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಸ್ವೀಕರಿಸಲು ಬಾಕಿ ಉಳಿಸಿರುವುದು ಹಾಗೂ ಕಚೇರಿಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸದಿರುವುದು.

ಈ ಎಲ್ಲಾ ಆರೋಪಗಳ ಕುರಿತು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಹಾಗೂ ಅಪೀಲು) ನಿಯಮಗಳು 1957ರ ನಿಯಮ 98ರ ಪ್ರಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಮಾನತಿನಲ್ಲಿರುವ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ

ಈ ಅಧಿಕಾರಿಯ ವಿರುದ್ಧ ಸಾರ್ವಜನಿಕರು ಪುತ್ತೂರು ಶಾಸಕ ಅಶೊಕ್‌ ಕುಮಾರ್‌ ರೈಯವರಿಗೂ ದೂರು ನೀಡಿದ್ದರು. 20 ದಿನಗಳ ಹಿಂದೆ ಅವರನ್ನು ಉಪ್ಪಿನಂಗಡಿಯಿಂದ ಆರ್ಯಾಪು ಗ್ರಾಮ ಪಂಚಾಯತ್‌ ಗೆ ವರ್ಗಾವಣೆಗೊಳಿಸಲಾಗಿತ್ತು. ವರ್ಗಾವಣೆಗೊಂಡ ಬಳಿಕವು ವಿಲ್ಫ್ರೆಡ್ ರೋಡ್ರಿಗಸ್ ಅವರು ಉಪ್ಪಿನಂಗಡಿ ಪಂಚಾಯತ್‌ ನ ಪ್ರಭಾರ PDO ಆಗಿ ಕಾರ್ಯನಿರ್ವಹಿಸುತ್ತಿದ್ದರು , ಇದರ ಹಿಂದೆ ಪ್ರಭಾವ ಕೆಲಸ ಮಾಡಿದೆ ಹಾಗೂ ಇದರಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಕೈವಾಡ ಇದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದ್ದವು.

 .

Ad Widget
Click to comment

Leave a Reply

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!